Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 2:7 - ಕನ್ನಡ ಸತ್ಯವೇದವು J.V. (BSI)

7 ನೀವು ಕರೆಸಿಕೊಳ್ಳುವ ಶ್ರೇಷ್ಠವಾದ ನಾಮವನ್ನು ದೂಷಿಸುವವರು ಅವರಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನೀವು ಕರೆಯಲ್ಪಟ್ಟ ಆ ಶ್ರೇಷ್ಠವಾದ ನಾಮವನ್ನು ದೂಷಿಸುವವರು ಅವರಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನೀವು ಯಾರಿಗೆ ಶರಣರಾಗಿದ್ದೀರೋ ಅವರ ಶ್ರೇಷ್ಠ ನಾಮವನ್ನು ದೂಷಿಸುವವರೂ ಸಿರಿವಂತರೇ ಅಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಿಮ್ಮನ್ನು ತನ್ನವರನ್ನಾಗಿ ಮಾಡಿಕೊಂಡಿರುವ ಯೇಸುವಿನ ಶ್ರೇಷ್ಠವಾದ ಹೆಸರಿಗೆ ವಿರುದ್ಧವಾಗಿ ಕೆಟ್ಟಮಾತುಗಳನ್ನು ಆಡುವವರು ಶ್ರೀಮಂತರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನೀವು ಕರೆಸಿಕೊಳ್ಳುವ ಆ ಯೋಗ್ಯವಾದ ನಾಮವನ್ನು ದೂಷಿಸುವವರು ಅವರಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಹಿ ಸಾವ್ಕಾರ್ ಲೊಕಾಚ್ ತುಮ್ಕಾ ಅಪ್ಲಿ ಸ್ವತಾಚಿ ಲೊಕಾ ಕರುನ್ ಘೆಟಲ್ಲ್ಯಾ ಜೆಜುಚ್ಯಾ, ಲೈ ಬರ್‍ಯಾ ನಾವಾಕ್ ವಿರೊದ್ ಹೊವ್ನ್ ಬುರ್ಶೆ ಬೊಲಿನಾತ್ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 2:7
23 ತಿಳಿವುಗಳ ಹೋಲಿಕೆ  

ಅವನನ್ನು ಕಂಡು ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು. ಆಮೇಲೆ ಅವರು ಪೂರಾ ಒಂದು ವರುಷ ಸಭೆಯವರ ಸಂಗಡ ಕೂಡಿದ್ದು ಬಹು ಜನರಿಗೆ ಉಪದೇಶಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಕ್ರೈಸ್ತರೆಂಬ ಹೆಸರು ಮೊದಲು ಬಂತು.


ಯೆಹೋವನು ತನ್ನ ಜನರಿಗೆ ವಿಮೋಚನೆಯನ್ನುಂಟುಮಾಡಿದ್ದಾನೆ; ತನ್ನ ಒಡಂಬಡಿಕೆಯನ್ನು ನಿತ್ಯಕ್ಕೂ ಸ್ಥಾಪಿಸಿದ್ದಾನೆ; ಆತನ ನಾಮವು ಪರಿಶುದ್ಧವೂ ಭಯಂಕರವೂ ಆಗಿದೆ.


ಆತನ ತೊಡೆಯ ಮೇಲಣ ವಸ್ತ್ರದಲ್ಲಿ - ರಾಜಾಧಿರಾಜನೂ ಕರ್ತರ ಕರ್ತನೂ ಎಂಬ ಹೆಸರು ಬರೆದದೆ.


ಆತನು ರಕ್ತಪ್ರೋಕ್ಷಿತವಾದ ವಸ್ತ್ರವನ್ನು ಧರಿಸಿಕೊಂಡಿದ್ದನು. ಆತನಿಗೆ ದೇವರ ವಾಕ್ಯವೆಂದು ಹೆಸರು.


ಎಲ್ಲಾ ಸಭಾಮಂದಿರಗಳಲ್ಲಿಯೂ ನಾನು ಅನೇಕಾವರ್ತಿ ಅವರನ್ನು ದಂಡಿಸಿ ಅವರಿಂದ ದೂಷಣೆಯ ಮಾತುಗಳನ್ನಾಡಿಸುವದಕ್ಕೆ ಪ್ರಯತ್ನಿಸಿದೆನು. ಇದಲ್ಲದೆ ಅವರ ಮೇಲೆ ಬಹು ಕೋಪಾವೇಶವುಳ್ಳವನಾಗಿ ಪರಪಟ್ಟಣಗಳ ತನಕ ಅವರನ್ನು ಹಿಂಸೆಪಡಿಸಿದೆನು.


ಬರಬೇಕಾದ ರಕ್ಷಣೆಯು ಇನ್ನಾರಲ್ಲಿಯೂ ಸಿಕ್ಕುವದಿಲ್ಲ; ಆ ಹೆಸರಿನಿಂದಲೇ ಹೊರತು ಆಕಾಶದ ಕೆಳಗೆ ಮನುಷ್ಯರೊಳಗೆ ಕೊಡಲ್ಪಟ್ಟಿರುವ ಬೇರೆ ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವದಿಲ್ಲ ಎಂದು ಹೇಳಿದನು.


ಆದರೆ ಫರಿಸಾಯರು ಅದನ್ನು ಕೇಳಿ - ಇವನು ದೆವ್ವಗಳ ಒಡೆಯನಾದ ಬೆಲ್ಜೆಬೂಲನ ಸಹಾಯದಿಂದ ದೆವ್ವಗಳನ್ನು ಬಿಡಿಸುತ್ತಾನೇ ಹೊರತು ಬೇರೆ ರೀತಿಯಿಂದ ಬಿಡಿಸುವದಿಲ್ಲ ಅಂದರು.


ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹಡೆಯುವಳು; ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು ಎಂಬದು. ದೇವರು ನಮ್ಮ ಕೂಡ ಇದ್ದಾನೆಂದು ಈ ಹೆಸರಿನ ಅರ್ಥ.


ಅವನ ಕಾಲದಲ್ಲಿ ಯೆಹೂದ್ಯರು ಸುರಕ್ಷಿತರಾಗಿರುವರು, ಇಸ್ರಾಯೇಲ್ಯರು ನೆಮ್ಮದಿಯಾಗಿ ವಾಸಿಸುವರು; ಯೆಹೋವ ಚಿದ್ಕೇನು [ಅಂದರೆ ಯೆಹೋವನೇ ನಮ್ಮ ಸದ್ಧರ್ಮ] ಎಂಬ ಹೆಸರು ಅವನಿಗಾಗುವದು.


ಕರ್ತನಾದ ಯೆಹೋವನು ನಿಮ್ಮನ್ನು ಕೊಂದುಹಾಕುವನು, ನಿಮ್ಮ ಹೆಸರು ನನ್ನ ಆಪ್ತಜನರು ಶಪಿಸುವ ಶಾಪದ ಮಾತಾಗಿಯೇ ಉಳಿಯುವದು; ನಾನು ನನ್ನ ಸೇವಕರಿಗೆ ಹೊಸ ಹೆಸರನ್ನು ಕೊಡುವೆನು.


ಇದರಿಂದ ಕರ್ತನು ತಾನೇ ನಿಮಗೆ ಒಂದು ಗುರುತನ್ನು ಕೊಡುವನು. ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹಡೆದು ಅವನಿಗೆ ಇಮ್ಮಾನುವೇಲ್ ಎಂದು ಹೆಸರಿಡುವಳು.


ನಿನ್ನ ತೈಲವು ಸುಗಂಧ; ನಿನ್ನ ಹೆಸರು ಸುರಿದ ತೈಲದ ಸುಗಂಧದಂತೆ ವ್ಯಾಪಿಸಿರುವದರಿಂದ ತರುಣಿಯರು ನಿನ್ನನ್ನು ಪ್ರೀತಿಸುವರು.


ದೊರೆಯೇ, ಆ ಮೋಸಗಾರನು ಬದುಕಿದ್ದಾಗ ತಾನು ಮೂರು ದಿನದ ಮೇಲೆ ಏಳುತ್ತೇನೆ ಅಂತ ಹೇಳಿದ್ದು ನಮ್ಮ ನೆನಪಿಗೆ ಬಂತು;


ನನ್ನ ಮಹಿಮೆಗಾಗಿ ನಾನು ಸೃಷ್ಟಿಸಿ ರೂಪಿಸಿ ಉಂಟುಮಾಡಿದ ನನ್ನ ಹೆಸರಿನವರೆಲ್ಲರನ್ನೂ ಬರಮಾಡಬೇಕೆಂದು ಅಪ್ಪಣೆಕೊಡುವೆನು.


ಮನುಷ್ಯಜಾತಿಯ ಉಳಿದ ಜನಗಳೂ ಅಂದರೆ ದೇವಜನರೆನಿಸಿಕೊಳ್ಳುವ ಸಕಲ ಜನಾಂಗಗಳೂ ಕರ್ತನನ್ನು ಹುಡುಕುವವರಾಗಿರಬೇಕೆಂದು


ಆದರೆ ಕ್ರೈಸ್ತನಾಗಿ ಬಾಧೆಪಟ್ಟರೆ ಅವನು ನಾಚಿಕೆಪಡದೆ ಆ ಹೆಸರಿನಿಂದಲೇ ದೇವರನ್ನು ಘನಪಡಿಸಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು