Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 6:5 - ಕನ್ನಡ ಸತ್ಯವೇದವು J.V. (BSI)

5 ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಕೊಟ್ಟ ಸಲಹೆಯನ್ನೂ ಬೆಯೋರನ ಮಗನಾದ ಬಿಳಾಮನು ಹೇಳಿದ ಉತ್ತರವನ್ನೂ ಜ್ಞಾಪಕಮಾಡಿಕೊಳ್ಳಿರಿ; ಯೆಹೋವನ ಧರ್ಮಕಾರ್ಯಗಳು ನಿಮ್ಮ ಗ್ರಹಿಕೆಗೆ ಬರುವ ಹಾಗೆ ನೀವು ಶಿಟ್ಟೀಮನ್ನು ಬಿಟ್ಟಂದಿನಿಂದ ಗಿಲ್ಗಾಲನ್ನು ಸೇರುವ ತನಕ ನಡೆದದನ್ನೆಲ್ಲಾ ಸ್ಮರಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಕೊಟ್ಟ ಸಲಹೆಯನ್ನೂ ಮತ್ತು ಬೆಯೋರನ ಮಗನಾದ ಬಿಳಾಮನು ಹೇಳಿದ ಉತ್ತರವನ್ನೂ ಜ್ಞಾಪಕಮಾಡಿಕೊಳ್ಳಿರಿ. ಯೆಹೋವನ ಧರ್ಮಕಾರ್ಯಗಳು ನಿಮ್ಮ ಗ್ರಹಿಕೆಗೆ ಬರುವ ಹಾಗೆ ನೀವು ಶಿಟ್ಟೀಮನ್ನು ಬಿಟ್ಟಂದಿನಿಂದ ಗಿಲ್ಗಾಲನ್ನು ಸೇರುವ ತನಕ ನಡೆದದ್ದನ್ನೆಲ್ಲಾ ಸ್ಮರಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಕೊಟ್ಟ ಸಲಹೆಯನ್ನು ನೆನಪಿಗೆ ತಂದುಕೊಳ್ಳಿ. ಬೆಯೋರನ ಮಗನಾದ ಬಿಳಾಮನು ಕೊಟ್ಟ ಉತ್ತರವನ್ನು ಜ್ಞಾಪಿಸಿಕೊಳ್ಳಿ. ನೀವು ತಿಟ್ಟೀಮನ್ನು ಬಿಟ್ಟಂದಿನಿಂದ ಗಿಲ್ಗಾಲನ್ನು ಸೇರುವ ತನಕ ನಡೆದುದನೆಲ್ಲಾ ಸ್ಮರಿಸಿಕೊಳ್ಳಿ. ಆಗ ಸರ್ವೇಶ್ವರ ನಿಮ್ಮನ್ನು ರಕ್ಷಿಸಲು ಮಾಡಿದ ಮಹತ್ಕಾರ್ಯಗಳು ನಿಮಗೆ ಮನದಟ್ಟಾಗುವುವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನನ್ನ ಜನರೇ, ಮೋವಾಬ್ಯರ ಅರಸನಾದ ಬಾಲಾಕನ ದುಷ್ಟ ಯೋಜನೆಯನ್ನು ನೆನಪುಮಾಡಿರಿ. ಬೆಯೋರನ ಮಗನಾದ ಬಿಳಾಮನು ಬಾಲಾಕನಿಗೆ ಏನು ಹೇಳಿದನೆಂದು ಜ್ಞಾಪಕಮಾಡಿರಿ. ಶಿಟ್ಟೀಮಿನಿಂದ ಗಿಲ್ಗಾಲಿನ ತನಕ ನಡೆದ ಘಟನೆಗಳನ್ನು ನಿಮ್ಮ ನೆನಪಿಗೆ ತಂದುಕೊಳ್ಳಿರಿ. ಅವೆಲ್ಲವನ್ನು ನೀವು ನೆನಪುಮಾಡಿದರೆ ಯೆಹೋವನು ನೀತಿವಂತನು ಎಂದು ನಿಮಗೆ ಗೊತ್ತಾಗುವದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಯೋಚಿಸಿದ್ದನ್ನೂ ಬೆಯೋರನ ಮಗ ಬಿಳಾಮನು ಅವನಿಗೆ ಉತ್ತರವಾಗಿ ಹೇಳಿದ್ದನ್ನೂ ಶಿಟ್ಟೀಮು ಮೊದಲುಗೊಂಡು ಗಿಲ್ಗಾಲಿನ ವರೆಗೆ ಆದ ನಿಮ್ಮ ಪ್ರಯಾಣವನ್ನೂ ಈಗ ಜ್ಞಾಪಕಮಾಡಿಕೊಳ್ಳಿರಿ. ಆಗ ಯೆಹೋವ ದೇವರ ನೀತಿಯ ಕೃತ್ಯಗಳನ್ನು ತಿಳಿದುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 6:5
37 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ಯರು ಶಿಟ್ಟೀವಿುನಲ್ಲಿ ವಾಸವಾಗಿದ್ದಾಗ ಅವರು ಮೋವಾಬ್ ಸ್ತ್ರೀಯರೊಡನೆ ಸಹವಾಸ ಮಾಡುವವರಾದರು.


ಸೇದುವ ಬಾವಿಗಳ ಬಳಿಯಲ್ಲಿ ಕೊಳ್ಳೆಯನ್ನು ಹಂಚಿಕೊಳ್ಳುವವರ ಧ್ವನಿಗಿಂತ ಗಟ್ಟಿಯಾಗಿ ಯೆಹೋವನ ನೀತಿಸಾಧನೆಯನ್ನು ವರ್ಣಿಸುತ್ತಾರೆ. ಆತನು ತನ್ನ ಪ್ರಜೆಗಳಾಗಿರುವ ಇಸ್ರಾಯೇಲ್ ಗ್ರಾಮಸ್ಥರ ನ್ಯಾಯವನ್ನು ಸ್ಥಾಪಿಸಿದ್ದಾನಲ್ಲಾ. ಆ ಕಾಲದಲ್ಲಿ ಯೆಹೋವನ ಜನರು ಊರು ಬಾಗಲುಗಳಿಗೆ ಇಳಿದು ಬಂದರು.


ಜನರು ಮೊದಲನೆಯ ತಿಂಗಳಿನ ಹತ್ತನೆಯ ದಿವಸದಲ್ಲಿ ಯೊರ್ದನನ್ನು ದಾಟಿ ಯೆರಿಕೋವಿನ ಪೂರ್ವ ಪ್ರಾಂತದಲ್ಲಿರುವ ಗಿಲ್ಗಾಲೆಂಬಲ್ಲಿ ಇಳುಕೊಂಡರು.


ಆದರೂ ಕೆಲವು ವಿಷಯಗಳಲ್ಲಿ ನಿನ್ನ ಮೇಲೆ ತಪ್ಪುಹೊರಿಸಬೇಕಾಗುತ್ತದೆ; ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿನ್ನುವದರಲ್ಲಿಯೂ ಜಾರತ್ವ ಮಾಡುವದರಲ್ಲಿಯೂ ಇಸ್ರಾಯೇಲ್ಯರು ಮುಗ್ಗರಿಸಿ ಬೀಳಬೇಕೆಂದು ಬಿಳಾಮನು ಬಾಲಾಕನಿಗೆ ಹೇಳಿದ ದುರ್ಬೋಧನೆಯನ್ನು ಅವಲಂಬಿಸಿರುವವರು ನಿನ್ನಲ್ಲಿದ್ದಾರೆ.


ಅವರ ಗತಿಯನ್ನು ಏನು ಹೇಳಲಿ; ಇವರು ಕಾಯಿನನ ಮಾರ್ಗವನ್ನು ಹಿಡಿದವರೂ ದ್ರವ್ಯಸಂಪಾದನೆಗೋಸ್ಕರ ಬಿಳಾಮನ ಭ್ರಾಂತಿಯಲ್ಲಿ ಪೂರ್ಣವಾಗಿ ಮುಣುಗಿದವರೂ ಕೋರಹನಂತೆ ಎದುರುಮಾತುಗಳನ್ನಾಡಿ ನಾಶವಾಗಿಹೋಗತಕ್ಕವರೂ ಆಗಿದ್ದಾರೆ.


ನಮ್ಮ ಪಾಪಗಳನ್ನು ಒಪ್ಪಿಕೊಂಡು ಅರಿಕೆಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷವಿುಸಿಬಿಟ್ಟು ಸಕಲ ಅನೀತಿಯನ್ನು ಪರಿಹರಿಸಿ ನಮ್ಮನ್ನು ಶುದ್ಧಿಮಾಡುವನು.


ಇವರು ನೀಟಾದ ಮಾರ್ಗವನ್ನು ಬಿಟ್ಟು ಬೆಯೋರನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದು ತಪ್ಪಿಹೋಗಿದ್ದಾರೆ. ಈ ಬಿಳಾಮನು ಅಧರ್ಮದಿಂದ ದೊರಕುವ ದ್ರವ್ಯವನ್ನು ಪ್ರೀತಿಸಿದನು;


ಯೆಹೋವನೇ, ನಿನ್ನ ಹೆಸರಿನ ನಿವಿುತ್ತ ನನ್ನನ್ನು ಉಜ್ಜೀವಿಸಮಾಡು; ನಿನ್ನ ನೀತಿಗನುಸಾರವಾಗಿ ನನ್ನ ಪ್ರಾಣವನ್ನು ವಿಪತ್ತಿನಿಂದ ಬಿಡಿಸು.


ಅದರೊಂದಿಗೆ ಹುಳಿಹಾಕಿದ ರೊಟ್ಟಿಯನ್ನು ತಿನ್ನಬಾರದು; ಯಾಕಂದರೆ ನೀವು [ರೊಟ್ಟಿಗೆ ಹುಳಿಹಾಕುವದಕ್ಕೆ ಅವಕಾಶವಿಲ್ಲದೆ] ಅವಸರದಿಂದ ಐಗುಪ್ತದೇಶವನ್ನು ಬಿಟ್ಟುಬಂದಿರಿ. ಐಗುಪ್ತದೇಶದಿಂದ ನಿಮಗೆ ಬಿಡುಗಡೆಯಾದ ದಿನವು ನಿಮ್ಮ ಜೀವಮಾನವೆಲ್ಲಾ ನೆನಪಿನಲ್ಲಿರುವಂತೆ ನೀವು ಕಷ್ಟವನ್ನು ಸೂಚಿಸುವ ಹುಳಿಯಿಲ್ಲದ ರೊಟ್ಟಿಗಳನ್ನು ಏಳು ದಿವಸಗಳವರೆಗೂ ತಿನ್ನಬೇಕು.


ನೀವು ಅರಣ್ಯದಲ್ಲಿ ನಿಮ್ಮ ದೇವರಾದ ಯೆಹೋವನಿಗೆ ಕೋಪಹುಟ್ಟಿಸಿದ್ದನ್ನು ನೆನಪುಮಾಡಿಕೊಳ್ಳಿರಿ; ಅದನ್ನು ಮರೆಯಬೇಡಿರಿ. ನೀವು ಐಗುಪ್ತದೇಶವನ್ನು ಬಿಟ್ಟಂದಿನಿಂದ ಈ ಸ್ಥಳಕ್ಕೆ ಬಂದ ದಿನದವರೆಗೂ ಯೆಹೋವನ ಆಜ್ಞೆಗಳನ್ನು ಧಿಕ್ಕರಿಸುವವರಾಗಿದ್ದಿರಿ.


ಆದದರಿಂದ ನಿಮ್ಮ ದೇವರಾದ ಯೆಹೋವನೇ ತಾನು ನಿಮ್ಮ ಪಿತೃಗಳಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ಈಗ ನಿಮ್ಮ ಅನುಭವಕ್ಕೆ ಬಂದ ರೀತಿಯಲ್ಲಿ ನೆರವೇರಿಸುವವನಾಗಿ ನಿಮಗೆ ಇಷ್ಟು ಭಾಗ್ಯವನ್ನು ಸಂಪಾದಿಸುವದಕ್ಕೆ ಸಾಮರ್ಥ್ಯವನ್ನು ಕೊಟ್ಟವನೆಂದು ಜ್ಞಾಪಕಮಾಡಿಕೊಳ್ಳಿರಿ.


ನೀವು ಜನ್ಮದಿಂದ ಅನ್ಯಜನರಾಗಿದ್ದೀರಿ; ಶರೀರದಲ್ಲಿ ಕೈಯಿಂದ ಸುನ್ನತಿಮಾಡಿಸಿಕೊಂಡು ಸುನ್ನತಿಯವರೆನಿಸಿಕೊಳ್ಳುವವರು ನಿಮ್ಮನ್ನು ಸುನ್ನತಿಯಿಲ್ಲದವರೆಂದು ಹೇಳುತ್ತಾರೆ.


ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಈ ನಾಲ್ವತ್ತು ವರುಷ ಅರಣ್ಯದಲ್ಲಿ ನಡಿಸಿದ್ದನ್ನೂ ನೀವು ತನ್ನ ಆಜ್ಞೆಗಳನ್ನು ಕೈಕೊಳ್ಳುವವರೋ ಅಲ್ಲವೋ ಎಂದು ತಿಳಿದುಕೊಳ್ಳುವದಕ್ಕೆ ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ನಿಮ್ಮ ಮನೋಭಾವವನ್ನು ಪರೀಕ್ಷಿಸಿದ್ದನ್ನೂ ನೆನಪಿಗೆ ತಂದುಕೊಳ್ಳಿರಿ.


ಪೆಗೋರದ ಬಾಳನ ಸಂಗತಿಯಲ್ಲಿ ಬಿಳಾಮನ ಆಲೋಚನೆಯನ್ನು ಅನುಸರಿಸಿ ಇಸ್ರಾಯೇಲ್ಯರನ್ನು ಯೆಹೋವನಿಗೆ ದ್ರೋಹಿಗಳನ್ನಾಗಿ ಮಾಡಿ ಸಮೂಹದವರಲ್ಲಿ ಘೋರವ್ಯಾಧಿಯುಂಟಾಗುವಂತೆ ಮಾಡಿದವರು ಇವರೇ ಅಲ್ಲವೇ.


ಹತವಾದವರಲ್ಲಿ ಎವೀ, ರೆಕೆಮ್, ಚೂರ್, ಹೂರ್, ರೆಬಾ ಎಂಬ ವಿುದ್ಯಾನ್ಯರ ಐದು ಮಂದಿ ರಾಜರು ಇದ್ದರು. ಅದಲ್ಲದೆ ಬೆಯೋರನ ಮಗನಾದ ಬಿಳಾಮನನ್ನು ಕಡಿದುಬಿಟ್ಟರು.


ತರುವಾಯ ಬಾಲಾಕನು ಬಿಳಾಮನಿಗೆ - ಬೇರೊಂದು ಸ್ಥಳಕ್ಕೆ ನಿನ್ನನ್ನು ಕರಕೊಂಡು ಹೋಗುತ್ತೇನೆ ಬಾ; ಅಲ್ಲಿಯಾದರೂ ನೀನು ಅವರನ್ನು ಶಪಿಸುವದಕ್ಕೆ ಒಂದು ವೇಳೆ ದೇವರು ಅನುಮತಿಸಾನು ಎಂದು ಹೇಳಿ


ಮರುದಿನ ಬೆಳಿಗ್ಗೆ ಬಾಲಾಕನು ಬಿಳಾಮನನ್ನು ಕರಕೊಂಡು ಬಾಳೆಂಬ ದೇವತೆಯ ಪೂಜಾಸ್ಥಳಗಳಿದ್ದ ಗುಡ್ಡವನ್ನು ಹತ್ತಿ ಇಸ್ರಾಯೇಲ್ಯರ ಒಂದು ಭಾಗವನ್ನು ಅಲ್ಲಿಂದ ತೋರಿಸಿದನು.


ಆತನು ತನ್ನ ಅದ್ಭುತಕೃತ್ಯಗಳ ಜ್ಞಾಪಕವನ್ನು ಉಳಿಯಮಾಡಿದ್ದಾನೆ. ಯೆಹೋವನು ದಯೆಯೂ ಕನಿಕರವೂ ಉಳ್ಳವನು.


ದೇವರೇ, ನಿನ್ನ ನೀತಿಯು ಆಕಾಶವನ್ನು ನಿಲುಕುವಷ್ಟು ಮಹೋನ್ನತವಾಗಿದೆ. ಮಹತ್ಕೃತ್ಯಗಳನ್ನು ನಡಿಸಿದ ದೇವರೇ, ನಿನಗೆ ಸಮಾನರು ಯಾರು?


ನಿನ್ನನ್ನು ಅರಿತವರಿಗೆ ನಿನ್ನ ಪ್ರೀತಿಯನ್ನು ಯಾವಾಗಲೂ ದಯಪಾಲಿಸು; ಯಥಾರ್ಥಚಿತ್ತರಿಗೆ ನಿನ್ನ ನ್ಯಾಯವನ್ನು ನಿರಂತರವೂ ಅನುಗ್ರಹಿಸು.


ಇಲ್ಲಿ ನಿಂತುಕೊಂಡು ಕೇಳಿರಿ; ಯೆಹೋವನು ನಿಮಗೋಸ್ಕರವೂ ನಿಮ್ಮ ಪಿತೃಗಳಿಗೋಸ್ಕರವೂ ನಡಿಸಿದ ನೀತಿಕಾರ್ಯಗಳನ್ನು ಕುರಿತು ಆತನೆದುರಿನಲ್ಲಿ ನಿಮಗೆ ನೆನಪು ಹುಟ್ಟಿಸಿ ನಿಮ್ಮನ್ನು ಎಚ್ಚರಿಸುತ್ತೇನೆ.


ಅವರು ಮೋವಾಬ್ಯರ ಮೈದಾನದಲ್ಲಿ ಬೇತ್‍ಯೆಷೀಮೋತಿನಿಂದ ಆಬೇಲ್‍ಶಿಟ್ಟೀವಿುನವರೆಗೂ ಯೊರ್ದನ್ ಹೊಳೆಯ ತೀರದಲ್ಲಿ ಇಳಿದುಕೊಂಡರು.


ನೂನನ ಮಗನಾದ ಯೆಹೋಶುವನು [ಕಾನಾನ್] ದೇಶವನ್ನೂ ಯೆರಿಕೋ ಪಟ್ಟಣವನ್ನೂ ನೋಡುವದಕ್ಕೋಸ್ಕರ ಶಿಟ್ಟೀವಿುನಿಂದ ಇಬ್ಬರು ಗೂಢಚಾರರನ್ನು ಕಳುಹಿಸಿದನು. ಅವರು ಹೊರಟು ಹೋಗಿ ರಾಹಾಬಳೆಂಬ ಸೂಳೆಯ ಮನೆಯಲ್ಲಿ ಇಳುಕೊಂಡರು.


ಯೆಹೋಶುವನು ಬೆಳಿಗ್ಗೆ ಎದ್ದನು; ಅವನೂ ಇಸ್ರಾಯೇಲ್ಯರೆಲ್ಲರೂ ಶಿಟ್ಟೀಮನ್ನು ಬಿಟ್ಟು ಯೊರ್ದನಿಗೆ ಬಂದು ಅದನ್ನು ದಾಟುವ ಮೊದಲು ಅಲ್ಲಿ ಇಳುಕೊಂಡರು.


ಚಿಪ್ಪೋರನ ಮಗನೂ ಮೋವಾಬ್ಯರ ಅರಸನೂ ಆದ ಬಾಲಾಕನಿಗಿಂತ ನೀನು ಹೆಚ್ಚಿನವನೋ? ಅವನು ಇಸ್ರಾಯೇಲ್ಯರೊಡನೆ ಎಂದಾದರೂ ವಿವಾದಮಾಡಿದನೋ? ಅಥವಾ ಅವರಿಗೆ ವಿರೋಧವಾಗಿ ಯುದ್ಧಕ್ಕೆ ಬಂದನೋ?


ಚೀಯೋನ್ ಪಟ್ಟಣಕ್ಕೆ [ನನ್ನ] ನ್ಯಾಯದ ಮೂಲಕವೂ ದೇಶಾಂತರದಿಂದ ಬಿಡುಗಡೆಯಾಗಿ ಬರುವ ಅದರ ಪ್ರಜೆಗಳಿಗೆ [ನನ್ನ] ಧರ್ಮದ ಮೂಲಕವೂ ವಿಮೋಚನೆಯಾಗುವದು.


ಆ ಸ್ತ್ರೀಯರು ತಮ್ಮ ದೇವತೆಗಳಿಗೆ ಮಾಡಿದ ಔತಣದ ಯಜ್ಞಗಳಿಗೆ ಇಸ್ರಾಯೇಲ್ಯರನ್ನು ಕರಿಸಲು ಇವರು ಆ ಭೋಜನವನ್ನು ಮಾಡಿ ಅವರ ದೇವತೆಗಳಿಗೆ ನಮಸ್ಕರಿಸುವವರಾದರು.


ನಿಮ್ಮ ಜೀವಮಾನಕಾಲವೆಲ್ಲಾ ಅವರ ಯೋಗಕ್ಷೇಮವನ್ನು ಬಯಸಲೇ ಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು