Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 6:1 - ಕನ್ನಡ ಸತ್ಯವೇದವು J.V. (BSI)

1 ನೀನೆದ್ದು ಬೆಟ್ಟಗಳ ಮುಂದೆ ವ್ಯಾಜ್ಯಹಾಕು, ನಿನ್ನ ಧ್ವನಿಯು ಗುಡ್ಡಗಳಿಗೆ ಕೇಳಿಸಲಿ ಎಂದು ಯೆಹೋವನು [ನನಗೆ] ನುಡಿಯುವದನ್ನು ಆಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ಹೇಳುವುದನ್ನು ಕೇಳಿರಿ, “ನೀನೆದ್ದು ಬೆಟ್ಟಗಳ ಮುಂದೆ ವ್ಯಾಜ್ಯ ಮಾಡು. ನಿನ್ನ ಧ್ವನಿಯು ಗುಡ್ಡಗಳಿಗೆ ಕೇಳಿಸಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರ ಹೇಳುವುದನ್ನು ಕೇಳಿರಿ: “ಎದ್ದೇಳು; ಬೆಟ್ಟಗಳ ಸಮ್ಮುಖದಲ್ಲಿ ನಿನ್ನ ವ್ಯಾಜ್ಯ ನಡೆಯಲಿ; ನಿನ್ನ ಧ್ವನಿ ಗುಡ್ಡಗಳಿಗೆ ಕೇಳಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನು ಹೇಳುವುದನ್ನು ಕೇಳಿರಿ: “ನಿನ್ನ ವ್ಯಾಜ್ಯವನ್ನು ಬೆಟ್ಟಗಳಿಗೆ ತಿಳಿಸು. ಗುಡ್ಡಗಳು ನಿನ್ನ ಕಥೆಯನ್ನು ಕೇಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ಹೇಳುವುದನ್ನು ಈಗ ಕೇಳಿರಿ, ಎದ್ದೇಳು, ಬೆಟ್ಟಗಳ ಮುಂದೆ ವ್ಯಾಜ್ಯವಾಡು; ನೀನು ಹೇಳುವುದನ್ನು ಗುಡ್ಡಗಳು ಕೇಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 6:1
22 ತಿಳಿವುಗಳ ಹೋಲಿಕೆ  

ದೇಶವೇ, ದೇಶವೇ, ದೇಶವೇ, ಯೆಹೋವನ ಮಾತನ್ನು ಕೇಳು!


ಆಕಾಶಮಂಡಲವೇ, ನಾನು ಹೇಳುವದನ್ನು ಕೇಳು: ಭೂಮಂಡಲವೇ, ನನ್ನ ಮಾತುಗಳಿಗೆ ಕಿವಿಕೊಡು.


ಜನಾಂಗಗಳೇ, ನೀವೆಲ್ಲರೂ ಕೇಳಿರಿ; ಭೂಮಂಡಲವೇ, ಭೂವಿುಯಲ್ಲಿರುವ ಸಮಸ್ತವೇ, ಕಿವಿಗೊಡಿರಿ! ಕರ್ತನು, ಕರ್ತನಾದ ಯೆಹೋವನು ತನ್ನ ಪವಿತ್ರಾಲಯದೊಳಗಿಂದ ನಿಮಗೆ ವಿರುದ್ಧವಾಗಿ ಸಾಕ್ಷಿ ಕೊಡುತ್ತಾನೆ.


ನರಪುತ್ರನೇ, ನೀನು ಇಸ್ರಾಯೇಲಿನ ಪರ್ವತಗಳಿಗೆ ಈ ದೈವೋಕ್ತಿಯನ್ನು ನುಡಿ - ಇಸ್ರಾಯೇಲಿನ ಪರ್ವತಗಳೇ, ಯೆಹೋವನ ವಾಕ್ಯವನ್ನು ಕೇಳಿರಿ.


ಆತನು ತನ್ನ ಪ್ರಜೆಗಳ ನ್ಯಾಯವಿಚಾರಣೆಯಲ್ಲಿ ಭೂಮ್ಯಾಕಾಶಗಳನ್ನು ಸಾಕ್ಷಿಗಳಾಗಿ ನೇವಿುಸುತ್ತಾನೆ.


ಆತನನ್ನು ಕೋಪಗೊಳಿಸಿದರೆ ನೀವು ಯೊರ್ದನ್ ಹೊಳೆಯನ್ನು ದಾಟಿ ಸ್ವಾಧೀನಮಾಡಿಕೊಳ್ಳುವ ಆ ದೇಶದಲ್ಲಿ ಉಳಿಯದೆ ಬೇಗನೆ ನಾಶವಾಗಿ ಹೋಗುವಿರಿ ಎಂದು ಭೂಮ್ಯಾಕಾಶಗಳನ್ನು ಸಾಕ್ಷಿಗಳಾಗಿ ಕರೆದು ಎಚ್ಚರಿಸುತ್ತೇನೆ. ನೀವು ಆ ದೇಶದಲ್ಲಿ ಬಹುದಿವಸ ಇರದೆ ನಾಶವಾಗಿಯೇ ಹೋಗುವಿರಿ.


ಇಸ್ರಾಯೇಲಿನ ಪರ್ವತಗಳೇ, ನಿಮ್ಮ ಗಿಡಗಳು ರೆಂಬೆಗಳನ್ನು ಹರಡಿಕೊಂಡು ನನ್ನ ಜನರಾದ ಇಸ್ರಾಯೇಲ್ಯರಿಗೆ ಫಲಕೊಡುವವು; ಅವರ ಬರುವಿಕೆಯು ಸಮೀಪವಾಯಿತು.


ಆಕಾಶಮಂಡಲವೇ, ಆಲಿಸು! ಭೂಮಂಡಲವೇ, ಕೇಳು! ಯೆಹೋವನು ಮಾತಾಡುತ್ತಿದ್ದಾನೆ; ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹಮಾಡಿದ್ದಾರೆ.


ಆತನು - ಇವರು ಸುಮ್ಮನಾದರೆ ಈ ಕಲ್ಲುಗಳೇ ಕೂಗುವವು ಎಂದು ನಿಮಗೆ ಹೇಳುತ್ತೇನೆ ಅಂದನು.


ದೇವದೇವನಾದ ಯೆಹೋವನು ಪೂರ್ವದಿಂದ ಪಶ್ಚಿಮದಿಕ್ಕಿನವರೆಗೂ ಇರುವ ಭೂನಿವಾಸಿಗಳೆಲ್ಲರನ್ನೂ ತನ್ನ ಸನ್ನಿಧಿಯಲ್ಲಿ ಬರಬೇಕೆಂದು ಆಜ್ಞಾಪಿಸುತ್ತಾನೆ.


ಬೆಂಕಿಗೆ ಕರಗಿದ ಮೇಣದಂತೆಯೂ ಜರಿಯಲ್ಲಿ ಹೊಯ್ದ ನೀರಿನ ಹಾಗೂ ಪರ್ವತಗಳು ಆತನ ಹೆಜ್ಜೆಗೆ ಕರಗಿ ಹರಿಯುತ್ತವೆ, ತಗ್ಗುಗಳು ಸೀಳಿಹೋಗುತ್ತವೆ.


ಆಗ ಆತನು ನನಗೆ ಹೀಗೆ ಅಪ್ಪಣೆಮಾಡಿದನು - ನೀನು ಎಲುಬುಗಳ ಮೇಲೆ ಧ್ವನಿಯನ್ನು ಹರಡಿ ಅದಕ್ಕೆ ಈ ದೈವೋಕ್ತಿಯನ್ನು ನುಡಿ - ಒಣಗಿದ ಎಲುಬುಗಳೇ, ಯೆಹೋವನ ವಾಕ್ಯವನ್ನು ಕೇಳಿರಿ.


ಕಿವಿಗೊಟ್ಟು ಕೇಳಿರಿ, ಹೆಮ್ಮೆ ಪಡಬೇಡಿರಿ; ಯೆಹೋವನೇ ಮಾತಾಡಿದ್ದಾನೆ.


ಇಸ್ರಾಯೇಲ್ಯರೇ, ಯೆಹೋವನು ನಿಮಗೆ ವಿರುದ್ಧವಾಗಿ, ಅಂದರೆ ತಾನು ಐಗುಪ್ತದೇಶದೊಳಗಿಂದ ಪಾರುಮಾಡಿದ ಪೂರ್ಣಕುಲಕ್ಕೆ ವಿರುದ್ಧವಾಗಿ ನುಡಿದಿರುವ ಈ ಮಾತನ್ನು ಕೇಳಿರಿ -


ಆಗ ಸಮುವೇಲನು ಅವನಿಗೆ - ಅದಿರಲಿ; ಯೆಹೋವನು ಕಳೆದ ರಾತ್ರಿಯಲ್ಲಿ ನನಗೆ ಹೇಳಿದ್ದನ್ನು ತಿಳಿಸುತ್ತೇನೆ ಕೇಳು ಎನ್ನಲು ಅವನು - ಹೇಳು ಅಂದನು.


ಇಲ್ಲಿ ನಿಂತುಕೊಂಡು ಕೇಳಿರಿ; ಯೆಹೋವನು ನಿಮಗೋಸ್ಕರವೂ ನಿಮ್ಮ ಪಿತೃಗಳಿಗೋಸ್ಕರವೂ ನಡಿಸಿದ ನೀತಿಕಾರ್ಯಗಳನ್ನು ಕುರಿತು ಆತನೆದುರಿನಲ್ಲಿ ನಿಮಗೆ ನೆನಪು ಹುಟ್ಟಿಸಿ ನಿಮ್ಮನ್ನು ಎಚ್ಚರಿಸುತ್ತೇನೆ.


ಅವಿಧೇಯಜನಾಂಗಗಳಿಗೆ ಉಗ್ರಕೋಪದಿಂದ ಮುಯ್ಯಿತೀರಿಸುವೆನು.


ಬೆಟ್ಟಗಳೇ, ಯೆಹೋವನ ವ್ಯಾಜ್ಯವನ್ನು ಕೇಳಿರಿ! ಭೂವಿುಯ ಶಾಶ್ವತವಾದ ಅಸ್ತಿವಾರಗಳೇ, ಕಿವಿಗೊಡಿರಿ; ಯೆಹೋವನಿಗೆ ಆತನ ಪ್ರಜೆಯ ಮೇಲೆ ವ್ಯಾಜ್ಯವಿದೆ; ಆತನು ಇಸ್ರಾಯೇಲಿನೊಂದಿಗೆ ವಿವಾದಿಸುತ್ತಾನೆ.


ಯೆಹೋವನು ವಾದಿಸುವದಕ್ಕೂ ಜನಗಳ ನ್ಯಾಯಾನ್ಯಾಯಗಳನ್ನು ನಿರ್ಣಯಿಸುವದಕ್ಕೂ ಎದ್ದು ನಿಂತಿದ್ದಾನೆ.


ಇಸ್ರಾಯೇಲಿನ ಬೆಟ್ಟಗಳೇ, ಕರ್ತನಾದ ಯೆಹೋವನ ಈ ಮಾತನ್ನು ಕೇಳಿರಿ - ಕರ್ತನಾದ ಯೆಹೋವನು ಬೆಟ್ಟಗುಡ್ಡಗಳಿಗೂ ತೊರೆ ತಗ್ಗುಗಳಿಗೂ ಹೀಗೆ ಹೇಳುತ್ತಾನೆ - ಇಗೋ, ನಾನೇ ನಿಮ್ಮ ಮೇಲೆ ಖಡ್ಗವನ್ನು ಬರಮಾಡಿ ನಿಮ್ಮ ಪೂಜಾಸ್ಥಳಗಳನ್ನು ನಾಶಪಡಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು