Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 7:4 - ಕನ್ನಡ ಸತ್ಯವೇದವು J.V. (BSI)

4 ಅವರಲ್ಲಿ ಉತ್ತಮನೂ ಮುಳ್ಳುಕಂಪೆ, ಸತ್ಯವಂತನೂ ಕೂಡ ಮುಳ್ಳುಬೇಲಿಗಿಂತ ಕಡೆ; ನಿನ್ನ ಕಾವಲುಗಾರರು ಮುಂತಿಳಿಸಿದ ದಿನ, ನಿನ್ನ ದಂಡನೆಯ ದಿನ ಬಂದಿದೆ; ಈಗ ನಿನ್ನ ಜನರಿಗೆ ಭ್ರಾಂತಿಹಿಡಿಯುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವರಲ್ಲಿ ಉತ್ತಮನೂ ಮುಳ್ಳಿನ ಪೊದೆಗೆ ಸಮಾನ, ಸತ್ಯವಂತನೂ ಕೂಡ ಮುಳ್ಳುಬೇಲಿಗಿಂತ ಕಡೆ. ನಿನ್ನ ಕಾವಲುಗಾರರು ಮುಂತಿಳಿಸಿದ ನಿನ್ನ ದಂಡನೆಯ ದಿನ ಬಂದಿದೆ. ಈಗ ನಿನ್ನ ಜನರಿಗೆ ಭ್ರಾಂತಿ ಹಿಡಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅವರಲ್ಲಿ ಅತ್ಯುತ್ತಮನಾದವನೂ ಮುಳ್ಳಿನ ಪೊದೆಗೆ ಸಮಾನ. ಸತ್ಯವಂತನೂ ಮುಳ್ಳುಬೇಲಿಗಿಂತ ಕಡೆ. ಜನರ ದಂಡನೆಯ ದಿನ ಸಮೀಪಿಸಿದೆ. ಅವರ ಕಾವಲುಗಾರರಾದ ಪ್ರವಾದಿಗಳು ಮುಂತಿಳಿಸಿದ ಕಾಲ ಬಂದಿದೆ. ಜನರೆಲ್ಲರು ದಿಗ್ಭ್ರಾಂತರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅವರಲ್ಲಿರುವ ಉತ್ತಮರೂ ಸಹ ಮುಳ್ಳಿನ ಪೊದೆಯಂತಿದ್ದಾರೆ. ಅವರಲ್ಲಿರುವ ಉತ್ತಮರೂ ಸಹ ಡೊಂಕುಡೊಂಕಾಗಿರುವ ಮುಳ್ಳುಪೊದೆಗಿಂತಲೂ ಡೊಂಕಾಗಿದ್ದಾರೆ. ನಿನ್ನ ಪ್ರವಾದಿಗಳು ಈ ದಿನವು ಬರುತ್ತಿದೆ ಎಂದು ಹೇಳುತ್ತಿದ್ದಾರೆ. ನಿನ್ನ ಪ್ರವಾದಿಗಳ ದಿವಸವು ಬಂದದೆ. ಈಗ ನೀನು ಶಿಕ್ಷಿಸಲ್ಪಡುವೆ. ನೀನು ಈಗ ಗಲಿಬಿಲಿಗೆ ಒಳಗಾಗುವೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವರಲ್ಲಿ ಉತ್ತಮನು ದತ್ತೂರಿಯ ಹಾಗೆಯೂ ಬಹು ಯಥಾರ್ಥನು ಮುಳ್ಳಿನ ಬೇಲಿಯ ಹಾಗೆಯೂ ಇದ್ದಾನೆ. ದೇವರು ನಿನ್ನನ್ನು ಭೇಟಿಮಾಡುವ ದಿನ ಬಂದಿದೆ, ನಿನ್ನ ಕಾವಲುಗಾರರು ಎಚ್ಚರಿಕೆಯ ಗಂಟೆಯನ್ನು ಬಾರಿಸುತ್ತಾರೆ. ಈಗ ನೀವು ಭಯಭೀತರಾಗುವ ಸಮಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 7:4
16 ತಿಳಿವುಗಳ ಹೋಲಿಕೆ  

ಸೇನಾಧೀಶ್ವರನಾದ ಯೆಹೋವನೆಂಬ ಕರ್ತನಿಂದ ದಿವ್ಯದರ್ಶನದ ತಗ್ಗಿಗೆ ಗಲಿಬಿಲಿಯ ದಿನ, ತುಳಿದಾಟದ ದಿನ, ಭ್ರಾಂತಿಯ ದಿನ, ಕೋಟೆಯು ಒಡೆದುಹೋಗಲು ಕೂಗು ಬೆಟ್ಟವನ್ನು ಮುಟ್ಟುವ ದಿನ ಬಂದಿದೆ.


ನರಪುತ್ರನೇ, ನೀನು ಮುಳ್ಳುಕೊಂಪೆಗಲಿಗೆ ಸಿಕ್ಕಿಕೊಂಡು ಚೇಳುಗಳ ನಡುವೆ ವಾಸಿಸುವಂತೆ ಅವರ ಮಧ್ಯದಲ್ಲಿದ್ದರೂ ಅವರಿಗೆ ಭಯಪಡಬೇಡ, ಅವರ ಗದರಿಕೆಗೆ ಹೆದರದಿರು; ಅವರು ದ್ರೋಹಿವಂಶದವರು; ಅವರ ಬಿರುನುಡಿಗೆ ದಿಗಿಲುಪಡಬೇಡ, ಅವರ ಬಿರುನೋಟಕ್ಕೆ ಬೆಚ್ಚದಿರು.


ದಂಡನೆಯ ದಿನದಲ್ಲಿಯೂ ದೂರದಿಂದ ಬರುವ ನಾಶನದಲ್ಲಿಯೂ ಏನು ಮಾಡುವಿರಿ? ಸಹಾಯಕ್ಕಾಗಿ ಯಾರ ಬಳಿಗೆ ಓಡುವಿರಿ? ನಿಮ್ಮ ಐಶ್ವರ್ಯವನ್ನು ಯಾರ ವಶಮಾಡುವಿರಿ?


ಆದರೆ ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳಸಿದರೆ ಅಯೋಗ್ಯವೆನಿಸಿಕೊಂಡು ಶಾಪಕ್ಕೆ ಗುರಿಯಾಗುತ್ತದೆ, ಅದರ ಅಂತ್ಯವು ಸುಡಲ್ಪಡುವದೇ.


ಇದಲ್ಲದೆ ಸೂರ್ಯ ಚಂದ್ರ ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು. ಭೂವಿುಯ ಮೇಲೆ ಸಮುದ್ರದ ಮತ್ತು ತೆರೆಗಳ ಘೋಷದ ನಿವಿುತ್ತವಾಗಿ ಜನಗಳಿಗೆ ದಿಕ್ಕು ಕಾಣದೆ ಸಂಕಟವು ಉಂಟಾಗುವದು.


ಆತನ ವೈರಿಗಳು ಮುಳ್ಳುಗಳಂತೆ ಹೆಣೆದುಕೊಂಡಿದ್ದರೂ ತಮ್ಮ ಮದ್ಯದಲ್ಲಿ ಮುಳುಗಿದ್ದರೂ ತುಂಬಾ ಒಣಗಿದ ಕೂಳೆಯಂತೆ ಬೆಂಕಿಗೆ ತುತ್ತಾಗುವರು.


ಆತನು ನನ್ನನ್ನು - ಆಮೋಸನೇ, ನಿನ್ನ ಕಣ್ಣಿಗೆ ಕಾಣಿಸುವದೇನು ಎಂದು ಕೇಳಲು ಮಾಗಿದ ಹಣ್ಣಿನ ಪುಟ್ಟಿ ಅಂದೆನು. ಆಗ ಯೆಹೋವನು ನನಗೆ ಹೀಗೆ ಹೇಳಿದನು - ಇಸ್ರಾಯೇಲೆಂಬ ನನ್ನ ಜನರಿಗೆ ಕಡೆಗಾಲವು ಮಾಗುತ್ತಾ ಬಂದಿದೆ; ಇನ್ನು ಅವರನ್ನು ಕಂಡುಕಾಣದ ಹಾಗಿರೆನು.


ಅವು ವ್ಯರ್ಥ, ಹಾಸ್ಯಾಸ್ಪದವಾದ ಕೆಲಸ; ದಂಡನೆಯಾಗುವಾಗ ಅಳಿದು ಹೋಗುವವು;


ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ; ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇಹೋಗುವರು ಎಂದು ಯೆಹೋವನು ಅನ್ನುತ್ತಾನೆ.


ಮುಳ್ಳಿಗೆ ಬದಲಾಗಿ ತುರಾಯಿಯೂ ದತ್ತೂರಿಗೆ ಪ್ರತಿಯಾಗಿ ಸುಗಂಧವೂ ಬೆಳೆಯುವವು; ಆ ವನವು ಯೆಹೋವನಾಮಸ್ಮರಣೆಗೆ ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವದು.


ದಂಡನೆಯ ವರುಷದಲ್ಲಿ ಅನಾತೋತಿನವರಿಗೆ ಕೇಡನ್ನು ಬರಮಾಡುವೆನು, ಅವರಲ್ಲಿ ಯಾರೂ ಉಳಿಯರು ಎಂದು ಹೇಳಿದ್ದಾನೆ.


ಸಂಬಳಕ್ಕಾಗಿ ಐಗುಪ್ತವನ್ನು ಸೇರಿರುವ ದಂಡಾಳುಗಳು ಕೊಬ್ಬಿದ ಕರುಗಳಂತಿದ್ದಾರೆ; ಅವರೂ ಬೆನ್ನುಕೊಟ್ಟು ಓಡಿಹೋಗಿದ್ದಾರೆ; ನಿಲ್ಲಲೇ ಇಲ್ಲ; ಅವರಿಗೆ ವಿಪತ್ಕಾಲವು ಒದಗಿದೆ, ದಂಡನೆಯ ದಿನವು ಸಂಭವಿಸಿದೆ.


ಇಸ್ರಾಯೇಲ್ ವಂಶದವರಿಗೆ ಚುಚ್ಚುವ ಮುಳ್ಳು ಇನ್ನಿರದು; ಹೀನೈಸುವ ನೆರೆಹೊರೆಯವರೆಂಬ ಕಂಟಕದ ಬಾಧೆಯು ಇನ್ನಾಗದು; ನಾನೇ ಕರ್ತನಾದ ಯೆಹೋವನು ಎಂದು ಅವರಿಗೆ ವ್ಯಕ್ತವಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು