Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 4:12 - ಕನ್ನಡ ಸತ್ಯವೇದವು J.V. (BSI)

12 ನ್ಯಾಯವನ್ನು ವಿಧಿಸಿದ ನ್ಯಾಯಾಧಿಪತಿ ಒಬ್ಬನೇ; ಆತನೇ ಉಳಿಸುವದಕ್ಕೂ ನಾಶ ಮಾಡುವದಕ್ಕೂ ಶಕ್ತನು. ಹೀಗಿರುವಾಗ ನಿನ್ನ ನೆರೆಯವನ ವಿಷಯದಲ್ಲಿ ತೀರ್ಪು ಮಾಡುವದಕ್ಕೆ ನೀನು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಧರ್ಮಶಾಸ್ತ್ರವನ್ನು ಕೊಟ್ಟಂಥ ನ್ಯಾಯಾಧಿಪತಿ ಒಬ್ಬನೇ; ಆತನೇ ಉಳಿಸುವುದಕ್ಕೂ ನಾಶಮಾಡುವುದಕ್ಕೂ ಸಮರ್ಥನು. ಹೀಗಿರುವಾಗ ನಿನ್ನ ನೆರೆಯವನ ವಿಷಯದಲ್ಲಿ ತೀರ್ಪುಮಾಡುವುದಕ್ಕೆ ನೀನು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನ್ಯಾಯವಿಧಿಗಳನ್ನು ಕೊಟ್ಟವರೂ ನ್ಯಾಯಾಧಿಪತಿಯೂ ಒಬ್ಬರೇ; ಅವರೇ ಉದ್ಧಾರಮಾಡುವುದಕ್ಕೂ ವಿನಾಶಗೊಳಿಸುವುದಕ್ಕೂ ಶಕ್ತರು. ಹೀಗಿರುವಲ್ಲಿ, ನಿನ್ನ ನೆರೆಯವನಿಗೆ ತೀರ್ಪುಕೊಡಲು ನೀನು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ದೇವರೊಬ್ಬನೇ ನಿಯಮಗಳನ್ನು ಮಾಡುವಾತನು. ಆತನೊಬ್ಬನೇ ನಿಜವಾದ ನ್ಯಾಯಾಧಿಪತಿ. ದೇವರೊಬ್ಬನೇ ರಕ್ಷಿಸಬಲ್ಲನು ಮತ್ತು ನಾಶಮಾಡಬಲ್ಲನು. ಆದ್ದರಿಂದ ಬೇರೊಬ್ಬ ವ್ಯಕ್ತಿಯ ಬಗ್ಗೆ ತೀರ್ಪು ನೀಡುವುದು ನಿಮಗೆ ಯೋಗ್ಯವಾದುದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಿಯಮವನ್ನು ಕೊಟ್ಟವರೂ ನ್ಯಾಯಾಧಿಪತಿಯೂ ದೇವರೊಬ್ಬರೇ ಆಗಿರುತ್ತಾರೆ. ಅವರು ಉಳಿಸುವುದಕ್ಕೂ ನಾಶಮಾಡುವುದಕ್ಕೂ ಶಕ್ತರಾಗಿದ್ದಾರೆ. ಹೀಗಿರುವಾಗ ನೆರೆಯವನ ವಿಷಯದಲ್ಲಿ ತೀರ್ಪುಮಾಡುವುದಕ್ಕೆ ನೀನು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಖಾಯ್ದೆ ದಿಲ್ಲೊ ಎಕ್ಲೊಚ್ ಅನಿ ನ್ಯಾಯ್ ಕರ್ತಲೊ ಎಕ್ಲೊಚ್, ತೊಚ್ ರಾಕ್ವನ್ ಕರುಕ್‍ಬಿ ಅನಿ ನಾಸ್ ಕರುಕ್‌ಬಿ ಸಕ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 4:12
11 ತಿಳಿವುಗಳ ಹೋಲಿಕೆ  

ಮತ್ತೊಬ್ಬನ ಸೇವಕನ ವಿಷಯವಾಗಿ ತೀರ್ಪುಮಾಡುವದಕ್ಕೆ ನೀನು ಯಾರು? ಅವನು ನಿರ್ದೋಷಿಯಾಗಿ ನಿಂತರೂ ದೋಷಿಯಾಗಿ ಬಿದ್ದರೂ ಅದು ಅವನ ಯಜಮಾನನಿಗೇ ಸೇರಿದ್ದು. ಅವನು ನಿರ್ದೋಷಿಯಾಗಿ ನಿಲ್ಲಿಸಲ್ಪಡುವನು; ಅವನನ್ನು ನಿಲ್ಲಿಸುವದಕ್ಕೆ ಕರ್ತನು ಶಕ್ತನಾಗಿದ್ದಾನೆ.


ಆದದರಿಂದ ಎಲೈ ಮನುಷ್ಯನೇ, ಮತ್ತೊಬ್ಬರಲ್ಲಿ ದೋಷವೆಣಿಸುವ ನೀನು ಯಾವನಾದರೂ ಸರಿಯೇ, ಉತ್ತರ ಹೇಳುವದಕ್ಕೆ ನಿನಗೆ ಮಾರ್ಗವಿಲ್ಲ. ಹೇಗಂದರೆ ಮತ್ತೊಬ್ಬರಲ್ಲಿ ದೋಷವೆಣಿಸುವದರಿಂದ ನಿನ್ನನ್ನು ನೀನೇ ದೋಷಿಯೆಂದು ತೀರ್ಪುಮಾಡಿಕೊಂಡ ಹಾಗಾಯಿತು. ಮತ್ತೊಬ್ಬರಲ್ಲಿ ದೋಷವೆಣಿಸುವ ನೀನು ಆ ದೋಷಗಳನ್ನೇ ನಡಿಸುತ್ತೀಯಲ್ಲಾ.


ಇದಲ್ಲದೆ ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾರದವರಿಗೆ ಹೆದರಬೇಡಿರಿ, ಆತ್ಮ ದೇಹ ಎರಡನ್ನೂ ಕೂಡ ನರಕದಲ್ಲಿ ಹಾಕಿ ನಾಶಮಾಡಬಲ್ಲಾತನಿಗೇ ಹೆದರಿರಿ.


ಯೆಹೋವನು ನಮ್ಮ ನ್ಯಾಯಾಧಿಪತಿ, ಯೆಹೋವನು ನಮಗೆ ಧರ್ಮವಿಧಾಯಕ, ಯೆಹೋವನು ನಮ್ಮ ರಾಜ; ಆತನೇ ನಮ್ಮನ್ನು ರಕ್ಷಿಸುವನು.


ಸಹೋದರರೇ, ನೀವು ಒಬ್ಬರಮೇಲೊಬ್ಬರು ಗುಣಗುಟ್ಟಬೇಡಿರಿ; ನ್ಯಾಯವಿಚಾರಣೆಗೆ ಗುರಿಯಾದೀರಿ. ಅಗೋ, ನ್ಯಾಯಾಧಿಪತಿಯು ಬಾಗಲಿನ ಹತ್ತಿರದಲ್ಲೇ ನಿಂತಿದ್ದಾನೆ.


ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವದಕ್ಕೆ ಶಕ್ತನಾಗಿದ್ದಾನೆ; ಅವರಿಗೋಸ್ಕರ ವಿಜ್ಞಾಪನೆಮಾಡುವದಕ್ಕೆ ಯಾವಾಗಲೂ ಬದುಕುವವನಾಗಿದ್ದಾನೆ.


ಆದಕಾರಣ ಇನ್ನು ಮೇಲೆ ಒಬ್ಬರ ವಿಷಯದಲ್ಲೊಬ್ಬರು ತೀರ್ಪುಮಾಡದೆ ಇರೋಣ. ಅದಕ್ಕೆ ಬದಲಾಗಿ ಸಹೋದರನ ಎದುರಿಗೆ ಅಡ್ಡಿಯನ್ನಾಗಲಿ ಎಡತಡೆಯನ್ನಾಗಲಿ ಹಾಕಬಾರದೆಂದು ತೀರ್ಮಾನಿಸಿಕೊಳ್ಳಿರಿ.


ಎಲೋ ಮನುಷ್ಯನೇ, ಹಾಗನ್ನಬೇಡ; ದೇವರಿಗೆ ಎದುರುಮಾತಾಡುವದಕ್ಕೆ ನೀನು ಎಷ್ಟರವನು? ರೂಪಿಸಲ್ಪಟ್ಟದ್ದು ರೂಪಿಸಿದವನಿಗೆ - ನನ್ನನ್ನು ಹೀಗೇಕೆ ಮಾಡಿದೆ ಎಂದು ಕೇಳುವದುಂಟೇ?


ನೀವು ಯಾರಿಗೆ ಹೆದರಬೇಕೋ ನಿಮಗೆ ತಿಳಿಸುತ್ತೇನೆ; ಕೊಂದ ಮೇಲೆ ನರಕದೊಳಗೆ ಹಾಕುವ ಅಧಿಕಾರವುಳ್ಳವನಿಗೆ ಹೆದರಬೇಕು; ಹೌದು, ಆತನಿಗೇ ಹೆದರಬೇಕೆಂದು ನಿಮಗೆ ಹೇಳುತ್ತೇನೆ.


ಅಜ್ಞಾನದ ಮಾತುಗಳಿಂದ ಸತ್ಯಾಲೋಚನೆಯನ್ನು ಮಂಕುಮಾಡುವ ಇವನು ಯಾರು?


ನಾಬಾಲನು ಅವರಿಗೆ - ದಾವೀದನಾರು? ಇಷಯನ ಮಗನಾರು? ಯಜಮಾನರನ್ನು ಬಿಟ್ಟು ಓಡಿಹೋದ ಸೇವಕರು ಈಗಿನ ಕಾಲದಲ್ಲಿ ಎಷ್ಟು ಮಂದಿಯಿಲ್ಲ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು