Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಕೋಬನು 5:5 - ಕನ್ನಡ ಸತ್ಯವೇದವು J.V. (BSI)

5 ಭೂಲೋಕದಲ್ಲಿ ನೀವು ಅತಿಭೋಗಿಗಳಾಗಿ ಬದುಕಿ ಮನಸ್ಸು ಬಂದಂತೆ ನಡೆದುಕೊಂಡಿದ್ದೀರಿ. ವಧೆಯ ದಿವಸ ಬಂದರೂ ನಿಮ್ಮನ್ನು ಕೊಬ್ಬಿಸಿಕೊಂಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಭೂಲೋಕದಲ್ಲಿ ನೀವು ಸುಖಭೋಗಿಗಳಾಗಿ ನಿಮ್ಮ ಇಚ್ಛೆಪೂರೈಸಿಕೊಳ್ಳುವವರಾಗಿ ಜೀವಿಸಿದ್ದೀರಿ; ವಧೆಯ ದಿನಕ್ಕಾಗಿಯೋ ಎಂಬಂತೆ ನಿಮ್ಮ ಹೃದಯಗಳನ್ನು ಕೊಬ್ಬಿಸಿಕೊಂಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಲೋಕದಲ್ಲಿ ನೀವು ಸುಖಭೋಗಿಗಳಾಗಿ ವಿಲಾಸ ಜೀವನ ನಡೆಸಿದ್ದೀರಿ. ವಧೆಯ ದಿನಕ್ಕಾಗಿ ಪಶುಗಳಂತೆ ನಿಮ್ಮನ್ನೇ ಕೊಬ್ಬಿಸಿಕೊಂಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಿಮ್ಮ ಈ ಲೋಕದ ಜೀವನವು ಐಶ್ವರ್ಯದಿಂದ ತುಂಬಿದೆ. ನೀವು ಇಷ್ಟಪಟ್ಟದ್ದನ್ನೆಲ್ಲ ಪಡೆದುಕೊಂಡು ತೃಪ್ತರಾದಿರಿ. ವಧಿಸುವ ಕಾಲಕ್ಕೆ ಸಿದ್ಧವಾಗಿರುವ ಪಶುವಿನಂತೆ ನಿಮ್ಮನ್ನು ಕೊಬ್ಬಿಸಿಕೊಂಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಭೂಲೋಕದಲ್ಲಿ ನೀವು ಭೋಗಿಗಳಾಗಿ ಮನಸ್ಸಿಗೆ ಬಂದಂತೆ ಜೀವಿಸಿದ್ದೀರಿ. ವಧೆಯ ದಿವಸಕ್ಕಾಗಿಯೋ ಎಂಬಂತೆ ನಿಮ್ಮ ಹೃದಯಗಳನ್ನು ಪೋಷಿಸಿಕೊಂಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತುಮಿ ಎಗ್ದಾಕ್ ಜಿಮ್ನಿಚ್ಯಾ ಸುಖಾಚೆ ಅನಿ ಸಾವ್ಕಾರ್ಕಿಚೆ ಜಿವನ್ ಕರ್ಲ್ಯಾಸಿ, ತುಮ್ಚಿ ಮನಾ ಬಲಿ ದಿತಲ್ಯಾ ದಿಸಾ ಸಾಟ್ನಿ ಪುಟ್‍ಪುಟಿತ್ ಕರುನ್ ಥವ್ನ್ ಘೆಟ್ಲ್ಯಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಕೋಬನು 5:5
28 ತಿಳಿವುಗಳ ಹೋಲಿಕೆ  

ಆದರೆ ಭೋಗಿಯಾಗಿರುವ ವಿಧವೆಯು ಬದುಕಿರುವಾಗಲೂ ಸತ್ತವಳೇ.


ಆದರೆ ಅಬ್ರಹಾಮನು - ಕಂದಾ, ನೀನು ಆಶಿಸಿದ ಸುಖವನ್ನು ನಿನ್ನ ಜೀವಮಾನದಲ್ಲಿ ಹೊಂದಿದಿ; ಹಾಗೆಯೇ ಲಾಜರನು ಕಷ್ಟವನ್ನು ಹೊಂದಿದನು ಎಂಬದನ್ನು ನೆನಪಿಗೆ ತಂದುಕೋ. ಈಗಲಾದರೋ ಇಲ್ಲಿ ಇವನಿಗೆ ಸಮಾಧಾನ, ಆದರೆ ನಿನಗೆ ಸಂಕಟ.


ಐಶ್ವರ್ಯವಂತನಾದ ಒಬ್ಬ ಮನುಷ್ಯನಿದ್ದನು. ಅವನು ಸಕಲಾತಿ ನಯವಾದ ನಾರುಮಡಿ ಮುಂತಾದ ವಸ್ತ್ರಗಳನ್ನು ಧರಿಸಿಕೊಂಡು ಪ್ರತಿದಿನವೂ ವೈಭವದೊಡನೆ ಸುಖಸಂತೋಷಪಡುತ್ತಿದ್ದನು.


ಅಯ್ಯೋ, ಚೀಯೋನಿನಲ್ಲಿ ನೆಮ್ಮದಿಯಾಗಿರುವವರ ಗತಿಯನ್ನು ಏನೆಂದು ಹೇಳಲಿ! ಪ್ರಮುಖಜನಾಂಗದಲ್ಲಿ ಹೆಸರುಗೊಂಡು ಇಸ್ರಾಯೇಲ್ಯರ ನ್ಯಾಯ ವಿಚಾರಕರಾಗಿ ಸಮಾರ್ಯದ ಬೆಟ್ಟದಲ್ಲಿ ನಿಶ್ಚಿಂತರಾಗಿರುವವರ ಪಾಡನ್ನು ಎಂಥದೆನ್ನಲಿ!


ಯೆಹೋವನೇ, ನೀನು ನನ್ನನ್ನು ತಿಳಿದಿದ್ದೀ, ನನ್ನನ್ನು ನೋಡುತ್ತಾ ನಿನ್ನೊಂದಿಗೆ ಅನ್ಯೋನ್ಯವಾಗಿರುವ ನನ್ನ ಹೃದಯವನ್ನು ಪರೀಕ್ಷಿಸುತ್ತೀ, ಅವರನ್ನು ಕುರಿಗಳನ್ನೋ ಎಂಬಂತೆ ಕೊಲೆಗೆ ಎಳೆದು ವಧೆಯ ದಿನಕ್ಕೆ ಗೊತ್ತುಮಾಡು.


ಅವಳು ಎಷ್ಟು ಮಟ್ಟಿಗೆ ತನ್ನನ್ನು ಘನಪಡಿಸಿಕೊಂಡು ಭೋಗಿನಿಯಾಗಿದ್ದಾಳೋ ಅಷ್ಟು ಮಟ್ಟಿಗೆ ಅವಳಿಗೆ ಯಾತನೆಯನ್ನೂ ದುಃಖವನ್ನೂ ಕೊಡಿರಿ. ಅವಳು ತನ್ನ ಹೃದಯದಲ್ಲಿ - ನಾನು ರಾಣಿಯಾಗಿ ಕೂತುಕೊಂಡಿದ್ದೇನೆ, ನಾನು ವಿಧವೆಯಲ್ಲ,


ಕುರುಬರೇ, ಅರಚಿ ಗೋಳಾಡಿರಿ! ಮಂದೆಯಲ್ಲಿನ ಹಿರಿಯ ಮಣಿಗಳೇ, [ಬೂದಿಯಲ್ಲಿ] ಬಿದ್ದು ಹೊರಳಾಡಿರಿ! ನಿಮ್ಮನ್ನು ವಧಿಸುವ ಕಾಲವು ತುಂಬಿದೆ; ನಾನು ನಿಮ್ಮನ್ನು ಭಂಗಪಡಿಸುವೆನು; ನೀವು ಬಿದ್ದುಹೋದ ಅಂದವಾದ ಪಾತ್ರೆಯಂತೆ ಚೂರುಚೂರಾಗುವಿರಿ.


ಆದರೆ ಇಗೋ, ಉಲ್ಲಾಸ, ಹರ್ಷ, ದನಕೊಯ್ಯುವದು, ಕುರಿಕಡಿಯುವದು, ಮಾಂಸತಿನ್ನುವದು, ದ್ರಾಕ್ಷಾರಸ ಕುಡಿಯುವದು, ನಾಳೆ ಸಾಯುತ್ತೇವೆಂದು ತಿಂದು ಕುಡಿಯುವದು [ಇವೇ ನಿಮ್ಮ ಕಾರ್ಯ].


ಅಬೀಗೈಲಳು ನಾಬಾಲನ ಬಳಿಗೆ ಬಂದಳು. ಅವನು ತನ್ನ ಮನೆಯಲ್ಲಿ ರಾಜರಂತೆ ಒಂದು ದೊಡ್ಡ ಔತಣವನ್ನು ಮಾಡಿಸಿ ಬಹಳವಾಗಿ ಕುಡಿದು ಬಹು ಸಂಭ್ರಮದಿಂದಿದ್ದ ಕಾರಣ ಈಕೆಯು ಮರುದಿವಸದವರೆಗೆ ಇದರ ವಿಷಯವಾಗಿ ಏನೂ ಹೇಳಲಿಲ್ಲ.


ಇವರು ಸಮುದ್ರದೊಳಗಿರುವ ಗುಪ್ತವಾದ ಬಂಡೆಗಳಂತಿದ್ದು ನಿಮ್ಮ ಪ್ರೇಮಭೋಜನಗಳಲ್ಲಿ ಸೇರಿ ತಿಂದು ಕುಡಿಯುತ್ತಾರೆ; ನಿರ್ಭಯವಾಗಿ ಸ್ವಂತ ಹೊಟ್ಟೆಯನ್ನೇ ನೋಡಿಕೊಳ್ಳುವ ಕುರುಬರಾಗಿದ್ದಾರೆ. ಇವರು ಗಾಳಿಯಿಂದ ಹೊಡಿಸಿಕೊಂಡು ಹೋಗುವ ನೀರಿಲ್ಲದ ಮೇಘಗಳೂ, ಎಲೆಗಳುದುರಿ ಹಣ್ಣುಬಿಡದೆ ಒಣಗಿಹೋಗಿ ಬೇರು ಸಹಿತ ಕಿತ್ತುಬಿದ್ದ ಮರಗಳೂ,


ದುಂದುಗಾರಿಕೆಯಲ್ಲಿ ಹಗಲನ್ನು ಕಳೆಯುವದೇ ಸುಖವೆಂದೆಣಿಸುತ್ತಾರೆ. ಇವರು ನಿಮ್ಮ ಸಂಗಡ ಸೇರಿ ಔತಣಮಾಡುತ್ತಿರುವಾಗ ವಂಚಕರಾಗಿದ್ದು ಉಂಡು ಕುಡಿದು ಕಳಂಕಕ್ಕೂ ಅವಮಾನಕ್ಕೂ ಕಾರಣರಾಗಿದ್ದಾರೆ.


ದ್ರೋಹಿಗಳೂ ದುಡುಕಿನವರೂ ಉಬ್ಬಿಕೊಂಡವರೂ ದೇವರನ್ನು ಪ್ರೀತಿಸದೆ ಭೋಗಗಳನ್ನೇ ಪ್ರೀತಿಸುವವರೂ


ದುಂದೌತಣ ಕುಡಿಕತನಗಳಲ್ಲಿಯಾಗಲಿ ಕಾಮ ವಿಲಾಸ ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೇಕಿಚ್ಚುಗಳಲ್ಲಿಯಾಗಲಿ ಕಾಲಕಳೆಯದೆ ಹಗಲು ಹೊತ್ತಿಗೆ ತಕ್ಕಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನರಪುತ್ರನೇ, ಎಲ್ಲಾ ಬಗೆಯ ಪಕ್ಷಿಗಳಿಗೂ ಸಮಸ್ತ ಭೂಜಂತುಗಳಿಗೂ ಹೀಗೆ ನುಡಿ - ನೀವು ಕೂಡಿಬನ್ನಿರಿ; ನಾನು ಇಸ್ರಾಯೇಲಿನ ಪರ್ವತಗಳ ಮೇಲೆ ನಿಮಗಾಗಿ ಮಾಡುವ ಮಹಾಯಜ್ಞಕ್ಕೆ ಎಲ್ಲಾ ಕಡೆಯಿಂದಲೂ ನೆರೆದು ಬಂದು ಮಾಂಸವನ್ನು ತಿಂದು ರಕ್ತವನ್ನು ಕುಡಿಯಿರಿ.


ಬನ್ನಿರಿ, ನಾನು ದ್ರಾಕ್ಷಾರಸವನ್ನು ತರಿಸುವೆನು, ಬೇಕಾದಷ್ಟು ಮದ್ಯವನ್ನು ಕುಡಿಯುವ; ನಾಳೆಯೂ ಈ ದಿನದಂತೆ ಕೇವಲ ಅತ್ಯಂತ ವಿಶೇಷದಿನವಾಗಿರುವದು [ಎಂದು ಹರಟಿಕೊಳ್ಳುವರು].


ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ, ನಾನು ವಿಧವೆಯಾಗಿ ಕೂತುಕೊಳ್ಳುವದಿಲ್ಲ, ಪುತ್ರಶೋಕವನ್ನು ಅನುಭವಿಸುವದಿಲ್ಲ ಅಂದುಕೊಳ್ಳುವವಳೇ, ಭೋಗಾಸಕ್ತಳೇ, ನೆಮ್ಮದಿಯಾಗಿ ನೆಲೆಗೊಂಡಿರುವವಳೇ, ಈಗ ಇದನ್ನು ಕೇಳು -


ಇದಲ್ಲದೆ ಯೆಹೋವನು ಹೀಗನ್ನುತ್ತಾನೆ - ಚೀಯೋನಿನ ಹೆಂಗಸರು ವಯ್ಯಾರವುಳ್ಳವರಾಗಿ ಕತ್ತು ತೂಗುತ್ತಾ ಕಡೆಗಣ್ಣುಹಾಕುತ್ತಾ ಕುಲುಕಿ ಹೆಜ್ಜೆಯಿಡುತ್ತಾ ಕಾಲುಗೆಜ್ಜೆ ಜಣಜಣಿಸುತ್ತಾ ನಡೆಯುವವರಾಗಿರುವದರಿಂದ


ಯೌವನಸ್ಥನೇ, ಪ್ರಾಯದಲ್ಲಿ ಆನಂದಿಸು; ಯೌವನದ ದಿನಗಳಲ್ಲಿ ಹೃದಯವು ನಿನ್ನನ್ನು ಹರ್ಷಗೊಳಿಸಲಿ; ಮನಸ್ಸಿಗೆ ತಕ್ಕಂತೆಯೂ ಕಣ್ಣಿಗೆ ಸರಿಬೀಳುವ ಹಾಗೆಯೂ ನಡೆದುಕೋ; ಆದರೆ ಈ ಎಲ್ಲಾ ವಿಷಯಗಳಲ್ಲಿಯೂ ದೇವರು ನಿನ್ನನ್ನು ನ್ಯಾಯವಿಚಾರಣೆಗೆ ಗುರಿಮಾಡುವನೆಂದು ತಿಳಿದಿರು.


ವ್ಯಾಜ್ಯದ ಮನೆಯಲ್ಲಿ ತುಂಬಿದ ಔತಣಕ್ಕಿಂತಲೂ ಸಮಾಧಾನದ ಒಣತುತ್ತೇ ಮೇಲು.


ಎಲೈ, ಈ ದಿವಸ ನನ್ನ ಹರಿಕೆಗಳನ್ನು ಸಲ್ಲಿಸಿದ್ದೇನೆ, ಸಮಾಧಾನಯಜ್ಞಶೇಷವು ನನ್ನಲ್ಲಿದೆ,


ಯೆಹೋವನೇ, ಇಹಲೋಕವೇ ತಮ್ಮ ಪಾಲೆಂದು ನಂಬಿದ ನರರಿಗೆ ಸಿಕ್ಕದಂತೆ ನಿನ್ನ ಕೈಯಿಂದ ನನ್ನನ್ನು ತಪ್ಪಿಸು; ನಿನ್ನ ಐಶ್ವರ್ಯದಿಂದ ಅವರ ಹೊಟ್ಟೆಯನ್ನು ತುಂಬಿಸಿದ್ದೀಯಲ್ಲಾ. ಅವರು ಸಂತಾನವೃದ್ಧಿಹೊಂದಿ ವಿುಕ್ಕ ಆಸ್ತಿಯನ್ನು ತನ್ನ ಮಕ್ಕಳಿಗೆ ಬಿಡುತ್ತಾರೆ.


ನಿನಗೂ ನಿನ್ನ ಕುಟುಂಬಕ್ಕೂ ನಿನ್ನ ಸರ್ವಸಂಪತ್ತಿಗೂ ಶುಭವಾಗಲಿ.


ಕೊಬ್ಬಿನಿಂದ ಅವರ ಕಣ್ಣುಗಳು ಮೇಲೆ ಅವೆ; ಅವರ ದುಷ್ಕಲ್ಪನೆಗಳು ತುಂಬಿತುಳುಕುತ್ತವೆ.


ಸೊದೋಮೆಂಬ ನಿನ್ನ ತಂಗಿಯ ದೋಷವನ್ನು ನೋಡು; ಹೆಮ್ಮೆಪಡುವದು, ಹೊಟ್ಟೆತುಂಬಿಸಿಕೊಳ್ಳುವದು, ಸ್ವಸುಖದಲ್ಲಿ ಮುಳುಗಿರುವದು, ಇವು ಆಕೆಯಲ್ಲಿಯೂ ಆಕೆಯ ಕುಮಾರ್ತೆಯರಲ್ಲಿಯೂ ಇದ್ದವು. ಅಲ್ಲದೆ ಆಕೆಯು ದೀನದರಿದ್ರರಿಗೆ ಬೆಂಬಲವಾಗಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು