ಮೀಕ 6:16 - ಕನ್ನಡ ಸತ್ಯವೇದವು J.V. (BSI)16 ಒಮ್ರಿಯ ನಿಯಮಗಳೂ ಅಹಾಬನ ಮನೆತನದ ಸಕಲಾಚಾರಗಳೂ [ನಿನ್ನಲ್ಲಿ] ಸಲ್ಲುತ್ತಿವೆ, ನಿನ್ನವರು ಅವರ ದುರ್ನೀತಿಗೆ ಅನುಸಾರವಾಗಿ ನಡೆಯುತ್ತಾರೆ; ಆದಕಾರಣ ನಾನು ನಿನ್ನನ್ನು ಬೆರಗಿಗೂ ನನ್ನ ನಿವಾಸಿಗಳನ್ನು ಸಿಳ್ಳಿಗೂ ಗುರಿಮಾಡುವೆನು; ನನ್ನ ಜನರಿಗೆ ಸಂಭವಿಸಬೇಕಾದ ಅವಮಾನವನ್ನು ಅನುಭವಿಸುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಒಮ್ರಿ ರಾಜನ ನಿಯಮಗಳೂ ಮತ್ತು ಅಹಾಬನ ಮನೆತನದ ಸಕಲ ಆಚಾರಗಳೂ ನಿನ್ನಲ್ಲಿ ಸಲ್ಲುತ್ತಿವೆ. ನಿನ್ನವರು ಅವರ ದುರ್ನೀತಿಗೆ ಅನುಸಾರವಾಗಿ ನಡೆಯುತ್ತಾರೆ. ಆದಕಾರಣ ನಾನು ನಿನ್ನನ್ನು ಬೆರಗಿಗೂ, ನಿನ್ನ ನಿವಾಸಿಗಳನ್ನು ಅಪಹಾಸ್ಯಕ್ಕೂ ಗುರಿಮಾಡುವೆನು. ನನ್ನ ಜನರಿಗೆ ಸಂಭವಿಸಬೇಕಾದ ಅವಮಾನವನ್ನು ಅನುಭವಿಸುವಿರಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 “ಒಮ್ರಿ ಅರಸನ ಆಜ್ಞೆಗಳನ್ನೂ ಅಹಾಬ್ ಮನೆತನದ ದುರಾಚಾರಗಳನ್ನೂ ಅವರ ಸಂಪ್ರದಾಯಗಳನ್ನೂ ಅನುಸರಿಸುತ್ತಾ ಬಂದಿದ್ದೀರಿ. ಆದಕಾರಣ ನಿಮ್ಮನ್ನು ವಿನಾಶಗೊಳಿಸುವೆನು; ನಿಮ್ಮ ಜನರನ್ನು ಅಪಹಾಸ್ಯಕ್ಕೆ ಈಡುಮಾಡುವೆನು. ನೀವು ಜನಾಂಗಗಳ ನಿಂದೆಗೆ ಗುರಿಯಾಗುವಿರಿ.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಯಾಕೆಂದರೆ ನೀವು ಒಮ್ರಿಯ ಆಜ್ಞೆಯನ್ನು ಪರಿಪಾಲಿಸಿದಿರಿ. ಅಹಾಬನ ಮನೆಯವರು ಮಾಡುತ್ತಿದ್ದ ದುಷ್ಕೃತ್ಯಗಳನ್ನು ನೀವು ಮಾಡುತ್ತೀರಿ. ನೀವು ಅವರ ಬೋಧನೆಯನ್ನು ಅನುಸರಿಸುತ್ತೀರಿ. ಆದ್ದರಿಂದ ನೀವು ನಾಶವಾಗುವಂತೆ ಮಾಡುವೆನು. ಕೆಡವಲ್ಪಟ್ಟ ನಿಮ್ಮ ನಗರವನ್ನು ನೋಡಿದ ಜನರು ಆಶ್ಚರ್ಯದಿಂದ ಸಿಳ್ಳುಹಾಕುವರು. ಆಗ ಬೇರೆ ಜನಾಂಗದವರು ನಿಮ್ಮ ಮೇಲೆ ಹೊರಿಸಿದ ಅವಮಾನವನ್ನು ನೀವು ಸಹಿಸಿಕೊಳ್ಳುವಿರಿ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಏಕೆಂದರೆ ಒಮ್ರಿಯ ನಿಯಮಗಳನ್ನೂ ಕೈಕೊಳ್ಳುತ್ತೀರಿ. ಅಹಾಬ್ ಮನೆತನದ ದುರಾಚಾರಗಳನ್ನೂ ಅವರ ಸಂಪ್ರದಾಯಗಳನ್ನೂ ಅನುಸರಿಸುತ್ತಾ ಬಂದಿದ್ದೀರಿ. ಆದ್ದರಿಂದ ನೀವು ನಾಶವಾಗುವಂತೆ ಮಾಡುವೆನು. ನಿಮ್ಮ ಜನರನ್ನು ಅಪಹಾಸ್ಯಕ್ಕೆ ಗುರಿಮಾಡುವೆನು. ಆದ್ದರಿಂದ ನೀವು ನನ್ನ ಜನರ ನಿಂದೆಯನ್ನು ಹೊರುವಿರಿ. ಅಧ್ಯಾಯವನ್ನು ನೋಡಿ |