Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 11:10 - ಕನ್ನಡ ಸತ್ಯವೇದವು J.V. (BSI)

10 ಆದರೆ ಸಮುದ್ರದಲ್ಲಿದ್ದರೂ ನದಿಯಲ್ಲಿದ್ದರೂ ಜಲಚರಗಳಾದ ಸಕಲವಿಧವಾದ ಜೀವಜಂತುಗಳಲ್ಲಿ ಯಾವ ಜಾತಿಗೆ ರೆಕ್ಕೆಯೂ ಪರೆಪರೆಯಾದ ಮೈಯೂ ಇರುವದಿಲ್ಲವೋ ಅದು ನಿಮಗೆ ನಿಷಿದ್ಧವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆದರೆ ಸಮುದ್ರದಲ್ಲಿದ್ದರೂ ಅಥವಾ ನದಿಯಲ್ಲಿದ್ದರೂ ಜಲಚರಗಳಾದ ಸಕಲವಿಧವಾದ ಜೀವಜಂತುಗಳಲ್ಲಿ ಯಾವ ಜಾತಿಗೆ ರೆಕ್ಕೆಯೂ ಮತ್ತು ಪರೆಪರೆಯಾದ ಮೈಯೂ ಇರುವುದಿಲ್ಲವೋ ಅದು ನಿಮಗೆ ನಿಷಿದ್ಧವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆದರೆ ಸಮುದ್ರದಲ್ಲಿದ್ದರೂ ನದಿಯಲ್ಲಿದ್ದರೂ ಜಲಚರಗಳಾದ ಸಕಲವಿಧವಾದ ಜೀವಜಂತುಗಳಲ್ಲಿ ಯಾವ ಜಾತಿಗೆ ರೆಕ್ಕೆಯೂ ಪರೆಪರೆಯಾದ ಮೈಯೂ ಇರುವುದಿಲ್ಲವೋ ಅದು ನಿಮಗೆ ನಿಷಿದ್ಧವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10-11 ಆದರೆ ನೀರಿನಲ್ಲಿಯಾಗಲಿ ನದಿಯಲ್ಲಾಗಲಿ ಜೀವಿಸುತ್ತಿರುವ ಜಲಪ್ರಾಣಿಗೆ ರೆಕ್ಕೆಗಳು ಮತ್ತು ಪರೆಗಳು ಇಲ್ಲದಿದ್ದರೆ, ನೀವು ಆ ಪ್ರಾಣಿಯನ್ನು ತಿನ್ನಕೂಡದು. ತಿನ್ನುವುದಕ್ಕೆ ಅಯೋಗ್ಯವಾದದ್ದೆಂದು ಯೆಹೋವನು ಹೇಳುವ ಪ್ರಾಣಿಗಳಲ್ಲಿ ಅದು ಒಂದಾಗಿದೆ. ಆ ಪ್ರಾಣಿಯ ಮಾಂಸವನ್ನು ತಿನ್ನಕೂಡದು. ಅದರ ಮೃತಶರೀರವನ್ನೂ ಮುಟ್ಟಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಸಮುದ್ರಗಳಲ್ಲಿಯೂ, ನದಿಗಳಲ್ಲಿಯೂ ನೀರೊಳಗೆ ಚಲಿಸುವ ಮತ್ತು ಜೀವಿಸುವ ಎಲ್ಲವುಗಳಲ್ಲಿ ಈಜುರೆಕ್ಕೆ ಮತ್ತು ಪೊರೆಯಿಲ್ಲದವುಗಳು ನಿಮಗೆ ನಿಷಿದ್ಧವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 11:10
10 ತಿಳಿವುಗಳ ಹೋಲಿಕೆ  

ಶಿಷ್ಟರಿಗೆ ದುರ್ಮಾರ್ಗಿಯು ಅಸಹ್ಯನು; ದುಷ್ಟರಿಗೆ ಸರಳಮಾರ್ಗಿಯು ಅಸಹ್ಯನು.


ಆ ಯಜ್ಞಪಶುವಿನ ಮಾಂಸದಲ್ಲಿ ಸ್ವಲ್ಪವನ್ನಾದರೂ ಮೂರನೆಯ ದಿನದಲ್ಲಿ ಊಟಮಾಡಿದರೆ ಆ ಯಜ್ಞವೇ ಸಮರ್ಪಕವಾದದ್ದಲ್ಲ; ಅರ್ಪಿಸಿದವನಿಗೆ ಅದರಿಂದ ಫಲವೇನೂ ದೊರೆಯುವದಿಲ್ಲ. ಅದು ಹೇಯವಾದದ್ದರಿಂದ ಅದನ್ನು ತಿಂದವನು ಆ ಪಾಪದ ಫಲವನ್ನು ಅನುಭವಿಸಬೇಕು.


ಜ್ಞಾನಿಗಳ ಸಹವಾಸಿ ಜ್ಞಾನಿಯಾಗುವನು; ಜ್ಞಾನಹೀನರ ಒಡನಾಡಿ ಸಂಕಟಪಡುವನು.


ನಿಷಿದ್ಧವಾಗಿರುವ ಯಾವದನ್ನೂ ನೀವು ತಿನ್ನಕೂಡದು.


ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಸೇರಿದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.


ತರುವಾಯ ದೇವರು - ಗುಂಪುಗುಂಪಾಗಿ ಚಲಿಸುವ ಜಲಜಂತುಗಳು ನೀರಿನಲ್ಲಿ ತುಂಬಿಕೊಳ್ಳಲಿ; ಪಕ್ಷಿಗಳು ಭೂವಿುಯ ಮೇಲೆ ಅಂತರಿಕ್ಷದೊಳಗೆ ಹಾರಾಡಲಿ ಎಂದು ಹೇಳಿದನು.


ಜಲಜಂತುಗಳಲ್ಲಿ ನೀವು ತಿನ್ನಬಹುದಾದವುಗಳು ಯಾವವಂದರೆ - ಸಮುದ್ರದಲ್ಲಿಯಾಗಲಿ ನದಿಯಲ್ಲಿಯಾಗಲಿ ಬೇರೆ ಜಲಾಶಯದಲ್ಲಿಯಾಗಲಿ ಯಾವ ಜಾತಿಯ ಪ್ರಾಣಿಗೆ ರೆಕ್ಕೆ ಇದ್ದು ಮೈಯೆಲ್ಲಾ ಪರೆಪರೆಯಾಗಿರುವದೋ ಅದರ ಮಾಂಸವನ್ನು ತಿನ್ನಬಹುದು.


ಅಂಥವು ಸಂಪೂರ್ಣವಾಗಿ ನಿಷಿದ್ಧವಾಗಿರುವದರಿಂದ ಅವುಗಳ ಮಾಂಸವನ್ನು ನೀವು ತಿನ್ನಬಾರದು; ಅವುಗಳ ಹೆಣಗಳು ನಿಮಗೆ ಹೇಯವಾಗಿರಬೇಕು.


ಯಾವ ಜಾತಿಗೆ ರೆಕ್ಕೆಯೂ ಪರೆಪರೆಯಾದ ಮೈಯೂ ಇರುವದಿಲ್ಲವೋ ಅವುಗಳ ಮಾಂಸವನ್ನು ನೀವು ತಿನ್ನಕೂಡದು; ಅದು ನಿಮಗೆ ಅಶುದ್ಧ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು