ಮೀಕ 7:17 - ಕನ್ನಡ ಸತ್ಯವೇದವು J.V. (BSI)17 ಹಾವಿನಂತೆ ದೂಳನ್ನು ನೆಕ್ಕುವರು; ನೆಲದಲ್ಲಿ ಹರಿದಾಡುವ ಕ್ರಿವಿುಕೀಟಗಳ ಹಾಗೆ ತಮ್ಮ ಗುಪ್ತಸ್ಥಳಗಳಿಂದ ನಡುಗುತ್ತಾ ಈಚೆಗೆ ಹೊರಡುವರು; ಯೆಹೋವನೆಂಬ ನಮ್ಮ ದೇವರಾದ ನಿನ್ನನ್ನು ಅಂಜುತ್ತಾ ಸಮೀಪಿಸಿ ನಿನಗೆ ಭಯಪಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಹಾವಿನಂತೆ ಧೂಳನ್ನು ನೆಕ್ಕುವರು. ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳ ಹಾಗೆ ತಮ್ಮ ಗುಪ್ತಸ್ಥಳಗಳಿಂದ ನಡುಗುತ್ತಾ ಈಚೆಗೆ ಹೊರಡುವರು. ಯೆಹೋವನೆಂಬ ನಮ್ಮ ದೇವರಾದ ನಿನ್ನನ್ನು ಅಂಜುತ್ತಾ, ಸೇವಿಸಿ ನಿನಗೆ ಭಯಪಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ನೆಲದ ಮೇಲೆ ಹರಿದಾಡುವ ಹಾವುಹಲ್ಲಿಗಳಂತೆ ಅವರು ಮಣ್ಣು ಮುಕ್ಕುವರು; ಗಡಗಡನೆ ನಡುಗುತ್ತಾ ಬಿಲದಿಂದ ಈಚೆ ಬರುವರು. ಸರ್ವೇಶ್ವರ ಎಂಬ ನಮ್ಮ ದೇವರಾದ ನಿಮ್ಮ ಕಡೆಗೆ ಭಯಭಕ್ತಿಯಿಂದ ತಿರುಗಿಕೊಳ್ಳುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಅವರು ಹಾವಿನಂತೆ ಧೂಳಿನ ಮೇಲೆ ಹರಿದಾಡುವರು. ಭಯದಿಂದ ನಡುಗುವರು. ಅವರು ನೆಲದ ಮೇಲಿನ ಬಿಲಗಳಿಂದ ಹರಿದುಕೊಂಡು ಬರುವ ಹುಳಗಳಂತಿರುವರು. ಅವರು ನಮ್ಮ ದೇವರಾದ ಯೆಹೋವನ ಬಳಿಗೆ ಬಂದು ನಿಮ್ಮನ್ನು ಭಯದಿಂದ ನೋಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಅವರು ಹಾವಿನಂತೆ, ನೆಲದ ಮೇಲೆ ತೆವಳುವ ಜೀವಿಗಳಂತೆ ಧೂಳನ್ನು ನೆಕ್ಕುತ್ತಾರೆ. ಅವರು ರಂಧ್ರಗಳಿಂದ ಹೊರಗೆ ಬರುವರು. ನಮ್ಮ ದೇವರಾದ ಯೆಹೋವ ದೇವರಿಗೆ ಅವರು ಹೆದರುವರು. ನಿನಗೆ ಭಯಪಡುವರು. ಅಧ್ಯಾಯವನ್ನು ನೋಡಿ |