Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮೀಕ 7:6 - ಕನ್ನಡ ಸತ್ಯವೇದವು J.V. (BSI)

6 ಮಗನು ತಂದೆಯನ್ನು ತುಚ್ಫೀಕರಿಸುತ್ತಾನೆ, ಮಗಳು ತಾಯಿಗೆ ಎದುರೇಳುತ್ತಾಳೆ; ಸೊಸೆಯು ಅತ್ತೆಯನ್ನು ವಿರೋಧಿಸುತ್ತಾಳೆ; ಹೀಗೆ ಒಬ್ಬ ಮನುಷ್ಯನಿಗೆ ಅವನ ಮನೆಯವರೇ ವೈರಿಗಳಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಮಗನು ತಂದೆಯನ್ನು ತುಚ್ಛೀಕರಿಸುತ್ತಾನೆ. ಮಗಳು ತಾಯಿಗೆ ಎದುರೇಳುತ್ತಾಳೆ. ಸೊಸೆಯು ಅತ್ತೆಯನ್ನು ವಿರೋಧಿಸುತ್ತಾಳೆ. ಹೀಗೆ ಒಬ್ಬ ಮನುಷ್ಯನಿಗೆ ಅವನ ಮನೆಯವರೇ ವೈರಿಗಳಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಮಗನು ತಂದೆಯನ್ನು ತುಚ್ಛೀಕರಿಸುವನು; ಮಗಳು ತಾಯಿಗೆ ಎದುರಾಗಿರುವಳು; ಸೊಸೆ ಅತ್ತೆಯೊಂದಿಗೆ ಜಗಳವಾಡುವಳು. ಹೀಗೆ ಮನುಷ್ಯನಿಗೆ ತನ್ನ ಮನೆಯವರೇ ವೈರಿಗಳಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಒಬ್ಬನ ವೈರಿಯು ಅವನ ಮನೆಯವರೇ ಆಗಿರುತ್ತಾರೆ. ಮಗನು ತಂದೆಗೆ ಗೌರವವನ್ನು ಕೊಡುವದಿಲ್ಲ. ಮಗಳು ತಾಯಿಗೆ ವಿರುದ್ಧವಾಗಿ ನಡೆಯುವಳು. ಸೊಸೆಯು ಅತ್ತೆಗೆ ವಿರುದ್ಧವಾಗಿ ನಡೆಯುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಏಕೆಂದರೆ ಮಗನು ತನ್ನ ತಂದೆಯನ್ನು ಅವಮಾನ ಮಾಡುತ್ತಾನೆ. ಮಗಳು ತನ್ನ ತಾಯಿಗೂ, ಸೊಸೆಗೂ ಆಕೆಯ ಅತ್ತೆಗೂ ವಿರೋಧವಾಗಿ ಏಳುತ್ತಾರೆ. ಒಬ್ಬ ಮನುಷ್ಯನಿಗೆ ಅವನ ಮನೆಯವರೇ ವೈರಿಗಳಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮೀಕ 7:6
24 ತಿಳಿವುಗಳ ಹೋಲಿಕೆ  

ಮಗನಿಗೆ ವಿರೋಧವಾಗಿ ತಂದೆಯು, ತಂದೆಗೆ ವಿರೋಧವಾಗಿ ಮಗನು, ಮಗಳಿಗೆ ವಿರೋಧವಾಗಿ ತಾಯಿಯು, ತಾಯಿಗೆ ವಿರೋಧವಾಗಿ ಮಗಳು, ಸೊಸೆಗೆ ವಿರೋಧವಾಗಿ ಅತ್ತೆಯು, ಅತ್ತೆಗೆ ವಿರೋಧವಾಗಿ ಸೊಸೆಯು ಭೇದವುಳ್ಳವರಾಗಿರುವರು ಅಂದನು.


ಇದಲ್ಲದೆ ಅಣ್ಣನು ತಮ್ಮನನ್ನು, ತಂದೆಯು ಮಗನನ್ನು, ಮರಣಕ್ಕೆ ಒಪ್ಪಿಸುವರು; ಮಕ್ಕಳು ಹೆತ್ತವರ ಮೇಲೆ ತಿರುಗಿಬಿದ್ದು ಅವರನ್ನು ಕೊಲ್ಲಿಸುವರು.


ನಾನು ಯಾವನನ್ನು ನಂಬಿದ್ದೆನೋ ಯಾವನು ನನ್ನ ಮನೆಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡನೋ ಅಂಥ ಆಪ್ತಸ್ನೇಹಿತನು ನನಗೆ ಕಾಲನ್ನು ಅಡ್ಡಗೊಟ್ಟಿದ್ದಾನೆ.


ನಿನ್ನವರು ತಾಯಿತಂದೆಗಳನ್ನು ತುಚ್ಫೀಕರಿಸಿದ್ದಾರೆ, ನಿನ್ನವರು ವಿದೇಶಿಗಳನ್ನು ಬಾಧಿಸಿದ್ದಾರೆ, ನಿನ್ನವರು ಅನಾಥರನ್ನೂ ವಿಧವೆಯರನ್ನೂ ಹಿಂಸಿಸಿದ್ದಾರೆ.


ನಾನು ನಿಮ್ಮೆಲ್ಲರನ್ನು ಕುರಿತು ಈ ಮಾತನ್ನು ಹೇಳಲಿಲ್ಲ; ನಾನು ಆದುಕೊಂಡವರನ್ನು ನಾನು ಬಲ್ಲೆನು; ಆದರೆ - ನನ್ನ ಕೂಡ ಊಟಮಾಡುವವನೇ ನನಗೆ ಕಾಲನ್ನು ಅಡ್ಡಗೊಟ್ಟಿದ್ದಾನೆ ಎಂಬ ಶಾಸ್ತ್ರದ ಮಾತು ನೆರವೇರಬೇಕಾಗಿದೆ.


ತಾಯಿಗೆ ಶುಭವನ್ನು ಕೋರದೆ ತಂದೆಯನ್ನು ಶಪಿಸುವ ಒಂದು ತರದವರುಂಟು.


ಆದರೆ ತಂದೆತಾಯಿಗಳೂ ಅಣ್ಣತಮ್ಮಂದಿರೂ ಬಂಧುಬಾಂಧವರೂ ಸ್ನೇಹಿತರೂ ನಿಮ್ಮನ್ನು ಒಪ್ಪಿಸಿಕೊಡುವರು; ಮತ್ತು ನಿಮ್ಮಲ್ಲಿ ಕೆಲವರನ್ನು ಕೊಲ್ಲಿಸುವರು.


ಅದಕ್ಕಾತನು - ಬಟ್ಟಲಲ್ಲಿ ನನ್ನ ಸಂಗಡ ಕೈ ಅದ್ದಿದವನೇ ನನ್ನನ್ನು ಹಿಡುಕೊಡುವನು.


ನಿನ್ನ ವಿುತ್ರಮಂಡಲಿಯವರೆಲ್ಲರು ನಿನ್ನನ್ನು ನಿನ್ನ ಎಲ್ಲೆಯ ಆಚೆಗೆ ನೂಕಿಬಿಟ್ಟಿದ್ದಾರೆ; ನಿನ್ನ ಆಪ್ತರು ನಿನ್ನನ್ನು ವಂಚಿಸಿ ಸೋಲಿಸಿದ್ದಾರೆ, ನಿನ್ನ ಅನ್ನ [ತಿಂದವರು] ಅವಿವೇಕಿಯಾದ ನಿನಗೆ ಉರುಲೊಡ್ಡಿದ್ದಾರೆ;


ಇವನ ಮೇಲೆ ದೂರು ಹೇಳಿರಿ, ನಾವೂ ಹೇಳುವೆವು ಎಂದು ಬಹುಜನರು ಗುಸುಗುಟ್ಟುವದನ್ನು ಕೇಳಿದ್ದೇನೆ, ಸುತ್ತುಮುತ್ತಲೂ ದಿಗಿಲು; ನನ್ನ ಆಪ್ತಸ್ನೇಹಿತರೆಲ್ಲರೂ ಇವನು ಎಡವಿಬೀಳಲಿ ಎಂದು ನನ್ನನ್ನು ಹೊಂಚಿನೋಡುತ್ತಾ - ಒಂದು ವೇಳೆ ಸಿಕ್ಕಿಬಿದ್ದಾನು, ಇವನನ್ನು ಗೆದ್ದು ಮುಯ್ಯಿತೀರಿಸಿಕೊಳ್ಳುವೆವು ಎಂದು ತಮ್ಮತಮ್ಮೊಳಗೆ ಅಂದುಕೊಳ್ಳುತ್ತಿದ್ದಾರೆ.


ನಿನ್ನ ಸಹೋದರರೂ ನಿನ್ನ ತಂದೆಯ ಮನೆಯವರೂ ನಿನಗೆ ದ್ರೋಹ ಮಾಡಿರುತ್ತಾರೆ. ಇವರೇ ನಿನ್ನ ಬೆನ್ನಟ್ಟುತ್ತಾ ಕೂಗಿರುತ್ತಾರೆ; ಒಳ್ಳೇ ಮಾತಾಡಿದರೂ ಇವರನ್ನು ನಂಬಬೇಡ.


ತಂದೆಯನ್ನು ಹಾಸ್ಯಮಾಡಿ ತಾಯಿಯ ಅಪ್ಪಣೆಯನ್ನು ಧಿಕ್ಕರಿಸುವವನ ಕಣ್ಣನ್ನು ಹಳ್ಳಕೊಳ್ಳದ ಕಾಗೆಗಳು ಕುಕ್ಕುವವು, ರಣಹದ್ದುಗಳು ತಿಂದುಬಿಡುವವು.


ಇದಲ್ಲದೆ ಅವನು ಅಬೀಷೈಗೂ ತನ್ನ ಎಲ್ಲಾ ಸೇವಕರಿಗೂ - ನೋಡಿರಿ, ನನ್ನಿಂದ ಹುಟ್ಟಿದ ನನ್ನ ಮಗನೇ ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವಲ್ಲಿ ಈ ಬೆನ್ಯಾಮೀನ್ಯನು ಹೀಗೆ ಮಾಡುವದು ಯಾವ ದೊಡ್ಡ ಮಾತು! ಬಿಡಿರಿ, ಅವನು ಶಪಿಸಲಿ; ಹೀಗೆ ಮಾಡಬೇಕೆಂದು ಯೆಹೋವನೇ ಅವನಿಗೆ ಆಜ್ಞಾಪಿಸಿದ್ದಾನೆ.


ಆದರೂ ದಡವನ್ನು ಮೀರಿದ ಪ್ರವಾಹದಂತಿರುವ ನೀನು ಇನ್ನು ಪ್ರಮುಖನ ಸ್ಥಾನದಲ್ಲಿ ಇರುವದಿಲ್ಲ. ನಿನ್ನ ತಂದೆಯ ಹಾಸಿಗೆಯನ್ನು ಹತ್ತಿ ಅದನ್ನು ಹೊಲೆ ಮಾಡಿದಿಯಲ್ಲಾ. ಇವನು ನನ್ನ ಮಂಚವನ್ನು ಹತ್ತಿದನು!


ಸೇನಾಧೀಶ್ವರನಾದ ಯೆಹೋವನ ಕೋಪೋದ್ರೇಕದಿಂದ ದೇಶವು ಸುಟ್ಟುಹೋಗಿದೆ; ಪ್ರಜೆಯು ಅಗ್ನಿಗೆ ಆಹುತಿಯಾಗಿದೆ; ಅಣ್ಣನು ತಮ್ಮನನ್ನು ಕರುಣಿಸನು.


ನೀವೆಲ್ಲರೂ ನಿಮ್ಮ ನಿಮ್ಮ ನೆರೆಯವರ ವಿಷಯದಲ್ಲಿ ಎಚ್ಚರಿಕೆಯಾಗಿರಿ, ಯಾರೇ ಆಗಲಿ ತನ್ನ ತಮ್ಮನನ್ನೂ ನಂಬದಿರಲಿ; ಪ್ರತಿಯೊಬ್ಬ ತಮ್ಮನೂ ವಂಚಿಸೇ ವಂಚಿಸುವನು, ಒಬ್ಬೊಬ್ಬ ನೆರೆಯವನೂ ಚಾಡಿಹೇಳುತ್ತಾ ತಿರುಗಾಡುವನು.


ಪ್ರಜೆಗಳು ಪರಸ್ಪರ ವಿರೋಧಿಗಳಾಗಿ ಒಬ್ಬರನ್ನೊಬ್ಬರು ಹಿಂಸಿಸುವರು; ಹುಡುಗನು ಮುದುಕನ ಮೇಲೆಯೂ ನೀಚನು ಘನವಂತನ ಮೇಲೆಯೂ ಸೊಕ್ಕೇರಿ ನಡೆಯುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು