Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 4:5 - ಕನ್ನಡ ಸತ್ಯವೇದವು J.V. (BSI)

5 ದೇವರು ನಮ್ಮಲ್ಲಿ ಇರಿಸಿರುವ ಪವಿತ್ರಾತ್ಮನು ಅಭಿಮಾನತಾಪದಿಂದ ನಮಗೋಸ್ಕರ ಹಂಬಲಿಸುತ್ತಾನೆ ಎಂಬ ಶಾಸ್ತ್ರೋಕ್ತಿ ಬರೀ ಮಾತೆಂದು ಭಾವಿಸುತ್ತೀರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ದೇವರು ನಮ್ಮಲ್ಲಿ ಇರಿಸಿರುವ ಪವಿತ್ರಾತ್ಮನು ಅಭಿಮಾನತಾಪದಿಂದ ನಮಗೋಸ್ಕರ ಹಂಬಲಿಸುತ್ತಾನೆಂಬ ವೇದೋಕ್ತಿ ಬರಿ ಮಾತೆಂದು ನೀವು ಭಾವಿಸುತ್ತೀರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 “ದೇವರು ನಮ್ಮಲ್ಲಿ ಇರುವ ಆತ್ಮವನ್ನು ಅತ್ಯಾಸಕ್ತಿಯಿಂದ ಅಪೇಕ್ಷಿಸುತ್ತಾರೆ,” ಎಂಬ ಪವಿತ್ರಗ್ರಂಥದ ವಾಕ್ಯವು ಹುರುಳಿಲ್ಲದ್ದೆಂದು ಭಾವಿಸುವಿರಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಪವಿತ್ರ ಗ್ರಂಥವು ಅರ್ಥವಿಲ್ಲದ್ದೆಂದು ಯೋಚಿಸುವಿರಾ? “ದೇವರು ನಮ್ಮಲ್ಲಿ ಇರಿಸಿರುವ ಆತ್ಮದ ಅಪೇಕ್ಷೆಯೇನೆಂದರೆ, ನಾವು ಆತನಿಗೋಸ್ಕರ ಮಾತ್ರ ಇರಬೇಕೆಂದಷ್ಟೆ” ಎಂದು ಪವಿತ್ರ ಗ್ರಂಥವು ಹೇಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅಥವಾ ದೇವರು ನಮ್ಮಲ್ಲಿ ವಾಸವಾಗಿರಲು ನಮಗೆ ಕೊಟ್ಟಿರುವ ಪವಿತ್ರಾತ್ಮ ದೇವರು, ನಾವು ಅವರಿಗೆ ಮಾತ್ರ ಸೇರಿದವರಾಗಿರಬೇಕೆಂದು ಬಲವಾದ ಬಯಕೆ ಉಳ್ಳವರಾಗಿದ್ದಾರೆಂದು ಪವಿತ್ರ ವೇದವು ವ್ಯರ್ಥವಾಗಿ ಹೇಳುತ್ತದೆ ಎಂದು ನೀವು ಭಾವಿಸುತ್ತೀರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಪವಿತ್ರ್ ಪುಸ್ತಕಾತ್ ಸಾಂಗಲ್ಲ್ಯಾ ಹ್ಯಾ ಗೊಸ್ಟಿತ್ ಖರೆ ನಾ ಮನುನ್ ತುಮಿ ಚಿಂತು ನಕಾಸಿ? ದೆವಾನ್ ಅಮ್ಚ್ಯಾ ಬುತ್ತುರ್ ಥವಲ್ಲೊ ಆತ್ಮೊ ನಿಶ್ಟುರ್ ಆಶೆನ್ ಭರಲ್ಲೊ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 4:5
24 ತಿಳಿವುಗಳ ಹೋಲಿಕೆ  

ದೇವರ ಮಂದಿರಕ್ಕೂ ವಿಗ್ರಹಗಳಿಗೂ ಒಪ್ಪಿಗೆ ಏನು? ನಾವು ಜೀವಸ್ವರೂಪನಾದ ದೇವರ ಮಂದಿರವಾಗಿದ್ದೇವಲ್ಲಾ. ಇದರ ಸಂಬಂಧವಾಗಿ ದೇವರು ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ.


ದೇವರಿಂದ ದೊರಕಿ ನಿಮ್ಮೊಳಗೆ ನೆಲೆಗೊಂಡಿರುವ ಪವಿತ್ರಾತ್ಮನಿಗೆ ನಿಮ್ಮ ದೇಹವು ಗರ್ಭಗುಡಿಯಾಗಿದೆಂಬದು ನಿಮಗೆ ತಿಳಿಯದೋ?


ಅದಕ್ಕೆ ಮೋಶೆ - ನನ್ನ ಗೌರವವನ್ನು ಕಾಪಾಡಬೇಕೆಂದಿದ್ದೀಯೇ? ಯೆಹೋವನ ಅನುಗ್ರಹದಿಂದ ಆತನ ಜನರೆಲ್ಲರೂ ಆತ್ಮೀಯವರಗಳನ್ನು ಹೊಂದಿದವರೂ ಪ್ರವಾದಿಸುವರೂ ಆದರೆ ಎಷ್ಟೋ ಒಳ್ಳೇದು ಅಂದನು.


ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ಅಧೀನರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಕಾಲಕಳೆಯುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆಮಾಡುವವರೂ ಆಗಿದ್ದೆವು.


ಕೆಟ್ಟ ನಡತೆಯುಳ್ಳವರನ್ನು ನೋಡಿ ಉರಿಗೊಳ್ಳಬೇಡ; ದುರಾಚಾರಿಗಳಿಗೋಸ್ಕರ ಹೊಟ್ಟೆಕಿಚ್ಚು ಪಡಬೇಡ.


ಅದರ ಸುವಾಸನೆಯು ಯೆಹೋವನಿಗೆ ಗಮಗವಿುಸಲು ಆತನು ಹೃದಯದೊಳಗೆ - ಮನುಷ್ಯರ ಮನಸ್ಸಂಕಲ್ಪವು ಚಿಕ್ಕಂದಿನಿಂದಲೇ ಕೆಟ್ಟದ್ದು; ಆದರೂ ನಾನು ಇನ್ನು ಮೇಲೆ ಅವರ ನಿವಿುತ್ತವಾಗಿ ಭೂವಿುಯನ್ನು ಶಪಿಸುವದಿಲ್ಲ; ನಾನು ಎಲ್ಲಾ ಜೀವಿಗಳನ್ನೂ ಈಗ ಸಂಹರಿಸಿದಂತೆ ಇನ್ನು ಮೇಲೆ ಸಂಹರಿಸುವದಿಲ್ಲ.


ಯೋಸೇಫನ ಅಣ್ಣಂದಿರು ಅವನ ಮೇಲೆ ಹೊಟ್ಟೆಕಿಚ್ಚುಪಟ್ಟರು; ಆದರೆ ಅವನ ತಂದೆಯು ಅವನ ಮಾತನ್ನು ಮನಸ್ಸಿನಲ್ಲಿಟ್ಟುಕೊಂಡನು.


ರಾಹೇಲಳು ತಾನು ಮಕ್ಕಳನ್ನು ಹೆರದೆ ಇರುವದನ್ನು ನೋಡಿ ತನ್ನ ಅಕ್ಕನ ಮೇಲೆ ಹೊಟ್ಟೆಕಿಚ್ಚುಪಟ್ಟು ಯಾಕೋಬನಿಗೆ - ಮಕ್ಕಳನ್ನು ನನಗೆ ಕೊಡು; ಇಲ್ಲದಿದ್ದರೆ ಸಾಯುವೆನು ಎಂದು ಹೇಳಲು


ಅವನಿಗೆ ದನಕುರಿಗಳ ಸಂಪತ್ತೂ ಅನೇಕ ಸೇವಕಜನವೂ ಇದ್ದವು. ಇದನ್ನು ನೋಡಿ ಫಿಲಿಷ್ಟಿಯರು ಹೊಟ್ಟೆಕಿಚ್ಚುಪಟ್ಟರು.


ಮನುಷ್ಯರ ಕೆಟ್ಟತನವು ಭೂವಿುಯ ಮೇಲೆ ಹೆಚ್ಚಾಗಿರುವದನ್ನೂ ಅವರು ಹೃದಯದಲ್ಲಿ ಯೋಚಿಸುವದೆಲ್ಲವು ಯಾವಾಗಲೂ ಬರೀ ಕೆಟ್ಟದ್ದಾಗಿರುವದನ್ನೂ


ದೇವರು ಅನ್ಯಜನರನ್ನು ನಂಬಿಕೆಯ ನಿವಿುತ್ತವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬದಾಗಿ ಶಾಸ್ತ್ರವು ಮೊದಲೇ ಕಂಡು ಅಬ್ರಹಾಮನಿಗೆ - ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವದೆಂಬ ಶುಭವರ್ತಮಾನವನ್ನು ಮುಂಚಿತವಾಗಿಯೇ ತಿಳಿಸಿತು.


ಮೂಲಪಿತೃಗಳು ಹೊಟ್ಟೇಕಿಚ್ಚಿನಿಂದ ಯೋಸೇಫನನ್ನು ಐಗುಪ್ತದೇಶಕ್ಕೆ ಮಾರಿಬಿಟ್ಟರು.


ಹಾಗಾದರೆ ದೇವರ ವಾಕ್ಯವನ್ನು ಹೊಂದಿದವರನ್ನು ದೇವರುಗಳೆಂದು ಆತನು ಹೇಳಿರುವಲ್ಲಿ


ಮತ್ತು ಸಮಸ್ತಪ್ರಯಾಸವನ್ನೂ ಕೈಗೂಡುವ ಸಕಲ ಕಾರ್ಯವನ್ನೂ ನೋಡಿ ಇವು ಪರಸ್ಪರ ಮತ್ಸರಕ್ಕೆ ಆಸ್ಪದವೆಂದು ಗ್ರಹಿಸಿಕೊಂಡೆನು. ಇದೂ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥ.


ದುರಾತ್ಮನು ಕೇಡಿನ ಮೇಲೆ ಮನಸ್ಸಿಡುವನು; ನೆರೆಯವನಿಗೂ ದಯೆತೋರಿಸನು.


ಅವರು ಪಾಳೆಯದಲ್ಲಿ ಮೋಶೆಯ ಮೇಲೆಯೂ ಯೆಹೋವನು ಪ್ರತಿಷ್ಠಿಸಿದ ಆರೋನನ ಮೇಲೆಯೂ ಹೊಟ್ಟೆಕಿಚ್ಚುಪಡಲು


ಹೇಗಂದರೆ ಅವರು ಸಕಲವಿಧವಾದ ಅನ್ಯಾಯ ದುರ್ಮಾರ್ಗತನ ಲೋಲುಪ್ತಿ ದುಷ್ಟತ್ವಗಳಿಂದಲೂ ಹೊಟ್ಟೇಕಿಚ್ಚು ಕೊಲೆ ಜಗಳ ಮೋಸ ಹಗೆತನಗಳಿಂದಲೂ ತುಂಬಿದವರಾದರು.


ದೇವರು ಫರೋಹನನ್ನು ಕುರಿತು - ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಖ್ಯಾತಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಉನ್ನತಸ್ಥಾನಕ್ಕೆ ತಂದಿದ್ದೇನೆಂದು ಹೇಳಿದನೆಂಬದಾಗಿ ಶಾಸ್ತ್ರೋಕ್ತಿ ಉಂಟು.


ಎಫ್ರಾಯೀವಿುನ ಹೊಟ್ಟೇಕಿಚ್ಚು ತೊಲಗುವದು, ಯೆಹೂದವನ್ನು ವಿರೋಧಿಸುವವರು ನಿರ್ಮೂಲವಾಗುವರು; ಎಫ್ರಾಯೀಮು ಯೆಹೂದವನ್ನು ಮತ್ಸರಿಸದು, ಯೆಹೂದವು ಎಫ್ರಾಯೀಮನ್ನು ವಿರೋಧಿಸದು.


ಮತ್ತು - ಅವರು ತಾವು ಇರಿದವನನ್ನು ದಿಟ್ಟಿಸಿನೋಡುವರು ಎಂದು ಶಾಸ್ತ್ರದಲ್ಲಿ ಮತ್ತೊಂದು ಮಾತು ಹೇಳಿ ಅದೆ.


ಇನ್ನೂ ಕೆಲವರು - ಕ್ರಿಸ್ತನು ಗಲಿಲಾಯದಿಂದ ಬರುವದು ಹೇಗೆ? ದಾವೀದನ ಸಂತಾನದಿಂದಲೂ ದಾವೀದನು ಇದ್ದ ಬೇತ್ಲೆಹೇಮೆಂಬ ಗ್ರಾಮದಿಂದಲೂ ಕ್ರಿಸ್ತನು ಬರುವನು ಎಂಬದಾಗಿ ಶಾಸ್ತ್ರದಲ್ಲಿ ಉಂಟಲ್ಲವೇ ಎಂದು ಹೇಳಿದರು.


ದೇವರು ಮನುಷ್ಯನಂತೆ ಎರಡು ಮಾತಿನವನಲ್ಲ; ಮಾನವನಂತೆ ಮನಸ್ಸನ್ನು ಬೇರೆ ಮಾಡಿಕೊಳ್ಳುವವನಲ್ಲ. ತಾನು ಹೇಳಿದ ಮೇರೆಗೆ ನಡೆಯುವದಿಲ್ಲವೋ; ಮಾತು ಕೊಟ್ಟನಂತರ ನೆರವೇರಿಸುವದಿಲ್ಲವೋ.


ಆದರೆ ಓನಾನನು ಈ ರೀತಿಯಾಗಿ ಆಗುವ ಸಂತಾನವು ತನ್ನದಾಗುವದಿಲ್ಲವೆಂದು ತಿಳಿದು ಅಣ್ಣನಿಗೆ ಸಂತತಿಯನ್ನು ಹುಟ್ಟಿಸಲೊಲ್ಲದೆ ತನ್ನ ಅತ್ತಿಗೆಯಲ್ಲಿ ಸಂಗಮಮಾಡುವಾಗೆಲ್ಲಾ ತನ್ನ ವೀರ್ಯವನ್ನು ನೆಲದ ಪಾಲು ಮಾಡುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು