Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 2:13 - ಕನ್ನಡ ಸತ್ಯವೇದವು J.V. (BSI)

13 ಕರುಣೆತೋರಿಸದೆ ಇರುವವನಿಗೆ ನ್ಯಾಯತೀರ್ಮಾನದಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಮಾನವನ್ನು ಗೆದ್ದು ಹಿಗ್ಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಏಕೆಂದರೆ ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವುದಿಲ್ಲ. ಕರುಣೆಯು ನ್ಯಾಯತೀರ್ಪಿನ ಮೇಲೆ ಜಯ ಹೊಂದುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ದಯೆತೋರದವನಿಗೆ, ದಯೆದಾಕ್ಷಿಣ್ಯವಿಲ್ಲದ ನ್ಯಾಯತೀರ್ಪು ಕಾದಿರುತ್ತದೆ. ನ್ಯಾಯಕ್ಕೂ ಮಿಗಿಲಾಗಿ ವಿಜೃಂಭಿಸುವುದು ದಯೆಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಹೌದು, ಇತರರಿಗೆ ನೀವು ಕರುಣೆ ತೋರಬೇಕು. ಇಲ್ಲವಾದರೆ ದೇವರು ತೀರ್ಪು ನೀಡುವಾಗ ನಿಮಗೂ ಕರುಣೆ ತೋರನು. ಕರುಣೆ ತೋರುವವನು ದೇವರ ನ್ಯಾಯತೀರ್ಪಿನಲ್ಲಿ ಭಯವಿಲ್ಲದೆ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಕರುಣೆ ತೋರಿಸದೆ ಇರುವವರಿಗೆ ಕರುಣೆಯಿಲ್ಲದ ನ್ಯಾಯತೀರ್ಪಾಗುವುದು. ಕರುಣೆವುಳ್ಳವರೋ ನ್ಯಾಯತೀರ್ಪಿನ ಮೇಲೆಯೇ ವಿಜಯವನ್ನು ಸಾಧಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಕಶ್ಯಾಕ್ ಮಟ್ಲ್ಯಾರ್ ದಯಾ ದಾಕ್ವು ನಸಲ್ಲ್ಯಾಕ್ ದವ್‌ಬಿ ದಯಾ ದಾಕ್ವಿನಾ, ದಯಾ ದಾಕ್ವಿನಸಲ್ಲ್ಯಾ ಮಾನ್ಸಾಚಿ ಝಡ್ತಿ ಕರ್ತಾನಾ, ದೆವ್ ದಯಾ ದಾಕ್ವಿನಾ. ದಯಾ ನ್ಯಾಯ್ ತಿರ್ಮಾನಾಚ್ಯಾ ವರ್ತಿ ಇಬೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 2:13
26 ತಿಳಿವುಗಳ ಹೋಲಿಕೆ  

ಕರುಣೆಯುಳ್ಳವರು ಧನ್ಯರು; ಅವರು ಕರುಣೆಹೊಂದುವರು.


ಆದರೆ ನೀವು ಜನರ ತಪ್ಪುಗಳನ್ನು ಕ್ಷವಿುಸದೆಹೋದರೆ ನಿಮ್ಮ ತಂದೆ ಸಹ ನಿಮ್ಮ ತಪ್ಪುಗಳನ್ನು ಕ್ಷವಿುಸುವದಿಲ್ಲ.


ಬಡವನ ಮೊರೆಗೆ ಕಿವಿಮುಚ್ಚಿಕೊಳ್ಳುವವನು ತಾನೇ ಮೊರೆಯಿಡುವಾಗ ಯಾರೂ ಉತ್ತರಕೊಡರು.


ಇದಲ್ಲದೆ ತೀರ್ಪುಮಾಡಬೇಡಿರಿ, ಆಗ ನಿಮಗೂ ತೀರ್ಪಾಗುವದಿಲ್ಲ; ಅಪರಾಧಿಯೆಂದು ನಿರ್ಣಯಿಸಬೇಡಿರಿ, ಆಗ ನಿಮ್ಮನ್ನೂ ಅಪರಾಧಿಗಳೆಂದು ನಿರ್ಣಯಿಸುವದಿಲ್ಲ; ಬಿಡಿಸಿರಿ, ಆಗ ನಿಮ್ಮನ್ನೂ ಬಿಡಿಸುವರು;


ನೀನು ಕೃಪೆಯುಳ್ಳವನಿಗೆ ಕೃಪಾವಂತನೂ ದೋಷವಿಲ್ಲದವನಿಗೆ ನಿರ್ದೋಷಿಯೂ


ನಿನಗೆ ಯಾವ ದೇವರು ಸಮಾನ? ನೀನು ನಿನ್ನ ಸ್ವಾಸ್ತ್ಯದವರಲ್ಲಿ ಉಳಿದವರ ಅಪರಾಧವನ್ನು ಕ್ಷವಿುಸುವವನೂ ಅವರ ದ್ರೋಹವನ್ನು ಲಕ್ಷಿಸದವನೂ ಆಗಿದ್ದೀ; ಹೌದು, ನಮ್ಮ ದೇವರು ನಿತ್ಯವೂ ಕೋಪಿಸುವವನಲ್ಲ, ಕರುಣೆಯೇ ಆತನಿಗೆ ಇಷ್ಟ.


ಕೃಪೆಯೂ ಸತ್ಯವೂ ಒಂದನ್ನೊಂದು ಕೂಡಿರುವವು; ನೀತಿಯೂ ಸಮಾಧಾನವೂ ಮುದ್ದಿಟ್ಟುಕೊಳ್ಳುವವು.


ಹೆಚ್ಚಳಪಡುವವನು ತಾನು ನನ್ನನ್ನು ತಿಳಿದು ನಾನು ಲೋಕದಲ್ಲಿ ಪ್ರೀತಿನೀತಿನ್ಯಾಯಗಳನ್ನು ತೋರ್ಪಡಿಸುವ ಯೆಹೋವನಾಗಿರುವೆನು ಎಂದು ಗ್ರಹಿಸಿಕೊಂಡಿದ್ದೇನೆ ಎಂಬದಕ್ಕೇ ಹೆಚ್ಚಳಪಡಲಿ; ಪ್ರೀತಿನೀತಿನ್ಯಾಯಗಳೇ ನನಗೆ ಆನಂದವೆಂದು ಯೆಹೋವನು ಅನ್ನುತ್ತಾನೆ.


ಆಗ ಅದೋನೀಬೆಜೆಕನು - ನಾನು ಕೈಕಾಲುಗಳ ಹೆಬ್ಬೆರಳುಗಳನ್ನು ಕತ್ತರಿಸಿ ಬಿಟ್ಟ ಎಪ್ಪತ್ತು ಮಂದಿ ಅರಸರು ನನ್ನ ಮೇಜಿನ ಕೆಳಗೆ ಬೀಳುವ ಚೂರುಗಳನ್ನು ಕೂಡಿಸಿಕೊಂಡು ತಿನ್ನುತ್ತಿದ್ದರು; ನಾನು ಅವರಿಗೆ ಮಾಡಿದಂತೆಯೇ ದೇವರು ನನಗೆ ಮಾಡಿದ್ದಾನೆ ಅಂದನು. ಅವರು ಅವನನ್ನು ಯೆರೂಸಲೇವಿುಗೆ ತೆಗೆದುಕೊಂಡು ಬರಲು ಅಲ್ಲಿ ಸತ್ತನು.


ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಲೇಶವಾದರೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವದೇ ನನಗೆ ಸಂತೋಷ. ಇಸ್ರಾಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳನ್ನು ಬಿಡಿರಿ, ಬಿಟ್ಟುಬಿಡಿರಿ; ನೀವು ಸಾಯಲೇಕೆ? ಇದು ಕರ್ತನಾದ ಯೇಹೋವನ ನುಡಿ.


ಆದರೆ ಅವರು ತಮ್ಮತಮ್ಮೊಳಗೆ - ನಾವು ನಮ್ಮ ತಮ್ಮನಿಗೆ ಮಾಡಿದ್ದು ದ್ರೋಹವೇ ಸರಿ; ಅವನು ನಮ್ಮನ್ನು ಬೇಡಿಕೊಂಡಾಗ ನಾವು ಅವನ ಪ್ರಾಣಸಂಕಟವನ್ನು ತಿಳಿದರೂ ಅವನ ಮೊರೆಗೆ ಕಿವಿಗೊಡಲಿಲ್ಲ; ಆ ಕಾರಣದಿಂದಲೇ ಈ ಸಂಕಟವು ನಮಗೆ ಪ್ರಾಪ್ತವಾಗಿದೆ ಎಂದು ಮಾತಾಡಿಕೊಂಡರು.


ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿದ್ದೀರಿ. ಅಗೋ, ಆ ಕೂಲಿ ನಿಮ್ಮ ಮೇಲೆ ಕೂಗಿಕೊಳ್ಳುತ್ತದೆ; ಮತ್ತು ಕೊಯಿದವರ ಕೂಗು ಸಕಲಸೇನಾಧಿಪತಿಯಾಗಿರುವ ಕರ್ತನ ಕಿವಿಗಳಲ್ಲಿ ಬಿದ್ದಿದೆ.


ಆದರೆ ಅಬ್ರಹಾಮನು - ಕಂದಾ, ನೀನು ಆಶಿಸಿದ ಸುಖವನ್ನು ನಿನ್ನ ಜೀವಮಾನದಲ್ಲಿ ಹೊಂದಿದಿ; ಹಾಗೆಯೇ ಲಾಜರನು ಕಷ್ಟವನ್ನು ಹೊಂದಿದನು ಎಂಬದನ್ನು ನೆನಪಿಗೆ ತಂದುಕೋ. ಈಗಲಾದರೋ ಇಲ್ಲಿ ಇವನಿಗೆ ಸಮಾಧಾನ, ಆದರೆ ನಿನಗೆ ಸಂಕಟ.


ಅಲ್ಲಿನ ರೆಂಬೆಗಳು ಒಣಗಿ ಮುರಿದುಹೋಗುವವು, ಹೆಂಗಸರು ಬಂದು ಬೆಂಕಿ ಹಚ್ಚಿ ಉರಿಸುವರು; ಆ ಪ್ರಜೆಯು ಬುದ್ಧಿಹೀನವಾದದ್ದೇ ಸರಿ; ಆದಕಾರಣ ಸೃಷ್ಟಿಸಿದಾತನು ಅದನ್ನು ಕರುಣಿಸನು, ನಿರ್ಮಿಸಿದಾತನು ಅದಕ್ಕೆ ದಯೆತೋರಿಸನು.


ಈಗ ನೀವು ನನ್ನ ಮಾತಿಗೆ ಕಿವಿಗೊಟ್ಟು ನಿಮ್ಮ ಸಹೋದರರಿಂದ ಸೆರೆಯಾಗಿ ತಂದವರನ್ನು ಹಿಂದಕ್ಕೆ ಕಳುಹಿಸಿರಿ; ಯೆಹೋವನ ಕೋಪಾಗ್ನಿಯು ನಿಮ್ಮ ಮೇಲೆ ಉರಿಯುತ್ತಾ ಇದೆ ಅಂದನು.


ಸ್ವಂತ ಲಾಭಕ್ಕಾಗಿ ಬಡವರನ್ನು ಹಿಂಸಿಸುವವನಿಗೂ ಬಲ್ಲಿದರಿಗೆ ಲಂಚಕೊಡುವವನಿಗೂ ಕೊರತೆಯೇ ಗತಿ.


ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ಪರಿಶುದ್ಧವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸಂತೋಷವಾಗಿ ಒಪ್ಪಿಕೊಳ್ಳುವಂಥದು, ಕರುಣೆ ಮುಂತಾದ ಒಳ್ಳೇ ಫಲಗಳಿಂದ ತುಂಬಿರುವಂಥದು ಆಗಿದೆ; ಅದರಲ್ಲಿ ಚಂಚಲವೂ ಕಪಟವೂ ಇಲ್ಲ.


ಅವನು ಆಕೆಯ ಕಾಲುಗಳ ಬಳಿಯಲ್ಲಿ ಬೊಗ್ಗಿಕೊಂಡು ಉರುಳಿ ಬಿದ್ದನು; ಅವನು ಆಕೆಯ ಕಾಲುಗಳ ಬಳಿಯಲ್ಲಿ ಮುದುರಿಕೊಂಡು ಉರುಳಿದನು. ಅವನು ಬಿದ್ದಲ್ಲೇ ಸತ್ತನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು