Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 1:4 - ಕನ್ನಡ ಸತ್ಯವೇದವು J.V. (BSI)

4 ಆ ತಾಳ್ಮೆಯು ಸಿದ್ಧಿಗೆ ಬರಲಿ; ಆಗ ನೀವು ಶಿಕ್ಷಿತರೂ ಸರ್ವಸುಗುಣವುಳ್ಳವರೂ ಏನೂ ಕಡಿಮೆಯಿಲ್ಲದವರೂ ಆಗಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆ ತಾಳ್ಮೆಯು ಸಂಪೂರ್ಣವಾಗಿ ನಿಮ್ಮಲ್ಲಿ ಫಲಿಸಲಿ, ಆಗ ನೀವು ಸರ್ವಸುಗುಣಸಂಪನ್ನರೂ, ಪರಿಪೂರ್ಣರೂ, ಯಾವುದಕ್ಕೂ ಕಡಿಮೆಯಿಲ್ಲದವರೂ ಆಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಈ ಸಹನೆ ಸಿದ್ಧಿಗೆ ಬಂದಾಗ ನೀವು ಯಾವ ಕುಂದುಕೊರತೆ ಇಲ್ಲದೆ, ಪರಿಪೂರ್ಣರೂ ಸರ್ವಗುಣ ಸಂಪನ್ನರೂ ಆಗುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ತಾಳ್ಮೆಯು ತನ್ನ ಕಾರ್ಯವನ್ನು ಪೂರೈಸಲಿ. ಆಗ ನೀವು ನಿಷ್ಕಳಂಕರೂ ಮತ್ತು ಪರಿಪೂರ್ಣರೂ ಆಗುವಿರಿ ಮತ್ತು ನಿಮಗೆ ಬೇಕಾದುದೆಲ್ಲವೂ ದೊರೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆ ದೃಢ ನಿಷ್ಠೆಯು ನಿಮ್ಮಲ್ಲಿ ಪೂರ್ಣ ಕ್ರಿಯೆಯನ್ನು ಉಂಟುಮಾಡಿದಾಗ, ಆಗ ನೀವು ಪರಿಪಕ್ವತೆಗೆ ಬಂದವರೂ ಪರಿಪೂರ್ಣರೂ ಯಾವ ಕೊರತೆಯೂ ಇಲ್ಲದವರೂ ಆಗಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತೆ ಸೊಸುನ್ ಘೆತಲೆ ಅಪ್ಲೆ ಕಾಮ್ ಕರುನ್ ಸಾರುಂದಿತ್ ತನ್ನಾ ತುಮಿ ಕಸ್ಲಿಬಿ ಚುಕ್‍ನಸಲ್ಲೆ, ಪರಿಪುರ್ನ್ ಅನಿ ಖಲ್ಯಾಕ್ಬಿ ಕಮಿ ನತ್ತೆ ಹೊವ್ನ್ ರ್‍ಹಾತ್ಯಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 1:4
26 ತಿಳಿವುಗಳ ಹೋಲಿಕೆ  

ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯಪ್ರಭಾವಕ್ಕೆ ಕರೆದ ಕೃಪಾಪೂರ್ಣನಾದ ದೇವರು ತಾನೇ ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯೋಗ್ಯಸ್ಥಿತಿಗೆ ತಂದು ನೆಲೆಗೊಳಿಸಿ ಬಲಪಡಿಸುವನು.


ನಿಮ್ಮ ಸೈರಣೆಯಿಂದ ನಿಮ್ಮ ಪ್ರಾಣಗಳನ್ನು ಪಡಕೊಳ್ಳುವಿರಿ.


ಆದದರಿಂದ ಪರಲೋಕದಲ್ಲಿರುವ ನಿಮ್ಮ ತಂದೆಯು ಯಾವ ದೋಷವೂ ಇಲ್ಲದವನಾಗಿರುವಂತೆ ನೀವೂ ದೋಷವಿಲ್ಲದವರಾಗಿರ್ರಿ.


ಅದರಿಂದ ದೇವರ ಮನುಷ್ಯನು ಪ್ರವೀಣನಾಗಿ ಸಕಲಸತ್ಕಾರ್ಯಕ್ಕೆ ಸನ್ನದ್ಧನಾಗುವನು.


ಅದು ಕ್ಲುಪ್ತಕಾಲದಲ್ಲಿ ನೆರವೇರತಕ್ಕದ್ದು, ಆದರೆ ಪರಿಣಾಮಕ್ಕೆ ತ್ವರೆಪಡುತ್ತದೆ, ಮೋಸಮಾಡದು; ತಡವಾದರೂ ಅದಕ್ಕೆ ಕಾದಿರು; ಅದು ಬಂದೇ ಬರುವದು, ತಾಮಸವಾಗದು.


ನೀವು ತನ್ನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಯನ್ನು ನಿಮಗೆ ಅನುಗ್ರಹಿಸಲಿ. ಆತನು ಯೇಸು ಕ್ರಿಸ್ತನ ಮೂಲಕ ತನಗೆ ಸಮರ್ಪಕವಾದದ್ದನ್ನು ನಮ್ಮಲ್ಲಿ ನಡಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಸ್ತೋತ್ರ. ಆಮೆನ್.


ಒಳ್ಳೇದನ್ನು ಮಾಡುವದರಲ್ಲಿ ಬೇಸರಗೊಳ್ಳದೆ ಇರೋಣ. ಯಾಕಂದರೆ ಮನಗುಂದದಿದ್ದರೆ ತಕ್ಕ ಸಮಯದಲ್ಲಿ ಬೆಳೆಯನ್ನು ಕೊಯ್ಯುವೆವು.


ನಾನು ಯೆಹೋವನಿಗೋಸ್ಕರ ನಿರೀಕ್ಷಿಸಿಯೇ ನಿರೀಕ್ಷಿಸಿದೆನು; ಆತನು ನನ್ನ ಮೊರೆಗೆ ಕಿವಿಗೊಟ್ಟು ಲಕ್ಷಿಸಿದನು.


ಯೆಹೋವನ ಸನ್ನಿಧಿಯಲ್ಲಿ ಶಾಂತನಾಗಿ ಆತನಿಗೋಸ್ಕರ ಕಾದಿರು; ಕುಯುಕ್ತಿಗಳನ್ನು ನೆರವೇರಿಸಿಕೊಂಡು ಅಭಿವೃದ್ಧಿ ಹೊಂದುವವನನ್ನು ನೋಡಿ ಉರಿಗೊಳ್ಳಬೇಡ.


ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುವದುಂಟು. ಒಬ್ಬನು ಮಾತಿನಲ್ಲಿ ತಪ್ಪದಿದ್ದರೆ ಅವನು ಶಿಕ್ಷಿತನೂ ತನ್ನ ದೇಹವನ್ನೆಲ್ಲಾ ಸ್ವಾಧೀನಪಡಿಸಿಕೊಳ್ಳುವದಕ್ಕೆ ಸಮರ್ಥನೂ ಆಗಿದ್ದಾನೆ.


ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲರಿಗೂ ಉದಾರ ಮನಸ್ಸಿನಿಂದ ಕೊಡುವವನಾಗಿದ್ದಾನೆ.


ಆದರೂ ಪ್ರವೀಣರಲ್ಲಿ ಜ್ಞಾನವನ್ನೇ ಹೇಳುತ್ತೇವೆ. ಅದು ಇಹಲೋಕದ ಜ್ಞಾನವಲ್ಲ, ಇಲ್ಲದೆ ಹೋಗುವ ಇಹಲೋಕಾಧಿಕಾರಿಗಳ ಜ್ಞಾನವೂ ಅಲ್ಲ.


ಕ್ರಿಸ್ತ ಯೇಸುವಿನ ದಾಸನಾಗಿರುವ ನಿಮ್ಮ ಊರಿನ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ; ಇವನು ಪ್ರಾರ್ಥನೆ ಮಾಡುವಾಗೆಲ್ಲಾ ನಿಮಗೋಸ್ಕರ ಹೋರಾಡಿ ನೀವು ಪ್ರವೀಣರಾಗಿಯೂ ಎಲ್ಲಾ ವಿಷಯಗಳಲ್ಲಿ ದೇವರ ಚಿತ್ತವನ್ನು ಕುರಿತು ಪೂರ್ಣ ನಿಶ್ಚಯವುಳ್ಳವರಾಗಿಯೂ ನಿಂತಿರಬೇಕೆಂದು ವಿಜ್ಞಾಪನೆ ಮಾಡುತ್ತಾನೆ.


ಮತ್ತೆ ಕೆಲವರು ವಾಕ್ಯವನ್ನು ಕೇಳಿ ಸುಗುಣವುಳ್ಳ ಒಳ್ಳೆಯ ಹೃದಯದಲ್ಲಿ ಇಟ್ಟುಕೊಂಡು ತಾಳ್ಮೆಯಿಂದ ಫಲವನ್ನು ಕೊಡುತ್ತಾರೆ; ಇವರೇ ಬೀಜ ಬಿದ್ದ ಒಳ್ಳೆಯ ನೆಲವಾಗಿರುವವರು.


ಮತ್ತು ನನ್ನ ಹೆಸರಿನ ನಿವಿುತ್ತ ನಿಮ್ಮನ್ನು ಎಲ್ಲರೂ ಹಗೆಮಾಡುವರು. ಆದರೆ ಕಡೇವರೆಗೂ ತಾಳುವವನು ರಕ್ಷಣೆಹೊಂದುವನು.


ಹೀಗಾದರೂ ಶಿಷ್ಟನು ತನ್ನ ಮಾರ್ಗವನ್ನೇ ಹಿಡಿದು ನಡೆಯುವನು, ಶುದ್ಧಹಸ್ತನು ಬಲಗೊಳ್ಳುತ್ತಲೇ ಇರುವನು.


ಜ್ಞಾನವೆಂಬಾಕೆಯು ಶ್ರೇಷ್ಠಳು ಎಂದು ನೀನು ಭಾವಿಸಿದರೆ ಆಕೆಯು ನಿನ್ನನ್ನು ಉನ್ನತಿಗೆ ತರುವಳು; ಆಕೆಯನ್ನು ಅಪ್ಪಿಕೊಂಡರೆ ನಿನ್ನನ್ನು ಘನಪಡಿಸುವಳು.


ಇವುಗಳಿಲ್ಲದವನು ಕುರುಡನಾಗಿದ್ದಾನೆ; ಅವನು ದೂರದೃಷ್ಟಿಯಿಲ್ಲದವನಾಗಿದ್ದು ತನ್ನ ಹಿಂದಣ ಪಾಪಗಳು ಪರಿಹಾರವಾಗಿ ತಾನು ಶುದ್ಧನಾದದ್ದನ್ನು ಮರೆತುಬಿಟ್ಟಿದ್ದಾನೆ.


ನಾನು ಅವರಲ್ಲಿಯೂ ನೀನು ನನ್ನಲ್ಲಿಯೂ ಇರಲಾಗಿ ಅವರ ಐಕ್ಯವು ಪೂರ್ಣಸಿದ್ಧಿಗೆ ಬರುವದರಿಂದ ನೀನು ನನ್ನನ್ನು ಕಳುಹಿಸಿಕೊಟ್ಟಿದ್ದೀ ಎಂದೂ ನೀನು ನನ್ನನ್ನು ಪ್ರೀತಿಸಿದಂತೆ ಅವರನ್ನೂ ಪ್ರೀತಿಸಿದ್ದೀ ಎಂದೂ ಲೋಕಕ್ಕೆ ತಿಳಿದುಬರುವದು.


ಯೇಸು ಅದನ್ನು ಕೇಳಿ ಅವನಿಗೆ - ಇನ್ನೂ ನಿನಗೆ ಒಂದು ಕಡಿಮೆಯಾಗಿದೆ; ನಿನ್ನ ಬದುಕನ್ನೆಲ್ಲಾ ಮಾರಿ ಬಡವರಿಗೆ ಹಂಚಿಕೊಡು; ಪರಲೋಕದಲ್ಲಿ ನಿನಗೆ ಸಂಪತ್ತಿರುವದು; ನೀನು ಬಂದು ನನ್ನನ್ನು ಹಿಂಬಾಲಿಸು ಎಂದು ಹೇಳಿದನು.


ಯೇಸು ಅವನನ್ನು ದೃಷ್ಟಿಸಿನೋಡಿ ಪ್ರೀತಿಸಿ ಅವನಿಗೆ - ನಿನಗೆ ಒಂದು ಕಡಿಮೆಯಾಗಿದೆ; ಹೋಗು, ನಿನ್ನ ಬದುಕನ್ನೆಲ್ಲಾ ಮಾರಿ ಬಡವರಿಗೆ ಕೊಡು; ಪರಲೋಕದಲ್ಲಿ ನಿನಗೆ ಸಂಪತ್ತಿರುವದು; ನೀನು ಬಂದು ನನ್ನನ್ನು ಹಿಂಬಾಲಿಸು ಎಂದು ಹೇಳಿದನು.


ಆ ಯೌವನಸ್ಥನು ಆತನನ್ನು - ಇವೆಲ್ಲಕ್ಕೂ ಸರಿಯಾಗಿ ನಡಕೊಂಡಿದ್ದೇನೆ; ಇನ್ನೇನು ಕಡಿಮೆಯಾಗಿರಬಹುದು? ಎಂದು ಕೇಳಲು,


ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಪರಿಪೂರ್ಣವಾಗಿ ಪವಿತ್ರಮಾಡಲಿ. ನಮ್ಮ ಕರ್ತನಾದ ಯೇಸು ಕ್ರಿಸ್ತನು ಪ್ರತ್ಯಕ್ಷನಾದಾಗ ನಿಮ್ಮ ಆತ್ಮಪ್ರಾಣಶರೀರಗಳು ದೋಷವಿಲ್ಲದೆ ಸಂಪೂರ್ಣವಾಗಿ ಕಾಣಿಸುವಂತೆ ಕಾಪಾಡಲ್ಪಡಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು