ಯಾಕೋಬನು 1:26 - ಕನ್ನಡ ಸತ್ಯವೇದವು J.V. (BSI)26 ಸದ್ಭಕ್ತನೆಂದೆಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಗೆ ಕಡಿವಾಣವನ್ನು ಹಾಕದೆ ತನ್ನ ಹೃದಯವನ್ನು ಮೋಸಗೊಳಿಸುವವನಾದರೆ ಅವನ ಭಕ್ತಿ ನಿಷ್ಪ್ರಯೋಜನವಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ತನ್ನನ್ನು ಸದ್ಭಕ್ತನೆಂದೆಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಯನ್ನು ಹತೋಟಿಯಲ್ಲಿ ಇಟ್ಟುಕೊಳ್ಳದೆ ತನ್ನ ಹೃದಯವನ್ನು ಮೋಸಗೊಳಿಸುವವನಾದರೆ ಅವನ ಭಕ್ತಿಯು ವ್ಯರ್ಥವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ತಾನು ಸದ್ಭಕ್ತನೆಂದು ಭಾವಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಗೆ ಕಡಿವಾಣ ಹಾಕದಿದ್ದರೆ, ಅಂಥವನ ಭಕ್ತಿ ವ್ಯರ್ಥ. ಅವನು ತನ್ನನ್ನೇ ವಂಚಿಸಿಕೊಳ್ಳುತ್ತಾನಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಸದ್ಭಕ್ತನೆಂದು ತನ್ನ ಬಗ್ಗೆ ಹೇಳಿಕೊಳ್ಳುವವನು ತನ್ನ ನಾಲಿಗೆಗೆ ಕಡಿವಾಣವನ್ನು ಹಾಕದೆಹೋದರೆ ಅವನು ತನ್ನನ್ನು ತಾನೇ ಮೋಸಗೊಳಿಸಿಕೊಂಡಂತಾಗುವುದು. ಅವನ “ಭಕ್ತಿ”ಗೆ ಬೆಲೆಯಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ನಿಮ್ಮಲ್ಲಿ ಭಕ್ತನೆಂದೆಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಗೆ ಕಡಿವಾಣವನ್ನು ಹಾಕದೆ ತನ್ನ ಹೃದಯವನ್ನು ಮೋಸಗೊಳಿಸುವವನಾದರೆ ಅವನ ಭಕ್ತಿ ನಿಷ್ಪ್ರಯೋಜಕವಾಗಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ಕೊನ್ಬಿ ಅಪ್ನಿ ದೆವಸ್ಪಾನಾಚೊ ಮನುನ್ ಚಿಂತ್ತಾ ಹೊಲ್ಲ್ಯಾರ್ ಅನಿ ಅಪ್ಲ್ಯಾಚಿ ಜಿಬಿಲ್ ಸಂಬಾಳುನ್ ಘೆಯ್ನಾ, ತೊ ಅಪ್ನಾಚ್ಯಾ ಅಪ್ನಾಕುಚ್ ಪಸ್ವುನ್ ಘೆತಾ. ತೆಚ್ಯಾ ದೆವುಸ್ಪಾನಾಕ್ ಕಾಯ್ ಬಿ ಕಿಮ್ಮತ್ ನಾ. ಅಧ್ಯಾಯವನ್ನು ನೋಡಿ |