Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 1:13 - ಕನ್ನಡ ಸತ್ಯವೇದವು J.V. (BSI)

13 ಯಾವನಾದರೂ ಪಾಪಮಾಡುವದಕ್ಕೆ ಪ್ರೇರೇಪಿಸಲ್ಪಡುವಾಗ - ಈ ಪ್ರೇರಣೆಯು ನನಗೆ ದೇವರಿಂದ ಉಂಟಾಯಿತೆಂದು ಹೇಳಬಾರದು. ದೇವರು ಕೆಟ್ಟದ್ದಕ್ಕೇನೂ ಸಂಬಂಧಪಟ್ಟವನಲ್ಲ; ಆತನು ಯಾರನ್ನೂ ಪಾಪಕ್ಕೆ ಪ್ರೇರೇಪಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯಾರಾದರೂ ಶೋಧನೆಗೆ ಪ್ರೇರೇಪಿಸಲ್ಪಡುವಾಗ “ಈ ಪ್ರೇರಣೆಯು ತನಗೆ ದೇವರಿಂದ ಉಂಟಾಯಿತೆಂದು” ಹೇಳಬಾರದು. ಏಕೆಂದರೆ ದೇವರು ಕೆಟ್ಟದ್ದಕ್ಕೆ ಪ್ರೇರಣೆ ನೀಡುವವನಲ್ಲ. ಮತ್ತು ಆತನು ಯಾರನ್ನೂ ಪಾಪಕ್ಕೆ ಪ್ರೇರೇಪಿಸಿ ಶೋಧಿಸುವುದೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಪಾಪಪ್ರಲೋಭನೆಗೆ ಒಳಗಾದಾಗ, “ಈ ಪ್ರಲೋಭನೆಗಳು ದೇವರಿಂದಲೇ ಬಂದವು,” ಎಂದು ಯಾರೂ ಹೇಳದಿರಲಿ. ಏಕೆಂದರೆ, ದೇವರು ಸ್ವತಃ ಪಾಪಪ್ರಲೋಭನೆಗೆ ಗುರಿಯಾಗುವುದಿಲ್ಲ ಮತ್ತು ಯಾರನ್ನೂ ಅಂಥ ಪ್ರಲೋಭನೆಗೆ ಗುರಿಪಡಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಶೋಧನೆಗೆ ಗುರಿಯಾಗಿರುವ ವ್ಯಕ್ತಿಯು, “ದೇವರು ನನ್ನನ್ನು ಶೋಧಿಸುತ್ತಿದ್ದಾನೆ” ಎಂದು ಹೇಳಬಾರದು. ಕೆಟ್ಟದ್ದು ದೇವರನ್ನು ಶೋಧಿಸಲಾರದು. ದೇವರು ತಾನಾಗಿಯೇ ಯಾರನ್ನೂ ಶೋಧಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಯಾರಿಗಾದರೂ ಶೋಧನೆ ಬಂದಾಗ, “ದೇವರು ನನ್ನನ್ನು ಶೋಧಿಸುತ್ತಿದ್ದಾರೆ ಎಂದು ಹೇಳಬಾರದು,” ಏಕೆಂದರೆ ದೇವರು ಕೆಟ್ಟದ್ದರಿಂದ ಶೋಧಿಸಲಾರರು. ಅವರು ಯಾರನ್ನೂ ಶೋಧಿಸುವುದೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಪರಿಕ್ಷಾತ್ ಪಡಲ್ಲ್ಯಾ ತನ್ನಾ ಕೊನ್ ಬಿ ದೆವಾನ್ ಮಾಜಿ ಪರಿಕ್ಷಾ ಕರ್ಲ್ಯಾನ್ ಮನುನ್ ಸಾಂಗುಕ್ ಹೊಯ್ನಾ, ಕಶ್ಯಾಕ್ ಮಟ್ಲ್ಯಾರ್, ದೆವ್ ವಾಯ್ಟಾ ವೈನಾ ಪರಿಕ್ಷಾ ಕರಿನಾ, ತೊ ಅಪ್ನಾಚ್ಯಾ ಅಪ್ನಿಚ್ ಕೊನಾಚಿಬಿ ಪರಿಕ್ಷಾ ಕರಿನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 1:13
9 ತಿಳಿವುಗಳ ಹೋಲಿಕೆ  

ಕಷ್ಟವನ್ನು ಸಹಿಸಿಕೊಳ್ಳುವವನು ಧನ್ಯನು; ಅವನು ಪರಿಶೋಧಿತನಾದ ಮೇಲೆ ಜೀವವೆಂಬ ಜಯಮಾಲೆಯನ್ನು ಹೊಂದುವನು; ಸ್ವಾವಿುಯು ತನ್ನನ್ನು ಪ್ರೀತಿಸುವವರಿಗೆ ಇದನ್ನು ವಾಗ್ದಾನಮಾಡಿದ್ದಾನೆ.


ನನ್ನ ಸಹೋದರರೇ, ನಿಮ್ಮ ನಂಬಿಕೆಗೆ ಆಗುವ ಪರಿಶೋಧನೆಯು ತಾಳ್ಮೆಯನ್ನುಂಟುಮಾಡುತ್ತದೆಂದು ತಿಳಿದು ನೀವು ನಾನಾವಿಧವಾದ ಕಷ್ಟಗಳಲ್ಲಿ ಬಿದ್ದಿರುವಾಗ ಅದನ್ನು ಕೇವಲ ಆನಂದಕರವಾದದ್ದೆಂದು ಎಣಿಸಿರಿ.


ಯೆಹೋವನೇ, ನಾವು ನಿನ್ನ ಮಾರ್ಗದಿಂದ ತಪ್ಪಿ ಅಲೆಯುವಂತೆ ಏಕೆ ಮಾಡುತ್ತೀ? ನಾವು ನಿನಗೆ ಭಯಪಡದ ಹಾಗೆ ನಮ್ಮ ಹೃದಯವನ್ನು ಕಠಿನ ಪಡಿಸುವದೇಕೆ? ನಿನ್ನ ಸೇವಕರ ನಿವಿುತ್ತ ನಿನ್ನ ಬಾಧ್ಯವಾದ ಕುಲಗಳಿಗಾಗಿ ತಿರುಗಿ ಪ್ರಸನ್ನನಾಗು,


ಆ ಮನುಷ್ಯನು - ನನ್ನ ಜೊತೆಯಲ್ಲಿರುವದಕ್ಕೆ ನೀನು ಕೊಟ್ಟ ಸ್ತ್ರೀಯು ಆ ಮರದ ಹಣ್ಣನ್ನು ನನಗೆ ಕೊಟ್ಟಳು; ನಾನು ತಿಂದೆನು ಎಂದು ಹೇಳಿದನು.


ಈ ಸಂಗತಿಗಳು ಆದ ಮೇಲೆ ದೇವರು ಅಬ್ರಹಾಮನನ್ನು ಪರಿಶೋಧಿಸಿದನು. ಹೇಗಂದರೆ ಆತನು ಅವನನ್ನು - ಅಬ್ರಹಾಮನೇ ಎಂದು ಕರೆಯಲು ಅವನು - ಇಗೋ, ಇದ್ದೇನೆ ಅಂದನು.


ಅದಕ್ಕೆ ಯೇಸು - ನಿನ್ನ ದೇವರಾಗಿರುವ ಕರ್ತನನ್ನು ಪರೀಕ್ಷಿಸಬಾರದು ಎಂಬದಾಗಿ ಸಹ ಬರೆದದೆ ಅಂದನು.


ಆದರೆ ಪ್ರತಿಯೊಬ್ಬನೂ ತನ್ನಲ್ಲಿರುವ ಆಶಾಪಾಶದಿಂದ ಎಳೆಯಲ್ಪಟ್ಟು ಮರುಳುಗೊಂಡವನಾಗಿ ಪ್ರೇರೇಪಿಸಲ್ಪಡುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು