Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 3:18 - ಕನ್ನಡ ಸತ್ಯವೇದವು J.V. (BSI)

18 ಸಮಾಧಾನಪಡಿಸುವವರು ಸಮಾಧಾನವೆಂಬ ಬೀಜವನ್ನು ಬಿತ್ತಿ ನೀತಿಯೆಂಬ ಫಲವನ್ನು ಕೊಯ್ಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಸಮಾಧಾನವನ್ನು ಉಂಟುಮಾಡುವವರು ಸಮಾಧಾನವೆಂಬ ಬೀಜವನ್ನು ಬಿತ್ತಿ ನೀತಿಯೆಂಬ ಫಲವನ್ನು ಕೊಯ್ಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಸಮಾಧಾನಪಡಿಸುವವರು ಸಮಾಧಾನವೆಂಬ ಬೀಜವನ್ನು ಬಿತ್ತಿ ದೇವರೊಡನೆ ಸತ್ಸಂಬಂಧವೆಂಬ ಫಲವನ್ನು ಕೊಯ್ಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಶಾಂತಿ ಸ್ಥಾಪಿಸುವುದಕ್ಕಾಗಿ ಸಮಾಧಾನಕರವಾದ ರೀತಿಯಲ್ಲಿ ಕಾರ್ಯ ಮಾಡುವವರು ಯೋಗ್ಯವಾದ ಬದುಕಿನಿಂದ ಬರುವ ಉತ್ತಮ ಫಲಗಳನ್ನು ಪಡೆಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಸಮಾಧಾನ ಪಡಿಸುವವರು ಸಮಾಧಾನವೆಂಬ ಬೀಜವನ್ನು ಬಿತ್ತಿ ನೀತಿಯೆಂಬ ಫಲವನ್ನು ಕೊಯ್ಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಸಮಾದಾನ್ ಹಾನ್ತಲೆ, ಸಮಾದಾನ್ ಮನ್ತಲೆ ಭಿಂಯ್ ಪೆರುನ್, ನಿತಿವಂತ್ಪಾನ್ ಮನ್ತಲೆ ಫಳ್ ಕಮ್ವುನ್ ಘೆತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 3:18
13 ತಿಳಿವುಗಳ ಹೋಲಿಕೆ  

ಸಮಾಧಾನ ಪಡಿಸುವವರು ಧನ್ಯರು; ಅವರು ದೇವರ ಮಕ್ಕಳು ಅನ್ನಿಸಿಕೊಳ್ಳುವರು.


ನೀತಿಯ ಬೀಜವನ್ನು ಬಿತ್ತಿರಿ, ಪ್ರೀತಿಯ ಫಲವನ್ನು ಕೊಯ್ಯಿರಿ, ಗೆಯ್ಯದ ನಿಮ್ಮ ಭೂವಿುಯನ್ನು ಗೆಯ್ಯಿರಿ; ಯೆಹೋವನು ಬಂದು ನಮ್ಮ ಮೇಲೆ ನೀತಿಯನ್ನು ವರ್ಷಿಸಲೆಂದು ಆತನನ್ನು ಶರಣುಹೊಗುವ ಸಮಯವು ಒದಗಿದೆ.


ಸರಳರಾಗಿಯೂ ನಿರ್ಮಲರಾಗಿಯೂ ಯೇಸು ಕ್ರಿಸ್ತನ ಮೂಲಕವಾಗಿರುವ ಸುನೀತಿಯೆಂಬ ಫಲದಿಂದ ತುಂಬಿದವರಾಗಿಯೂ ಕಾಣಿಸಿಕೊಂಡು ದೇವರಿಗೆ ಘನತೆಯನ್ನೂ ಸ್ತೋತ್ರವನ್ನೂ ತರಬೇಕೆಂತಲೂ ಬೇಡಿಕೊಳ್ಳುತ್ತೇನೆ.


ತನ್ನ ಶರೀರಭಾವವನ್ನು ಕುರಿತು ಬಿತ್ತುವವನು ಆ ಭಾವದಿಂದ ನಾಶನವನ್ನು ಕೊಯ್ಯುವನು. ಆತ್ಮನನ್ನು ಕುರಿತು ಬಿತ್ತುವವನು ಆತ್ಮನಿಂದ ನಿತ್ಯಜೀವವನ್ನು ಕೊಯ್ಯುವನು.


ಧರ್ಮಾತ್ಮನ ಫಲ ಜೀವವೃಕ್ಷ; ಜ್ಞಾನಿಯು ಆತ್ಮಗಳನ್ನು ಆಕರ್ಷಿಸುವನು.


ಯಾವ ಶಿಕ್ಷೆಯಾದರೂ ತತ್ಕಾಲಕ್ಕೆ ಸಂತೋಷಕರವಾಗಿ ತೋಚದೆ ದುಃಖಕರವಾಗಿ ತೋಚುತ್ತದೆ; ಆದರೂ ತರುವಾಯ ಅದು ಶಿಕ್ಷೆ ಹೊಂದಿದವರಿಗೆ ನೀತಿಯೆಂಬ ಫಲವನ್ನು ಕೊಟ್ಟು ಮನಸ್ಸಿಗೆ ಸಮಾಧಾನವನ್ನು ಉಂಟುಮಾಡುತ್ತದೆ.


ಅಧರ್ಮಿಯ ಸಂಬಳವು ಜೊಳ್ಳು; ಧರ್ಮವನ್ನು ಬಿತ್ತುವವನ ಲಾಭವು ಗಟ್ಟಿ.


ಮನುಷ್ಯನ ಕೋಪವು ದೇವರಿಗೆ ಮೆಚ್ಚಿಕೆಯಾಗಿರುವ ನೀತಿಗೆ ಅನುಕೂಲವಾಗುವದಿಲ್ಲ.


ಕೊಯ್ಯುವವನಿಗೆ ಈಗಲೇ ಕೂಲಿ ದೊರೆಯುತ್ತದೆ; ಅವನು ನಿತ್ಯಜೀವಕ್ಕೆ ಫಲವನ್ನು ಕೂಡಿಸಿಡುತ್ತಾನೆ; ಹೀಗೆ ಬಿತ್ತುವವನಿಗೂ ಕೊಯ್ಯುವವನಿಗೂ ಕೂಡ ಸಂತೋಷವಾಗುವದು.


ಕುದುರೆಗಳು ಕೋಡುಗಲ್ಲಿನ ಮೇಲೆ ಓಡಾಡುವವೋ; ಅದನ್ನು ಎತ್ತುಗಳಿಂದ ಉಳುವರೋ? ಆದರೆ ನೀವು ನ್ಯಾಯವನ್ನು ವಿಷಮಾಡಿ ಧರ್ಮದ ಸುಫಲವನ್ನು ಕಹಿಗೆ ತಂದಿರಲ್ಲಾ.


ಧನವನ್ನೇ ನಂಬಿದವನು ಬಿದ್ದು ಹೋಗುವನು; ಸದ್ಧರ್ಮಿಯು ಕುಡಿಯ ಹಾಗೆ ಚಿಗುರುವನು.


ಮುಪ್ಪಿನಲ್ಲಿಯೂ ಫಲಿಸುವರು; ಪುಷ್ಟಿಯಾಗಿದ್ದು ಶೋಭಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು