Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 7:12 - ಕನ್ನಡ ಸತ್ಯವೇದವು J.V. (BSI)

12 ಅದೇ ದಿನದಲ್ಲಿ ನಿನ್ನ ಜನರು ಅಶ್ಶೂರದಿಂದಲೂ ಐಗುಪ್ತದ ಪಟ್ಟಣಗಳಿಂದಲೂ ನಿನ್ನ ಬಳಿಗೆ ಕೂಡಿಬರುವರು; ಸಮುದ್ರದಿಂದ ಸಮುದ್ರದವರೆಗೆ, ಪರ್ವತದಿಂದ ಪರ್ವತದವರೆಗೆ, ಅಂತು ಐಗುಪ್ತದಿಂದ ಯೂಫ್ರೇಟೀಸ್ ನದಿಯವರೆಗೂ ಚದರಿರುವ ನಿನ್ನ ಸಕಲಜನರು ನಿನ್ನನ್ನು ಸೇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅದೇ ದಿನದಲ್ಲಿ ನಿನ್ನ ಜನರು ಅಶ್ಶೂರದಿಂದಲೂ, ಐಗುಪ್ತದ ಪಟ್ಟಣಗಳಿಂದಲೂ ನಿನ್ನ ಬಳಿಗೆ ಕೂಡಿ ಬರುವರು. ಸಮುದ್ರದಿಂದ ಸಮುದ್ರದವರೆಗೆ, ಪರ್ವತದಿಂದ ಪರ್ವತದವರೆಗೆ ಅಂತು ಐಗುಪ್ತದಿಂದ ಯೂಫ್ರೆಟಿಸ್ ನದಿಯವರೆಗೂ ಚದುರಿರುವ ನಿನ್ನ ಸಕಲ ಜನರು ನಿನ್ನನ್ನು ಸೇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅಂದು ಜನರು ಅಸ್ಸೀರಿಯದಿಂದಲೂ ಈಜಿಪ್ಟಿನಿಂದಲೂ ನಿಮ್ಮ ಬಳಿಗೆ ಬಂದು ಸೇರುವರು. ಸಮುದ್ರದಿಂದ ಸಮುದ್ರದವರೆಗೂ ಪರ್ವತದಿಂದ ಪರ್ವತದವರೆಗೂ ಈಜಿಪ್ಟಿನಿಂದ ಯೂಫ್ರೆಟಿಸ್ ನದಿಯವರೆಗೂ ಚದರಿಹೋಗಿರುವ ಜನರೆಲ್ಲರು ನಿನ್ನೆಡೆಗೆ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಿನ್ನ ಜನರು ದೇಶಕ್ಕೆ ಹಿಂತಿರುಗುವರು. ಅವರು ಅಶ್ಶೂರದಿಂದಲೂ ಈಜಿಪ್ಟ್ ನಗರಗಳಿಂದಲೂ ಹಿಂದೆ ಬರುವರು. ನಿನ್ನ ಜನರು ಈಜಿಪ್ಟಿನಿಂದಲೂ ಯೂಫ್ರೇಟೀಸ್ ನದಿಯ ಆಚೆಕಡೆಯಿಂದಲೂ ಬರುವರು. ಪಶ್ಟಿಮದ ಸಮುದ್ರದ ಕಡೆಯಿಂದ ಬರುವರು. ಪೂರ್ವದ ಪರ್ವತಗಳ ಕಡೆಯಿಂದ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆ ದಿವಸದಲ್ಲಿ ಅಸ್ಸೀರಿಯರಿಂದಲೂ ಈಜಿಪ್ಟ್ ಪಟ್ಟಣಗಳಿಂದಲೂ ಯೂಫ್ರೇಟೀಸ್ ನದಿಯವರೆಗೂ ಸಮುದ್ರದಿಂದ ಸಮುದ್ರದವರೆಗೂ ಬೆಟ್ಟದಿಂದ ಬೆಟ್ಟದವರೆಗೂ ಜನರೆಲ್ಲರು ನಿನ್ನ ಬಳಿಗೆ ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 7:12
15 ತಿಳಿವುಗಳ ಹೋಲಿಕೆ  

ಗುಬ್ಬಿಗಳಂತೆ ಐಗುಪ್ತದಿಂದಲೂ ಪಾರಿವಾಳಗಳಂತೆ ಅಶ್ಶೂರದಿಂದಲೂ ಅದರುತ್ತಾ ತ್ವರೆಪಡುವರು; ಅವರು ತಮ್ಮ ತಮ್ಮ ನಿವಾಸಗಳಲ್ಲಿ ವಾಸಿಸುವಂತೆ ಮಾಡುವೆನು; ಇದು ಯೆಹೋವನ ನುಡಿ.


ಇದಲ್ಲದೆ ಇಸ್ರಾಯೇಲ್ಯರು ಐಗುಪ್ತ ದೇಶದಿಂದ ಹೊರಟುಬಂದ ಕಾಲದಲ್ಲಿ ಅವರಿಗೆ ಮಾರ್ಗವು ಹೇಗೆ ಸಿದ್ಧವಾಯಿತೋ ಹಾಗೆಯೇ ಅಶ್ಶೂರದಿಂದ ತಪ್ಪಿಸಿಕೊಂಡು ಬರುವ ಆತನ ಜನಶೇಷಕ್ಕೆ ರಾಜಮಾರ್ಗವು ಸಿದ್ಧವಾಗುವದು.


ಇದನ್ನೂ ಅವರಿಗೆ ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಗೋ, ಇಸ್ರಾಯೇಲ್ಯರು ವಶವಾಗಿರುವ ಜನಾಂಗಗಳೊಳಗಿಂದ ನಾನು ಅವರನ್ನು ಉದ್ಧರಿಸಿ ಎಲ್ಲಾ ಕಡೆಯಿಂದಲೂ ಒಟ್ಟುಗೂಡಿಸಿ ಸ್ವದೇಶಕ್ಕೆ ಕರತಂದು


ಆ ದಿನದಲ್ಲಿ ನಾನು ಇಸ್ರಾಯೇಲ್‍ವಂಶಕ್ಕೆ ಕೊಂಬನ್ನು ಮೊಳೆಯಿಸಿ ಆ ವಂಶದವರ ಮಧ್ಯದಲ್ಲಿ ನಿನ್ನ ಬಾಯನ್ನು ಬಿಚ್ಚುವೆನು; ನಾನೇ ಯೆಹೋವನು ಎಂದು ಅವರಿಗೆ ನಿಶ್ಚಯವಾಗುವದು.


ಇಗೋ, ನಾನು ಅವರನ್ನು ಉತ್ತರ ದೇಶದಿಂದ ಬರಮಾಡುವೆನು, ದಿಗಂತಗಳಿಂದ ಅವರನ್ನು ಕೂಡಿಸುವೆನು, ಅವರೊಂದಿಗೆ ಕುರುಡರನ್ನೂ ಕುಂಟರನ್ನೂ ಗರ್ಭಿಣಿಯರನ್ನೂ ದಿನತುಂಬಿದ ಬಸುರಿಯರನ್ನೂ ಒಟ್ಟಿಗೆ ಕರತರುವೆನು; ದೊಡ್ಡಗುಂಪಾಗಿ ಇಲ್ಲಿಗೆ ಹಿಂದಿರುಗುವರು.


ನಾನು ನನ್ನ ಮಂದೆಯನ್ನು ಯಾವ ದೇಶಗಳಿಗೆ ಅಟ್ಟಿಬಿಟ್ಟೆನೋ ಆ ಸಕಲ ದೇಶಗಳಿಂದ ಉಳಿದ ಕುರಿಗಳನ್ನು ಕೂಡಿಸಿ ತಮ್ಮ ತಮ್ಮ ಹಟ್ಟಿಗಳಿಗೆ ತಿರಿಗಿ ಬರಮಾಡುವೆನು; ಅವು ದೊಡ್ಡ ಪೀಳಿಗೆಯಾಗಿ ಹೆಚ್ಚುವವು.


ಆ ಕಾಲದಲ್ಲಿ ಯೆಹೂದವಂಶವು ಇಸ್ರಾಯೇಲ್ ವಂಶದೊಡನೆ ಜೊತೆಯಾಗಿ ನಡೆಯುವದು, ಎರಡೂ ಕಲೆತು ನಾನು ನಿಮ್ಮ ಪಿತೃಗಳಿಗೆ ಬಾಧ್ಯವಾಗಿ ದಯಪಾಲಿಸಿದ ದೇಶಕ್ಕೆ ಬಡಗಣ ಸೀಮೆಯೊಳಗಿಂದ ಬರುವವು.


ಇಗೋ, ಇವರು ದೂರದಿಂದ ಬರುತ್ತಾರೆ, ಇಗೋ, ಇವರು ಬಡಗಲಿಂದ ಮತ್ತು ಪಡುವಲಿಂದ, ಇವರು ಸೀನೀಮ್ ದೇಶದಿಂದ ಬರುತ್ತಿದ್ದಾರೆ.


ನಾನು ಒಪ್ಪಿಸಿಬಿಡು ಎಂದು ಬಡಗಲಿಗೂ ತಡೆಯಬೇಡ ಎಂದು ತೆಂಕಲಿಗೂ ಹೇಳಿ ದೂರದಲ್ಲಿರುವ ನನ್ನ ಕುಮಾರರನ್ನೂ, ದಿಗಂತಗಳಲ್ಲಿರುವ ನನ್ನ ಕುಮಾರಿಯರನ್ನೂ


ಆ ದಿನದಲ್ಲಿ ಕರ್ತನು ತನ್ನ ಜನಶೇಷವನ್ನು ಬಿಡಿಸಿಕೊಳ್ಳುವದಕ್ಕೆ ಎರಡನೆಯ ಸಾರಿ ಕೈಹಾಕಿ ಅಶ್ಶೂರ, ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್, ಸಮುದ್ರದ ಕರಾವಳಿ, ಈ ಸ್ಥಳಗಳಲ್ಲಿ ಉಳಿದವರನ್ನು ಬರಮಾಡಿಕೊಳ್ಳುವನು.


ನನ್ನ ಸೇವಕ ಯಾಕೋಬೇ, ಭಯಪಡಬೇಡ! ಇಸ್ರಾಯೇಲೇ, ಅಂಜಬೇಡ! ಇಗೋ, ನಾನು ನಿನ್ನನ್ನು ದೂರದೇಶದಿಂದ ಉದ್ಧರಿಸುವೆನು, ನಿನ್ನ ಸಂತಾನವನ್ನು ಸೆರೆಹೋದ ಸೀಮೆಯಿಂದ ರಕ್ಷಿಸುವೆನು; ಯಾಕೋಬು ಹಿಂದಿರುಗಿ ನೆಮ್ಮದಿಯಾಗಿಯೂ ಹಾಯಾಗಿಯೂ ಇರುವದು; ಯಾರೂ ಅದನ್ನು ಹೆದರಿಸರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು