Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 5:19 - ಕನ್ನಡ ಸತ್ಯವೇದವು J.V. (BSI)

19 ನನ್ನ ಸಹೋದರರೇ, ನಿಮ್ಮಲ್ಲಿ ಒಬ್ಬನು ಸತ್ಯಮಾರ್ಗವನ್ನು ತಪ್ಪಿಹೋಗಿರಲಾಗಿ ಮತ್ತೊಬ್ಬನು ಅವನನ್ನು ಸನ್ಮಾರ್ಗಕ್ಕೆ ತಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನನ್ನ ಸಹೋದರರೇ, ನಿಮ್ಮಲ್ಲಿ ಯಾರಾದರು ಸತ್ಯ ಮಾರ್ಗವನ್ನು ಬಿಟ್ಟು ತಪ್ಪಿ ನಡೆಯುತ್ತಿದ್ದರೆ ಮತ್ತೊಬ್ಬನು ಅವನನ್ನು ಸನ್ಮಾರ್ಗಕ್ಕೆ ತಂದರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಸಹೋದರರೇ, ನಿಮ್ಮಲ್ಲಿ ಒಬ್ಬನು ಸತ್ಯದ ಮಾರ್ಗವನ್ನು ಬಿಟ್ಟು ತಪ್ಪಿಹೋದಾಗ ಇನ್ನೊಬ್ಬನು ಅವನನ್ನು ಸನ್ಮಾರ್ಗಕ್ಕೆ ತಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನನ್ನ ಸಹೋದರ ಸಹೋದರಿಯರೇ, ನಿಮ್ಮಲ್ಲಿ ಒಬ್ಬನು ಸತ್ಯದಿಂದ ದೂರವಾಗಿ ಅಲೆದಾಡುತ್ತಿದ್ದರೆ, ಮತ್ತೊಬ್ಬನು ಅವನಿಗೆ ಸಹಾಯಮಾಡಿ ಅವನನ್ನು ಸತ್ಯಕ್ಕೆ ನಡೆಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಪ್ರಿಯರೇ, ನಿಮ್ಮಲ್ಲಿ ಯಾವನಾದರೂ ಸತ್ಯದಿಂದ ತಪ್ಪಿಹೋಗಿರಲಾಗಿ ಮತ್ತೊಬ್ಬನು ಅವನನ್ನು ಯಥಾಸ್ಥಾನಕ್ಕೆ ತಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಮಾಜ್ಯಾ ಭಾವಾನು ಅನಿ ಭೆನಿಯಾನು, ತುಮ್ಚ್ಯಾತ್ಲೊ ಕೊನ್‌ಬಿ ಖರೆಪಾನಾತ್ನಾ ಧುರ್ ಜಾವ್ನ್ ಫಿರುನ್ಗೆತ್ ರ್‍ಹಾಲ್ಯಾರ್, ತುಮ್ಚ್ಯಾತ್ಲೊ ಅನಿಎಕ್ಲೊ ತೆಕಾ ಪರ್ತುನ್ ಹಾನುಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 5:19
21 ತಿಳಿವುಗಳ ಹೋಲಿಕೆ  

ಸಹೋದರರೇ, ನಿಮ್ಮಲ್ಲಿ ಯಾರಾದರೂ ಯಾವದೋ ಒಂದು ದೋಷದಲ್ಲಿ ಸಿಕ್ಕಿದರೆ ಅಂಥವನನ್ನು ಆತ್ಮನಿಂದ ನಡಿಸಿಕೊಳ್ಳುವ ನೀವು ಶಾಂತಭಾವದಿಂದ ತಿದ್ದಿ ಸರಿಮಾಡಿರಿ. ನೀನಾದರೋ ದುಷ್ಪ್ರೇರಣೆಗೆ ಒಳಗಾಗದಂತೆ ನಿನ್ನ ವಿಷಯದಲ್ಲಿ ಎಚ್ಚರಿಕೆಯಾಗಿರು.


ಇದಲ್ಲದೆ ನಿನ್ನ ಸಹೋದರನು ತಪ್ಪುಮಾಡಿದರೆ ನೀನು ಹೋಗಿ ನೀನೂ ಅವನೂ ಇಬ್ಬರೇ ಇರುವಾಗ ಅವನ ತಪ್ಪನ್ನು ಅವನಿಗೆ ತಿಳಿಸು. ಅವನು ನಿನ್ನ ಮಾತನ್ನು ಕೇಳಿದರೆ ನಿನ್ನ ಸಹೋದರನನ್ನು ಸಂಪಾದಿಸಿಕೊಂಡಿರುವಿ.


ಒಬ್ಬ ಪಾಪಿಯನ್ನು ತಪ್ಪಾದ ಮಾರ್ಗದಿಂದ ತಿರುಗಿಸಿದವನು ಅವನ ಪ್ರಾಣವನ್ನು ಮರಣಕ್ಕೆ ತಪ್ಪಿಸಿ ಬಹುಪಾಪಗಳನ್ನು ಮುಚ್ಚಿದವನಾದನೆಂದು ತಿಳಿದುಕೊಳ್ಳಿರಿ.


ಆದರೆ ನಿನ್ನ ನಂಬಿಕೆ ಕುಂದಿಹೋಗಬಾರದೆಂದು ನಾನು ನಿನ್ನ ವಿಷಯದಲ್ಲಿ ದೇವರಿಗೆ ವಿಜ್ಞಾಪನೆಮಾಡಿಕೊಂಡೆನು. ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ದೃಢಪಡಿಸು ಎಂದು ಹೇಳಿದನು.


ತಪ್ಪಿಸಿಕೊಂಡದ್ದನ್ನು ಹುಡುಕುವೆನು, ಓಡಿಸಿದ್ದನ್ನು ಮಂದೆಗೆ ಸೇರಿಸುವೆನು, ದುರ್ಬಲವಾದದ್ದನ್ನು ಬಲಗೊಳಿಸುವೆನು, ಮುರಿದ ಅಂಗವನ್ನು ಕಟ್ಟುವೆನು; ಬಲಿತ ಕೊಬ್ಬಿದ ಕುರಿಗಳನ್ನೋ ಧ್ವಂಸಮಾಡುವೆನು; ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ತಿನ್ನಿಸುವೆನು.


ಆದಕಾರಣ ಪ್ರಿಯರೇ, ನೀವು ಈ ಸಂಗತಿಗಳನ್ನು ಮುಂದಾಗಿ ತಿಳಿದುಕೊಂಡಿರುವದರಿಂದ ಅಧರ್ಮಿಗಳ ಭ್ರಾಂತಿಯ ಸೆಳವಿಗೆ ಸಿಕ್ಕಿಕೊಂಡು ನಿಮ್ಮ ಸ್ಥಿರಮನಸ್ಸನ್ನು ಬಿಟ್ಟು ಭ್ರಷ್ಟರಾಗದಂತೆ ಎಚ್ಚರಿಕೆಯಾಗಿರಿ.


ಹಣದಾಸೆಯು ಸಕಲವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು ಅದರಿಂದ ಕ್ರಿಸ್ತ ನಂಬಿಕೆಯನ್ನು ಬಿಟ್ಟು ಅಲೆದಾಡಿ ಅನೇಕ ವೇದನೆಗಳಿಂದ ತಮ್ಮನ್ನು ತಿವಿಸಿಕೊಳ್ಳುತ್ತಾರೆ.


ಹಾ, ನೀವು ದುರ್ಬಲವಾದವುಗಳನ್ನು ಬಲಗೊಳಿಸಲಿಲ್ಲ, ರೋಗದವುಗಳನ್ನು ಸ್ವಸ್ಥಮಾಡಲಿಲ್ಲ, ಮುರಿದ ಅಂಗಗಳನ್ನು ಕಟ್ಟಲಿಲ್ಲ, ಓಡಿಸಿದವುಗಳನ್ನು ಮಂದೆಗೆ ಸೇರಿಸಲಿಲ್ಲ, ತಪ್ಪಿಸಿಕೊಂಡವುಗಳನ್ನು ಹುಡುಕಲಿಲ್ಲ; ಅವುಗಳನ್ನು ಹಿಂಸೆ ಬಲಾತ್ಕಾರಗಳಿಂದ ಆಳುತ್ತಾ ಬಂದಿದ್ದೀರಿ.


ನನ್ನ ಜನರನ್ನೋ ಬಾಧಿಸುವವರು ಹುಡುಗರು, ಆಳುವವರು ಹೆಂಗಸರು. ನನ್ನ ಜನರೇ! ನಿಮ್ಮನ್ನು ನಡಿಸುವವರು ದಾರಿತಪ್ಪಿಸುವವರಾಗಿದ್ದಾರೆ, ನೀವು ನಡೆಯತಕ್ಕ ದಾರಿಯನ್ನು ಅಳಿಸಿಬಿಟ್ಟಿದ್ದಾರೆ.


ಕೆಲವರು ಆ ಸುಳ್ಳಾದ ಜ್ಞಾನವನ್ನು ಅವಲಂಬಿಸಿ ಕ್ರಿಸ್ತ ನಂಬಿಕೆಯಿಂದ ಭ್ರಷ್ಟರಾದರು. ಕೃಪೆಯು ನಿಮ್ಮೊಂದಿಗೆ ಇರಲಿ.


ಮಗನೇ, ಬುದ್ಧಿವಾದಗಳನ್ನು ಅನುಸರಿಸಲಿಕ್ಕೆ ಮನಸ್ಸಿಲ್ಲದಿದ್ದರೆ ಉಪದೇಶ ಕೇಳುವದನ್ನೇ ಬಿಟ್ಟುಬಿಡು.


ನಿನ್ನ ನಿಬಂಧನೆಗಳಿಗೆ ತಪ್ಪಿದವರೆಲ್ಲರನ್ನು ನೀನು ತಳ್ಳಿಬಿಡುತ್ತೀ; ಅವರ ಕುಯುಕ್ತಿಯು ವ್ಯರ್ಥವಾದದ್ದೇ.


ನೀನು ಗರ್ವಿಷ್ಠರನ್ನು ಗದರಿಸುತ್ತೀ; ನಿನ್ನ ಆಜ್ಞೆಗಳನ್ನು ಮೀರಿದವರು ಶಾಪಗ್ರಸ್ತರು.


ಅವರ ಗತಿಯನ್ನು ಏನು ಹೇಳಲಿ; ಇವರು ಕಾಯಿನನ ಮಾರ್ಗವನ್ನು ಹಿಡಿದವರೂ ದ್ರವ್ಯಸಂಪಾದನೆಗೋಸ್ಕರ ಬಿಳಾಮನ ಭ್ರಾಂತಿಯಲ್ಲಿ ಪೂರ್ಣವಾಗಿ ಮುಣುಗಿದವರೂ ಕೋರಹನಂತೆ ಎದುರುಮಾತುಗಳನ್ನಾಡಿ ನಾಶವಾಗಿಹೋಗತಕ್ಕವರೂ ಆಗಿದ್ದಾರೆ.


ಆದರೆ ತೀಕ್ಷ್ಣವಾದ ಮತ್ಸರವೂ ಪಕ್ಷಭೇದವೂ ನಿಮ್ಮ ಹೃದಯದೊಳಗೆ ಇರುವಲ್ಲಿ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ.


ಅವರು ಪುನರುತ್ಥಾನವು ಆಗಿಹೋಯಿತೆಂದು ಹೇಳುತ್ತಾ ಸತ್ಯಭ್ರಷ್ಟರಾಗಿ ಕೆಲವರ ನಂಬಿಕೆಯನ್ನು ಕೆಡಿಸುವವರಾಗಿದ್ದಾರೆ.


ತಾನೂ ಬಲಹೀನನಾಗಿರುವದರಿಂದ ಅವನು ಜ್ಞಾನವಿಲ್ಲದವರನ್ನೂ ಮಾರ್ಗತಪ್ಪಿ ನಡೆಯುವವರನ್ನೂ ತಾಳ್ಮೆಯಿಂದ ಸಹಿಸಿಕೊಳ್ಳುವದಕ್ಕೆ ಶಕ್ತನಾಗಿರುವನು.


ನನ್ನ ಪ್ರಿಯ ಸಹೋದರರೇ, ಮೋಸಹೋಗಬೇಡಿರಿ.


ನನ್ನ ಪ್ರಿಯ ಸಹೋದರರೇ, ನೀವು ಬಲ್ಲವರು. ಆದರೆ ಪ್ರತಿಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತಾಡುವದರಲ್ಲಿ ನಿಧಾನವಾಗಿಯೂ ಇರಲಿ. ಕೋಪಿಸುವದರಲ್ಲಿಯೂ ನಿಧಾನವಾಗಿರಲಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು