ಮೀಕ 6:7 - ಕನ್ನಡ ಸತ್ಯವೇದವು J.V. (BSI)7 ಸಾವಿರಾರು ಟಗರುಗಳನ್ನೂ ಲಕ್ಷೋಪಲಕ್ಷ ತೈಲಪ್ರವಾಹಗಳನ್ನೂ ನೋಡಿ ಯೆಹೋವನು ಮೆಚ್ಚಾನೇ? ನನ್ನ ದ್ರೋಹದ ನಿವಿುತ್ತ ನನ್ನ ಚೊಚ್ಚಲ ಮಗನನ್ನು ಅರ್ಪಿಸಲೋ, ನನ್ನ ಆತ್ಮದ ಪಾಪಕ್ಕಾಗಿ ನನ್ನ ಗರ್ಭದ ಫಲವನ್ನು ಸಲ್ಲಿಸಲೋ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಸಾವಿರಾರು ಟಗರುಗಳನ್ನೂ, ಲಕ್ಷೋಪಲಕ್ಷ ತೈಲ ಪ್ರವಾಹಗಳನ್ನೂ ನೋಡಿ ಯೆಹೋವನು ಮೆಚ್ಚುತ್ತಾನೆಯೇ? ನನ್ನ ದ್ರೋಹದ ನಿಮಿತ್ತ ನನ್ನ ಚೊಚ್ಚಲ ಮಗನನ್ನು ಅರ್ಪಿಸಲೋ? ನನ್ನ ಆತ್ಮದ ಪಾಪಕ್ಕಾಗಿ ನನ್ನ ಗರ್ಭದ ಫಲವನ್ನು ಸಲ್ಲಿಸಲೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಸಾವಿರಾರು ಟಗರುಗಳನ್ನೂ ಧಾರಾಕಾರವಾಗಿ ಹರಿಯುವ ತೈಲಪ್ರವಾಹಗಳನ್ನು ನೋಡಿ ಸರ್ವೇಶ್ವರ ಮೆಚ್ಚುವುದುಂಟೆ? ನಾನು ಮಾಡಿದ ದ್ರೋಹಕ್ಕಾಗಿ ನನ್ನ ಚೊಚ್ಚಲುಮಗನನ್ನೇ ಅರ್ಪಿಸಲೇ? ನನ್ನ ಪಾಪಕ್ಕಾಗಿ ನನ್ನ ಕರುಳ ಕುಡಿಯನ್ನೇ ಬಲಿಕೊಡಲೇ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ದೇವರಾದ ಯೆಹೋವನು ಒಂದು ಸಾವಿರ ಟಗರು, ಹತ್ತುಸಾವಿರ ಎಣ್ಣೆಯ ಹೊಳೆಗಳಲ್ಲಿ ಸಂತೋಷಿಸುವನೋ? ನಾನು ಮಾಡಿದ ತಪ್ಪಿನ ಪರಿಹಾರಕ್ಕಾಗಿ ನನ್ನ ಚೊಚ್ಚಲ ಮಗನನ್ನು ಸಮರ್ಪಿಸಲೋ? ನನ್ನ ಶರೀರದಿಂದ ಬಂದ ಮಗನನ್ನು ನನ್ನ ಪಾಪಗಳಿಗಾಗಿ ಸಮರ್ಪಿಸಲೋ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಯೆಹೋವ ದೇವರು ಸಾವಿರ ಟಗರುಗಳಿಗಾದರೂ ಎಣ್ಣೆಯ ಹತ್ತು ಸಾವಿರ ನದಿಗಳಿಗಾದರೂ ಮೆಚ್ಚುವರೋ? ನನ್ನ ದ್ರೋಹಕ್ಕಾಗಿ ನನ್ನ ಚೊಚ್ಚಲ ಮಗನನ್ನೂ ನನ್ನ ಆತ್ಮದ ಪಾಪಕ್ಕಾಗಿ ನನ್ನ ಗರ್ಭದ ಫಲವನ್ನೂ ಕೊಡಲೋ? ಅಧ್ಯಾಯವನ್ನು ನೋಡಿ |