Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 4:13 - ಕನ್ನಡ ಸತ್ಯವೇದವು J.V. (BSI)

13 ಈಹೊತ್ತು ಇಲ್ಲವೆ ನಾಳೆ ನಾವು ಇಂಥ ಪಟ್ಟಣಕ್ಕೆ ಹೋಗಿ ಅಲ್ಲಿ ಒಂದು ವರುಷವಿದ್ದು ವ್ಯಾಪಾರವನ್ನು ಮಾಡಿ ಲಾಭವನ್ನು ಸಂಪಾದಿಸುತ್ತೇವೆ ಅನ್ನುವವರೇ, ಕೇಳಿರಿ. ನಾಳೆ ಏನಾಗುವದೋ ನಿಮಗೆ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 “ಈಹೊತ್ತು ಇಲ್ಲವೆ ನಾಳೆ ನಾವು ಇಂಥ ಪಟ್ಟಣಕ್ಕೆ ಹೋಗಿ ಅಲ್ಲಿ ಒಂದು ವರ್ಷವಿದ್ದು ವ್ಯಾಪಾರ ಮಾಡಿ ಲಾಭವನ್ನು ಸಂಪಾದಿಸುತ್ತೇವೆ” ಎನ್ನುವವರೇ ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 “ಇಂಥಿಂಥ ದಿನ ಇಂಥಿಂಥ ಪಟ್ಟಣಕ್ಕೆ ಹೋಗೋಣ, ಅಲ್ಲಿ ಒಂದು ವರ್ಷ ಇದ್ದು ವ್ಯಾಪಾರ ಮಾಡೋಣ; ಅತಿಯಾಗಿ ಲಾಭ ಸಂಪಾದಿಸೋಣ,” ಎಂದೆಲ್ಲಾ ಆಲೋಚಿಸುವವರೇ, ಈಗ ಕೇಳಿ: ನೀವು ಇಷ್ಟೆಲ್ಲಾ ಆಲೋಚಿಸಿದರೂ ನಾಳೆ ಏನಾಗುವುದೋ ನಿಮಗೇ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಿಮ್ಮಲ್ಲಿ ಕೆಲವರು, “ಈ ಹೊತ್ತು ಅಥವಾ ನಾಳೆ ನಗರಕ್ಕೆ ಹೋಗುತ್ತೇವೆ. ಅಲ್ಲಿ ಒಂದು ವರ್ಷವಿದ್ದು ವ್ಯಾಪಾರಮಾಡಿ ಹಣ ಸಂಪಾದಿಸುತ್ತೇವೆ” ಎಂದು ಹೇಳುವಿರಿ. ಆಲಿಸಿರಿ! ಇದರ ಬಗ್ಗೆ ಯೋಚಿಸಿರಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ಈ ಹೊತ್ತು ಇಲ್ಲವೆ ನಾಳೆ ನಾವು ಇಂಥ ಪಟ್ಟಣಕ್ಕೆ ಹೋಗಿ ಅಲ್ಲಿ ಒಂದು ವರ್ಷವಿದ್ದು, ವ್ಯಾಪಾರವನ್ನು ಮಾಡಿ ಲಾಭವನ್ನು ಸಂಪಾದಿಸುತ್ತೇವೆ,” ಎನ್ನುವವರೇ ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 “ಆಜ್ ನಾತರ್ ಉದ್ದ್ಯಾ ಅಮಿ ಅಮಿಚ್ ಶಾರಾಕ್ ಜಾತಾವ್ ಅನಿ ಎಕ್ ವರಿಸ್ ಭರ್ ಥೈ ರ್‍ಹಾವ್ನ್ ಯಾಪಾರ್ ಕರುನ್ ಪೈಸೆ ಕಮ್ವುತಾವ್” ಮನುನ್ ಸಾಂಗ್ತ್ಯಾಶಿ, ಆಯ್ಕಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 4:13
11 ತಿಳಿವುಗಳ ಹೋಲಿಕೆ  

ನಾಳೆ ಎಂದು ಕೊಚ್ಚಿಕೊಳ್ಳಬೇಡ; ಒಂದು ದಿನದೊಳಗೇ ಏನಾಗುವದೋ ನಿನಗೆ ತಿಳಿಯದು.


ನಾನು ಮನಸ್ಸಿನಲ್ಲಿ, - ಬಾ, ನಿನ್ನನ್ನು ಸಂತೋಷದ ಮೂಲಕ ಪರೀಕ್ಷಿಸುವೆನು; ಸುಖದ ರುಚಿ ನೋಡು ಅಂದುಕೊಂಡೆನು. ಆಹಾ, ಇದೂ ವ್ಯರ್ಥವೇ.


ಸಮಯ ಬಂತು, ದಿನ ಹತ್ತರಿಸಿತು; ಕೊಂಡುಕೊಳ್ಳುವವನು ಹರ್ಷಿಸದಿರಲಿ, ಮಾರುವವನು ದುಃಖಿಸದಿರಲಿ; ರೋಷಾಗ್ನಿಯು ಆ ಸಮೂಹದವರೆಲ್ಲರ ಮೇಲೆ ಹತ್ತಿದೆ.


ಪ್ರಜೆ ಯಾಜಕ, ದಾಸ ದಣಿ, ತೊತ್ತು ಯಜಮಾನಿ, ಕೊಳ್ಳುವವನು ಮಾರುವವನು, ಸಾಲಕೊಡುವವನು ತರುವವನು, ಬಡ್ಡಿ ತೆಗೆಯುವವನು ತೆರುವವನು, ಇವರೆಲ್ಲರಿಗೂ ಒಂದೇ ಗತಿಯಾಗುವದು.


ಧನಿಕರೇ, ಕೇಳಿರಿ; ನಿಮಗೆ ಬರುವ ದುರ್ದಶೆಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ.


ಸಂತೋಷಪಡುವವರು ಸಂತೋಷಪಡದವರಂತೆಯೂ, ಕೊಂಡುಕೊಳ್ಳುವವರು ಕೊಂಡದ್ದು ತಮ್ಮದೇ ಎಂದು ಹೇಳದವರಂತೆಯೂ,


ನನ್ನ ತೋಟವನ್ನು ಏನು ಮಾಡುವೆನೋ ಈಗ ನಿಮಗೆ ತಿಳಿಸುವೆನು, ಕೇಳಿರಿ; ಅದರ ಬೇಲಿಯನ್ನು ಕೀಳುವೆನು, ದನವು ಅದನ್ನು ಮೇಯ್ದುಬಿಡುವದು; ಅದರ ಗೋಡೆಯನ್ನು ಕೆಡವಿಹಾಕುವೆನು, ಅದು ತುಳಿದಾಟಕ್ಕೆ ಈಡಾಗುವದು.


ನಾವು ಇಳಿದು ಇವರಲ್ಲಿ ಒಬ್ಬರ ಮಾತು ಒಬ್ಬರಿಗೆ ತಿಳಿಯದಂತೆ ಇವರ ಭಾಷೆಯನ್ನು ತಾರುಮಾರುಮಾಡೋಣ ಬನ್ನಿ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು