ಯಾಕೋಬನು 1:5 - ಕನ್ನಡ ಸತ್ಯವೇದವು J.V. (BSI)5 ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲರಿಗೂ ಉದಾರ ಮನಸ್ಸಿನಿಂದ ಕೊಡುವವನಾಗಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನಿಮ್ಮಲ್ಲಿ ಯಾರಿಗಾದರು ಜ್ಞಾನದ ಕೊರತೆಯಿರುವುದಾದರೆ ಅವರು ದೇವರನ್ನು ಬೇಡಿಕೊಳ್ಳಲಿ, ಅದು ಅವರಿಗೆ ದೊರಕುವುದು. ಯಾಕೆಂದರೆ ದೇವರು ಹಂಗಿಸದೆ ಎಲ್ಲರಿಗೂ ಉದಾರವಾಗಿ ಕೊಡುವಾತನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನಿಮ್ಮಲ್ಲಿ ಯಾರಿಗಾದರೂ ಜ್ಞಾನದ ಕೊರತೆಯಿದ್ದರೆ ಅಂಥವನು ದೇವರಲ್ಲಿ ಬೇಡಿಕೊಳ್ಳಲಿ. ಯಾರನ್ನೂ ತಿರಸ್ಕರಿಸದೆ ಎಲ್ಲರಿಗೂ ಯಥೇಚ್ಛವಾಗಿ ನೀಡುವ ದೇವರು, ಅವನಿಗೆ ಜ್ಞಾನವನ್ನು ದಯಪಾಲಿಸುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆದರೆ ನಿಮ್ಮಲ್ಲಿ ಯಾರಿಗಾದರೂ ಜ್ಞಾನವು ಬೇಕಾಗಿದ್ದರೆ ಅಂಥವರು ದೇವರಲ್ಲಿ ಕೇಳಿಕೊಳ್ಳಲಿ. ದೇವರು ಉದಾರಿಯಾಗಿರುವುದರಿಂದ ಮತ್ತು ಎಲ್ಲಾ ಜನರಿಗೆ ಸಂತೋಷದಿಂದ ಕೊಡುವುದರಿಂದ ನಿಮಗೆ ಜ್ಞಾನವನ್ನು ದಯಪಾಲಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನಿಮ್ಮಲ್ಲಿ ಯಾರಿಗಾದರೂ ಜ್ಞಾನ ಕಡಿಮೆಯಾಗಿದ್ದರೆ, ಅವರು ದೇವರನ್ನು ಕೇಳಿಕೊಳ್ಳಲಿ, ಅದು ಅವರಿಗೆ ದೊರಕುವುದು. ದೇವರು ತಪ್ಪು ಕಂಡುಹಿಡಿಯದೆ ಎಲ್ಲರಿಗೂ ಉದಾರಮನಸ್ಸಿನಿಂದ ಕೊಡುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ಖರೆ ತುಮ್ಚ್ಯಾತ್ಲ್ಯಾ ಕೊನಾಕ್ ತರಿಬಿ ಬುದ್ದ್ ಕಮ್ಮಿ ಹೊಲ್ಲಿ ರ್‍ಹಾಲ್ಯಾರ್ ತೊ ದೆವಾಕ್ಡೆ ಮಾಗುಂದಿತ್, ತೆ ತೆಕಾ ಗಾವ್ತಾ. ದೆವ್ ಮುಲಾಜೊ ಬಗಿನಸ್ತಾನಾ ಸಗ್ಳ್ಯಾಕ್ನಿ ಬರ್‍ಯಾ ಮನಾನ್ ದಿತಲೊ ಹೊವ್ನ್ ಹಾಯ್. ಅಧ್ಯಾಯವನ್ನು ನೋಡಿ |