Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 7:16 - ಕನ್ನಡ ಸತ್ಯವೇದವು J.V. (BSI)

16 ಜನಾಂಗಗಳವರು ನೋಡಿ ತಮ್ಮ ಮಹಾಶಕ್ತಿಗೂ ನಾಚಿಕೆಪಡುವರು; ಬಾಯ ಮೇಲೆ ಕೈಯಿಟ್ಟುಕೊಳ್ಳುವರು, ಅವರ ಕಿವಿ ಕೇಳದಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಜನಾಂಗಗಳವರು ನೋಡಿ ತಮ್ಮ ಮಹಾ ಶಕ್ತಿಗೂ ನಾಚಿಕೆಪಡುವರು. ಬಾಯಿಯ ಮೇಲೆ ಕೈಯಿಟ್ಟುಕೊಳ್ಳುವರು. ಅವರ ಕಿವಿ ಕೇಳದಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅನ್ಯರಾಷ್ಟ್ರಗಳು ಇವನ್ನು ನೋಡಿ ಅವುಗಳ ಮುಂದೆ ತಮ್ಮ ಶಕ್ತಿಸಾಮರ್ಥ್ಯ ಏನೂ ಇಲ್ಲವೆಂದು ನಾಚಿಕೆಪಟ್ಟು ಬಾಯಮೇಲೆ ಕೈಯಿಟ್ಟುಕೊಳ್ಳುವರು; ಅವರ ಕಿವಿ ಕಿವುಡಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಜನಾಂಗಗಳು ಆ ಅದ್ಭುತವನ್ನು ನೋಡಿ ನಾಚಿಕೆಗೊಳ್ಳುವರು. ನನ್ನ ಶಕ್ತಿಯ ಎದುರು ಅವರ ಬಲವು ಏನೂ ಅಲ್ಲವೆಂದು ತಿಳಿಯುವರು. ಅವರು ಆಶ್ಚರ್ಯಚಕಿತರಾಗಿ ತಮ್ಮ ಬಾಯಿಗಳ ಮೇಲೆ ಕೈಗಳನ್ನಿಡುವರು. ತಮ್ಮ ಕಿವಿಗಳನ್ನು ಮುಚ್ಚಿ ವಾರ್ತೆ ಕೇಳಲು ನಿರಾಕರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಜನಾಂಗಗಳು ನೋಡಿ ನಾಚಿಕೊಳ್ಳುವರು ತಮ್ಮ ತಮ್ಮ ಶಕ್ತಿಗೆ ವಂಚಿತರಾಗಿ ನಾಚಿಕೆಪಡುವರು. ತಮ್ಮ ಕೈಗಳನ್ನು ಬಾಯಿಯ ಮೇಲೆ ಇಡುವರು; ಅವರ ಕಿವಿಗಳು ಕಿವುಡಾಗಿ ಹೋಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 7:16
17 ತಿಳಿವುಗಳ ಹೋಲಿಕೆ  

ಯೆಹೋವನೇ, ನೀನು ಕೈಯೆತ್ತಿದ್ದರೂ ಅವರು ಲಕ್ಷಿಸರು. ಆದರೆ ನಿನ್ನ ಸ್ವಜನಾಭಿಮಾನವನ್ನು ನೋಡಿ ನಾಚಿಕೆಪಡುವರು; ಹೌದು, ಆ ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವದು.


ಹಾಗೆಯೇ ಅನೇಕ ಜನಾಂಗಗಳವರು ಅವನನ್ನು ಕಂಡು ವಿಸ್ಮಯದಿಂದ ಚಮಕಿತರಾಗುವರು; ಅರಸರೂ ಅವನ ಮುಂದೆ ಬಾಯಿಮುಚ್ಚಿಕೊಳ್ಳುವರು; ಏಕಂದರೆ ಸುದ್ದಿಯೇ ಇಲ್ಲದ ಸಂಗತಿಯನ್ನು ನೋಡುವರು, ಎಂದೂ ಕೇಳದ ವಿಷಯವನ್ನು ಗ್ರಹಿಸಿಕೊಳ್ಳುವರು.


ಅಯ್ಯೋ, ನಾನು ಅಲ್ಪನೇ ಸರಿ, ನಿನಗೆ ಪ್ರತ್ಯುತ್ತರವಾಗಿ ಏನು ಹೇಳಲಿ? ಬಾಯ ಮೇಲೆ ಕೈಯಿಟ್ಟುಕೊಳ್ಳುವೆನು.


ಜನಾಂಗಗಳು ಕೋಪಿಸಿಕೊಂಡವು, ನಿನ್ನ ಕೋಪವೂ ಪ್ರಕಟವಾಯಿತು. ಸತ್ತವರು ತೀರ್ಪುಹೊಂದುವ ಸಮಯ ಬಂದದೆ; ನೀನು ನಿನ್ನ ದಾಸರಾದ ಪ್ರವಾದಿಗಳಿಗೂ ದೇವಜನರಿಗೂ ನಿನ್ನ ನಾಮಕ್ಕೆ ಭಯಪಡುವ ದೊಡ್ಡವರಿಗೂ ಚಿಕ್ಕವರಿಗೂ ಪ್ರತಿಫಲವನ್ನು ಕೊಟ್ಟು ಲೋಕನಾಶಕರನ್ನು ನಾಶಮಾಡುವಿ ಎಂದು ಆತನನ್ನು ಆರಾಧಿಸಿದರು.


ಧರ್ಮಶಾಸ್ತ್ರದ ನುಡಿಗಳೆಲ್ಲವು ಆ ಶಾಸ್ತ್ರಕ್ಕೆ ಒಳಗಾದವರಿಗೇ ಹೇಳಿವೆಯೆಂದು ಬಲ್ಲೆವಷ್ಟೆ; ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವದು, ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವದು.


ಯೆರೂಸಲೇವಿುನ ಮೇಲೆ ಬೀಳುವ ಎಲ್ಲಾ ಜನಾಂಗಗಳ ಧ್ವಂಸಕ್ಕೆ ಆ ದಿನದಲ್ಲಿ ಕೈಹಾಕುವೆನು.


ಅಲ್ಲದೆ ಸಿಂಹವು ಕಾಡುಮೃಗಗಳನ್ನು, ಪ್ರಾಯದ ಸಿಂಹವು ಕುರಿಹಿಂಡುಗಳನ್ನು ಹಾದುಹೋಗುವಾಗೆಲ್ಲಾ ಅವುಗಳನ್ನು ಯಾರೂ ರಕ್ಷಿಸಲಾರದಂತೆ ತುಳಿದು ಸೀಳಿಹಾಕುವ ಹಾಗೆ ಯಾಕೋಬಿನ ಜನಶೇಷವು ದೇಶದೇಶಗಳೊಳಗೆ ಬಹುಜನಾಂಗಗಳ ಮಧ್ಯದಲ್ಲಿ ನಾಶಕರವಾಗಿರುವದು.


ಹೀಗೆ ನಾನು ನನ್ನ ಮಹಿಮೆಯನ್ನು ತೋರ್ಪಡಿಸಿ ನನ್ನ ಗೌರವವನ್ನು ಕಾಪಾಡಿಕೊಂಡು ಬಹುಜನಾಂಗಳು ನಾನೇ ಯೆಹೋವನು ಎಂದು ತಿಳಿದುಕೊಳ್ಳುವಂತೆ ಅವುಗಳ ಕಣ್ಣೆದುರಿಗೆ ವ್ಯಕ್ತನಾಗುವೆನು.


ಅವರ ಕೃತ್ಯಗಳಿಗೂ ಆಲೋಚನೆಗಳಿಗೂ [ತಕ್ಕದ್ದನ್ನು ಮಾಡುವೆನು]; ನಾನು ಇನ್ನು ಮುಂದೆ ಸಮಸ್ತಜನಾಂಗಗಳನ್ನೂ ಸಕಲಭಾಷೆಯವರನ್ನೂ ಒಟ್ಟಿಗೆ ಬರಮಾಡುವೆನು; ಅವರು ಬಂದು ನನ್ನ ಮಹಿಮೆಯನ್ನು ನೋಡುವರು.


ಆಗ ನಮ್ಮ ಬಾಯಿ ಬಲು ನಗೆಯಿಂದಲೂ ನಮ್ಮ ನಾಲಿಗೆ ಹರ್ಷಗೀತದಿಂದಲೂ ತುಂಬಿದವು. ಅನ್ಯಜನರು - ಯೆಹೋವನು ಇವರಿಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದಾನೆಂದು ತಮ್ಮೊಳಗೆ ಮಾತಾಡಿಕೊಳ್ಳುತ್ತಿದ್ದರು.


ನನ್ನ ಕಡೆಗೆ ಗಮನಿಸಿ ಬೆರಗಾಗಿ ಬಾಯ ಮೇಲೆ ಕೈಯಿಟ್ಟುಕೊಳ್ಳಿರಿ.


ನೀನು ಉಬ್ಬಿಕೊಂಡು ಮೂರ್ಖನಾಗಿ ನಡೆದಿದ್ದರೆ ಅಥವಾ ದುರಾಲೋಚನೆಮಾಡಿದ್ದರೆ ಬಾಯ ಮೇಲೆ ಕೈಯಿಟ್ಟುಕೋ.


ದಿವ್ಯದರ್ಶಿಗಳು ಆಶಾಭಂಗಪಡುವರು, ಕಣಿಯವರು ನಾಚಿಕೆಗೊಳ್ಳುವರು, ಎಲ್ಲರೂ ಬಟ್ಟೆಯಿಂದ ಬಾಯಿಮುಚ್ಚಿಕೊಳ್ಳುವರು; ಅವರಿಗೆ ದೈವೋತ್ತರವೇ ದೊರೆಯದು.


ರಾಜ್ಯಗಳ ಸಿಂಹಾಸನವನ್ನು ಕೆಡವಿ ಜನಾಂಗಗಳ ಸಂಸ್ಥಾನಬಲವನ್ನು ಧ್ವಂಸ ಮಾಡಿ ರಥಗಳನ್ನೂ ರಥಾರೂಢರನ್ನೂ ದೊಬ್ಬಿಬಿಡುವೆನು; ಕುದುರೆಗಳೂ ರಾಹುತರೂ ಬಿದ್ದು ಹೋಗುವರು, ಪ್ರತಿಯೊಬ್ಬನು ತನ್ನ ಕಡೆಯವನ ಕತ್ತಿಯಿಂದ ಹತನಾಗುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು