Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 7:5 - ಕನ್ನಡ ಸತ್ಯವೇದವು J.V. (BSI)

5 ವಿುತ್ರನನ್ನು ನಂಬಬೇಡ; ಆಪ್ತನಲ್ಲಿ ಭರವಸವಿಡದಿರು; ನಿನ್ನ ಎದೆಯ ಮೇಲೆ ಒರಗುವವಳಿಗೂ ನಿನ್ನ ಬಾಯಬಾಗಲನ್ನು ಭದ್ರವಾಗಿಟ್ಟುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಮಿತ್ರನನ್ನು ನಂಬಬೇಡ, ಆಪ್ತನಲ್ಲಿ ಭರವಸವಿಡಬೇಡ. ನಿನ್ನ ಎದೆಯ ಮೇಲೆ ಒರಗುವವಳಿಗೆ ನಿನ್ನ ರಹಸ್ಯ ತಿಳಿಸಬೇಡ ಭದ್ರವಾಗಿಟ್ಟುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನೆರೆಯವನನ್ನು ನಂಬಬೇಡ, ಆಪ್ತನಲ್ಲಿ ಭರವಸೆ ಇಡಬೇಡ. ನಿನ್ನೊಡನೆ ಮಲಗುವ ಮಡದಿಯೊಂದಿಗೂ ಬಾಯಿಬಿಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಿನ್ನ ನೆರೆಯವನ ಮೇಲೆ ನಂಬಿಕೆ ಇಡಬೇಡ! ನಿನ್ನ ಸ್ನೇಹಿತನ ಮೇಲೆ ಭರವಸವಿಡಬೇಡ! ನಿನ್ನ ಹೆಂಡತಿಯೊಂದಿಗೂ ನಿನ್ನ ಮನಸ್ಸಿನಲ್ಲಿರುವ ವಿಷಯವನ್ನು ತಿಳಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನೆರೆಯವನಲ್ಲಿ ನಂಬಿಕೆ ಇಡಬೇಡಿರಿ; ಆಪ್ತಸ್ನೇಹಿತನಲ್ಲಿ ಭರವಸೆ ಇಡಬೇಡಿರಿ; ನಿನ್ನ ಎದೆಯಲ್ಲಿ ಮಲಗುವವಳಿಗೆ ನಿನ್ನ ಬಾಯಿಯ ಬಾಗಿಲುಗಳನ್ನು ಕಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 7:5
11 ತಿಳಿವುಗಳ ಹೋಲಿಕೆ  

ನೀವೆಲ್ಲರೂ ನಿಮ್ಮ ನಿಮ್ಮ ನೆರೆಯವರ ವಿಷಯದಲ್ಲಿ ಎಚ್ಚರಿಕೆಯಾಗಿರಿ, ಯಾರೇ ಆಗಲಿ ತನ್ನ ತಮ್ಮನನ್ನೂ ನಂಬದಿರಲಿ; ಪ್ರತಿಯೊಬ್ಬ ತಮ್ಮನೂ ವಂಚಿಸೇ ವಂಚಿಸುವನು, ಒಬ್ಬೊಬ್ಬ ನೆರೆಯವನೂ ಚಾಡಿಹೇಳುತ್ತಾ ತಿರುಗಾಡುವನು.


ನೋಡಿರಿ, ತೋಳಗಳ ನಡುವೆ ಕುರಿಗಳನ್ನು ಹೊಗಿಸಿದಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತೇನೆ. ಆದದರಿಂದ ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರ್ರಿ.


ನಾನು ಯಾವನನ್ನು ನಂಬಿದ್ದೆನೋ ಯಾವನು ನನ್ನ ಮನೆಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡನೋ ಅಂಥ ಆಪ್ತಸ್ನೇಹಿತನು ನನಗೆ ಕಾಲನ್ನು ಅಡ್ಡಗೊಟ್ಟಿದ್ದಾನೆ.


ಯೆಹೋವನೇ, ನನ್ನ ಬಾಯಿಗೆ ಕಾವಲಿರಿಸು; ನನ್ನ ತುಟಿಗಳೆಂಬ ಕದವನ್ನು ಕಾಯಿ.


ರಾತ್ರಿಯಲ್ಲಿ ಬಿಕ್ಕಿ ಬಿಕ್ಕಿ ಅಳುವದರಿಂದ ಕಣ್ಣೀರು ಕೆನ್ನೆಗಳ ಮೇಲೆ ನಿಂತೇ ಇದೆ; ಆಕೆಯ ಬಹುಮಂದಿ ಪ್ರಿಯರಲ್ಲಿ ಯಾರೂ ಸಂತೈಸರು; ಆಕೆಗೆ ವಿುತ್ರರೆಲ್ಲಾ ಶತ್ರುಗಳಾಗಿ ದ್ರೋಹ ಮಾಡಿದ್ದಾರೆ,


ಆಕೆಯು ಔತಣದ ಏಳು ದಿನಗಳಲ್ಲಿಯೂ ಅವನ ಮುಂದೆ ಅಳುತ್ತಿದ್ದಳು. ಏಳನೆಯ ದಿನದಲ್ಲಿ ಆಕೆಯು ಬಹಳವಾಗಿ ಪೀಡಿಸಿದ್ದರಿಂದ ಅವನು ಹೇಳಿಬಿಟ್ಟನು. ಆಕೆಯು ಒಗಟಿನ ಅರ್ಥವನ್ನು ತನ್ನ ಜನರಿಗೆ ತಿಳಿಸಿದಳು.


ನಾನು ಕಿವಿಕೇಳಿಸದವನಂತೆಯೂ ಪ್ರತ್ಯುತ್ತರಕೊಡಲಾರದವನಂತೆಯೂ ಆದೆನು.


ಸುಳ್ಳಾಡುವದಕ್ಕೆ ತಮ್ಮ ನಾಲಿಗೆಯನ್ನು ಬಿಲ್ಲಿನಂತೆ ಬೊಗ್ಗಿಸುತ್ತಾರೆ; ಸತ್ಯಕ್ಕೆ ಪ್ರತಿಕೂಲವಾಗಿ ದೇಶದಲ್ಲಿ ಪ್ರಬಲಿಸಿದ್ದಾರೆ; ಕೇಡಿನಿಂದ ಕೇಡಿಗೆ ಹಾರುತ್ತಾರೆ; ನನ್ನನ್ನು ಅರಿಯರು ಎಂದು ಯೆಹೋವನು ಅನ್ನುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು