Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 6:12 - ಕನ್ನಡ ಸತ್ಯವೇದವು J.V. (BSI)

12 ಪಟ್ಟಣದ ಧನಿಕರು ತುಂಬಾ ಬಲಾತ್ಕಾರಿಗಳು, ಅದರ ನಿವಾಸಿಗಳು ಸುಳ್ಳುಗಾರರು, ಅವರ ಬಾಯನಾಲಿಗೆಯು ಮೋಸಕರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಪಟ್ಟಣದ ಧನಿಕರು ತುಂಬಾ ಬಲಾತ್ಕಾರಿಗಳು. ಅದರ ನಿವಾಸಿಗಳು ಸುಳ್ಳುಗಾರರು. ಅವರ ಬಾಯನಾಲಿಗೆಯು ಮೋಸಕರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನಿಮ್ಮ ಧನಿಕರು ಹಿಂಸಾತ್ಮಕರು; ನಿಮ್ಮ ನಿವಾಸಿಗಳು ಸುಳ್ಳುಗಾರರು! ಅವರ ಬಾಯಿಮಾತು ಕಪಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಪಟ್ಟಣದ ಧನಿಕರು ಕ್ರೂರವಾದ ಮತ್ತು ದುಷ್ಟತ್ವದ ಕೃತ್ಯಗಳನ್ನು ಇನ್ನೂ ಮಾಡುತ್ತಿದ್ದಾರೆ. ಆ ಪಟ್ಟಣದಲ್ಲಿರುವ ಜನರು ಇನ್ನೂ ಸುಳ್ಳು ಹೇಳುತ್ತಾರೆ. ಹೌದು, ಆ ಜನರು ತಮ್ಮ ಸುಳ್ಳನ್ನು ಪ್ರದರ್ಶಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅದರ ಐಶ್ವರ್ಯವಂತರು ಬಲಾತ್ಕಾರದಿಂದ ತುಂಬಿದ್ದಾರೆ. ಅದರ ನಿವಾಸಿಗಳು ಸುಳ್ಳುಗಳನ್ನು ಹೇಳುವವರಾಗಿದ್ದಾರೆ. ಅವರ ನಾಲಿಗೆ ಅವರ ಬಾಯಿಯಲ್ಲಿ ಕಪಟವುಳ್ಳದ್ದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 6:12
29 ತಿಳಿವುಗಳ ಹೋಲಿಕೆ  

ಅವರು ನನ್ನ ಕಡೆಯಿಂದ ಅಗಲಿ ಹೋಗಿದ್ದಾರೆ, ಹಾಳಾಗಲಿ! ನನಗ ದ್ರೋಹಮಾಡಿದ್ದಾರೆ, ನಾಶವಾಗಲಿ! ನಾನು ಅವರನ್ನು ಉದ್ಧರಿಸಬೇಕೆಂದಿರುವಾಗಲೂ ನನ್ನ ವಿಷಯವಾಗಿ ಸುಳ್ಳಾಡಿದ್ದಾರೆ, ಅವರನ್ನು ಹೇಗೆ ಉದ್ಧರಿಸಲಿ!


ಅವರ ನಾಲಿಗೆಯು ಕೊಲ್ಲುವ ಬಾಣವಾಗಿದೆ, ಅದು ಸುಳ್ಳನ್ನೇ ಆಡುತ್ತದೆ; ಒಬ್ಬನು ತನ್ನ ನೆರೆಯವನಿಗೆ ಬಾಯಿಂದ ಶುಭವಾಗಲಿ ಎಂದು ಹೇಳಿದರೂ ತನ್ನ ಹೃದಯದಲ್ಲಿ ಅವನಿಗಾಗಿ ಹೊಂಚುಹಾಕುತ್ತಾನೆ.


ನಿನ್ನ ಅಧಿಕಾರಿಗಳು ದ್ರೋಹಿಗಳೂ ಕಳ್ಳರ ಗೆಳೆಯರೂ ಆಗಿದ್ದಾರೆ; ಪ್ರತಿಯೊಬ್ಬನೂ ಕಾಣಿಕೆಗಳನ್ನು ಆಶಿಸಿ ಲಂಚಗಳನ್ನು ಹುಡುಕುವನು; ಅನಾಥರಿಗೆ ನ್ಯಾಯತೀರಿಸರು; ವಿಧವೆಯರ ವ್ಯಾಜ್ಯವು ಅವರ ಮನಸ್ಸಿಗೆ ಬಾರದು.


ಸೇನಾಧೀಶ್ವರನಾದ ಯೆಹೋವನ ದ್ರಾಕ್ಷೆಯ ತೋಟವು ಇಸ್ರಾಯೇಲ್ಯರ ಮನೆತನ, ಯೆಹೂದದ ಜನವೋ ಆತನ ಇಷ್ಟದ ಗಿಡವೇ; ಆತನು ನ್ಯಾಯವನ್ನು ನಿರೀಕ್ಷಿಸಿದಾಗ ಆಹಾ, ಸಿಕ್ಕಿದ್ದು ನರಹತ್ಯವೇ; ಧರ್ಮವನ್ನು ಎದುರುನೋಡಿದಾಗ ಆಹಾ, ದೊರಕಿದ್ದು ಅರಚಾಟವೇ.


ಯೆರೂಸಲೇಮು ಹಾಳಾಯಿತು, ಯೆಹೂದದವರು ಬಿದ್ದುಹೋದರು! ಅವರ ನಡೆನುಡಿಗಳು ಯೆಹೋವನಿಗೆ ವಿರುದ್ಧವಾಗಿ ಆತನ ಪ್ರಭಾವದ ದೃಷ್ಟಿಯನ್ನು ಪ್ರತಿಭಟಿಸುತ್ತವಲ್ಲವೆ.


ಅವರ ಗಂಟಲು ತೆರೆದಿರುವ ಸಮಾಧಿಯಾಗಿದೆ. ಅವರು ನಾಲಿಗೆಯಿಂದ ವಂಚನೆಯ ಮಾತುಗಳನ್ನಾಡುತ್ತಾರೆ; ಅವರ ತುಟಿಗಳ ಹಿಂದೆ ಹಾವಿನ ವಿಷವದೆ.


ಅದರಲ್ಲಿನ ಮುಖ್ಯಾಧಿಕಾರಿಗಳು ಗರ್ಜಿಸುವ ಸಿಂಹಗಳು; ಅದರ ನ್ಯಾಯಾಧಿಪತಿಗಳು ಸಂಜೆಯ ತೋಳಗಳು; ಮರುದಿನ ಕಡಿಯುವದಕ್ಕೆ ಎಲುಬು ಕೂಡಾ ವಿುಗದು.


ನಾನು ನನ್ನ ಜನರ ದುರವಸ್ಥೆಯನ್ನು ತಪ್ಪಿಸಿ ಇಸ್ರಾಯೇಲನ್ನು ಸ್ವಸ್ಥಮಾಡಬೇಕೆಂದಿರುವಾಗ ಎಫ್ರಾಯೀವಿುನ ಅಧರ್ಮವೂ ಸಮಾರ್ಯದ ದುಷ್ಟತನವೂ ವ್ಯಕ್ತವಾಗುತ್ತವೆ; ಎಲ್ಲರೂ ಮೋಸಮಾಡುತ್ತಾರೆ, ಒಳಗೆ ಕಳ್ಳರು ನುಗ್ಗುತ್ತಾರೆ, ಹೊರಗೆ ಡಕಾಯಿತಿಯವರು ಸುಲಿಯುತ್ತಾರೆ.


ಅವರ ಮಾತುಗಳು ಸಮಾಧಾನಕರವಾದವುಗಳಲ್ಲ; ದೇಶದ ಸಾಧುಜನರನ್ನು ಕೆಡಿಸುವದಕ್ಕೆ ಮೋಸವನ್ನು ಕಲ್ಪಿಸುತ್ತಾರೆ.


ಯೆಹೋವನು ಇಂತೆನ್ನುತ್ತಾನೆ - ಯೆಹೂದವು ಮೂರು ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದೇ ಇಲ್ಲ; ಯೆಹೂದ್ಯರು ಯೆಹೋವನ ಧರ್ಮೋಪದೇಶವನ್ನು ನಿರಾಕರಿಸಿ ಆತನ ವಿಧಿಗಳನ್ನು ಕೈಕೊಳ್ಳದೆ ಅವರ ಪಿತೃಗಳು ಹಿಂಬಾಲಿಸಿದ ಸುಳ್ಳುದೇವತೆಗಳ ಮೂಲಕ ಸನ್ಮಾರ್ಗವನ್ನು ತಪ್ಪಿದರಷ್ಟೆ;


ದಂತದ ಮಂಚಗಳ ಮೇಲೆ ಮಲಗುತ್ತಾರೆ, ತಮ್ಮ ಗದ್ದುಗೆಗಳಲ್ಲಿ ಹಾಯಾಗಿ ಒರಗಿಕೊಳ್ಳುತ್ತಾರೆ; ಹಿಂಡಿನ ಮರಿಗಳನ್ನೂ ಕೊಟ್ಟಿಗೆಯ ಕರುಗಳನ್ನೂ ತಿನ್ನುತ್ತಾರೆ;


ಆದರೆ ಆತನ ಮುಂದೆ ಅವರ ಬಾಯಿ ವಂಚಿಸಿ ನಾಲಿಗೆ ಸುಳ್ಳಾಡಿತು.


ಯೆಹೋವನೇ, ಸುಳ್ಳುಬಾಯಿಯೂ ವಂಚಿಸುವ ನಾಲಿಗೆಯೂ ಉಳ್ಳವರಿಂದ ನನ್ನನ್ನು ಬಿಡಿಸು.


ಹೊಸ್ತಿಲಹಾರಿ ನುಗ್ಗಿ ಮೋಸಹಿಂಸೆಗಳಿಂದ ದೋಚಿದ್ದನ್ನು ತಮ್ಮ ಒಡೆಯನ ಮನೆಯೊಳಗೆ ತುಂಬಿಸುವವರೆಲ್ಲರನ್ನು ಆ ದಿನದಲ್ಲಿ ದಂಡಿಸುವೆನು.


ಆಗ ಯೆಹೂದ್ಯರು ಈ ಸಂಗತಿಗಳು ನಿಜವೇ ಎಂದು ಹೇಳಿ ತಾವೂ ಆ ದೋಷಾರೋಪಣೆ ಮಾಡುವದರಲ್ಲಿ ಸೇರಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು