Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 3:8 - ಕನ್ನಡ ಸತ್ಯವೇದವು J.V. (BSI)

8 ಆದರೆ ನಾಲಿಗೆಯನ್ನು ಯಾವ ಮಾನವನೂ ಹತೋಟಿಗೆ ತರಲಾರನು. ಅದು ಸುಮ್ಮನಿರಲಾರದ ಕೆಡುಕಾಗಿದೆ; ಮರಣಕರವಾದ ವಿಷದಿಂದ ತುಂಬಿ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದರೆ ನಾಲಿಗೆಯನ್ನು ಯಾವ ಮಾನವನೂ ಹತೋಟಿಗೆ ತರಲಾರನು. ಅದು ಸುಮ್ಮನಿರಲಾರದ ಕೆಡುಕಾಗಿದೆ. ಮರಣಕರವಾದ ವಿಷದಿಂದ ತುಂಬಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆದರೆ ನಾಲಿಗೆಯನ್ನಾದರೋ ಹತೋಟಿಗೆ ತರಲು ಯಾರಿಗೂ ಸಾಧ್ಯವಿಲ್ಲ. ಅದು ಸತತ ಕೇಡನ್ನುಂಟುಮಾಡುವ ಕಿಡಿ; ಮೃತ್ಯುಮಾರಕ ವಿಷಕೊಂಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದರೆ ಯಾರೂ ನಾಲಿಗೆಯನ್ನು ಹತೋಟಿಗೆ ತಂದಿಲ್ಲ. ಅದು ಕ್ರೂರವಾದದ್ದೂ ಕೆಟ್ಟದ್ದೂ ಆಗಿದೆ. ಅದು ಮರಣಕರವಾದ ವಿಷವನ್ನು ತುಂಬಿಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದರೆ ನಾಲಿಗೆಯನ್ನು ಯಾವ ಮಾನವನೂ ಹತೋಟಿಗೆ ತರಲಾರನು. ಅದು ಸ್ವಾಧೀನವಾಗದ ಕೆಡುಕಾಗಿದೆ. ಮರಣಕರವಾದ ವಿಷದಿಂದ ತುಂಬಿಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಖರೆ ಜಿಬ್ಲಿಕ್ ಹತೊಟಿಕ್ ಥವ್ನ್ ಘೆವ್ಕ್ ಕೊನಾಕ್‌ಬಿ ಹೊಯ್ನಾ. ತಿ ಜಿಂವ್ ಕಾಡ್ತಲ್ಯಾ ವಿಶ್ಯಾನ್ ಭರಲ್ಲಿ ಹಾಯ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 3:8
13 ತಿಳಿವುಗಳ ಹೋಲಿಕೆ  

ಅವರ ಗಂಟಲು ತೆರೆದಿರುವ ಸಮಾಧಿಯಾಗಿದೆ. ಅವರು ನಾಲಿಗೆಯಿಂದ ವಂಚನೆಯ ಮಾತುಗಳನ್ನಾಡುತ್ತಾರೆ; ಅವರ ತುಟಿಗಳ ಹಿಂದೆ ಹಾವಿನ ವಿಷವದೆ.


ತಮ್ಮ ನಾಲಿಗೆಯನ್ನು ಸರ್ಪದಂತೆ ಹದಮಾಡಿದ್ದಾರೆ; ಅವರ ತುಟಿಗಳ ಹಿಂದೆ ಹಾವಿನ ವಿಷವದೆ. ಸೆಲಾ.


ಎಷ್ಟು ಕೊಂಚ ಕಿಚ್ಚು ಎಷ್ಟು ದೊಡ್ಡ ಕಾಡನ್ನು ಉರಿಸುತ್ತದೆ ನೋಡಿರಿ. ನಾಲಿಗೆಯೂ ಕಿಚ್ಚೇ. ನಾಲಿಗೆಯು ಅಧರ್ಮಲೋಕರೂಪವಾಗಿ ನಮ್ಮ ಅಂಗಗಳ ನಡುವೆ ಇಟ್ಟದೆ. ಅದು ದೇಹವನ್ನೆಲ್ಲಾ ಕೆಡಿಸುತ್ತದೆ. ತಾನೇ ನರಕದಿಂದ ಬೆಂಕಿಹತ್ತಿಸಿಕೊಳ್ಳುತ್ತಾ ಪ್ರಪಂಚವೆಂಬ ಚಕ್ರಕ್ಕೆ ಬೆಂಕಿಹಚ್ಚುತ್ತದೆ.


ಅವನ ಬಾಯಿ ಬೆಣ್ಣೆಯಂತೆ ನುಣುಪು; ಹೃದಯವೋ ಕಲಹಮಯವೇ. ಅವನ ನುಡಿಗಳು ಎಣ್ಣೆಗಿಂತ ನಯವಾಗಿದ್ದರೂ ಬಿಚ್ಚುಕತ್ತಿಗಳೇ ಸರಿ.


ಸಿಂಹಗಳ ಮಧ್ಯದಲ್ಲಿ ಸಿಕ್ಕಿದ್ದೇನೆ; ಬೆಂಕಿಕಾರುವ ಮನುಷ್ಯರ ನಡುವೆ ಬಿದ್ದಿದ್ದೇನೆ. ಅವರ ಹಲ್ಲುಗಳು ಶಸ್ತ್ರಬಾಣಗಳು; ನಾಲಿಗೆಗಳು ಹದವಾದ ಕತ್ತಿಗಳೇ.


ಇಗೋ, ಅವರ ಬಾಯಿಗಳು ಎಷ್ಟೋ ಮಾತುಗಳನ್ನು ಕಕ್ಕುತ್ತವೆ; ಅವೆಲ್ಲಾ ಕತ್ತಿಗಳೇ. ನಮ್ಮನ್ನು ಕೇಳುವವರು ಯಾರು ಅಂದುಕೊಳ್ಳುತ್ತಾರೆ.


ಅವರು ಸರ್ಪದಂತೆ ವಿಷಭರಿತರು.


ಮಂತ್ರಿಸಿ ತಡೆಯುವದರೊಳಗಾಗಿ ಹಾವು ಕಚ್ಚಿದರೆ ಮಂತ್ರಿಸುವವನಿಗೆ ಏನು ಪ್ರಯೋಜನ?


ಅದರ ರಸ ಸರ್ಪವಿಷದಂತೆ ಮರಣಕರವಾದದ್ದು.


ಭೂಲೋಕದವರನ್ನೆಲ್ಲಾ ಮರುಳುಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾತನ ಸರ್ಪವು ದೊಬ್ಬಲ್ಪಟ್ಟು ಭೂವಿುಗೆ ಬಿದ್ದನು;


ವಕ್ರಹೃದಯನು ಶುಭವನ್ನು ಪಡೆಯನು; ಕೆಟ್ಟನಾಲಿಗೆಯವನು ವಿಪತ್ತಿಗೆ ಸಿಕ್ಕಿಬೀಳುವನು.


ನರಜಾತಿಯು ಸಕಲಜಾತಿಯ ಮೃಗ ಪಕ್ಷಿ ಕ್ರಿವಿು ಜಲಚರಗಳನ್ನೂ ಹತೋಟಿಗೆ ತರುವದುಂಟು ಮತ್ತು ತಂದದ್ದುಂಟು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು