Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 1:15 - ಕನ್ನಡ ಸತ್ಯವೇದವು J.V. (BSI)

15 ಆಮೇಲೆ ಆಶೆಯು ಬಸುರಾಗಿ ಪಾಪವನ್ನು ಹೆರುತ್ತದೆ; ಪಾಪವು ತುಂಬಾ ಬೆಳೆದು ಮರಣವನ್ನು ಹಡೆಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆ ಮೇಲೆ ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ. ಪಾಪವು ಪೂರ್ಣವಾಗಿ ಬೆಳೆದು ಮರಣವನ್ನು ತರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ದುರಿಚ್ಛೆ ಗರ್ಭಧರಿಸಿ ಪಾಪಕ್ಕೆ ಜನ್ಮವೀಯುತ್ತದೆ; ಪಾಪವು ಪೂರ್ತಿಯಾಗಿ ಬೆಳೆದು ಮರಣವನ್ನು ಹಡೆಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಈ ಆಸೆಗಳು ಅವನಿಂದ ಪಾಪವನ್ನು ಮಾಡಿಸುತ್ತದೆ. ನಂತರ ಪಾಪವು ಬೆಳೆದು ಸಾವನ್ನು ತರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಮೇಲೆ ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ. ಪಾಪವು ಸಂಪೂರ್ಣವಾದ ಮೇಲೆ ಮರಣವನ್ನು ಹೆರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಹೆಚ್ಯಾಮಾನಾ ಬುರ್ಶ್ಯಾಚ್ಯಾ ಅಶೆತ್ ಗರ್ವಾರ್ ಹೊವ್ನ್ ಪಾಪಾಕ್ ಜಲಮ್ ದಿತ್ಯಾತ್, ಮಾನಾ ತೊ ಪಾಪ್ ವಾಡುನ್ ಮೊಟೊ ಹೊವ್ನ್ ಮರ್‍ನಾಕ್ ಜಲಮ್ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 1:15
21 ತಿಳಿವುಗಳ ಹೋಲಿಕೆ  

ನನ್ನ ಶತ್ರುವು ಕೆಡುಕನ್ನು ಹೆರಬೇಕೆಂದು ಪ್ರಸವ ವೇದನೆಯಲ್ಲಿದ್ದಾನೆ; ಅವನು ಹಾನಿಯನ್ನು ಹಡೆಯುವೆನೆಂದು ನೆನಸಿಕೊಂಡರೂ ಶೂನ್ಯವನ್ನೇ ಹೆತ್ತನು ನೋಡಿರಿ.


ಅವರು ಹಿಂಸೆಯನ್ನು ಗರ್ಭಧರಿಸಿ ಶ್ರಮೆಯನ್ನು ಹೆರುವರು, ಅವರ ಹೊಟ್ಟೆಯು ಕಲ್ಪಿಸುವದು ಮೋಸವೇ.


ಒಳ್ಳೇದರ ಕೆಟ್ಟದ್ದರ ಅರುಹನ್ನು ಹುಟ್ಟಿಸುವ ಮರದ ಹಣ್ಣನ್ನು ಮಾತ್ರ ತಿನ್ನಬಾರದು; ತಿಂದ ದಿನ ಸತ್ತೇಹೋಗುವಿ ಎಂದು ವಿಧಿಸಿದನು.


[ಇವರಲ್ಲಿ] ಯಾರೂ ನ್ಯಾಯವಾಗಿ ನ್ಯಾಯಾಸ್ಥಾನಕ್ಕೆ ಹೋಗುವದಿಲ್ಲ, ಯಾರೂ ಸತ್ಯವಾಗಿ ವಾದಿಸುವದಿಲ್ಲ; ಇವರು ಶೂನ್ಯವಾಗಿರುವದನ್ನು ನಂಬಿಕೊಂಡು ಅಬದ್ಧವನ್ನಾಡುತ್ತಾರೆ; ಹಿಂಸೆಯನ್ನು ಗರ್ಭಧರಿಸಿ ಶ್ರಮೆಯನ್ನು ಹೆರುತ್ತಾರೆ.


ಆಗ ಸ್ತ್ರೀಯು - ಆ ಮರದ ಹಣ್ಣು ತಿನ್ನುವದಕ್ಕೆ ಉತ್ತಮವಾಗಿಯೂ ನೋಡುವದಕ್ಕೆ ರಮ್ಯವಾಗಿಯೂ ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು ಅದನ್ನು ತೆಗೆದುಕೊಂಡು ತಿಂದಳು. ಸಂಗಡ ಇದ್ದ ಗಂಡನಿಗೂ ಕೊಡಲು ಅವನೂ ತಿಂದನು.


ಆಮೇಲೆ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತ ಯೂದನೆಂಬವನು ಮಹಾಯಾಜಕರ ಬಳಿಗೆ ಹೋಗಿ -


ದುಷ್ಟರು ಅಂದರೆ ದೇವರನ್ನು ಅಲಕ್ಷ್ಯಮಾಡುವ ಜನಾಂಗಗಳವರೆಲ್ಲಾ ಪಾತಾಳಕ್ಕೆ ಇಳಿದುಹೋಗುವರು.


ಆಗ ದಾವೀದನು ಆಗಲೇ ಋತುಸ್ನಾನಮಾಡಿಕೊಂಡಿದ್ದ ಆಕೆಯನ್ನು ದೂತರ ಮುಖಾಂತರವಾಗಿ ಕರೇಕಳುಹಿಸಿದನು; ಆಕೆಯು ಬರಲು ಆಕೆಯನ್ನು ಕೂಡಿದನು.


ಧರ್ಮನಿರತನಿಗೆ ಜೀವ, ಅಧರ್ಮಾಸಕ್ತನಿಗೆ ಮರಣ.


ನೀವು ಹೊಟ್ಟನ್ನು ಗರ್ಭಧರಿಸಿ ಕೂಳೆಯನ್ನು ಹೆರುವಿರಿ; ನಿಮ್ಮ ಬುಸುಗುಟ್ಟುವಿಕೆಯು ನಿಮ್ಮನ್ನೇ ನುಂಗುವ ಜ್ವಾಲೆಯಾಗುವದು.


ಆದರೆ ನಾನು ನಿಮಗೆ ಹೇಳುವದೇನಂದರೆ - ಪರಸ್ತ್ರೀಯನ್ನು ನೋಡಿ ಮೋಹಿಸುವ ಪ್ರತಿ ಮನುಷ್ಯನು ಆಗಲೇ ತನ್ನ ಮನಸ್ಸಿನಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದವನಾದನು.


ಆದರೆ ಪ್ರತಿಯೊಬ್ಬನೂ ತನ್ನಲ್ಲಿರುವ ಆಶಾಪಾಶದಿಂದ ಎಳೆಯಲ್ಪಟ್ಟು ಮರುಳುಗೊಂಡವನಾಗಿ ಪ್ರೇರೇಪಿಸಲ್ಪಡುತ್ತಾನೆ.


ಆತನು ತನ್ನ ಸುಚಿತ್ತದ ಪ್ರಕಾರ ಸತ್ಯಬೋಧನೆಯ ವಾಕ್ಯದಿಂದ ನಮ್ಮನ್ನು ಹುಟ್ಟಿಸಲಾಗಿ ನಾವು ಆತನ ಸೃಷ್ಟಿಗಳಲ್ಲಿ ಪ್ರಥಮಫಲದಂತಾದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು