Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 1:14 - ಕನ್ನಡ ಸತ್ಯವೇದವು J.V. (BSI)

14 ಯೆಹೋವನಿಗೆ ಸರ್ವಾಂಗಹೋಮವಾಗಿ ಅರ್ಪಿಸುವಂಥದು ಪಕ್ಷಿಜಾತಿಯಾಗಿದ್ದರೆ ಅದು ಬೆಳವಕ್ಕಿಯಾಗಲಿ ಪಾರಿವಾಳದ ಮರಿಯಾಗಲಿ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 “‘ಯೆಹೋವನಿಗೆ ಸರ್ವಾಂಗಹೋಮವಾಗಿ ಅರ್ಪಿಸುವಂಥದ್ದು ಪಕ್ಷಿಜಾತಿಯಾಗಿದ್ದರೆ ಅದು ಬೆಳವಕ್ಕಿಯಾಗಲಿ ಅಥವಾ ಪಾರಿವಾಳದ ಮರಿಯಾಗಲಿ ಆಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಸರ್ವೇಶ್ವರನಿಗೆ ದಹನಬಲಿಯಾಗಿ ಸಮರ್ಪಿಸುವಂಥದ್ದು ಪಕ್ಷಿ ಜಾತಿಯಾಗಿದ್ದರೆ ಅದು ಬೆಳವಕ್ಕಿಯಾಗಿರಲಿ, ಅಥವಾ ಮರಿ ಪಾರಿವಾಳ ಆಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ಒಬ್ಬನು ಪಕ್ಷಿಯನ್ನು ಯೆಹೋವನಿಗೆ ಸರ್ವಾಂಗಹೋಮವಾಗಿ ಅರ್ಪಿಸುವಾಗ ಆ ಪಕ್ಷಿಯು ಬೆಳೆವಕ್ಕಿಯಾಗಲಿ ಪಾರಿವಾಳದ ಮರಿಯಾಗಲಿ ಆಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ ‘ಯೆಹೋವ ದೇವರಿಗೆ ದಹನಬಲಿಯಾಗಿ ಸಮರ್ಪಿಸುವಂಥದ್ದು ಪಕ್ಷಿಗಳಾಗಿದ್ದರೆ, ಅವನು ತನ್ನ ಯಜ್ಞಕ್ಕಾಗಿ ಬೆಳವಕ್ಕಿಯನ್ನಾಗಲಿ ಇಲ್ಲವೆ ಪಾರಿವಾಳದ ಮರಿಯನ್ನಾಗಲಿ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 1:14
10 ತಿಳಿವುಗಳ ಹೋಲಿಕೆ  

ಇದಲ್ಲದೆ ಕರ್ತನ ಧರ್ಮಶಾಸ್ತ್ರದಲ್ಲಿ ಹೇಳಿರುವಂತೆ ಒಂದು ಜೋಡಿ ಬೆಳವಕ್ಕಿಯನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ಬಲಿಕೊಡಬೇಕಾಗಿತ್ತು.


ಕುರಿಯನ್ನು ಕೊಡುವದಕ್ಕೆ ಅವನಿಗೆ ಗತಿಯಿಲ್ಲದ ಪಕ್ಷದಲ್ಲಿ ದೋಷದ ಪ್ರಾಯಶ್ಚಿತ್ತಕ್ಕಾಗಿ ಎರಡು ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ಬಂದು ಸರ್ವಾಂಗಹೋಮವಾಗಿ ಒಂದನ್ನೂ ದೋಷಪರಿಹಾರಕ ಯಜ್ಞವಾಗಿ ಮತ್ತೊಂದನ್ನೂ ಯೆಹೋವನಿಗೆ ಸಮರ್ಪಿಸಬೇಕು.


ಕುರಿಯನ್ನು ಕೊಡುವದಕ್ಕೆ ಗತಿಯಿಲ್ಲದಿದ್ದರೆ ಎರಡು ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ತಂದು ಸರ್ವಾಂಗಹೋಮಕ್ಕಾಗಿ ಒಂದನ್ನೂ ದೋಷಪರಿಹಾರಕ್ಕಾಗಿ ಒಂದನ್ನೂ ಸಮರ್ಪಿಸಬೇಕು. ಯಾಜಕನು ಅವಳಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಶುದ್ಧಳಾಗುವಳು.


ಇಂಥವನೇ ನಮಗೆ ಬೇಕಾದ ಮಹಾಯಾಜಕನು. ಈತನು ಪರಿಶುದ್ಧನೂ ನಿರ್ದೋಷಿಯೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವವನೂ ಆಕಾಶಮಂಡಲಗಳಿಗಿಂತ ಉನ್ನತದಲ್ಲಿರುವವನೂ ಆಗಿರುವನು.


ಒಬ್ಬನು ಕೊಡುವದಕ್ಕೆ ಮನಸ್ಸುಳ್ಳವನಾಗಿರುವಲ್ಲಿ ಅವನು ತನ್ನಲ್ಲಿ ಇರುವದಕ್ಕೆ ಅನುಸಾರವಾಗಿ ಕೊಟ್ಟರೆ ಅದು ಸಮರ್ಪಕವಾಗಿರುವದು; ಅವನಿಗೆ ಇಲ್ಲದ್ದನ್ನು ದೇವರು ಕೇಳಿಕೊಳ್ಳುವದಿಲ್ಲ.


ನಾನು ಸಾತ್ವಿಕನೂ ದೀನಮನಸ್ಸುಳ್ಳವನೂ ಆಗಿರುವದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಲ್ಲಿ ಕಲಿತುಕೊಳ್ಳಿರಿ;


ಅದಕ್ಕೆ ಆತನು - ನೀನು ಮೂರು ಮೂರು ವರುಷಗಳ ಮಣಕ, ಆಡು, ಟಗರು ಇವುಗಳನ್ನೂ ಬೆಳವಕ್ಕಿಯನ್ನೂ ಪಾರಿವಾಳದ ಮರಿಯನ್ನೂ ತೆಗೆದುಕೊಂಡು ಬಾ ಅಂದನು.


ಬಳಿಕ ಯೇಸು ದೇವಾಲಯಕ್ಕೆ ಹೋಗಿ ಅದರಲ್ಲಿ ಮಾರುವ ಕೊಳ್ಳುವ ಎಲ್ಲರನ್ನೂ ಹೊರಡಿಸಿಬಿಟ್ಟು ಚಿನಿವಾರರ ಮೇಜುಗಳನ್ನೂ ಪಾರಿವಾಳಮಾರುವವರ ಕಾಲ್ಮಣೆಗಳನ್ನೂ ಕೆಡವಿ


ಮತ್ತೊಂದನ್ನು ಯಥಾವಿಧಿಯಾಗಿ ಸರ್ವಾಂಗಹೋಮ ಮಾಡಿಬಿಡಬೇಕು. ಅವನ ತಪ್ಪಿನ ನಿವಿುತ್ತ ಯಾಜಕನು ಹೀಗೆ ದೋಷಪರಿಹಾರವನ್ನು ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವದು.


ಎರಡು ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ಕೊಡುವದಕ್ಕೂ ಗತಿಯಿಲ್ಲದೆ ಹೋದರೆ ಅವನು ದೋಷಪರಿಹಾರಕ್ಕಾಗಿ ಮೂರು ಸೇರು ಗೋದಿಹಿಟ್ಟನ್ನು ತರಬೇಕು. ಆ ಹೋಮದ್ರವ್ಯವು ದೋಷಪರಿಹಾರಾರ್ಥವಾದ್ದರಿಂದ ಅದರ ಮೇಲೆ ಎಣ್ಣೆಯನ್ನು ಹೊಯ್ಯಕೂಡದು, ಧೂಪವನ್ನು ಇಡಕೂಡದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು