ಯಾಕೋಬನು 5:16 - ಕನ್ನಡ ಸತ್ಯವೇದವು J.V. (BSI)16 ಹೀಗಿರಲು ನೀವು ಸ್ವಸ್ಥವಾಗಬೇಕಾದರೆ ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು ಅರಿಕೆ ಮಾಡಿ ಒಬ್ಬರಿಗೋಸ್ಕರ ಒಬ್ಬರು ದೇವರನ್ನು ಪ್ರಾರ್ಥಿಸಿರಿ; ನೀತಿವಂತನ ಅತ್ಯಾಸಕ್ತಿಯುಳ್ಳ ವಿಜ್ಞಾಪನೆಯು ಬಹು ಬಲವಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಹೀಗಿರಲು ನೀವು ಸ್ವಸ್ಥವಾಗಬೇಕಾದರೆ ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು ಅರಿಕೆ ಮಾಡಿ,, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಸಾಮರ್ಥ್ಯವುಳ್ಳದಾಗಿರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಆದ್ದರಿಂದ ಒಬ್ಬರಿಗೊಬ್ಬರು ಪಾಪಗಳನ್ನು ಒಪ್ಪಿಕೊಳ್ಳಿರಿ. ಒಬ್ಬರಿಗೊಬ್ಬರು ಪ್ರಾರ್ಥಿಸಿರಿ. ಆಗ ನೀವು ಸ್ವಸ್ಥರಾಗುತ್ತೀರಿ. ಸತ್ಪುರುಷನ ಪ್ರಾರ್ಥನೆ ಶಕ್ತಿಯುತವಾದುದು ಹಾಗೂ ಫಲದಾಯಕವಾದುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನೀವು ಮಾಡಿದ ತಪ್ಪುಗಳನ್ನು ಒಬ್ಬರಿಗೊಬ್ಬರು ಯಾವಾಗಲೂ ಹೇಳಿಕೊಳ್ಳಿರಿ. ಬಳಿಕ ಒಬ್ಬರಿಗೊಬ್ಬರು ಪ್ರಾರ್ಥಿಸಿರಿ. ನೀವು ಹೀಗೆ ಮಾಡಿದರೆ, ದೇವರು ನಿಮ್ಮನ್ನು ಗುಣಪಡಿಸುವನು. ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಲವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ನೀವು ಸ್ವಸ್ಥವಾಗಬೇಕಾದರೆ, ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು, ಅರಿಕೆಮಾಡಿ, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. ನೀತಿವಂತನ ಪ್ರಾರ್ಥನೆಯು ಶಕ್ತಿಯುತವೂ ಪರಿಣಾಮಕಾರಿಯೂ ಆಗಿರುತ್ತದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ತಸೆ ಮನುನ್ ಎಕಾಮೆಕಾಚಿ ಪಾಪಾ ಸಾಂಗುನ್ ಘೆವಾ ಅನಿ ಎಕಾಮೆಕಾಸಾಟ್ನಿ ಮಾಗ್ನಿ ಕರಾ, ಅಸೆ ತುಮಿ ಗುನ್ ಹೊತ್ತ್ಯಾಸಿ ಅನಿ ಎಕ್ ನಿತಿವಂತ್ ಮಾನ್ಸಾನ್ ಕರಲ್ಲ್ಯಾ ಮಾಗ್ನಿಕ್ ಲೈ ಬಳ್ ರ್‍ಹಾತಾ. ಅಧ್ಯಾಯವನ್ನು ನೋಡಿ |
ಈಗ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ತೆಗೆದುಕೊಂಡು ನನ್ನ ದಾಸನಾದ ಯೋಬನ ಬಳಿಗೆ ಹೋಗಿ ನಿಮ್ಮ ದೋಷಪರಿಹಾರಕ್ಕಾಗಿ ಹೋಮಮಾಡಿರಿ; ನನ್ನ ದಾಸನಾದ ಯೋಬನು ನಿಮ್ಮ ಪಕ್ಷವಾಗಿ ಪ್ರಾರ್ಥನೆ ಮಾಡುವನು; ನಾನು ಅವನ ವಿಜ್ಞಾಪನೆಯನ್ನು ಲಾಲಿಸಿ ನಿಮ್ಮ ಮೂರ್ಖತನಕ್ಕೆ ತಕ್ಕ ದಂಡನೆಯನ್ನು ನಿಮಗೆ ವಿಧಿಸುವದಿಲ್ಲ. ನನ್ನ ದಾಸನಾದ ಯೋಬನು ನನ್ನ ವಿಷಯವಾಗಿ ಸತ್ಯವನ್ನು ನುಡಿದಂತೆ ನೀವು ನುಡಿಯಲಿಲ್ಲ ಎಂದು ಹೇಳಿದನು.