Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 1:8 - ಕನ್ನಡ ಸತ್ಯವೇದವು J.V. (BSI)

8 ಅದರ ಮೇಲೆ ಕಟ್ಟಿಗೆಯನ್ನು ಒಟ್ಟಿ ಆ ತುಂಡುಗಳನ್ನೂ ತಲೆಯನ್ನೂ ಕೊಬ್ಬನ್ನೂ ಅದರ ಮೇಲೆ ಕ್ರಮವಾಗಿ ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಮೇಲೆ ಯಾಜಕರು ಅಂದರೆ ಆರೋನನ ಮಕ್ಕಳು, ಆ ತುಂಡುಗಳನ್ನು, ತಲೆಯನ್ನು ಮತ್ತು ಕೊಬ್ಬನ್ನು ಅದರ ಮೇಲೆ ಕ್ರಮವಾಗಿ ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅದರ ಮೇಲೆ ಕಟ್ಟಿಗೆಯನ್ನು ಪೇರಿಸಬೇಕು. ಪ್ರಾಣಿಯ ಆ ತುಂಡುಗಳನ್ನೂ, ತಲೆಯನ್ನೂ, ಕೊಬ್ಬನ್ನೂ ಅದರ ಮೇಲೆ ಕ್ರಮವಾಗಿ ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆರೋನನ ವಂಶದವರಾದ ಯಾಜಕರು ವೇದಿಕೆಯ ಮೇಲೆ ಬೆಂಕಿಯಲ್ಲಿರುವ ಕಟ್ಟಿಗೆಯ ಮೇಲೆ ಪಶುವಿನ ತುಂಡುಗಳನ್ನೂ ತಲೆ ಮತ್ತು ಕೊಬ್ಬನ್ನೂ ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಗ ಯಾಜಕರಾದ ಆರೋನನ ಪುತ್ರರು ಅದರ ಭಾಗಗಳನ್ನು ಅಂದರೆ, ತಲೆಯನ್ನೂ ಮತ್ತು ಕೊಬ್ಬನ್ನೂ ಬಲಿಪೀಠದ ಮೇಲೆ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ಕ್ರಮವಾಗಿ ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 1:8
9 ತಿಳಿವುಗಳ ಹೋಲಿಕೆ  

ಇದಲ್ಲದೆ ಕಟ್ಟಿಗೆಯನ್ನು ವೇದಿಯ ಮೇಲೆ ಕ್ರಮಪಡಿಸಿ ಹೋರಿಯನ್ನು ವಧಿಸಿ ತುಂಡುಮಾಡಿ ಅದರ ಮೇಲಿಟ್ಟನು. ಅನಂತರ ಜನರಿಗೆ - ನಾಲ್ಕು ಕೊಡ ನೀರು ತಂದು ಯಜ್ಞಮಾಂಸದ ಮೇಲೆಯೂ ಕಟ್ಟಿಗೆಯ ಮೇಲೆಯೂ ಹೊಯ್ಯಿರಿ ಎಂದು ಆಜ್ಞಾಪಿಸಿದನು.


ಅವರು ಎರಡು ಹೋರಿಗಳನ್ನು ನಮ್ಮ ಬಳಿಗೆ ತರಲಿ, ಅವುಗಳಲ್ಲೊಂದನ್ನು ಆರಿಸಿಕೊಂಡು ಕಡಿದು ತುಂಡುಮಾಡಿ ಕಟ್ಟಿಗೆಯ ಮೇಲಿಡಲಿ; ಆದರೆ ಬೆಂಕಿಹೊತ್ತಿಸಬಾರದು. ನಾನೂ ಇನ್ನೊಂದನ್ನು ಹಾಗೆಯೇ ಮಾಡಿ ಬೆಂಕಿ ಹೊತ್ತಿಸದೆ ಕಟ್ಟಿಗೆಯ ಮೇಲಿಡುವೆನು.


ಅವನು ಆ ಪಶುವಿನ ದೇಹವನ್ನು ತುಂಡುತುಂಡಾಗಿ ಕಡಿದ ಮೇಲೆ ಯಾಜಕನು ಆ ತುಂಡುಗಳನ್ನೂ ತಲೆಯನ್ನೂ ಕೊಬ್ಬನ್ನೂ ಯಜ್ಞವೇದಿಯ ಮೇಲಣ ಬೆಂಕಿಯಲ್ಲಿ ಕಟ್ಟಿಗೆಯ ಮೇಲೆ ಕ್ರಮವಾಗಿ ಇಡಬೇಕು.


ಆ ಯಜ್ಞಪಶುವಿನ ವಪೆಯನ್ನೂ ಕರುಳುಗಳ ಮೇಲಣ ಎಲ್ಲಾ ಕೊಬ್ಬನ್ನೂ


ಎರಡು ಹುರುಳಿಕಾಯಿಗಳನ್ನೂ ಇವುಗಳ ಮೇಲೆ ಸೊಂಟದಲ್ಲಿರುವ ಕೊಬ್ಬನ್ನೂ ಕಾಳಿಜದ ಹತ್ತಿರ ಹುರುಳಿಕಾಯಿಗಳ ತನಕ ಇರುವ ಕೊಬ್ಬನ್ನೂ ತೆಗೆದು ಯೆಹೋವನಿಗೆ ಹೋಮಮಾಡಬೇಕು.


ಅಂಚಿನಲ್ಲಿ ಹಿಡಿಯೆತ್ತರ ದಿಂಡುಕಟ್ಟಿತ್ತು; ನೈವೇದ್ಯಮಾಂಸವು ಪೀಠಗಳ ಮೇಲಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು