Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 11:33 - ಕನ್ನಡ ಸತ್ಯವೇದವು J.V. (BSI)

33 ಆ ಜಂತುಗಳ ಹೆಣ ಮಣ್ಣಿನ ಪಾತ್ರೆಯಲ್ಲಿ ಬಿದ್ದರೆ ಆ ಪಾತ್ರೆಯಲ್ಲಿರುವದೆಲ್ಲಾ ಅಶುದ್ಧವಾಗಿರುವದು. ಮತ್ತು ಆ ಪಾತ್ರೆಯನ್ನು ನೀವು ಒಡೆದುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಆ ಜಂತುಗಳ ಹೆಣ ಮಣ್ಣಿನ ಪಾತ್ರೆಯಲ್ಲಿ ಬಿದ್ದರೆ ಆ ಪಾತ್ರೆಯಲ್ಲಿರುವುದೆಲ್ಲಾ ಅಶುದ್ಧವಾಗಿರುವುದು ಮತ್ತು ಆ ಪಾತ್ರೆಯನ್ನು ನೀವು ಒಡೆದುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಆ ಜಂತುಗಳ ಹೆಣ ಮಣ್ಣಿನ ಪಾತ್ರೆಯಲ್ಲಿ ಬಿದ್ದರೆ ಆ ಪಾತ್ರೆಯಲ್ಲಿರುವುದೆಲ್ಲಾ ಅಶುದ್ಧವಾಗಿರುವುದು. ಮತ್ತು ಆ ಪಾತ್ರೆಯನ್ನು ನೀವು ಒಡೆದುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಅಶುದ್ಧವಾದ ಆ ಪ್ರಾಣಿಗಳಲ್ಲಿ ಯಾವುದಾದರೊಂದು ಸತ್ತು ಮಣ್ಣಿನ ಬೋಗುಣಿಗೆ ಬಿದ್ದರೆ, ಆಗ ಆ ಬೋಗುಣಿಯಲ್ಲಿ ಇರುವುದೆಲ್ಲಾ ಅಶುದ್ಧವಾಗುವುದು. ಆ ಬೋಗುಣಿಯನ್ನು ನೀವು ಒಡೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಪ್ರತಿಯೊಂದು ಮಣ್ಣಿನ ಪಾತ್ರೆಯಲ್ಲಿ ಅವುಗಳಲ್ಲಿ ಯಾವುದಾದರೂ ಬಿದ್ದರೆ, ಅದರಲ್ಲಿ ಏನಿದ್ದರೂ ಅಶುದ್ಧವಾಗುವುದು ಮತ್ತು ನೀವು ಅದನ್ನು ಒಡೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 11:33
11 ತಿಳಿವುಗಳ ಹೋಲಿಕೆ  

ಸ್ರಾವವುಳ್ಳವನು ಮುಟ್ಟಿದ ಮಣ್ಣಿನ ಪಾತ್ರೆಯನ್ನು ಒಡೆದುಬಿಡಬೇಕು. ಅವನು ಮರದ ಪಾತ್ರೆಯನ್ನು ಮುಟ್ಟಿದರೆ ಅದನ್ನು ನೀರಿನಿಂದ ತೊಳೆಯಬೇಕು.


ಅದನ್ನು ಬೇಯಿಸಿದ ಮಣ್ಣೆನ ಪಾತ್ರೆಯನ್ನು ಒಡೆದುಬಿಡಬೇಕು. ತಾಮ್ರದ ಪಾತ್ರೆಯಲ್ಲಿ ಬೇಯಿಸಿದ್ದಾದರೆ ಆ ಪಾತ್ರೆಯನ್ನು ಬೆಳಗಿ ನೀರಿನಿಂದ ತೊಳೆಯಬೇಕು.


ಆತನು ಎಲ್ಲವನ್ನೂ ತನಗೆ ಅಧೀನಮಾಡಿಕೊಳ್ಳಲಾಗುವ ಪರಾಕ್ರಮವನ್ನು ಸಾಧಿಸಿ ದೀನಾವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸಿ ಪ್ರಭಾವವುಳ್ಳ ತನ್ನ ದೇಹದ ಸಾರೂಪ್ಯವಾಗುವಂತೆ ಮಾಡುವನು.


ಮೋವಾಬಿನ ಎಲ್ಲಾ ಮಾಳಿಗೆಗಳ ಮೇಲೆಯೂ ಚೌಕಗಳಲ್ಲಿಯೂ ರೋದನವು ತುಂಬಿದೆ; ಮೋವಾಬನ್ನು ಯಾರಿಗೂ ಇಷ್ಟವಲ್ಲದ ಮಡಿಕೆಯಂತೆ ಒಡೆದು ಬಿಟ್ಟಿದ್ದೇನೆ ಎಂದು ಯೆಹೋವನು ಅನ್ನುತ್ತಾನೆ.


ಅವನು ಆ ಮನೆಯನ್ನು ಕೆಡಹಿಸಿ ಅದರ ಎಲ್ಲಾ ಕಲ್ಲುಗಳನ್ನೂ ತೊಲೆಗಳನ್ನೂ ಮಣ್ಣನ್ನೂ ಊರಿನ ಹೊರಗೆ ಅಪವಿತ್ರಸ್ಥಳದಲ್ಲಿ ಹಾಕಿಸಿಬಿಡಬೇಕು.


ಆ ಜಂತುಗಳ ಹೆಣ ಯಾವ ಸಾಮಾನಿನ ಮೇಲೆ ಬಿದ್ದರೂ ಆ ಸಾಮಾನು ಅಶುದ್ಧವಾಗುವದು. ಒಲೆಗಳಲ್ಲಿ ಅದು ಒಂಟೊಲೆಯಾಗಿದ್ದರೂ ಜೋಡೊಲೆಯಾಗಿದ್ದರೂ ಅದು ಅಶುದ್ಧವಾದದರಿಂದ ಅದನ್ನು ಒಡೆದುಬಿಡಬೇಕು; ಅದು ಅಶುದ್ಧವೇ.


ಅದರಲ್ಲಿರುವ ತಿನ್ನತಕ್ಕ ಪದಾರ್ಥವೆಲ್ಲಾ ನೀರಿನಿಂದ ನೆನದದ್ದಾಗಿದ್ದರೆ ಅಶುದ್ಧವಾಗುವದು. ಪಾನದ್ರವ್ಯವು ಆ ಪಾತ್ರೆಯಲ್ಲಿದ್ದರೆ ಅದೂ ಅಶುದ್ಧವಾಗುವದು.


ಕಬ್ಬಿಣದ ಹಂಚಿನ ಮೇಲೆ ಎಣ್ಣೆ ಸವರಿ ಅದನ್ನು ಸುಡಬೇಕು. ಅದನ್ನು ತರುವಾಗ ಅದು ಎಣ್ಣೆಯಿಂದ ನೆನೆದೇ ಇರಬೇಕು. ಅದನ್ನು ಭಾಗ ಭಾಗವಾಗಿ ಮಾಡಿ ಯೆಹೋವನಿಗೆ ಸುವಾಸನೆಯುಳ್ಳ ನೈವೇದ್ಯವನ್ನಾಗಿ ಸಮರ್ಪಿಸಬೇಕು.


ಆ ವಸ್ತುವು ಬಟ್ಟೆಯಾದರೂ ಹಾಸಾದರೂ ಹೊಕ್ಕಾದರೂ ಉಣ್ಣೆಯದಾದರೂ ನಾರಿನದಾದರೂ ತೊಗಲಿನದಾದರೂ ಅದರಲ್ಲಿ ಪ್ರಾಣಕ್ಕೆ ಅಪಾಯಕರವಾದ ಕುಷ್ಠವಿರುವದರಿಂದ ಅದನ್ನು ಬೆಂಕಿಯಿಂದ ಸುಡಿಸಿಬಿಡಬೇಕು.


ಮತ್ತು ಮುಚ್ಚಳ ಹಾಕಿ ಕಟ್ಟದಿರುವ ಎಲ್ಲಾ ಪಾತ್ರೆಗಳು ಅಶುದ್ಧವಾಗಿರುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು