Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 6:11 - ಕನ್ನಡ ಸತ್ಯವೇದವು J.V. (BSI)

11 ಕಳ್ಳತಕ್ಕಡಿಯೂ ಮೋಸದ ಕಲ್ಲಿನ ಚೀಲವೂ ಒಬ್ಬನಲ್ಲಿದ್ದರೆ ಅವನು ನಿರ್ದೋಷಿಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಕಳ್ಳ ತಕ್ಕಡಿಯೂ ಹಾಗು ಮೋಸದ ಕಲ್ಲಿನ ಚೀಲವೂ ಒಬ್ಬನಲ್ಲಿದ್ದರೆ ಅವನು ನಿರ್ದೋಷಿಯಲ್ಲವೆಂದು ತಿಳಿಯಲೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಕಳ್ಳ ತಕ್ಕಡಿಗಳಿಂದ ಮೋಸದ ಬಟ್ಟುಗಳಿಂದ ಅಳೆದುಹಾಕುವವನು ನಿರ್ದೋಷಿಯೆಂದು ತೀರ್ಮಾನಿಸಲೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಕೆಲವರು ಮೋಸದ ಅಳತೆ ಪ್ರಮಾಣಗಳಿಂದ ಜನರನ್ನು ಮೋಸಗೊಳಿಸುತ್ತಾರೆ. ನಾನು ಅವರನ್ನು ಕ್ಷಮಿಸಬೇಕೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನಾನು ದುಷ್ಟತ್ವದ ತಕ್ಕಡಿಗಳುಳ್ಳವರನ್ನು ಮೋಸವಾದ ಕಲ್ಲುಗಳ ಚೀಲವುಳ್ಳವರನ್ನು ನಿರ್ಮಲರೆಂದೆಣಿಸುವೆನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 6:11
9 ತಿಳಿವುಗಳ ಹೋಲಿಕೆ  

ಕಾನಾನು! ಅದರ ಕೈಯಲ್ಲಿ ಮೋಸದ ತ್ರಾಸು ಇದೆ; ಕಸಕೊಳ್ಳಬೇಕೆಂಬದೇ ಅದರ ಆಶೆ.


ತಕ್ಕಡಿ, ತೂಕದ ಕಲ್ಲು, ಕೊಳಗ, ಸೇರು ಇವುಗಳೆಲ್ಲಾ ನ್ಯಾಯವಾಗಿಯೇ ಇರಬೇಕು. ನಾನು ನಿಮ್ಮನ್ನು ಐಗುಪ್ತದೇಶದಿಂದ ಬರಮಾಡಿದ ನಿಮ್ಮ ದೇವರಾದ ಯೆಹೋವನು.


ನ್ಯಾಯದ ತ್ರಾಸುತಕ್ಕಡಿಗಳು ಯೆಹೋವನ ಏರ್ಪಾಡು; ಕಟ್ಲೆಚೀಲದ ಕಲ್ಲುಗಳೆಲ್ಲಾ ಆತನ ಕೈಕೆಲಸವೇ.


ಹೆಚ್ಚು ಕಡಮೆಯಾಗಿರುವ ಎರಡು ವಿಧವಾದ ತೂಕದ ಕಲ್ಲುಗಳನ್ನು ನಿಮ್ಮ ಚೀಲದಲ್ಲಿಟ್ಟುಕೊಳ್ಳಬಾರದು. ಹೆಚ್ಚು ಕಡಿಮೆಯಾದ ಎರಡು ವಿಧವಾದ ಸೇರುಗಳು ನಿಮ್ಮ ಮನೆಯಲ್ಲಿರಬಾರದು.


ಮೋಸದ ತ್ರಾಸು ಯೆಹೋವನಿಗೆ ಅಸಹ್ಯ; ನ್ಯಾಯದ ತೂಕ ಆತನಿಗೆ ಸಂತೋಷ.


ನಿಮ್ಮ ತಕ್ಕಡಿಯೂ ಧಾನ್ಯದ ಅಳತೆಯೂ ರಸದ್ರವ್ಯದ ಅಳತೆಯೂ ನ್ಯಾಯವಾಗಿಯೇ ಇರಬೇಕು.


ಬಡವನನ್ನು ಬೆಳ್ಳಿಗೆ, ದಿಕ್ಕಿಲ್ಲದವನನ್ನು ಜೊತೆ ಕೆರಕ್ಕೆ ಕೊಂಡುಕೊಳ್ಳೋಣ; ಗೋದಿಯ ನುಚ್ಚುನುಸಿಯನ್ನು ಮಾರೋಣ ಎಂದುಕೊಂಡು


ಅವನು ಕಂಡು - ಇವಳು ಪಾಪಮೂರ್ತಿ ಎಂದು ಹೇಳಿ ಅವಳನ್ನು ಕೊಳಗದೊಳಗೆ ಅದುವಿು ಸೀಸದ ಭಾರಿ ಮುಚ್ಚಳವನ್ನು ಅದರ ಬಾಯಿಗೆ ಹಾಕಿಬಿಟ್ಟನು.


ತೂಕದ ಕಲ್ಲನ್ನೂ ಅಳತೆಯ ಪಾತ್ರೆಯನ್ನೂ ಹೆಚ್ಚಿಸುವದು, ತಗ್ಗಿಸುವದು ಇವೆರಡೂ ಯೆಹೋವನಿಗೆ ಅಸಹ್ಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು