Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 1:6 - ಕನ್ನಡ ಸತ್ಯವೇದವು J.V. (BSI)

6 ಸ್ವಲ್ಪವೂ ಸಂದೇಹಪಡದೆ ನಂಬಿಕೆಯಿಟ್ಟು ಕೇಳಿಕೊಳ್ಳಬೇಕು. ಸಂದೇಹಪಡುವವನೋ ಗಾಳಿಯಿಂದ ಬಡಿಯಲ್ಪಟ್ಟ ಸಮುದ್ರದ ತೆರೆಯಂತೆ ಅಲೆಯುತ್ತಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದರೆ ದೇವರ ಬಳಿ ಬೇಡುವವನು ಸ್ವಲ್ಪವೂ ಸಂದೇಹಪಡದೆ ನಂಬಿಕೆಯಿಂದ ಬೇಡಿಕೊಳ್ಳಲಿ. ಸಂದೇಹಪಡುವವನು ಗಾಳಿಯಿಂದ ಬಡಿಯಲ್ಪಟ್ಟ ಸಮುದ್ರದ ಅಲೆಯಂತೆ ಅತ್ತಿತ್ತ ಅಲೆಯುತ್ತಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆದರೆ ಬೇಡುವವನು ವಿಶ್ವಾಸದಿಂದ ಬೇಡಲಿ. ಸಂಶಯಕ್ಕೆ ಎಡೆಕೊಡದಿರಲಿ. ಸಂಶಯಕ್ಕೀಡಾಗುವವನ ಪರಿಸ್ಥಿತಿಯಾದರೋ ಬಿರುಗಾಳಿಯ ಬಡಿತಕ್ಕೆ ಸಿಕ್ಕಿದ ಸಮುದ್ರದ ಅಲೆಯಂತೆ ತುಯ್ದಾಡುತ್ತಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದರೆ ನೀವು ದೇವರನ್ನು ಕೇಳಿಕೊಳ್ಳುವಾಗ ಆತನಲ್ಲಿ ನಿಮಗೆ ನಂಬಿಕೆಯಿರಬೇಕು. ದೇವರ ಬಗ್ಗೆ ಸಂದೇಹಪಡದಿರಿ. ಸಂದೇಹಪಡುವವನು ಸಾಗರದಲ್ಲಿನ ಅಲೆಯಂತಿದ್ದಾನೆ. ಗಾಳಿಯು ಬೀಸಿದಾಗ ಅಲೆಯು ಮೇಲೆದ್ದು ಬೀಳುತ್ತದೆ. ಸಂದೇಹಪಡುವವನು ಆ ಅಲೆಯಂತಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನೀವು ಕೇಳಿಕೊಂಡಾಗ ಸ್ವಲ್ಪವೂ ಸಂದೇಹ ಪಡದೆ ನಂಬಿಕೆಯಿಂದ ಕೇಳಿಕೊಳ್ಳಿರಿ. ಏಕೆಂದರೆ ಸಂದೇಹ ಪಡುವವನು ಬಿರುಗಾಳಿಯ ಬಡಿತಕ್ಕೆ ಒಳಗಾದ ಸಮುದ್ರದ ತೆರೆಯಂತೆ ಅಲೆದಾಡುತ್ತಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಖರೆ ಉಲ್ಲೊಬಿ ಸಂಶೆವ್ ನಸ್ತಾನಾ ವಿಶ್ವಾಸಾನ್ ಮಾಗುಂದಿತ್, ಕಶ್ಯಾಕ್ ಮಟ್ಲ್ಯಾರ್ ಸಂಶೆವ್ ಕರ್ತಲೊ, ಸಂಮುದರಾತ್ ವಾರ್‍ಯಾನ್ ಮಾರ್ ಖಾಲ್ಲ್ಯಾ ಲಾಟಾಂಚ್ಯಾ ಸಾರ್ಕೊ ಫಿರುನ್ಗೆತ್‍ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 1:6
14 ತಿಳಿವುಗಳ ಹೋಲಿಕೆ  

ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವದು ಅಸಾಧ್ಯ; ದೇವರ ಬಳಿಗೆ ಬರುವವನು ದೇವರು ಇದ್ದಾನೆ, ಮತ್ತು ತನ್ನನ್ನು ಹುಡುಕುವವರಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬುವದು ಅವಶ್ಯ.


ನಾವು ಇನ್ನು ಮೇಲೆ ಕೂಸುಗಳಾಗಿರಬಾರದು; ದುರ್ಜನರ ವಂಚನೆಗೂ ದುರ್ಬೋಧಕರ ಕುಯುಕ್ತಿಗೂ ಒಳಬಿದ್ದು ನಾನಾ ಉಪದೇಶಗಳಿಂದ ಕಂಗೆಟ್ಟು ಗಾಳಿಯಿಂದ ಅತ್ತಿತ್ತ ನೂಕಿಸಿಕೊಂಡು ಹೋಗುವವರ ಹಾಗಿರಬಾರದು.


ನಮ್ಮ ನಿರೀಕ್ಷೆಯನ್ನು ಕುರಿತು ನಾವು ಮಾಡಿದ ಪ್ರತಿಜ್ಞೆಯನ್ನು ನಿಶ್ಚಂಚಲವಾಗಿ ಪರಿಗ್ರಹಿಸೋಣ; ವಾಗ್ದಾನ ಮಾಡಿದಾತನು ನಂಬಿಗಸ್ತನು.


ನಾನಾವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಬೇಡಿರಿ. ದೇವರ ಕೃಪೆಯನ್ನು ಆತುಕೊಂಡು ಮನಸ್ಸನ್ನು ದೃಢಮಾಡಿಕೊಳ್ಳುವದು ಉತ್ತಮವೇ; ಭೋಜನಪದಾರ್ಥಗಳನ್ನು ವಿಶೇಷಿಸುವದರಿಂದ ಅದು ಆಗುವದಿಲ್ಲ. ಭೋಜನಪದಾರ್ಥಗಳನ್ನು ವಿಶೇಷಿಸಿ ನಡೆದವರು ಏನೂ ಪ್ರಯೋಜನ ಹೊಂದಲಿಲ್ಲ.


ಹೀಗಿರಲಾಗಿ ಪುರುಷರು ಎಲ್ಲಾ ಸ್ಥಳಗಳಲ್ಲಿ ಕೋಪವೂ ವಾಗ್ವಾದವೂ ಇಲ್ಲದವರಾಗಿ ಭಕ್ತಿಪೂರ್ವಕವಾಗಿಯೇ ಕೈಗಳನ್ನೆತ್ತಿ ಪ್ರಾರ್ಥಿಸಬೇಕೆಂದು ಅಪೇಕ್ಷಿಸುತ್ತೇನೆ.


ಇವರು ನೀರಿಲ್ಲದ ಬಾವಿಗಳೂ ಬಿರುಗಾಳಿಯಿಂದ ಬಡಿಸಿಕೊಂಡು ಹಾರಿಹೋಗುವ ಮಂಜೂ ಆಗಿದ್ದಾರೆ; ಇಂಥವರ ಪಾಲಿಗೆ ಕಾರ್ಗತ್ತಲೆ ಇಟ್ಟಿರುವದು.


ಆದರೂ ದಡವನ್ನು ಮೀರಿದ ಪ್ರವಾಹದಂತಿರುವ ನೀನು ಇನ್ನು ಪ್ರಮುಖನ ಸ್ಥಾನದಲ್ಲಿ ಇರುವದಿಲ್ಲ. ನಿನ್ನ ತಂದೆಯ ಹಾಸಿಗೆಯನ್ನು ಹತ್ತಿ ಅದನ್ನು ಹೊಲೆ ಮಾಡಿದಿಯಲ್ಲಾ. ಇವನು ನನ್ನ ಮಂಚವನ್ನು ಹತ್ತಿದನು!


ಅದಕ್ಕೆ ಪೇತ್ರನು - ಸ್ವಾಮೀ, ನೀನೇಯಾದರೆ ನನಗೆ ನೀರಿನ ಮೇಲೆ ನಡೆದು ನಿನ್ನ ಬಳಿಗೆ ಬರುವದಕ್ಕೆ ಅಪ್ಪಣೆಕೊಡು ಅನ್ನಲು ಆತನು - ಬಾ ಅಂದನು.


ನೀನೆದ್ದು ಕೆಳಗಿಳಿದು ಏನೂ ಸಂಶಯಪಡದೆ ಅವರ ಜೊತೆಯಲ್ಲಿ ಹೋಗು, ನಾನೇ ಅವರನ್ನು ಕಳುಹಿಸಿದ್ದೇನೆ ಎಂದು ಹೇಳಿದನು.


ಆ ಮನುಷ್ಯನು ತಾನು ಕರ್ತನಿಂದ ಏನಾದರೂ ಹೊಂದುವೆನೆಂದು ಭಾವಿಸದೆ ಇರಲಿ;


ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ರೋಗಿಯನ್ನು ರಕ್ಷಿಸುವದು; ಕರ್ತನು ಅವನನ್ನು ಎಬ್ಬಿಸುವನು; ಮತ್ತು ಪಾಪಮಾಡಿದವನಾಗಿದ್ದರೆ ಅದು ಪರಿಹಾರವಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು