Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 7:18 - ಕನ್ನಡ ಸತ್ಯವೇದವು J.V. (BSI)

18 ನಿನಗೆ ಯಾವ ದೇವರು ಸಮಾನ? ನೀನು ನಿನ್ನ ಸ್ವಾಸ್ತ್ಯದವರಲ್ಲಿ ಉಳಿದವರ ಅಪರಾಧವನ್ನು ಕ್ಷವಿುಸುವವನೂ ಅವರ ದ್ರೋಹವನ್ನು ಲಕ್ಷಿಸದವನೂ ಆಗಿದ್ದೀ; ಹೌದು, ನಮ್ಮ ದೇವರು ನಿತ್ಯವೂ ಕೋಪಿಸುವವನಲ್ಲ, ಕರುಣೆಯೇ ಆತನಿಗೆ ಇಷ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಿನಗೆ ಯಾವ ದೇವರು ಸಮಾನ? ನೀನು ನಿನ್ನ ಸ್ವತ್ತಿನವರಲ್ಲಿ ಉಳಿದಿರುವ ಅಪರಾಧವನ್ನು ಕ್ಷಮಿಸುವವನೂ, ಅವರ ದ್ರೋಹವನ್ನು ಲಕ್ಷಿಸದವನೂ ಆಗಿದ್ದೀ. ಹೌದು ನಮ್ಮ ದೇವರು ನಿತ್ಯವೂ ಕೋಪಿಸುವವನಲ್ಲ. ಕರುಣೆಯೇ ಆತನಿಗೆ ಇಷ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನಿಮ್ಮಂಥ ದೇವರು ಯಾರಿದ್ದಾರೆ? ತಮ್ಮ ಸ್ವಂತ ಜನರಲ್ಲಿ ಅಳಿದುಳಿದವರ ಅಪರಾಧಗಳನ್ನು ಲೆಕ್ಕಿಸದೆ, ಅವರ ದ್ರೋಹಗಳನ್ನು ಕ್ಷಮಿಸುವಂಥ ದೇವರು ಯಾರಿದ್ದಾರೆ? ನೀವು ನಿತ್ಯಕ್ಕೂ ಕೋಪಿಷ್ಠರಾಗಿರದೆ ಕರುಣೆ ತೋರಿಸುವುದರಲ್ಲೇ ಸಂತುಷ್ಟರಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನಿನ್ನ ಹಾಗೆ ಬೇರೆ ಯಾವ ದೇವರೂ ಇಲ್ಲ. ಪಾಪದಲ್ಲಿ ಬಿದ್ದವರನ್ನು ನೀನು ಕ್ಷಮಿಸುವೆ. ನಿನ್ನ ಜನಶೇಷವನ್ನು ಮನ್ನಿಸುವೆ. ನೀನು ನಿತ್ಯಕ್ಕೂ ಕೋಪಿಸುವದಿಲ್ಲ. ಯಾಕೆಂದರೆ ದಯೆತೋರಿಸುವದರಲ್ಲಿ ನೀನು ಸಂತೋಷಿಸುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಪಾಪಗಳನ್ನು ಮತ್ತು ಅಪರಾಧಗಳನ್ನು ಮನ್ನಿಸುವವನೂ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ಲಕ್ಷಿಸದವನೂ, ನಿನ್ನ ಹಾಗೆ ಇರುವ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವುದಿಲ್ಲ. ಏಕೆಂದರೆ ನೀವು ಕರುಣೆಯಲ್ಲಿ ಸಂತೋಷಪಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 7:18
80 ತಿಳಿವುಗಳ ಹೋಲಿಕೆ  

ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿ ಬಿಡುತ್ತೇನೆ, ನಿನ್ನ ಪಾಪಗಳನ್ನು ನನ್ನ ನೆನಪಿನಲ್ಲಿಡೆನು.


ನಿನ್ನ ದ್ರೋಹಗಳನ್ನು ಮಂಜಿನಂತೆ ಪರಿಹರಿಸಿದ್ದೇನೆ, ನಿನ್ನ ಪಾಪಗಳನ್ನು ಮೋಡದಂತೆ ಹಾರಿಸಿದ್ದೇನೆ; ನಿನ್ನನ್ನು ವಿಮೋಚಿಸಿದ್ದೇನೆ, ನನ್ನ ಕಡೆಗೆ ತಿರುಗಿಕೋ.


ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಾಯೇಲಿನ ಅಧರ್ಮವನ್ನು ಎಲ್ಲಿ ಹುಡುಕಿದರೂ ಇರುವದೇ ಇಲ್ಲ; ಯೆಹೂದದ ಪಾಪವನ್ನು ಎಲ್ಲಿ ತಡಕಿದರೂ ಸಿಕ್ಕುವದೇ ಇಲ್ಲ; ನಾನು ಉಳಿಸುವ ಜನಶೇಷವನ್ನು ಕ್ಷವಿುಸುವೆನಲ್ಲವೆ. ಇದು ಯೆಹೋವನ ನುಡಿ.


ನಾನು ಅವರ ಹಿತವನ್ನು ಬಯಸುತ್ತಾ ಅವರಲ್ಲಿ ಆನಂದಿಸುವೆನು, ನಿಶ್ಚಯವಾಗಿ ಅವರನ್ನು ಈ ದೇಶದಲ್ಲಿ ನನ್ನ ಪೂರ್ಣವಾದ ಹೃದಯದಿಂದಲೂ ಮನಸ್ಸಿನಿಂದಲೂ ಸ್ಥಾಪಿಸುವೆನು.


ನೀನು ಹೋಗಿ ಉತ್ತರದಿಕ್ಕಿಗೆ ಈ ಮಾತುಗಳನ್ನು ಸಾರು - ಯೆಹೋವನು ಹೀಗನ್ನುತ್ತಾನೆ, ಭ್ರಷ್ಟಳಾದ ಇಸ್ರಾಯೇಲೇ, ಹಿಂದಿರುಗು; ನಾನು ಕೋಪ ಮುಖದಿಂದ ನಿನ್ನನ್ನು ನೋಡೆನು, ನಾನು ಕರುಣಾಶಾಲಿ, ನಿತ್ಯಕೋಪಿಯಲ್ಲ.


ಯೆಹೋವನೇ, ದೇವರುಗಳಲ್ಲಿ ನಿನ್ನ ಸಮಾನನು ಯಾವನು? ಪರಿಶುದ್ಧತ್ವದಿಂದ ಸರ್ವೋತ್ತಮನೂ ಪ್ರಖ್ಯಾತ ಕೃತ್ಯಗಳನ್ನು ಮಾಡಿರುವದರಿಂದ ಭಯಂಕರನೂ ಅದ್ಭುತಗಳನ್ನು ನಡಿಸುವವನೂ ಆಗಿರುವ ನಿನಗೆ ಸಮಾನನು ಎಲ್ಲಿ?


ಯೆಹೋವನೇ, ಸೇನಾಧೀಶ್ವರನಾದ ದೇವರೇ, ನಿನಗೆ ಸಮಾನರು ಯಾರು? ಯಾಹುವೇ, ನೀನು ಶಕ್ತನು, ಸತ್ಯತೆಯಿಂದ ಆವರಿಸಲ್ಪಟ್ಟವನು.


ಕರ್ತನೇ, ನೀನು ಕನಿಕರವೂ ದಯೆಯೂ ಉಳ್ಳ ದೇವರು; ದೀರ್ಘಶಾಂತನು, ಬಹಳ ಪ್ರೀತಿಯೂ ನಂಬಿಕೆಯೂ ಉಳ್ಳವನು.


ನನ್ನ ಪಾಪಗಳನ್ನು ನಿವಾರಿಸಲು ನನ್ನಿಂದಾಗುವದಿಲ್ಲ. ಆದರೆ ನಮ್ಮ ದೋಷಪರಿಹಾರಕನು ನೀನೇ.


ಮೇಘಮಂಡಲದಲ್ಲಿ ಯೆಹೋವನಿಗೆ ಸಮಾನರು ಯಾರು? ದೇವದೂತರಲ್ಲಿ ಯೆಹೋವನಿಗೆ ಸರಿಯಾದವರು ಯಾರು?


ಪಾಪಪರಿಹಾರಕ್ಕೋಸ್ಕರ ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಮಾತು ಯೆರೂಸಲೇಮು ಮೊದಲುಗೊಂಡು ಸಮಸ್ತ ದೇಶದವರಿಗೂ ಆತನ ಹೆಸರಿನಲ್ಲಿ ಸಾರಲ್ಪಡುವದೆಂತಲೂ ಬರೆದದೆ.


ಆ ಕುಂಟುಜನವನ್ನು ಉಳಿಸಿ ಕಾಪಾಡುವೆನು, ದೂರತಳ್ಳಲ್ಪಟ್ಟ ಪ್ರಜೆಯನ್ನು ಪ್ರಬಲ ಜನಾಂಗವನ್ನಾಗಿ ಮಾಡುವೆನು; ಯೆಹೋವನು ಚೀಯೋನ್ ಪರ್ವತದಲ್ಲಿ ಇಂದಿನಿಂದ ಎಂದೆಂದಿಗೂ ಅವರ ರಾಜನಾಗಿರುವನು.


ಯಾಕೋಬೇ, ನಿನ್ನವರನ್ನೆಲ್ಲಾ ಕೂಡಿಸೇ ಕೂಡಿಸುವೆನು; ಇಸ್ರಾಯೇಲಿನ ಜನಶೇಷವನ್ನು ಸೇರಿಸೇ ಸೇರಿಸುವೆನು. ಅವರನ್ನು ಹಟ್ಟಿಯಲ್ಲಿನ ಕುರಿಗಳಂತೆ ಒಟ್ಟಿಗಿಡುವೆನು, ಕಾವಲ ಮಧ್ಯದಲ್ಲಿನ ಮಂದೆಯ ಹಾಗೆ ಗುಂಪು ಹಾಕುವೆನು; ಜನರು ಗಿಜಿಗುಟ್ಟುವರು.


ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಲೇಶವಾದರೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವದೇ ನನಗೆ ಸಂತೋಷ. ಇಸ್ರಾಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳನ್ನು ಬಿಡಿರಿ, ಬಿಟ್ಟುಬಿಡಿರಿ; ನೀವು ಸಾಯಲೇಕೆ? ಇದು ಕರ್ತನಾದ ಯೇಹೋವನ ನುಡಿ.


ಇಸ್ರಾಯೇಲ್‍ದೇವರಾದ ಯೆಹೋವನೇ, ಭೂಲೋಕದಲ್ಲಿಯೂ ಪರಲೋಕದಲ್ಲಿಯೂ ನಿನಗೆ ಸಮಾನನಾದ ದೇವರಿಲ್ಲ; ಪೂರ್ಣಮನಸ್ಸಿನಿಂದ ನಿನಗೆ ನಡೆದುಕೊಳ್ಳುವಂಥ ಸೇವಕರ ವಿಷಯದಲ್ಲಿ ನೀನು ನಿನ್ನ ಒಡಂಬಡಿಕೆಯನ್ನೂ ಕೃಪೆಯನ್ನೂ ನೆರವೇರಿಸುವವನು.


ಯೆಶುರೂನೇ, ನಿಮ್ಮ ದೇವರಿಗೆ ಸಮಾನನು ಯಾವನೂ ಇಲ್ಲ; ಆತನು ಆಕಾಶವನ್ನೇರಿ ಮೇಘಾರೂಢನಾಗಿ ಮಹಾಗಾಂಭೀರ್ಯದಿಂದ ನಿಮ್ಮ ಸಹಾಯಕ್ಕೆ ಬರುವನು.


ಕರುಣೆತೋರಿಸದೆ ಇರುವವನಿಗೆ ನ್ಯಾಯತೀರ್ಮಾನದಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಮಾನವನ್ನು ಗೆದ್ದು ಹಿಗ್ಗುತ್ತದೆ.


ನಿನ್ನ ದೇವರಾದ ಯೆಹೋವನು ನಿನ್ನ ಮಧ್ಯದಲ್ಲಿ ಶೂರನಾಗಿದ್ದಾನೆ, ನಿನ್ನನ್ನು ರಕ್ಷಿಸುವನು; ನಿನ್ನಲ್ಲಿ ಉಲ್ಲಾಸಿಸೇ ಉಲ್ಲಾಸಿಸುವನು; ತನ್ನ ಪ್ರೀತಿಯಲ್ಲಿ ಮುಣುಗಿ ಮೌನವಾಗಿರುವನು; ನಿನ್ನಲ್ಲಿ ಆನಂದಿಸಿ ಹರ್ಷಧ್ವನಿಗೈಯುವನು ಎಂದು ಹೇಳೋಣವಾಗುವದು.


ಫಲವತ್ತಾದ ಭೂವಿುಯ ಮಧ್ಯದಲ್ಲಿನ ಕಾಡಿನೊಳಗೆ ಪ್ರತ್ಯೇಕವಾಗಿ ತಂಗುವ ನಿನ್ನ ಜನರನ್ನು, ನಿನ್ನ ಸ್ವಾಸ್ತ್ಯವಾದ ಹಿಂಡನ್ನು ನಿನ್ನ ಕೋಲಿನಿಂದ ಮೇಯಿಸು; ಪೂರ್ವಕಾಲದಂತೆ ಬಾಷಾನಿನಲ್ಲಿಯೂ ಗಿಲ್ಯಾದಿನಲ್ಲಿಯೂ ಮೇಯಲಿ.


ಅವನು ಸಿಟ್ಟುಗೊಂಡು - ಯೆಹೋವಾ, ಲಾಲಿಸು, ನಾನು ಸ್ವದೇಶದಲ್ಲಿರುವಾಗಲೇ ಹೀಗಾಗುವದೆಂದು ಹೇಳಿದೆನಷ್ಟೆ; ನೀನು ದಯೆಯೂ ಕನಿಕರವೂ ದೀರ್ಘಶಾಂತಿಯೂ ಮಹಾಕೃಪೆಯೂ ಉಳ್ಳ ದೇವರು, ಮಾಡಬೇಕೆಂದಿದ್ದ ಕೇಡಿಗೆ ಮನಮರುಗುವವನು ಎಂದು ನಾನು ತಿಳಿದೇ ತಾರ್ಷೀಷಿಗೆ ಓಡಿ ಹೋಗಲು ತ್ವರೆಪಟ್ಟೆನು.


ಆದರೂ ಯೆಹೋವನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆಯಾಗುವದು; ಯೆಹೋವನು ತಿಳಿಸಿದಂತೆ ಚೀಯೋನ್‍ಪರ್ವತದಲ್ಲಿಯೂ ಯೆರೂಸಲೇವಿುನಲ್ಲಿಯೂ ಅನೇಕರು ಉಳಿದಿರುವರು; ಯೆಹೋವನು ಕರೆಯುವ ಜನಶೇಷದಲ್ಲಿ ಅವರು ಸೇರಿದವರಾಗಿರುವರು.


ನಾನು ಸರ್ವದಾ ವ್ಯಾಜ್ಯವಾಡೆನು, ಕಡೆಯ ತನಕ ಕೋಪಿಸಿಕೊಳ್ಳೆನು, ಹೀಗೆ ಮಾಡಿದರೆ ಮನುಷ್ಯಾತ್ಮವೂ ನಾನು ಸೃಷ್ಟಿಸಿದ ಜೀವವೂ ನನ್ನಿಂದ ಕುಂದಿಹೋದಾವು.


ಕರ್ತನೇ, ನೀನು ಒಳ್ಳೆಯವನೂ ಕ್ಷವಿುಸುವವನೂ ನಿನಗೆ ಮೊರೆಯಿಡುವವರೆಲ್ಲರಲ್ಲಿ ಕೃಪಾಪೂರ್ಣನೂ ಆಗಿದ್ದೀಯಲ್ಲಾ.


ಕರ್ತನಾದ ನಮ್ಮ ದೇವರು ಕರುಣಿಸುವವನೂ ಕ್ಷವಿುಸುವವನೂ ಆಗಿದ್ದಾನೆ; ನಾವು ಆತನಿಗೆ ತಿರುಗಿಬಿದ್ದೆವಲ್ಲಾ;


ಆತನು ನಿತ್ಯವಾಗಿ ಕೋಪಮಾಡುವನೋ? ಕೊನೆಯ ತನಕ ಇಟ್ಟುಕೊಳ್ಳುವನೋ? ಅಂದುಕೊಳ್ಳುತ್ತಿದ್ದೀ. ಇಗೋ, ನೀನು ಹೀಗೆ ಮಾತಾಡಿದರೇನು? ದುಷ್ಕೃತ್ಯಗಳನ್ನು ನಡಿಸಿ ಕೃತಾರ್ಥಳಾಗಿದ್ದೀ.


ನಾನೂ ಯೆರೂಸಲೇಮನ್ನು ದೃಷ್ಟಿಸುತ್ತಾ ಉಲ್ಲಾಸಿಸುವೆನು, ಅದರ ಜನರನ್ನು ಈಕ್ಷಿಸುತ್ತಾ ಹರ್ಷಗೊಳ್ಳುವೆನು. ರೋದನಶಬ್ದವೂ ಪ್ರಲಾಪಧ್ವನಿಯೂ ಅಲ್ಲಿ ಇನ್ನು ಕೇಳಿಸವು.


ದುಷ್ಟನು ತನ್ನ ದುರ್ಮಾರ್ಗವನ್ನು ಬಿಡಲಿ, ಕೆಡುಕನು ತನ್ನ ದುರಾಲೋಚನೆಗಳನ್ನು ತ್ಯಜಿಸಲಿ; ಯೆಹೋವನ ಕಡೆಗೆ ತಿರುಗಿಕೊಂಡು ಬರಲಿ, ಆತನು ಅವನನ್ನು ಕರುಣಿಸುವನು; ನಮ್ಮ ದೇವರನ್ನು ಆಶ್ರಯಿಸಲಿ, ಆತನು ಮಹಾ ಕೃಪೆಯಿಂದ ಕ್ಷವಿುಸುವನು.


ಬನ್ನಿರಿ ವಾದಿಸುವ ಎಂದು ಯೆಹೋವನು ಅನ್ನುತ್ತಾನೆ; ನಿಮ್ಮ ಪಾಪಗಳು ಕಡು ಕೆಂಪಾಗಿದ್ದರೂ ಹಿಮದ ಹಾಗೆ ಬಿಳುಪಾಗುವವು; ಕಿರಮಂಜಿಬಣ್ಣವಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವವು.


ನೀನು ಪಾಪವನ್ನು ಕ್ಷವಿುಸುವವನಾದ್ದರಿಂದ ಮನುಷ್ಯರ ಭಯಭಕ್ತಿಗೆ ನೀನೇ ಪಾತ್ರನು.


ದೇವರೇ, ನಿನ್ನ ನೀತಿಯು ಆಕಾಶವನ್ನು ನಿಲುಕುವಷ್ಟು ಮಹೋನ್ನತವಾಗಿದೆ. ಮಹತ್ಕೃತ್ಯಗಳನ್ನು ನಡಿಸಿದ ದೇವರೇ, ನಿನಗೆ ಸಮಾನರು ಯಾರು?


ನೀನು ಅವರ ಮಧ್ಯದಲ್ಲಿ ಮಾಡಿದ ಮಹತ್ಕಾರ್ಯಗಳನ್ನು ಅವರು ಮರೆತು ಮಾತುಕೇಳದೆ ಹಟಹಿಡಿದು ತಮಗೊಬ್ಬ ನಾಯಕನನ್ನು ನೇವಿುಸಿಕೊಂಡು ಮುಂಚಿನಂತೆ ದಾಸರಾಗಿರುವದಕ್ಕಾಗಿ ಐಗುಪ್ತಕ್ಕೆ ಹಿಂದಿರುಗಬೇಕೆಂದಿದ್ದರು. ನೀನಾದರೋ ಪಾಪಗಳನ್ನು ಕ್ಷವಿುಸುವವನೂ ಕನಿಕರದಯೆಗಳುಳ್ಳವನೂ ದೀರ್ಘಶಾಂತನೂ ಕೃಪಾಳುವೂ ಆಗಿರುವ ದೇವರು; ನೀನು ಅವರನ್ನು ಕೈಬಿಡಲಿಲ್ಲ.


ಕರ್ತನೇ, ನಿನ್ನ ಅನುಗ್ರಹವು ನನಗೆ ದೊರಕಿದ್ದಾದರೆ ನೀನೇ ನಮ್ಮ ಜೊತೆಯಲ್ಲಿ ಬರಬೇಕು. ನಮ್ಮ ಜನರು ಮೊಂಡರೇ; ಆದಾಗ್ಯೂ ನೀನು ನಮ್ಮ ಪಾಪಗಳನ್ನೂ ಅಧರ್ಮಗಳನ್ನೂ ಕ್ಷವಿುಸಿ ನಿನ್ನ ಜನರಾಗುವಂತೆ ನಮ್ಮನ್ನು ಸ್ವೀಕರಿಸಬೇಕೆಂದು ಪ್ರಾರ್ಥಿಸಿದನು.


ಎಂದು ಇಸ್ರಾಯೇಲ್ಯರ ಮೇಲೆ ದೂರು ಹೇಳಿದ್ದಕ್ಕೆ ದೇವರ ಉತ್ತರವೇನಂದರೆ - ಬಾಳನ ವಿಗ್ರಹಕ್ಕೆ ಅಡ್ಡಬೀಳದೆ ಇರುವ ಏಳುಸಾವಿರ ಪುರುಷರನ್ನು ನನಗಾಗಿ ಉಳಿಸಿಕೊಂಡಿದ್ದೇನೆ ಎಂಬದೇ.


ಆದರೆ ಉಲ್ಲಾಸಪಡುವದೂ ಸಂತೋಷಗೊಳ್ಳುವದೂ ನ್ಯಾಯವಾದದ್ದೇ; ಯಾಕಂದರೆ ಈ ನಿನ್ನ ತಮ್ಮ ಸತ್ತವನಾಗಿದ್ದನು, ತಿರಿಗಿ ಬದುಕಿ ಬಂದನು; ಪೋಲಿಹೋಗಿದ್ದನು, ಸಿಕ್ಕಿದನು ಎಂದು ಹೇಳಿದನು.


ಹೀಗಿರಲು ಪ್ರಸವವೇದನೆಪಡತಕ್ಕವಳು ಮಗನನ್ನು ಹೆರುವವರೆಗೂ ನನ್ನ ಜನರು ಶತ್ರುವಶವಾಗಿರುವಂತೆ ಮಾಡುವೆನು. ಅನಂತರ ಆ ಮಗನ ಸಹೋದರರಲ್ಲಿ ಉಳಿದವರು ಇಸ್ರಾಯೇಲ್ಯರೊಂದಿಗೆ ಹಿಂದಿರುಗುವರು.


ಆತನು ನನ್ನನ್ನು - ಆಮೋಸನೇ, ನಿನ್ನ ಕಣ್ಣಿಗೆ ಕಾಣಿಸುವದೇನು ಎಂದು ಕೇಳಲು ಮಾಗಿದ ಹಣ್ಣಿನ ಪುಟ್ಟಿ ಅಂದೆನು. ಆಗ ಯೆಹೋವನು ನನಗೆ ಹೀಗೆ ಹೇಳಿದನು - ಇಸ್ರಾಯೇಲೆಂಬ ನನ್ನ ಜನರಿಗೆ ಕಡೆಗಾಲವು ಮಾಗುತ್ತಾ ಬಂದಿದೆ; ಇನ್ನು ಅವರನ್ನು ಕಂಡುಕಾಣದ ಹಾಗಿರೆನು.


ಯೆಹೋವನು ನನ್ನನ್ನು - ಆಮೋಸನೇ, ನಿನ್ನ ಕಣ್ಣಿಗೆ ಕಾಣಿಸುವದೇನು ಎಂದು ಕೇಳಲು ನಾನು - ಒಂದು ನೂಲುಗುಂಡು ಎಂದು ಉತ್ತರಕೊಟ್ಟೆನು. ಆಗ ಕರ್ತನು - ಇಗೋ, ನನ್ನ ಜನರಾದ ಇಸ್ರಾಯೇಲಿನ ಮಧ್ಯದಲ್ಲಿ ನೂಲುಗುಂಡನ್ನು ಹಿಡಿಯುವೆನು; ಇನ್ನು ಅವರನ್ನು ಕಂಡುಕಾಣದ ಹಾಗಿರೆನು.


ನೆರೆಹೊರೆಯವರೂ ಅಣ್ಣತಮ್ಮಂದಿರೂ ಒಬ್ಬರಿಗೊಬ್ಬರು - ಯೆಹೋವನ ಜ್ಞಾನವನ್ನು ಪಡೆಯಿರಿ ಎಂದು ಇನ್ನು ಮೇಲೆ ಬೋಧಿಸಬೇಕಾಗಿರುವದಿಲ್ಲ; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ನನ್ನ ಜ್ಞಾನವನ್ನು ಪಡೆದಿರುವರು; ನಾನು ಅವರ ಅಪರಾಧವನ್ನು ಕ್ಷವಿುಸಿ ಅವರ ಪಾಪವನ್ನು ನನ್ನ ನೆನಪಿಗೆ ಎಂದಿಗೂ ತರುವದಿಲ್ಲ. ಇದು ಯೆಹೋವನ ನುಡಿ.


ನೀನು ನಡೆದು ನಡೆದು ಆಯಾಸಗೊಂಡರೂ ದಿಕ್ಕಿಲ್ಲವಲ್ಲಾ ಅಂದುಕೊಳ್ಳಲಿಲ್ಲ; ಹೊಸ ಬಲವನ್ನು ತಂದುಕೊಂಡಿ; ಆದದರಿಂದ ನೀನು ಸೋತುಹೋಗಲಿಲ್ಲ.


ಹೀಗಿರಲು ನನ್ನನ್ನು ಯಾರಿಗೆ ಹೋಲಿಸಿ ಸರಿಸಮಾನಮಾಡುತ್ತೀರಿ ಎಂದು ಸದಮಲ ಸ್ವಾವಿುಯು ಕೇಳುತ್ತಾನೆ.


ಹೀಗಿರಲು ದೇವರನ್ನು ಯಾರಿಗೆ ಹೋಲಿಸೀರಿ? ಯಾವ ರೂಪವನ್ನು ಆತನಿಗೆ ಸಮಮಾಡೀರಿ?


ತಂದೆಯು ಮಕ್ಕಳನ್ನು ಕನಿಕರಿಸುವಂತೆ ಯೆಹೋವನು ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕನಿಕರಿಸುತ್ತಾನೆ.


ಯೆಹೋವನೇ, ಕುಗ್ಗಿದವನನ್ನು ಬಲಾತ್ಕಾರಿಯಿಂದಲೂ ದಿಕ್ಕಿಲ್ಲದ ಬಡವನನ್ನು ಸೂರೆಮಾಡುವವನಿಂದಲೂ ತಪ್ಪಿಸಿ ರಕ್ಷಿಸುವಾತನೇ, ನಿನಗೆ ಸಮಾನರು ಯಾರಿದ್ದಾರೆಂದು ನನ್ನ ಎಲುಬುಗಳೆಲ್ಲಾ ಹೇಳುವವು.


ಯಾಕೋಬ್ಯರಲ್ಲಿ ಯಾವ ಆಪತ್ತಿನ ಸೂಚನೆಯೂ ಇಲ್ಲ; ಇಸ್ರಾಯೇಲ್ಯರಿಗೆ ವಿಪತ್ತು ಸಂಭವಿಸುವ ಹಾಗೆ ತೋರುವದಿಲ್ಲ. ಅವರಿಗೆ ದೇವರಾಗಿರುವ ಯೆಹೋವನು ಅವರ ಸಂಗಡಲೇ ಇದ್ದಾನೆ; ಅವರು ತಮ್ಮ ಅರಸನಿಗೋಸ್ಕರ ಮಾಡುವ ಜಯಘೋಷವು ಕೇಳಿಸುತ್ತಲೇ ಇದೆ.


ಅವನು ಅರಮನೆಯಿಂದ ಹೊರಟು ಬೆನ್ಯಾಮೀನಿನ ಬಾಗಿಲಿನಲ್ಲಿ ಕೂತುಕೊಂಡಿದ್ದ ಅರಸನ ಬಳಿಗೆ ಹೋಗಿ -


ಯುವಕನು ಯುವತಿಯನ್ನು ವರಿಸುವಂತೆ ನಿನ್ನ ಮಕ್ಕಳು ನಿನ್ನನ್ನು ವರಿಸುವರು; ವರನು ವಧುವಿನಲ್ಲಿ ಆನಂದಿಸುವ ಹಾಗೆ ನಿನ್ನ ದೇವರು ನಿನ್ನಲ್ಲಿ ಆನಂದಿಸುವನು.


ಒಳ್ಳೇ ಕೆಲಸ ಮಾಡಿದರೆ ನಿನ್ನ ತಲೆ ಎತ್ತಲ್ಪಡುವದಲ್ಲವೇ; ಅಲ್ಲದಿದ್ದರೆ ಪಾಪವು ನಿನ್ನನ್ನು ಹಿಡಿಯಬೇಕೆಂದು ಬಾಗಿಲಲ್ಲಿ ಹೊಂಚಿಕೊಂಡಿರುವದು; ಆದರೂ ನೀನು ಅದನ್ನು ವಶಮಾಡಿಕೊಳ್ಳಬೇಕು ಎಂದು ಹೇಳಿದನು.


ನಿನ್ನ ಸೇವಕನಾದ ನಾನಾಗಲಿ ನಿನ್ನ ಪ್ರಜೆಗಳಾದ ಇಸ್ರಾಯೇಲ್ಯರಾಗಲಿ ಈ ಸ್ಥಳದ ಕಡೆಗೆ ತಿರುಗಿಕೊಂಡು ನಿನ್ನನ್ನು ಪ್ರಾರ್ಥಿಸುವಾಗ ನಿನ್ನ ನಿವಾಸವಾಗಿರುವ ಪರಲೋಕದಿಂದ ನಮ್ಮ ಬಿನ್ನಹಗಳನ್ನು ಕೇಳಿ ಕ್ಷಮೆಯನ್ನು ಅನುಗ್ರಹಿಸು.


ನೀವು ಯೆಹೋವನ ಕಡೆಗೆ ತಿರುಗಿಕೊಳ್ಳುವದಾದರೆ ನಿಮ್ಮ ಸಹೋದರರೂ ಮಕ್ಕಳೂ ತಮ್ಮನ್ನು ಸೆರೆಯೊಯ್ದವರ ದೃಷ್ಟಿಯಲ್ಲಿ ದಯೆಗೆ ಪಾತ್ರರಾಗಿ ತಿರಿಗಿ ಸ್ವದೇಶಕ್ಕೆ ಬರುವರು. ನಿಮ್ಮ ದೇವರಾದ ಯೆಹೋವನು ದಯೆಯೂ ಕನಿಕರವೂ ಉಳ್ಳವನಾಗಿರುತ್ತಾನೆ. ಆತನು ತನ್ನ ಕಡೆಗೆ ತಿರುಗಿಕೊಳ್ಳುವ ನಿಮ್ಮನ್ನು ಕಟಾಕ್ಷಿಸದೆ ಇರುವದಿಲ್ಲ ಎಂಬದೇ.


ಚೀಯೋನಿನ ಯಾವ ನಿವಾಸಿಯೂ ತಾನು ಅಸ್ವಸ್ಥನು ಎಂದು ಹೇಳನು; ಅಲ್ಲಿಯ ಜನರ ಪಾಪವು ಪರಿಹಾರವಾಗುವದು.


ಯೆಹೋವನೇ, ಅತಿರೋಷಗೊಳ್ಳದಿರು, ನಮ್ಮ ಅಧರ್ಮವನ್ನು ಕಡೆಯವರೆಗೂ ಜ್ಞಾಪಕದಲ್ಲಿಡಬೇಡ; ಎಲೈ, ಸ್ವಾಮೀ, ಕಟಾಕ್ಷಿಸು, ನಾವೆಲ್ಲರೂ ನಿನ್ನ ಜನರಾಗಿದ್ದೇವೆ.


ಹೆಚ್ಚಳಪಡುವವನು ತಾನು ನನ್ನನ್ನು ತಿಳಿದು ನಾನು ಲೋಕದಲ್ಲಿ ಪ್ರೀತಿನೀತಿನ್ಯಾಯಗಳನ್ನು ತೋರ್ಪಡಿಸುವ ಯೆಹೋವನಾಗಿರುವೆನು ಎಂದು ಗ್ರಹಿಸಿಕೊಂಡಿದ್ದೇನೆ ಎಂಬದಕ್ಕೇ ಹೆಚ್ಚಳಪಡಲಿ; ಪ್ರೀತಿನೀತಿನ್ಯಾಯಗಳೇ ನನಗೆ ಆನಂದವೆಂದು ಯೆಹೋವನು ಅನ್ನುತ್ತಾನೆ.


ಯೆಹೋವನು ಇಂತೆನ್ನುತ್ತಾನೆ - ಎಫ್ರಾಯೀಮು ನನಗೆ ಪ್ರಿಯಪುತ್ರನೋ, ಮುದ್ದುಮಗುವೋ, ಏನೋ? ಅವನ ಹೆಸರೆತ್ತಿದಾಗೆಲ್ಲಾ ಅವನನ್ನು ಜ್ಞಾಪಿಸಿಕೊಳ್ಳುತ್ತಲೇ ಬರುತ್ತೇನೆ; ಇದರಿಂದ ನನ್ನ ಕರುಳು ಅವನಿಗಾಗಿ ಮರುಗುತ್ತದಲ್ಲಾ; ಅವನನ್ನು ಕರುಣಿಸೇ ಕರುಣಿಸುವೆನು.


ಅವರು ನನಗೆ ವಿರುದ್ಧವಾಗಿ ಮಾಡಿರುವ ಅಧರ್ಮವನ್ನೆಲ್ಲಾ ತೊಲಗಿಸಿ ಅವರನ್ನು ಶುದ್ಧೀಕರಿಸುವೆನು; ಅವರು ನನಗೆ ಪಾಪದ್ರೋಹಗಳನ್ನು ಮಾಡಿ ನಡಿಸಿರುವ ಅಪರಾಧಗಳನ್ನೆಲ್ಲಾ ಕ್ಷವಿುಸುವೆನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ದುಷ್ಟನ ಸಾವಿನಲ್ಲಿ ನನಗೆ ಲೇಶವಾದರೂ ಸಂತೋಷವುಂಟೋ? ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವದೇ ನನಗೆ ಸಂತೋಷ.


[ಪಶ್ಚಾತ್ತಾಪದ] ಮಾತುಗಳನ್ನು ತೆಗೆದುಕೊಂಡು ಯೆಹೋವನ ಬಳಿಗೆ ಹಿಂದಿರುಗಿ ಆತನಿಗೆ - ನಮ್ಮ ಅಪರಾಧವನ್ನು ಸಂಪೂರ್ಣವಾಗಿ ನಿವಾರಣೆಮಾಡಿ [ನಮ್ಮಲ್ಲಿನ] ಒಳ್ಳೆಯದನ್ನು ಅಂಗೀಕರಿಸು; ನಮ್ಮ ಸ್ತೋತ್ರಗಳೆಂಬ ಹೋರಿಗಳನ್ನು ಅರ್ಪಿಸುವೆವು.


ಯೆಹೋವನು ಇಂತೆನ್ನುತ್ತಾನೆ - ಎದೋಮು ಮೂರು ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದೇ ಇಲ್ಲ; ಅದು ಕತ್ತಿಹಿಡಿದು ತನ್ನ ಸಹೋದರನನ್ನು ಹಿಂದಟ್ಟಿ ಕರುಣೆಯನ್ನು ತೊರೆದು ಸಿಟ್ಟಿನಿಂದ ಸದಾ ಸಿಗಿದುಬಿಡುತ್ತಾ ತನ್ನ ಕೋಪವನ್ನು ಶಾಶ್ವತಮಾಡಿಕೊಂಡಿತಷ್ಟೆ.


ಆಗ ಆತನ ಮನಸ್ಸು ಇಸ್ರಾಯೇಲ್ಯರ ಸಂಕಟದ ನಿವಿುತ್ತ ಬಲು ನೊಂದಿತು.


ನಿನ್ನ ಅಂಗಳದಲ್ಲಿ ವಾಸಿಸುವವರಾಗಿ ನಿನ್ನ ಸನ್ನಿಧಿಯಲ್ಲಿ ಸೇವೆಮಾಡುವದಕ್ಕೋಸ್ಕರ ಯಾರನ್ನು ಆರಿಸಿಕೊಳ್ಳುತ್ತೀಯೋ ಅವರೇ ಧನ್ಯರು. ನೀನು ವಾಸಿಸುವ ಮಹಾಪವಿತ್ರಾಲಯದ ಸೌಭಾಗ್ಯದಿಂದ ನಮಗೆ ಸಂತೃಪ್ತಿಯಾಗಲಿ.


ಆಹಾ, ನಾನು ಪಟ್ಟ ದುಃಖವು ನನ್ನ ಸುಖಕ್ಕಾಗಿಯೇ ಆಯಿತು, ನನ್ನ ಆತ್ಮವನ್ನು ನಾಶಕೂಪದಿಂದ ರಕ್ಷಿಸಿದ್ದು ನಿನ್ನ ಪ್ರೀತಿಯೇ. ನನ್ನ ಪಾಪಗಳನ್ನೆಲ್ಲಾ ನಿನ್ನ ಬೆನ್ನ ಹಿಂದೆ ಹಾಕಿಬಿಟ್ಟಿದ್ದೀ.


ಅವನು ಮಾಡಿದ ಯಾವ ಪಾಪವೂ ಅವನ ಲೆಕ್ಕಕ್ಕೆ ಸೇರಿಸಲ್ಪಡದು; ನೀತಿನ್ಯಾಯಗಳನ್ನು ನಡಿಸುತ್ತಿದ್ದಾನಲ್ಲಾ; ಬಾಳೇಬಾಳುವನು.


ನಾನು ಇಸ್ರಾಯೇಲಿಗೆ ಇಬ್ಬನಿಯಂತಾಗುವೆನು; ಅದು ತಾವರೆಯಂತೆ ಒಡೆಯುವದು; ಲೆಬನೋನಿನ [ದೇವದಾರುಗಳ] ಹಾಗೆ ಬೇರುಬಿಟ್ಟುಕೊಳ್ಳುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು