Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 1:14 - ಕನ್ನಡ ಸತ್ಯವೇದವು J.V. (BSI)

14 ಆದರೆ ಪ್ರತಿಯೊಬ್ಬನೂ ತನ್ನಲ್ಲಿರುವ ಆಶಾಪಾಶದಿಂದ ಎಳೆಯಲ್ಪಟ್ಟು ಮರುಳುಗೊಂಡವನಾಗಿ ಪ್ರೇರೇಪಿಸಲ್ಪಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಗಳಿಂದ ಸೆಳೆಯಲ್ಪಟ್ಟು ಮರುಳುಗೊಂಡವನಾಗಿ ಶೋಧಿಸಲ್ಪಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಮಾನವನು ಪ್ರಲೋಭನೆಗೆ ಒಳಗಾಗುವುದು ತನ್ನ ದುರಿಚ್ಛೆಯಿಂದಲೇ ಅದು ಅವನನ್ನು ಆಕರ್ಷಿಸಿ ಮರುಳುಗೊಳಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಶೋಧನೆಗೆ ಗುರಿಯಾಗಿರುವವನು ತಾನು ಇಷ್ಟಪಡುವ ಕೆಟ್ಟಕಾರ್ಯಗಳಿಂದಲೇ ಶೋಧನೆಗೆ ಒಳಗಾಗಿದ್ದಾನೆ. ಅವನ ಕೆಟ್ಟ ಆಸೆಗಳೇ ಅವನನ್ನು ದೂರ ಸೆಳೆದು, ಬಿಡದೆ ಹಿಡಿದುಕೊಳ್ಳುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಯಿಂದ ಆಕರ್ಷಿಸಿ ಮರುಳುಗೊಂಡವನಾಗಿ ಶೋಧನೆಗೆ ಒಳಗಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಖರೆ ಹರ್ ಎಕ್ಲೊಬಿ ಅಪ್ಲ್ಯಾ ಸ್ವತಾಚ್ಯಾ ಬುರ್ಶ್ಯಾ ಆಶಾತ್ ಪಡುನ್ ಮಳ್ಳ್ ಹೊವ್ನ್ ಪರಿಕ್ಷಾತ್ ಪಡ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 1:14
24 ತಿಳಿವುಗಳ ಹೋಲಿಕೆ  

ಯೇಸುವಿನಲ್ಲಿರುವ ಸತ್ಯೋಪದೇಶವು ಯಾವದಂದರೆ - ನೀವು ನಿಮ್ಮ ಹಿಂದಿನ ನಡತೆಯನ್ನು ಅನುಸರಿಸದೆ ಪೂರ್ವಸ್ವಭಾವವನ್ನು ತೆಗೆದುಹಾಕಿಬಿಡಬೇಕು; ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟುಹೋಗುವಂಥದು.


ಆದರೆ ಬಾಯೊಳಗಿಂದ ಹೊರಡುವಂಥವುಗಳು ಮನಸ್ಸಿನೊಳಗಿಂದ ಬರುತ್ತವೆ; ಇವೇ ಮನುಷ್ಯನನ್ನು ಹೊಲೆ ಮಾಡುವವು.


ನಿಮ್ಮಲ್ಲಿ ಒಬ್ಬರಾದರೂ ಪಾಪದಿಂದ ಮೋಸಹೋಗಿ ಕಠಿನರಾಗದಂತೆ ಈಹೊತ್ತು ಎಂಬ ಕಾಲವು ಇರುವ ತನಕ ಪ್ರತಿನಿತ್ಯವೂ ಒಬ್ಬರನ್ನೊಬ್ಬರು ಎಚ್ಚರಿಸಿರಿ.


ಅವನು ತಿನ್ನುವದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿತಪ್ಪಿಸಿದ ಕಾರಣ ನನ್ನ ಕೈ ಸುಳ್ಳನ್ನು ಹಿಡಿದಿದೆಯಲ್ಲಾ ಎಂದುಕೊಳ್ಳಲೂ ಆಗದು, ತನ್ನನ್ನು ರಕ್ಷಿಸಿಕೊಳ್ಳಲೂ ಆಗದು.


ಹಾಗಾದರೆ ಹಿತವಾದದ್ದು ನನಗೆ ಮರಣಕ್ಕೆ ಕಾರಣವಾಯಿತೋ? ಹಾಗೆ ಎಂದಿಗೂ ಹೇಳಬಾರದು. ಪಾಪವೇ ಮರಣಕ್ಕೆ ಕಾರಣವಾದದ್ದು; ಅದು ಹಿತವಾದದರ ಮೂಲಕ ನನಗೆ ಮರಣವನ್ನು ಉಂಟುಮಾಡಿದ್ದರಿಂದ ಪಾಪವೇ ಎಂದು ಕಾಣಿಸಿಕೊಂಡಿತು; ಮತ್ತು ಆಜ್ಞೆಯ ಮೂಲಕ ಪಾಪವು ಕೇವಲ ಪಾಪಸ್ವರೂಪವೇ ಎಂದು ಕಾಣಬಂತು.


ನಿನ್ನ ಹೃದಯವನ್ನು ಬಹು ಜಾಗರೂಕತೆಯಿಂದ ಕಾಪಾಡಿಕೋ; ಅದರೊಳಗಿಂದ ಜೀವಧಾರೆಗಳು ಹೊರಡುವವು.


ಆದರೆ ನಾನು ನಿಮಗೆ ಹೇಳುವದೇನಂದರೆ - ಪರಸ್ತ್ರೀಯನ್ನು ನೋಡಿ ಮೋಹಿಸುವ ಪ್ರತಿ ಮನುಷ್ಯನು ಆಗಲೇ ತನ್ನ ಮನಸ್ಸಿನಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದವನಾದನು.


ಹೇಗಂದರೆ ಪಾಪವು ಆಜ್ಞೆಯಿಂದ ಅನುಕೂಲಹೊಂದಿ ನನ್ನನ್ನು ವಂಚಿಸಿ ಆ ಆಜ್ಞೆಯ ಮೂಲಕವೇ ನನ್ನನ್ನು ಕೊಂದಿತು.


ಹೃದಯವು ಮರುಳುಗೊಂಡು ಕೈಯನ್ನು ಬಾಯಿ ಮುದ್ದಾಡಿದ್ದರೆ


ಒಂದು ವೇಳೆ ನನ್ನ ಹೃದಯವು ಪರಸ್ತ್ರೀಯಲ್ಲಿ ಮರುಳುಗೊಂಡು ನಾನು ನೆರೆಯವನ ಬಾಗಲಲ್ಲಿ ಹೊಂಚಿದ್ದರೆ


ಮನುಷ್ಯನನ್ನು ಕೆಡಿಸುವಂಥವುಗಳು ಇವೇ; ಆದರೆ ಕೈತೊಳಕೊಳ್ಳದೆ ಊಟಮಾಡುವದು ಮನುಷ್ಯನನ್ನು ಕೆಡಿಸುವದಿಲ್ಲ ಅಂದನು.


ಮನುಷ್ಯರ ಕೆಟ್ಟತನವು ಭೂವಿುಯ ಮೇಲೆ ಹೆಚ್ಚಾಗಿರುವದನ್ನೂ ಅವರು ಹೃದಯದಲ್ಲಿ ಯೋಚಿಸುವದೆಲ್ಲವು ಯಾವಾಗಲೂ ಬರೀ ಕೆಟ್ಟದ್ದಾಗಿರುವದನ್ನೂ


ಅದರ ಸುವಾಸನೆಯು ಯೆಹೋವನಿಗೆ ಗಮಗವಿುಸಲು ಆತನು ಹೃದಯದೊಳಗೆ - ಮನುಷ್ಯರ ಮನಸ್ಸಂಕಲ್ಪವು ಚಿಕ್ಕಂದಿನಿಂದಲೇ ಕೆಟ್ಟದ್ದು; ಆದರೂ ನಾನು ಇನ್ನು ಮೇಲೆ ಅವರ ನಿವಿುತ್ತವಾಗಿ ಭೂವಿುಯನ್ನು ಶಪಿಸುವದಿಲ್ಲ; ನಾನು ಎಲ್ಲಾ ಜೀವಿಗಳನ್ನೂ ಈಗ ಸಂಹರಿಸಿದಂತೆ ಇನ್ನು ಮೇಲೆ ಸಂಹರಿಸುವದಿಲ್ಲ.


ಇಸ್ರಾಯೇಲೇ, ನೀನು ನಿನ್ನ ಬೆಂಬಲವಾದ ನನಗೆ ತಿರುಗಿಬಿದ್ದದರಿಂದ ನಾಶವಾಗಿದ್ದಿ.


ಆಗ ಸ್ತ್ರೀಯು - ಆ ಮರದ ಹಣ್ಣು ತಿನ್ನುವದಕ್ಕೆ ಉತ್ತಮವಾಗಿಯೂ ನೋಡುವದಕ್ಕೆ ರಮ್ಯವಾಗಿಯೂ ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು ಅದನ್ನು ತೆಗೆದುಕೊಂಡು ತಿಂದಳು. ಸಂಗಡ ಇದ್ದ ಗಂಡನಿಗೂ ಕೊಡಲು ಅವನೂ ತಿಂದನು.


ಆಗ ದಾವೀದನು ಆಗಲೇ ಋತುಸ್ನಾನಮಾಡಿಕೊಂಡಿದ್ದ ಆಕೆಯನ್ನು ದೂತರ ಮುಖಾಂತರವಾಗಿ ಕರೇಕಳುಹಿಸಿದನು; ಆಕೆಯು ಬರಲು ಆಕೆಯನ್ನು ಕೂಡಿದನು.


ಆಗ ಯೇಸು ಸೈತಾನನಿಂದ ಶೋಧಿಸಲ್ಪಡುವದಕ್ಕಾಗಿ ಆತ್ಮನು ಆತನನ್ನು ಅಡವಿಗೆ ಒಯ್ದನು.


ಯಾವನಾದರೂ ಪಾಪಮಾಡುವದಕ್ಕೆ ಪ್ರೇರೇಪಿಸಲ್ಪಡುವಾಗ - ಈ ಪ್ರೇರಣೆಯು ನನಗೆ ದೇವರಿಂದ ಉಂಟಾಯಿತೆಂದು ಹೇಳಬಾರದು. ದೇವರು ಕೆಟ್ಟದ್ದಕ್ಕೇನೂ ಸಂಬಂಧಪಟ್ಟವನಲ್ಲ; ಆತನು ಯಾರನ್ನೂ ಪಾಪಕ್ಕೆ ಪ್ರೇರೇಪಿಸುವದಿಲ್ಲ.


ಆಮೇಲೆ ಆಶೆಯು ಬಸುರಾಗಿ ಪಾಪವನ್ನು ಹೆರುತ್ತದೆ; ಪಾಪವು ತುಂಬಾ ಬೆಳೆದು ಮರಣವನ್ನು ಹಡೆಯುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು