ಯಾಕೋಬನು 1:19 - ಕನ್ನಡ ಸತ್ಯವೇದವು J.V. (BSI)19 ನನ್ನ ಪ್ರಿಯ ಸಹೋದರರೇ, ನೀವು ಬಲ್ಲವರು. ಆದರೆ ಪ್ರತಿಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತಾಡುವದರಲ್ಲಿ ನಿಧಾನವಾಗಿಯೂ ಇರಲಿ. ಕೋಪಿಸುವದರಲ್ಲಿಯೂ ನಿಧಾನವಾಗಿರಲಿ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನನ್ನ ಪ್ರಿಯ ಸಹೋದರರೇ, ನೀವು ಇದನ್ನು ಚೆನ್ನಾಗಿ ತಿಳಿದುಕೊಳ್ಳಿರಿ, ಪ್ರತಿಯೊಬ್ಬನೂ ಕಿವಿಗೊಡುವುದರಲ್ಲಿ ಚುರುಕಾಗಿಯೂ, ಮಾತನಾಡುವುದರಲ್ಲಿ ನಿಧಾನವಾಗಿಯೂ ಮತ್ತು ಕೋಪಿಸುವುದರಲ್ಲಿ ನಿಧಾನವಾಗಿಯೂ ಇರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಸಹೋದರರೇ, ಇದನ್ನು ನೆನಪಿನಲ್ಲಿಡಿ; ನಿಮ್ಮಲ್ಲಿ ಪ್ರತಿಯೊಬ್ಬನು ಆಲಿಸುವುದರಲ್ಲಿ ಚುರುಕಾಗಿ, ಮಾತನಾಡುವುದರಲ್ಲಿ ದುಡುಕದೆ, ಸಿಟ್ಟುಗೊಳ್ಳುವುದರಲ್ಲಿ ಸಾವಧಾನವಾಗಿ ಇರಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ನನ್ನ ಸಹೋದರ ಸಹೋದರಿಯರೇ, ಯಾವಾಗಲೂ ಮಾತನಾಡುವುದಕ್ಕಿಂತ ಕೇಳುವುದರಲ್ಲಿ ಆಸಕ್ತರಾಗಿರಿ. ಸುಲಭವಾಗಿ ಕೋಪಗೊಳ್ಳದಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ನನ್ನ ಪ್ರಿಯರೇ ಇದನ್ನು ತಿಳಿಯಿರಿ, ಪ್ರತಿಯೊಬ್ಬನು ಕಿವಿಗೊಡುವುದರಲ್ಲಿ ತೀವ್ರವಾಗಿಯೂ ಮಾತನಾಡುವುದರಲ್ಲಿ ಮತ್ತು ಕೋಪಿಸುವುದರಲ್ಲಿ ನಿಧಾನವಾಗಿಯೂ ಇರಲಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ಮಾಜ್ಯಾ ಪ್ರಿತಿಚ್ಯಾ ಭಾವಾನು ಅನಿ ಭೆನಿಯಾನು, ಹರಿಎಕ್ಲೊಬಿ ಆಯಿಕ್ತಲ್ಲ್ಯಾತ್ ಚುರುಕ್ ಹೊವ್ನ್ ರ್‍ಹಾಂವ್ದಿತ್, ಖರೆ ಬೊಲ್ನ್ಯಾತ್ ಅನಿ ರಾಗ್ ಹೊತಲ್ಯಾತ್ ಸಾವ್ಕಾಸ್ ರ್‍ಹಾಂವ್ದಿತ್. ಅಧ್ಯಾಯವನ್ನು ನೋಡಿ |
ಸಹೋದರರೇ, ಒಬ್ಬರನ್ನೊಬ್ಬರು ನಿಂದಿಸಬೇಡಿರಿ. ಯಾವನಾದರೂ ತನ್ನ ಸಹೋದರನನ್ನು ನಿಂದಿಸಿದರೆ ಅಥವಾ ತನ್ನ ಸಹೋದರನ ವಿಷಯವಾಗಿ ತೀರ್ಪುಮಾಡಿದರೆ ಅವನು ಧರ್ಮಶಾಸ್ತ್ರವನ್ನು ನಿಂದಿಸಿ ಧರ್ಮಶಾಸ್ತ್ರದ ವಿಷಯದಲ್ಲಿ ತೀರ್ಪುಮಾಡಿದ ಹಾಗಾಗುವದು. ಆದರೆ ನೀನು ಧರ್ಮಶಾಸ್ತ್ರದ ವಿಷಯದಲ್ಲಿ ತೀರ್ಪುಮಾಡಿದರೆ ನೀನು ನ್ಯಾಯಾಧಿಪತಿಯೆನಿಸಿಕೊಳ್ಳುವಿಯೇ ಹೊರತು ಅದನ್ನು ಅನುಸರಿಸುವವನಲ್ಲ.