ಯಾಕೋಬನು 3:6 - ಕನ್ನಡ ಸತ್ಯವೇದವು J.V. (BSI)6 ಎಷ್ಟು ಕೊಂಚ ಕಿಚ್ಚು ಎಷ್ಟು ದೊಡ್ಡ ಕಾಡನ್ನು ಉರಿಸುತ್ತದೆ ನೋಡಿರಿ. ನಾಲಿಗೆಯೂ ಕಿಚ್ಚೇ. ನಾಲಿಗೆಯು ಅಧರ್ಮಲೋಕರೂಪವಾಗಿ ನಮ್ಮ ಅಂಗಗಳ ನಡುವೆ ಇಟ್ಟದೆ. ಅದು ದೇಹವನ್ನೆಲ್ಲಾ ಕೆಡಿಸುತ್ತದೆ. ತಾನೇ ನರಕದಿಂದ ಬೆಂಕಿಹತ್ತಿಸಿಕೊಳ್ಳುತ್ತಾ ಪ್ರಪಂಚವೆಂಬ ಚಕ್ರಕ್ಕೆ ಬೆಂಕಿಹಚ್ಚುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನಾಲಿಗೆಯೂ ಸಹ ಬೆಂಕಿಯೇ. ನಾಲಿಗೆಯೂ ಅಧರ್ಮ ಲೋಕರೂಪವಾಗಿ ನಮ್ಮ ಅಂಗಗಳ ನಡುವೆ ಇಡಲ್ಪಟ್ಟಿದೆ. ಅದು ದೇಹವನ್ನೆಲ್ಲಾ ಕೆಡಿಸುತ್ತದೆ. ತಾನೇ ನರಕವೆಂಬ ಬೆಂಕಿ ಹೊತ್ತಿಸಿಕೊಳ್ಳುತ್ತಾ ಇಡೀ ಬಾಳಿಗೆ ಬೆಂಕಿ ಹಚ್ಚುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನಾಲಿಗೆಯು ಆ ಬೆಂಕಿಯ ಕಿಡಿಯಂತೆ. ಅದು ಅಧರ್ಮಲೋಕದ ಪ್ರತೀಕ. ಅಂಗಾಂಗಗಳ ನಡುವೆ ಇದ್ದು ಇಡೀ ಶರೀರವನ್ನು ಮಲಿನಗೊಳಿಸುತ್ತದೆ. ನರಕಾಗ್ನಿಯಿಂದ ಹೊತ್ತಿಕೊಂಡು ಅದು ಬಾಳಿನ ಚಕ್ರಕ್ಕೆ ಬೆಂಕಿಯನ್ನು ಹಚ್ಚುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನಾಲಿಗೆಯು ಬೆಂಕಿಯ ಕಿಡಿಯಂತೆ ನಮ್ಮ ದೇಹದ ಭಾಗಗಳಲ್ಲಿ ಅದು ಕೆಟ್ಟ ಲೋಕದಂತಿದೆ. ಹೇಗೆಂದರೆ, ನಾಲಿಗೆಯು ನಮ್ಮ ದೇಹದಲ್ಲೆಲ್ಲಾ ಕೆಟ್ಟತನವನ್ನು ಹರಡುತ್ತದೆ. ನಮ್ಮ ಜೀವಿತದ ಮೇಲೆಲ್ಲಾ ಪ್ರಭಾವ ಬೀರುವ ಬೆಂಕಿಯನ್ನು ಅದು ನರಕದಿಂದ ಪಡೆದು ಹೊತ್ತಿಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನಮ್ಮ ದೇಹದ ಅಂಗಗಳಲ್ಲಿ ನಾಲಿಗೆಯು ಸಹ ಬೆಂಕಿಯೂ ದುಷ್ಟ ಲೋಕವೂ ಆಗಿದೆ. ಹೀಗೆ ನಾಲಿಗೆಯು ನಮ್ಮ ಅಂಗಗಳಲ್ಲಿ ಇದ್ದು, ಇಡೀ ದೇಹವನ್ನೆಲ್ಲಾ ಮಲಿನಗೊಳಿಸುತ್ತದೆ. ಅದು ನರಕದ ಬೆಂಕಿಯಿಂದ ಹೊತ್ತಿಕೊಂಡು, ಮಾನವರ ಇಡೀ ಜೀವನಕ್ಕೆ ಬೆಂಕಿ ಹಚ್ಚುವದಾಗಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ತಸೆಚ್ ಜಿಬಿಲ್‌ಬಿ ಆಗ್ ಹೊವ್ನ್ ಹಾಯ್, ಜಿಬಿಲ್ ಎಕ್ ಬರ್‍ಯಾ ವಾಟೆನ್ ಚಲಿನಸಲ್ಲ್ಯಾ ಜಗಾಚ್ಯಾ ಸಾರ್ಕೆ ಅಮ್ಚ್ಯಾ ಆಂಗಾಚ್ಯಾ ಮದ್ದಿ ಥವಲ್ಲಿ ಹಾಯ್, ತಿ ಸಗ್ಳ್ಯಾ ಆಂಗಾಕುಚ್ ಹಾಳ್ ಘಾಲ್ತಾ ಅನಿ ನರಕ್ ಮನ್ತಲ್ಯಾ ಆಗಿತ್ ಅಪ್ನಿಚ್ ಪೆಟುನ್ಗೆತ್ ಸಗ್ಳ್ಯಾ ಜಿವನಾಕ್ ಆಗ್ ಲಾವ್ತಾ. ಅಧ್ಯಾಯವನ್ನು ನೋಡಿ |