Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 7:2 - ಕನ್ನಡ ಸತ್ಯವೇದವು J.V. (BSI)

2 ಸದ್ಭಕ್ತರು ದೇಶದೊಳಗಿಂದ ನಾಶವಾಗಿದ್ದಾರೆ, ಜನರಲ್ಲಿ ಸತ್ಯವಂತರೇ ಇಲ್ಲ. ಸರ್ವರು ರಕ್ತಸುರಿಸಬೇಕೆಂದು ಹೊಂಚು ಹಾಕುತ್ತಾರೆ, ಒಬ್ಬರನ್ನೊಬ್ಬರು ಬಲೆಯೊಡ್ಡಿ ಬೇಟೆಯಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಸದ್ಭಕ್ತರು ದೇಶದೊಳಗಿಂದ ನಾಶವಾಗಿದ್ದಾರೆ. ಜನರಲ್ಲಿ ಸತ್ಯವಂತರೇ ಇಲ್ಲ. ಸರ್ವರೂ ರಕ್ತಸುರಿಸಬೇಕೆಂದು ಹೊಂಚುಹಾಕುತ್ತಾರೆ. ಒಬ್ಬರನ್ನೊಬ್ಬರು ಬಲೆಯೊಡ್ಡಿ ಬೇಟೆಯಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನಾಡಿನಲ್ಲಿ ದೈವಭಕ್ತರೆಲ್ಲರು ನಾಶವಾದರು; ಸಜ್ಜನರಾರೂ ಉಳಿದಿಲ್ಲ. ಇರುವವರು ಬಲೆಯೊಡ್ಡಿ ಒಬ್ಬರನ್ನೊಬ್ಬರು ಬೇಟೆಯಾಡುತ್ತಾರೆ. ರಕ್ತಪಾತಕ್ಕಾಗಿ ಹೊಂಚುಹಾಕುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಾನು ಹೇಳುವುದೇನೆಂದರೆ ನಂಬಿಗಸ್ತ ಜನರೆಲ್ಲಾ ಹೋಗಿಬಿಟ್ಟರು. ಈ ದೇಶದಲ್ಲಿ ಒಳ್ಳೆಯ ಜನರು ಯಾರೂ ಉಳಿಯಲಿಲ್ಲ. ಪ್ರತಿಯೊಬ್ಬನೂ ಇನ್ನೊಬ್ಬನನ್ನು ಕೊಲ್ಲಲು ಕಾಯುತ್ತಿದ್ದಾನೆ. ಪ್ರತಿಯೊಬ್ಬನೂ ತನ್ನ ಸೋದರನನ್ನು ಸಿಕ್ಕಿಸಿಹಾಕಲು ಕಾಯುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಿಷ್ಠಾವಂತರು ಭೂಮಿಯೊಳಗಿಂದ ನಾಶವಾಗಿದ್ದಾರೆ. ಮನುಷ್ಯರಲ್ಲಿ ಯಥಾರ್ಥನು ಒಬ್ಬನು ಉಳಿದಿಲ್ಲ; ಎಲ್ಲರು ರಕ್ತಕ್ಕೆ ಹೊಂಚಿ ನೋಡುತ್ತಾ, ತಮ್ಮ ತಮ್ಮ ಸಹೋದರರನ್ನು ಬಲೆಹಾಕಿ ಬೇಟೆ ಆಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 7:2
29 ತಿಳಿವುಗಳ ಹೋಲಿಕೆ  

ಯೆಹೋವನೇ, ರಕ್ಷಿಸು; ಭಕ್ತರು ಮುಗಿದು ಹೋಗಿದ್ದಾರೆ. ಜನರೊಳಗೆ ನಂಬಿಕೆಯುಳ್ಳವರು ಕಾಣಿಸುವದೇ ಇಲ್ಲ.


ಸಜ್ಜನರು ನಾಶವಾಗುತ್ತಾರೆ, ಯಾರೂ ಮನಸ್ಸಿಗೆ ತಾರರು; ಸದ್ಭಕ್ತರು ಗತಿಸುತ್ತಾರೆ, ಆಹಾ, ಶಿಷ್ಟರು ಕೇಡಿನಿಂದ ಪಾರಾಗಿದ್ದಾರೆ ಎಂದು ಯಾರೂ ಯೋಚಿಸರು.


ನನ್ನ ಜನರಲ್ಲಿ ದುಷ್ಟರು ಕಂಡು ಬಂದಿದ್ದಾರೆ; ಬೇಡರು ಹೊಂಚುವ ಹಾಗೆ ಹೊಂಚುಹಾಕುತ್ತಾರೆ; ಬೋನೊಡ್ಡಿ ಮನುಷ್ಯರನ್ನು ಹಿಡಿಯುತ್ತಾರೆ.


ಇವರ ಕಾಲುಗಳು ಕೇಡನ್ನು ಹಿಂಬಾಲಿಸಿ ಓಡುತ್ತವೆ, ಇವರು ನಿರಪರಾಧಿಯ ರಕ್ತವನ್ನು ಸುರಿಸಲು ಆತುರಪಡುತ್ತಾರೆ, ಇವರ ಯೋಚನೆಗಳು ಅಧರ್ಮದ ಯೋಚನೆಗಳೇ, ಇವರು ಹೋದ ದಾರಿಗಳಲ್ಲಿ ಭಂಗವೂ ನಾಶನವೂ ಉಂಟಾಗುತ್ತವೆ;


ಅವರು - ನಮ್ಮೊಂದಿಗೆ ಬಾ, ರಕ್ತಕ್ಕಾಗಿ ಹೊಂಚುಹಾಕೋಣ, ನಿರಪರಾಧಿಯನ್ನು ಕಾರಣವಿಲ್ಲದೆಯೇ ಹಿಡಿಯುವದಕ್ಕೆ ಕಾದಿರೋಣ,


ಯೆಹೋವನು ಹೀಗನ್ನುತ್ತಾನೆ - ಇಗೋ, ನನ್ನ ಜನರನ್ನು ಹಿಡಿಯುವದಕ್ಕೆ ಬಹುಮಂದಿ ಬೆಸ್ತರನ್ನು ಕರೆಯಿಸುವೆನು; ಆಮೇಲೆ ಎಲ್ಲಾ ಬೆಟ್ಟಗುಡ್ಡಗಳಿಂದಲೂ ಬಂಡೆಗಳ ಸಂದುಗೊಂದುಗಳಿಂದಲೂ ಅವರನ್ನು ಹೊರಡಿಸಿ ಬೇಟೆಯಾಡುವದಕ್ಕೆ ಬಹುಜನ ಬೇಡರನ್ನು ಕರೆಯಿಸುವೆನು.


ನನ್ನ ತಂದೆಯೇ, ಇಗೋ ನೋಡು; ನನ್ನ ಕೈಯಲ್ಲಿ ನಿನ್ನ ನಿಲುವಂಗಿಯ ತುಂಡು ಇದೆ; ನಾನು ನಿನ್ನನ್ನು ಕೊಲ್ಲದೆ ನಿನ್ನ ನಿಲುವಂಗಿಯ ಮೂಲೆಯನ್ನು ಕತ್ತರಿಸಿಕೊಂಡೆನಷ್ಟೆ. ಇದರಿಂದ ನನ್ನಲ್ಲಿ ಯಾವ ದೋಷವೂ ಅಪರಾಧವೂ ಇರುವದಿಲ್ಲ. ನಾನು ನಿನಗೆ ವಿರೋಧವಾಗಿ ದ್ರೋಹಮಾಡಲಿಲ್ಲ ಎಂದು ತಿಳಿದುಕೋ. ಆದರೂ ನೀನು ನನ್ನ ಪ್ರಾಣಕ್ಕೆ ಹೊಂಚುಹಾಕುತ್ತಿರುವಿಯಲ್ಲಾ;


ಚೀಯೋನನ್ನು ನರಹತ್ಯದಿಂದಲೂ ಯೆರೂಸಲೇಮನ್ನು ಅನ್ಯಾಯದಿಂದಲೂ ಕಟ್ಟುವವರೇ, ಇದನ್ನು ಕೇಳಿರಿ, ಕೇಳಿರಿ!


ಶತ್ರುಗಳು ನಮ್ಮ ಹೆಜ್ಜೆಯನ್ನು ಗುರಿ ಮಾಡಿಕೊಂಡಿರುವದರಿಂದ ನಮ್ಮ ಬೀದಿಗಳಲ್ಲೇ ನಾವು ಸಂಚಾರಮಾಡದ ಹಾಗಾಯಿತು; ನಮಗೆ ಅಂತ್ಯವು ಸಮೀಪಿಸಿತು, ನಮ್ಮ ಕಾಲವು ತೀರಿತು, ಹೌದು, ನಮಗೆ ಅಂತ್ಯವು ಬಂದೇ ಬಂತು.


ಅದರ ಬತ್ತಳಿಕೆಯು ಬಾಯ್ದೆರೆದ ಗೋರಿಯೇ, ಅದರ ಭಟರೆಲ್ಲರೂ ಶೂರರೇ.


ಕೆಟ್ಟವರ ಮಾತು ರಕ್ತಕ್ಕೆ ಹೊಂಚು; ಯಥಾರ್ಥವಂತರ ನುಡಿ ರಕ್ಷಣೆ.


ನನ್ನ ಕಾಲಿಗೆ ಬಲೆಯನ್ನು ಹಾಸಿದ್ದಾರೆ; ನನ್ನ ಪ್ರಾಣವು ಕುಂದಿಹೋಯಿತು. ನನ್ನ ದಾರಿಯಲ್ಲಿ ಕುಣಿಯನ್ನು ಅಗೆದರು; ತಾವೇ ಅದರಲ್ಲಿ ಬಿದ್ದುಹೋದರು. ಸೆಲಾ.


ಯೆಹೋವನ ಸಾನ್ನಿಧ್ಯವಿಲ್ಲದಿರುವ ದೇಶದಲ್ಲಿ ನನ್ನ ರಕ್ತವು ಸುರಿಸಲ್ಪಡದಿರಲಿ. ಅಯ್ಯೋ, ಗುಡ್ಡಗಳಲ್ಲಿ ಕೌಜುಗವನ್ನು ಹಿಡಿಯ ಹೊರಟ ಬೇಟೆಗಾರನೋ ಎಂಬಂತೆ ಇಸ್ರಾಯೇಲ್ಯರ ಅರಸನು ಹೊರಟುಬಂದು ನನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾನಲ್ಲಾ ಅಂದನು.


ಗವಿಯಲ್ಲಿ ಅಡಗಿಕೊಂಡಿರುವ ಸಿಂಹದಂತೆ ಅವನು ಮರೆಯಾಗಿ ಹೊಂಚಿಕೊಂಡಿರುವನು. ಅವನು ಬಲೆಯೊಡ್ಡಿ ಕಾದಿದ್ದು ಕುಗ್ಗಿದವನನ್ನು ಹಿಡಿದು ಎಳೆದುಕೊಂಡು ಹೋಗುತ್ತಾನೆ.


ಸೇನಾಧೀಶ್ವರನಾದ ಯೆಹೋವನ ಕೋಪೋದ್ರೇಕದಿಂದ ದೇಶವು ಸುಟ್ಟುಹೋಗಿದೆ; ಪ್ರಜೆಯು ಅಗ್ನಿಗೆ ಆಹುತಿಯಾಗಿದೆ; ಅಣ್ಣನು ತಮ್ಮನನ್ನು ಕರುಣಿಸನು.


ನಾನು ಕಿವಿಗೊಟ್ಟು ಕೇಳುವಾಗ ಅವರು ಯಥಾರ್ಥವಾಗಿ ಮಾತಾಡಿಕೊಳ್ಳುತ್ತಿರಲಿಲ್ಲ; ಯಾವನೂ ತನ್ನ ಅಧರ್ಮದ ವಿಷಯವಾಗಿ ಪಶ್ಚಾತ್ತಾಪಪಟ್ಟು - ಆಹಾ, ನಾನು ಎಂಥಾ ಕೆಲಸ ಮಾಡಿದೆ ಎಂದು ಕೊಳ್ಳುತ್ತಿರಲಿಲ್ಲ; ಯುದ್ಧದಲ್ಲಿ ರಭಸವಾಗಿ ಓಡುವ ಕುದುರೆಯಂತೆ ಪ್ರತಿಯೊಬ್ಬನೂ ತನ್ನ ತನ್ನ ಮಾರ್ಗಕ್ಕೇ ತ್ವರೆಪಡುತ್ತಾನೆ.


ನಿನ್ನವರು ರಕ್ತಸುರಿಸುವದಕ್ಕೆ ಲಂಚತೆಗೆದುಕೊಂಡಿದ್ದಾರೆ; ನಿನ್ನವರು ಸಾಲಕ್ಕೆ ಬಡ್ಡಿ ತೆಗೆದುಕೊಂಡು ಲಾಭಕ್ಕೆ ಹಣಕೊಟ್ಟು ತಮ್ಮ ನೆರೆಯವರನ್ನು ಬಾಧಿಸಿ ದೋಚಿಕೊಂಡು ನನ್ನನ್ನು ಮರೆತೇಬಿಟ್ಟಿದ್ದಾರೆ; ಇದು ಕರ್ತನಾದ ಯೆಹೋವನ ನುಡಿ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಹಾ, ರಕ್ತಮಯವಾದ ಪಟ್ಟಣದ ಗತಿಯನ್ನು ಏನು ಹೇಳಲಿ! ಆ ಹಂಡೆಯ ಕಿಲುಬು ಬಿಟ್ಟುಹೋಗದೆ ಅದರಲ್ಲೇ ಲೆಪ್ಪವಾಗಿದೆಯಲ್ಲಾ! ಮಾಂಸದ ತುಂಡುಗಳನ್ನು ಸಿಕ್ಕಿ ಸಿಕ್ಕಿದ ಹಾಗೆ ತೆಗೆದುಬಿಡು, ಇದಕ್ಕೆ ಕ್ರಮದ ಚೀಟು ಇಲ್ಲ.


ಯಾಜಕರೇ, ಇದನ್ನು ಕೇಳಿರಿ, ಇಸ್ರಾಯೇಲ್ ಕುಲದವರೇ, ಆಲಿಸಿರಿ; ರಾಜವಂಶದವರೇ, ಕಿವಿಗೊಡಿರಿ; ನೀವು ವಿುಚ್ಪದಲ್ಲಿ ಉರುಲಾಗಿಯೂ ತಾಬೋರಿನಲ್ಲಿ ಬಲೆಯಾಗಿಯೂ ಇದ್ದ ಕಾರಣ ನಿಮಗೆ ನ್ಯಾಯತೀರ್ಪು ಬಂದಿದೆ.


ನನ್ನ ಜನರೋ ಕೆಲವು ಕಾಲದಿಂದ ಶತ್ರುಗಳಾಗಿ ಎದ್ದಿದ್ದಾರೆ; ಜಗಳವನ್ನೊಲ್ಲದೆ ನಿರ್ಭಯವಾಗಿ ಹೋಗಿಬರುವವರ ಅಂಗಿಯ ಮೇಲಿನಿಂದ ಶಲ್ಯವನ್ನು ಕಸುಕೊಳ್ಳುತ್ತೀರಿ.


ಆಹಾ, ಇವರು ಒಳ್ಳೆಯದನ್ನು ದ್ವೇಷಿಸಿ ಕೆಟ್ಟದನ್ನು ಪ್ರೀತಿಸುತ್ತಾರೆ, ಜನರ ಮೈಮೇಲಿಂದ ಚರ್ಮವನ್ನು ಸುಲಿಯುತ್ತಾರೆ, ಅವರ ಎಲುಬುಗಳಿಂದ ಮಾಂಸವನ್ನು ಕಿತ್ತುಬಿಡುತ್ತಾರೆ;


(ಯೆಹೋವನು ಇಂತೆನ್ನುತ್ತಾನೆ - ನಾನು ಲೋಕನಿವಾಸಿಗಳನ್ನು ಇನ್ನು ಕರುಣಿಸೆನು; ಇಗೋ, ಪ್ರತಿಯೊಬ್ಬನನ್ನು ತನ್ನ ತನ್ನ ನೆರೆಯವನ ಕೈಗೂ ಅರಸನ ಕೈಗೂ ಒಪ್ಪಿಸುವೆನು; ಆ ಬಲಿಷ್ಠರು ಲೋಕವನ್ನು ಪುಡಿಪುಡಿಮಾಡುವರು; ಅವರ ಕೈಗೆ ಸಿಕ್ಕಿದವರನ್ನು ಉದ್ಧರಿಸೆನು).


ಪ್ರತಿಯೊಬ್ಬರು ನೆರೆಯವರೊಡನೆ ಹುಸಿಯನ್ನಾಡುತ್ತಾರೆ. ಅವರು ವಂಚನೆಯ ತುಟಿಗಳಿಂದ ಹೊರಗೊಂದು ಒಳಗೊಂದು ಮಾತಾಡುತ್ತಾರೆ.


ಪ್ರಜೆಗಳು ಪರಸ್ಪರ ವಿರೋಧಿಗಳಾಗಿ ಒಬ್ಬರನ್ನೊಬ್ಬರು ಹಿಂಸಿಸುವರು; ಹುಡುಗನು ಮುದುಕನ ಮೇಲೆಯೂ ನೀಚನು ಘನವಂತನ ಮೇಲೆಯೂ ಸೊಕ್ಕೇರಿ ನಡೆಯುವರು.


ಡಕಾಯಿತಿಯವರು ಒಬ್ಬನಿಗೆ ಹೊಂಚುವಂತೆ ಯಾಜಕರು ಗುಂಪಾಗಿ ದಾರಿಯಲ್ಲಿ ಹೊಂಚಿಕೊಂಡಿದ್ದು ಶೆಕೆವಿುಗೆ ಹೋಗುವವರನ್ನು ಕೊಂದುಹಾಕುತ್ತಾರೆ; ಹೌದು, ಘೋರಕೃತ್ಯವನ್ನು ನಡಿಸುತ್ತಾರೆ.


ಆಗ ಯೆಹೂದ್ಯರು ಈ ಸಂಗತಿಗಳು ನಿಜವೇ ಎಂದು ಹೇಳಿ ತಾವೂ ಆ ದೋಷಾರೋಪಣೆ ಮಾಡುವದರಲ್ಲಿ ಸೇರಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು