ಯಾಕೋಬನು 2:18 - ಕನ್ನಡ ಸತ್ಯವೇದವು J.V. (BSI)18 ಹೀಗಲ್ಲವಾದರೆ ಒಬ್ಬ ಮನುಷ್ಯನು - ನಿನಗೆ ನಂಬಿಕೆಯುಂಟು, ನನಗೆ ಕ್ರಿಯೆಗಳುಂಟು, ನಾನು ನನ್ನ ಕ್ರಿಯೆಗಳ ಮುಖಾಂತರ ನನ್ನ ನಂಬಿಕೆಯನ್ನು ನಿನಗೆ ತೋರಿಸುತ್ತೇನೆ; ನೀನು ಕ್ರಿಯೆಗಳಿಲ್ಲದೆ ನಿನ್ನ ನಂಬಿಕೆಯನ್ನು ನನಗೆ ತೋರಿಸು ನೋಡೋಣ ಎಂದು ಹೇಳುವನಲ್ಲವೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆದರೂ ಒಬ್ಬನು; “ನಿನಗೆ ನಂಬಿಕೆಯುಂಟು ಮತ್ತು ನನಗೆ ಕ್ರಿಯೆಗಳುಂಟು” ನೀನು ಕ್ರಿಯೆಗಳಿಲ್ಲದೆ ನಿನ್ನ ನಂಬಿಕೆಯನ್ನು ನನಗೆ ತೋರಿಸು. ನಾನು ನನ್ನ ಕ್ರಿಯೆಗಳ ಮುಖಾಂತರ ನನ್ನ ನಂಬಿಕೆಯನ್ನು ತೋರಿಸುತ್ತೇನೆ ಎಂದು ಹೇಳುವನಲ್ಲವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಒಬ್ಬನು, “ನಿನ್ನಲ್ಲಿ ವಿಶ್ವಾಸವಿದೆ, ನನ್ನಲ್ಲಿ ಸತ್ಕ್ರಿಯೆಗಳಿವೆ,” ಎನ್ನಬಹುದು. ಅಂಥವನಿಗೆ, “ಸತ್ಕ್ರಿಯೆಗಳಿಲ್ಲದ ನಿನ್ನ ವಿಶ್ವಾಸವನ್ನು ನನಗೆ ತೋರಿಸು; ನನ್ನ ಸತ್ಕಾರ್ಯಗಳ ಮೂಲಕ ನನ್ನ ವಿಶ್ವಾಸವನ್ನು ನಿನಗೆ ವ್ಯಕ್ತಪಡಿಸುತ್ತೇನೆ,” ಎಂದು ಉತ್ತರಿಸಬಹುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆದರೆ ಯಾವನಾದರೂ, “ನಿನ್ನಲ್ಲಿ ನಂಬಿಕೆಯಿದೆ; ನನ್ನಲಿ ಕ್ರಿಯೆಗಳಿವೆ” ಎಂದು ವಾದಿಸಬಹುದು. ಅದಕ್ಕೆ ನನ್ನ ಉತ್ತರವೇನೆಂದರೆ ನೀನು ಕ್ರಿಯೆಗಳಿಲ್ಲದೆ ನಿನ್ನ ನಂಬಿಕೆಯನ್ನು ತೋರಿಸಲಾರೆ. ನಾನಾದರೊ ನನ್ನ ಒಳ್ಳೆಯ ಕಾರ್ಯಗಳ ಮೂಲಕ ನನ್ನ ನಂಬಿಕೆಯನ್ನು ನಿನಗೆ ತೋರಿಸುವೆ ಎಂದು ಹೇಳಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆದರೆ ಒಬ್ಬ ಮನುಷ್ಯನು, “ನಿನ್ನಲ್ಲಿ ನಂಬಿಕೆಯಿದೆ, ನನ್ನಲ್ಲಿ ಕ್ರಿಯೆಗಳಿವೆ,” ಎಂದು ವಾದಿಸಬಹುದು. ಅಂಥವನಿಗೆ, “ನೀನು ಕ್ರಿಯೆಗಳಿಲ್ಲದೆ ನಿನ್ನ ನಂಬಿಕೆಯನ್ನು ನನಗೆ ರುಜುಪಡಿಸು. ನಾನು ನನ್ನ ಕ್ರಿಯೆಗಳ ಮುಖಾಂತರ ನನ್ನ ನಂಬಿಕೆಯನ್ನು ನಿನಗೆ ರುಜುಪಡಿಸುತ್ತೇನೆ,” ಎಂದು ಹೇಳಬಹುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ಖರೆ ಕೊನ್‍ಬಿ ಎಕ್ಲೊ ಎಕ್ ಮಾನ್ಸಾಕ್ ವಿಶ್ವಾಸ್ ಹಾಯ್ ಅನಿ ಎಕ್ಲ್ಯಾಕ್ಡೆ ಕಾಮಾ ಹಾತ್, ಮನುನ್ ಮಟ್ಲ್ಯಾರ್, ತೆಕಾ ಮಾಜೊ ಜಬಾಬ್ ಅಸೊ, ಕಾಮಾ ನಸ್ತಾನಾ ವಿಶ್ವಾಸ್ ಅಸಲ್ಲೊ ಕೊನ್ ತರ್ ಎಕ್ಲೊ ಹಾಯ್ ಹೊಲ್ಲ್ಯಾರ್ ಮಾಕಾ ದಾಕ್ವು ಮಿಯಾ ಕಾಮಾಂಚ್ಯಾ ವೈನಾ ಮಾಜೊ ವಿಶ್ವಾಸ್ ತುಕಾ ದಾಕ್ವುತಾ. ಅಧ್ಯಾಯವನ್ನು ನೋಡಿ |