ಯಾಕೋಬನು 1:1 - ಕನ್ನಡ ಸತ್ಯವೇದವು J.V. (BSI)1 ದೇವರಿಗೂ ಕರ್ತನಾದ ಯೇಸು ಕ್ರಿಸ್ತನಿಗೂ ದಾಸನಾಗಿರುವ ಯಾಕೋಬನು ಅನ್ಯದೇಶಗಳಲ್ಲಿ ಚದರಿರುವ [ಇಸ್ರಾಯೇಲ್] ಹನ್ನೆರಡು ಕುಲದವರಿಗೆ ಬರೆಯುವದು. ನಿಮಗೆ ಶುಭವಾಗಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ದೇವರಿಗೂ ಕರ್ತನಾದ ಯೇಸು ಕ್ರಿಸ್ತನಿಗೂ ದಾಸನಾಗಿರುವ ಯಾಕೋಬನು ಅನ್ಯದೇಶಗಳಲ್ಲಿ ಚದುರಿರುವ ಇಸ್ರಾಯೇಲ್ಯರ ಹನ್ನೆರಡು ಗೋತ್ರದವರಿಗೂ ಬರೆಯುವುದೇನೆಂದರೆ, “ನಿಮಗೆ ಶುಭವಾಗಲಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಜಗದಾದ್ಯಂತ ಚದರಿರುವ ಇಸ್ರಯೇಲಿನ ಹನ್ನೆರಡು ಕುಲದವರಿಗೆ - ದೇವರ ಹಾಗೂ ಪ್ರಭು ಯೇಸುಕ್ರಿಸ್ತರ ದಾಸನಾದ ಯಕೋಬನ ಶುಭಾಶಯಗಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ದೇವರ ಮತ್ತು ಪ್ರಭುವಾದ ಯೇಸು ಕ್ರಿಸ್ತನ ಸೇವಕನಾದ ಯಾಕೋಬನು ಲೋಕದಲ್ಲೆಲ್ಲಾ ಚದರಿಹೋಗಿರುವ (ಇಸ್ರೇಲಿನ) ಹನ್ನೆರಡು ಕುಲದವರಿಗೆ ಬರೆದ ಪತ್ರ. ನಿಮಗೆ ಶುಭವಾಗಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ದೇವರಿಗೂ ಕರ್ತ ಆಗಿರುವ ಯೇಸು ಕ್ರಿಸ್ತರಿಗೂ ದಾಸನಾಗಿರುವ ಯಾಕೋಬನು, ವಿವಿಧ ದೇಶಗಳಲ್ಲಿ ಚದರಿರುವ ಇಸ್ರಾಯೇಲರ ಹನ್ನೆರಡು ಗೋತ್ರದವರಿಗೆ ಬರೆಯುವುದು: ನಿಮಗೆ ಶುಭವಾಗಲಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ದೆವಾಚೊ ಅನಿ ಧನಿಯಾ ಜೆಜು ಕ್ರಿಸ್ತಾಚೊ ಸೆವಕ್ ಹೊವ್ನ್ ಹೊತ್ತೊ ಜಾಕೊಬ್ ಸಗ್ಳ್ಯಾ ಜಗಾತ್ ಪಗ್ಳುನ್ ಗೆಲ್ಲ್ಯಾ ಇಸ್ರಾಯೆಲಾಂಚ್ಯಾ ಬಾರಾ ಕುಳಿಯಾಂಚ್ಯಾ ಲೊಕಾಕ್ನಿ ಲಿವ್ತಲಿ ಚಿಟ್ ತುಮ್ಕಾ ಬರೆ ಹೊಂವ್ದಿತ್. ಅಧ್ಯಾಯವನ್ನು ನೋಡಿ |
ದೇವರ ದಾಸನೂ ಯೇಸು ಕ್ರಿಸ್ತನ ಅಪೊಸ್ತಲನೂ ಆಗಿರುವ ಪೌಲನು ನಮ್ಮೆಲ್ಲರಿಗೆ ಹುದುವಾಗಿರುವ ನಂಬಿಕೆಯ ಸಂಬಂಧದಲ್ಲಿ ನನ್ನ ನಿಜಕುಮಾರನಾದ ತೀತನಿಗೆ ಬರೆಯುವದೇನಂದರೆ - ತಂದೆಯಾದ ದೇವರಿಂದಲೂ ನಮ್ಮ ರಕ್ಷಕನಾದ ಕ್ರಿಸ್ತ ಯೇಸುವಿನಿಂದಲೂ ನಿನಗೆ ಕೃಪೆಯೂ ಶಾಂತಿಯೂ ಆಗಲಿ. ದೇವರಾದುಕೊಂಡವರ ನಂಬಿಕೆಯೂ ಭಕ್ತಿಯನ್ನುಂಟುಮಾಡುವ ಸತ್ಯದ ಪರಿಜ್ಞಾನವೂ ವೃದ್ಧಿಯಾಗುವದಕ್ಕೋಸ್ಕರವೇ ಅಪೊಸ್ತಲನಾಗಿದ್ದೇನೆ. ಆ ನಂಬಿಕೆಗೂ ಸತ್ಯದ ಪರಿಜ್ಞಾನಕ್ಕೂ ನಿತ್ಯಜೀವದ ನಿರೀಕ್ಷೆಯೇ ಆಧಾರವಾಗಿದೆ. ಸುಳ್ಳಾಡದ ದೇವರು ಆ ನಿತ್ಯಜೀವವನ್ನು ಕೊಡುತ್ತೇನೆಂದು ಅನಾದಿಕಾಲದಲ್ಲಿ ವಾಗ್ದಾನಮಾಡಿ ತನ್ನ ಕ್ಲುಪ್ತ ಸಮಯದಲ್ಲಿ ವಾಗ್ದಾನ ನೆರವೇರಿಸಿ ಪ್ರಸಂಗದ ಮೂಲಕ ಪ್ರಕಟಿಸಿದನು. ಆ ಪ್ರಸಂಗೋದ್ಯೋಗವು ನಮ್ಮ ರಕ್ಷಕನಾದ ದೇವರ ಅಪ್ಪಣೆಯ ಪ್ರಕಾರ ನನಗೆ ಒಪ್ಪಿಸಲ್ಪಟ್ಟದೆ.
ಹಾಮಾನನು ಅರಸನಾದ ಅಹಷ್ವೇರೋಷನಿಗೆ - ನಿನ್ನ ರಾಜ್ಯದ ಎಲ್ಲಾ ಸಂಸ್ಥಾನಗಳಲ್ಲಿ ಒಂದು ಜನಾಂಗವಿರುತ್ತದೆ; ಅದು ಇತರ ಜನಾಂಗಗಳವರ ಮಧ್ಯದಲ್ಲಿ ಹರಡಿದ್ದರೂ ಅವರಿಂದ ಪ್ರತ್ಯೇಕವಾಗಿಯೇ ಇರುತ್ತದೆ. ಆ ಜನಾಂಗದವರ ನಿಯಮಗಳು ಇತರ ಎಲ್ಲಾ ಜನಾಂಗಗಳವರ ನಿಯಮಗಳಿಗೆ ಬೇರೆಯಾಗಿರುತ್ತವೆ. ಅರಸನ ನಿಯಮಗಳನ್ನಂತೂ ಅವರು ಅನುಸರಿಸುವದೇ ಇಲ್ಲ. ಅರಸನು ಅವರನ್ನು ಸುಮ್ಮನೆ ಬಿಡುವದು ಉಚಿತವಲ್ಲ.