ಮೀಕ 7:19 - ಕನ್ನಡ ಸತ್ಯವೇದವು J.V. (BSI)19 ಆತನು ನಮ್ಮ ಕಡೆಗೆ ತಿರುಗಿಕೊಂಡು ನಮ್ಮನ್ನು ಕನಿಕರಿಸುವನು, ನಮ್ಮ ಅಪರಾಧಗಳನ್ನು ಅಣಗಿಸುವನು. [ದೇವರೇ,] ನಿನ್ನ ಜನರ ಪಾಪಗಳನ್ನೆಲ್ಲಾ ಸಮುದ್ರದ ತಳಕ್ಕೆ ಬಿಸಾಟುಬಿಡುವಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆತನು ಮತ್ತೊಮ್ಮೆ ನಮ್ಮನ್ನು ಕನಿಕರಿಸುವನು. ನಮ್ಮ ಅಪರಾಧಗಳನ್ನು ಅಣಗಿಸುವವನು. ದೇವರೇ, ನಿನ್ನ ಜನರ ಪಾಪಗಳನ್ನೆಲ್ಲಾ ಸಮುದ್ರದ ತಳಕ್ಕೆ ಬೀಸಾಡಿಬಿಡುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಮತ್ತೊಮ್ಮೆ ನಮಗೆ ದಯೆತೋರಿ. ನಮ್ಮ ಅಪರಾಧಗಳನ್ನು ಅಳಿಸಿಬಿಡಿ; ಅವನ್ನು ತುಳಿದು ಸಮುದ್ರದ ತಳಕ್ಕೆ ತಳ್ಳಿಬಿಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಯೆಹೋವನೇ, ನಮ್ಮನ್ನು ತಿರುಗಿ ಸಂತೈಸು. ನಮ್ಮ ಪಾಪಗಳನ್ನು ನಮ್ಮಿಂದ ನಿವಾರಿಸು. ನಮ್ಮೆಲ್ಲಾ ಪಾಪಗಳನ್ನು ಆಳವಾದ ಸಮುದ್ರದ ತಳದಲ್ಲಿ ಹಾಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಆತನು ತಿರುಗಿಕೊಂಡು ನಮ್ಮನ್ನು ಕನಿಕರಿಸುವನು; ನಮ್ಮ ಅಕ್ರಮಗಳನ್ನು ತುಳಿದುಬಿಡುವನು; ನಮ್ಮ ಪಾಪಗಳನ್ನೆಲ್ಲಾ ಸಮುದ್ರದ ಅಗಾಧಗಳಲ್ಲಿ ಹಾಕುವನು. ಅಧ್ಯಾಯವನ್ನು ನೋಡಿ |
ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತೀರಿಸುವದು, ಅಪರಾಧವನ್ನು ನಿವಾರಿಸುವದು, ಸನಾತನ ಧರ್ಮವನ್ನು ಸ್ಥಾಪಿಸುವದು, ಕನಸನ್ನೂ ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವದು, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವದು, ಇವೆಲ್ಲಾ ನೆರವೇರುವದಕ್ಕೆ ಮೊದಲು ನಿನ್ನ ಜನಕ್ಕೂ ನಿನ್ನ ಪರಿಶುದ್ಧಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.