Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 10:19 - ಕನ್ನಡ ಸತ್ಯವೇದವು J.V. (BSI)

19 ಅದಕ್ಕೆ ಆರೋನನು ಮೋಶೆಗೆ - ಇವರು ಈ ಹೊತ್ತು ಯೆಹೋವನ ಸನ್ನಿಧಿಯಲ್ಲಿ ತಮಗೋಸ್ಕರ ದೋಷಪರಿಹಾರಕಯಜ್ಞವನ್ನೂ ಸರ್ವಾಂಗಹೋಮವನ್ನೂ ಸಮರ್ಪಿಸಿದ್ದರೂ ಈ ಆಪತ್ತು ನನಗೆ ಸಂಭವಿಸಿತು; ಹೀಗಿರುವಾಗ ನಾನು ದೋಷಪರಿಹಾರಕ ಯಜ್ಞದ್ರವ್ಯವನ್ನು ಈ ಹೊತ್ತು ಊಟಮಾಡಿದ್ದರೆ ಅದು ಯೆಹೋವನಿಗೆ ಒಳ್ಳೇದಾಗಿ ತೋಚುತ್ತಿತ್ತೋ ಎಂದು ಉತ್ತರಕೊಡಲಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅದಕ್ಕೆ ಆರೋನನು ಮೋಶೆಗೆ, “ಇವರು ಈ ಹೊತ್ತು ಯೆಹೋವನ ಸನ್ನಿಧಿಯಲ್ಲಿ ತಮಗೋಸ್ಕರ ದೋಷಪರಿಹಾರಕ ಯಜ್ಞವನ್ನು ಮತ್ತು ಸರ್ವಾಂಗಹೋಮವನ್ನು ಸಮರ್ಪಿಸಿದ್ದರೂ ಈ ಆಪತ್ತು ನನಗೆ ಸಂಭವಿಸಿತು; ಹೀಗಿರುವಾಗ ನಾನು ದೋಷಪರಿಹಾರಕ ಯಜ್ಞದ್ರವ್ಯವನ್ನು ಈ ಹೊತ್ತು ಊಟಮಾಡಿದ್ದರೆ ಅದು ಯೆಹೋವನ ದೃಷ್ಟಿಯಲ್ಲಿ ಒಳ್ಳೆಯದಾಗಿ ತೋರುತ್ತಿತ್ತೋ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅದಕ್ಕೆ ಆರೋನನು ಮೋಶೆಗೆ, “ಇವರು ಈ ದಿನ ಸರ್ವೇಶ್ವರನ ಸನ್ನಿಧಿಯಲ್ಲಿ ತಮಗೋಸ್ಕರ ದೋಷಪರಿಹಾರಕ ಬಲಿಯನ್ನು ಹಾಗು ದಹನ ಬಲಿಯನ್ನು ಸಮರ್ಪಿಸಿದ್ದರೂ ಈ ಆಪತ್ತು ನನಗೆ ಸಂಭವಿಸಿತು; ಹೀಗಿರುವಲ್ಲಿ ನಾನು ದೋಷಪರಿಹಾರಕ ಬಲಿಮಾಂಸವನ್ನು ಈ ದಿನ ಊಟಮಾಡಿದ್ದರೆ ಅದು ಸರ್ವೇಶ್ವರನಿಗೆ ಸರಿದೋರುತ್ತಿತ್ತೆ?” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆದರೆ ಆರೋನನು ಮೋಶೆಗೆ, “ನೋಡು ಈ ದಿನ ಇವರು ಯೆಹೋವನ ಸನ್ನಿಧಿಗೆ ಪಾಪಪರಿಹಾರಕ ಮತ್ತು ಸರ್ವಾಂಗಹೋಮಗಳನ್ನು ತಂದಿದ್ದರೂ ನನಗೆ ಈ ಆಪತ್ತು ಸಂಭವಿಸಿತು. ಹೀಗಿರುವಾಗ ನಾನು ಪಾಪಪರಿಹಾರಕ ಸಮರ್ಪಣೆಯ ಪಶುವಿನ ಮಾಂಸವನ್ನು ಈ ದಿನದಲ್ಲಿ ತಿಂದಿದ್ದರೆ ಯೆಹೋವನಿಗೆ ಒಳ್ಳೆಯದಾಗಿ ತೋರುತ್ತಿತ್ತೋ? ಇಲ್ಲ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆಗ ಆರೋನನು ಮೋಶೆಗೆ, “ಈ ದಿನ ಅವರು ಪಾಪಪರಿಹಾರ ಬಲಿಯನ್ನು ಮತ್ತು ಅದರ ದಹನಬಲಿಯನ್ನು ಯೆಹೋವ ದೇವರ ಸನ್ನಿಧಿಯಲ್ಲಿ ಸಮರ್ಪಿಸಿದ್ದರು. ಆದರೆ ಈ ದುಃಖ ಘಟನೆಗಳು ನನಗೆ ಸಂಭವಿಸಿದೆ. ಹೀಗಿರುವಲ್ಲಿ ಇಂದು ನಾನು ಆ ಪಾಪ ಪರಿಹಾರದ ಬಲಿದ್ರವ್ಯವನ್ನು ಊಟಮಾಡಿದ್ದರೆ, ಯೆಹೋವ ದೇವರು ಸಂತೋಷಪಡುತ್ತಿದ್ದರೋ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 10:19
17 ತಿಳಿವುಗಳ ಹೋಲಿಕೆ  

ತರುವಾಯ ಸರ್ವಾಂಗಹೋಮಪಶುವನ್ನು ವಧಿಸಿದನು. ಆರೋನನ ಮಕ್ಕಳು ಅದರ ರಕ್ತವನ್ನು ಅವನಿಗೆ ತಂದು ಒಪ್ಪಿಸಿದಾಗ ಅವನು ಅದನ್ನು ಯಜ್ಞವೇದಿಗೆ ಸುತ್ತಲೂ ಎರಚಿದನು.


ಆರೋನನು ಯಜ್ಞವೇದಿಯ ಹತ್ತಿರಕ್ಕೆ ಹೋಗಿ ತನಗೋಸ್ಕರ ದೋಷಪರಿಹಾರಕಯಜ್ಞದ ಹೋರಿಯನ್ನು ವಧಿಸಿದನು.


ಇನ್ನೊಂದನ್ನು ನಡಿಸುತ್ತೀರಿ - ಯೆಹೋವನ ಯಜ್ಞವೇದಿಯನ್ನು ಕಣ್ಣೀರಿನಿಂದಲೂ ಅಳುವಿಕೆಯಿಂದಲೂ ನರಳಾಟದಿಂದಲೂ ತುಂಬಿಸಿ ಮುಚ್ಚುತ್ತೀರಿ; ಆದಕಾರಣ ಆತನು ನಿಮ್ಮ ನೈವೇದ್ಯವನ್ನು ಇನ್ನು ಲಕ್ಷಿಸನು, ನಿಮ್ಮ ಕೈಯಿಂದ ಅದನ್ನು ಪ್ರಸನ್ನನಾಗಿ ಸ್ವೀಕರಿಸನು.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಅಯ್ಯೋ, [ಈ ಸೇವೆಯು] ಎಷ್ಟೋ ಬೇಸರವೆಂದು ನೀವು ಅಂದುಕೊಂಡು ಅದನ್ನು ಛೀಗುಟ್ಟುತ್ತೀರಿ; ಕಳವಿನ ಪಶುವನ್ನೂ ಕುಂಟಾದದ್ದನ್ನೂ ರೋಗಿಯಾದದ್ದನ್ನೂ ತಂದೊಪ್ಪಿಸುತ್ತೀರಿ; ಇಂಥ ನೈವೇದ್ಯವನ್ನು ತಂದೊಪ್ಪಿಸುತ್ತಿರುವಲ್ಲಿ ನಾನು ಅದನ್ನು ನಿಮ್ಮ ಕೈಯಿಂದ ಸ್ವೀಕರಿಸಲೋ; ಇದು ಯೆಹೋವನ ನುಡಿ.


ನನ್ನ ಯಜ್ಞವೇದಿಯ ಮೇಲೆ ಯಾರೂ ಬೆಂಕಿಯನ್ನು ವ್ಯರ್ಥವಾಗಿ ಉರಿಸದಂತೆ ನಿಮ್ಮಲ್ಲೊಬ್ಬನು [ದೇವಾಲಯದ] ಬಾಗಿಲುಗಳನ್ನು ಮುಚ್ಚಿಬಿಟ್ಟರೆ ಎಷ್ಟೋ ಒಳ್ಳೇದು! ನಾನು ನಿಮಗೆ ಮೆಚ್ಚೆನು, ನಿಮ್ಮ ಕೈಯಿಂದ ನೈವೇದ್ಯವನ್ನು ಸ್ವೀಕರಿಸೆನು; ಇದು ಸೇನಾಧೀಶ್ವರ ಯೆಹೋವನ ನುಡಿ.


ಯೆಹೋವನಿಗೆ ದ್ರಾಕ್ಷಾರಸವನ್ನು ನೈವೇದ್ಯವಾಗಿ ಸುರಿಯರು, ಅವರ ಯಜ್ಞಗಳು ಆತನಿಗೆ ಮೆಚ್ಚಿಕೆಯಾಗವು; ಅವರ ಆಹಾರವು ಹೆಣದ ಮನೆಯ ಆಹಾರದಂತಿರುವದು, ಅದನ್ನು ತಿನ್ನುವವರೆಲ್ಲರೂ ಅಶುದ್ಧರಾಗುವರು, ಅದು ಹೊಟ್ಟೆತುಂಬುವದಕ್ಕೆ ಮಾತ್ರ ಅನುಕೂಲಿಸುವದು. ಅದು ಯೆಹೋವನ ಆಲಯಕ್ಕೆ ಬಂದಿಲ್ಲವಷ್ಟೆ.


ಇವರು ಉಪವಾಸ ಮಾಡುವಾಗ ಇವರ ಮೊರೆಯನ್ನು ಕೇಳೆನು; ಹೋಮನೈವೇದ್ಯಗಳನ್ನು ಅರ್ಪಿಸಲು ಸ್ವೀಕರಿಸೆನು; ಖಡ್ಗ ಕ್ಷಾಮ ವ್ಯಾಧಿಗಳಿಂದ ಇವರನ್ನು ನಿರ್ಮೂಲಮಾಡುವೆನು ಎಂದು ಹೇಳಿದನು.


ನೀವು ಶೆಬದ ಧೂಪವನ್ನೂ ದೂರದೇಶದ ಒಳ್ಳೆ ಬಜೆಯನ್ನೂ ನನಗೆ ಅರ್ಪಿಸುವದರಿಂದ ಏನು ಪ್ರಯೋಜನ? ನಿಮ್ಮ ಹೋಮಗಳು ನನಗೆ ಮೆಚ್ಚಿಕೆಯಲ್ಲ, ನಿಮ್ಮ ಯಜ್ಞಗಳು ನನಗೆ ಇಷ್ಟವಲ್ಲ.


ನೀವು [ನನ್ನ ಕಡೆಗೆ] ಕೈಯೆತ್ತುವಾಗ ನಿಮ್ಮನ್ನು ನೋಡದಂತೆ ನನ್ನ ಕಣ್ಣುಗಳನ್ನು ಮರೆಮಾಡಿಕೊಳ್ಳುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿದರೂ ನಾನು ಕೇಳೆನು, ನಿಮ್ಮ ಕೈಗಳಲ್ಲಿ ರಕ್ತವು ತುಂಬಿದೆ.


ಈ ಏರ್ಪಾಟಿನಿಂದ ಗುಡಾರದಲ್ಲಿ ಮುಂದಣ ಭಾಗವು ಇರುವ ತನಕ ದೇವರ ಸಮಕ್ಷಮಕ್ಕೆ ಹೋಗುವ ಮಾರ್ಗವು ಇದುವರೆಗೂ ಪ್ರಕಟವಾಗಲಿಲ್ಲವೆಂಬದನ್ನು ಪವಿತ್ರಾತ್ಮನು ವ್ಯಕ್ತಪಡಿಸುತ್ತಾನೆ.


ಮೊದಲು ತಮ್ಮ ಪಾಪಪರಿಹಾರಕ್ಕಾಗಿ ಆಮೇಲೆ ಜನರ ಪಾಪಪರಿಹಾರಕ್ಕಾಗಿ ಸಮರ್ಪಣೆಮಾಡುವ ಲೇವಿಕ ಮಹಾಯಾಜಕರಂತೆ ಈತನು ಪ್ರತಿನಿತ್ಯವೂ ಸಮರ್ಪಿಸಬೇಕಾದ ಅವಶ್ಯವಿಲ್ಲ. ಈತನು ತನ್ನನ್ನೇ ಸಮರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.


ಯಾವಾಗಲೂ ಕರ್ತನಲ್ಲಿ ಸಂತೋಷಿಸಿರಿ; ಸಂತೋಷಪಡಿರಿ ಎಂದು ತಿರಿಗಿ ಹೇಳುತ್ತೇನೆ.


ಯೆಹೋವನು ಹೀಗೆನ್ನುತ್ತಾನೆ - ಲೆಕ್ಕವಿಲ್ಲದ ನಿಮ್ಮ ಯಜ್ಞಗಳು ನನಗೇಕೆ? ಟಗರುಗಳ ಸರ್ವಾಂಗಹೋಮ, ಪುಷ್ಟಪಶುಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು; ಹೋರಿಕುರಿಹೋತಗಳ ರಕ್ತಕ್ಕೆ ನಾನು ಒಲಿಯೆನು.


ನಾವು [ಸತ್ತವರಿಗೋಸ್ಕರ] ದುಃಖಿಸುವ ಕಾಲದಲ್ಲೆಲ್ಲಾ ಅದರಲ್ಲಿ ಏನೂ ತಿನ್ನಲಿಲ್ಲ; ಅಶುದ್ಧರಾಗಿ ಅದನ್ನು ತೆಗೆದುಹಾಕಲಿಲ್ಲ; ಸತ್ತವರಿಗೋಸ್ಕರ ಅದರಲ್ಲಿ ಏನೂ ಕೊಡಲಿಲ್ಲ; ನಮ್ಮ ದೇವರಾದ ಯೆಹೋವನ ಮಾತಿನಲ್ಲಿ ಲಕ್ಷ್ಯವಿಟ್ಟು ನೀನು ನೇವಿುಸಿದ್ದನ್ನೆಲ್ಲಾ ಅನುಸರಿಸಿದ್ದೇವೆ.


ಅಲ್ಲಿಯೇ ಆತನ ಸನ್ನಿಧಿಯಲ್ಲಿ ಊಟಮಾಡಿ ನಿಮ್ಮ ದೇವರಾದ ಯೆಹೋವನು ನಿಮ್ಮ ಪ್ರಯತ್ನಗಳನ್ನು ಕೈಗೂಡುವಂತೆ ಮಾಡಿದ್ದಕ್ಕಾಗಿ ನೀವೂ ನಿಮ್ಮ ಮನೆಗಳವರೂ ಸಂತೋಷದಿಂದಿರಬೇಕು.


ಮೋಶೆ ಆ ಮಾತನ್ನು ಕೇಳಿ ಒಪ್ಪಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು