ಯಾಜಕಕಾಂಡ 1:3 - ಕನ್ನಡ ಸತ್ಯವೇದವು J.V. (BSI)3 ಅವನು ದನವನ್ನು ಸರ್ವಾಂಗಹೋಮವಾಗಿ ಸಮರ್ಪಿಸುವದಾದರೆ ಪೂರ್ಣಾಂಗವಾದ ಗಂಡನ್ನು ತರಬೇಕು. ತನಗೆ ಯೆಹೋವನು ಒಲಿಯುವಂತೆ ದೇವದರ್ಶನದ ಗುಡಾರದ ಬಾಗಲಿಗೆ ಅದನ್ನು ತರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 “‘ಅವನು ದನವನ್ನು ಸರ್ವಾಂಗಹೋಮವಾಗಿ ಸಮರ್ಪಿಸುವುದಾದರೆ ಪೂರ್ಣಾಂಗವಾದ ಗಂಡನ್ನು ತರಬೇಕು. ತನ್ನನ್ನು ಯೆಹೋವನು ಮೆಚ್ಚುವಂತೆ ದೇವದರ್ಶನದ ಗುಡಾರದ ಬಾಗಿಲಿಗೆ ಅದನ್ನು ತರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅಂಥವನು ದನಕರುಗಳನ್ನು ದಹನಬಲಿಯನ್ನಾಗಿ ಸಮರ್ಪಿಸುವುದಾದರೆ ಆ ಪ್ರಾಣಿ ಕಳಂಕರಹಿತವಾದ ಗಂಡಾಗಿರಬೇಕು. ಸರ್ವೇಶ್ವರನಿಗೆ ಒಪ್ಪಿಗೆಯಾಗುವಂತೆ ಅದನ್ನು ದೇವದರ್ಶನದ ಗುಡಾರದ ಬಳಿಗೆ ತರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 “ಒಬ್ಬನು ತನ್ನ ದನಗಳಲ್ಲಿ ಒಂದನ್ನು ಸರ್ವಾಂಗಹೋಮವಾಗಿ ಅರ್ಪಿಸಬಯಸಿದರೆ ಆ ಪಶುವು ಯಾವ ದೋಷವಿಲ್ಲದ ಹೋರಿಯಾಗಿರಬೇಕು. ಅವನು ಆ ಪಶುವನ್ನು ದೇವದರ್ಶನಗುಡಾರದ ಬಾಗಿಲಿಗೆ ತರಬೇಕು. ಆಗ ಯೆಹೋವನು ಆ ಸಮರ್ಪಣೆಯನ್ನು ಮೆಚ್ಚಿಕೊಳ್ಳುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 “ ‘ಅಂಥವನು ದನಕರುಗಳನ್ನು ದಹನಬಲಿಯನ್ನಾಗಿ ಸಮರ್ಪಿಸುವುದಾದರೆ, ಆ ಪ್ರಾಣಿ ಕಳಂಕರಹಿತವಾದ ಗಂಡಾಗಿರಬೇಕು. ಯೆಹೋವ ದೇವರಿಗೆ ಒಪ್ಪಿಗೆಯಾಗುವಂತೆ ಅದನ್ನು ದೇವದರ್ಶನದ ಗುಡಾರದ ಬಳಿಗೆ ತರಬೇಕು. ಅಧ್ಯಾಯವನ್ನು ನೋಡಿ |
ಯಾವನಾದರೂ ಯೆಹೋವನಿಗೆ ಸಲ್ಲಿಸಬೇಕಾದ ದೇವರ ವಸ್ತುಗಳನ್ನು ಸಮರ್ಪಿಸುವದರಲ್ಲಿ ಅಜಾಗ್ರತೆಯಿಂದ ದ್ರೋಹಮಾಡಿ ದೋಷಕ್ಕೆ ಒಳಗಾದರೆ ಅವನು ಆ ಅಪರಾಧಪ್ರಾಯಶ್ಚಿತ್ತಕ್ಕಾಗಿ ದೇವರ ಸೇವೆಗೆ ನೇಮಕವಾದ ರೂಪಾಯಿಯ ಮೇರೆಗೆ ಎರಡು ಅಥವಾ ಹೆಚ್ಚು ರೂಪಾಯಿ ಬಾಳುವದೆಂದು ನಿಮಗೆ ತೋರುವ ಪೂರ್ಣಾಂಗವಾದ ಟಗರನ್ನು ಆಡುಕುರಿಗಳ ಹಿಂಡಿನಿಂದ ತೆಗೆದುಕೊಂಡು ಬಂದು ಯೆಹೋವನಿಗೆ ಸಮರ್ಪಿಸಬೇಕು.