Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 11:44 - ಕನ್ನಡ ಸತ್ಯವೇದವು J.V. (BSI)

44 ಯಾಕಂದರೆ ನಾನು ನಿಮ್ಮ ದೇವರಾದ ಯೆಹೋವನು; ನೀವು ದೇವಜನರಿಗೆ ತಕ್ಕಂತಿರಬೇಕು. ನಾನು ಪರಿಶುದ್ಧನಾಗಿರುವದರಿಂದ ನೀವೂ ಪರಿಶುದ್ಧರಾಗಿರಬೇಕು. ನೆಲದ ಮೇಲೆ ಹರಿದಾಡುವ ಯಾವ ಜಂತುವಿನಿಂದಾದರೂ ನೀವು ನಿಮ್ಮನ್ನು ಅಶುದ್ಧಮಾಡಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಏಕೆಂದರೆ ನಾನು ನಿಮ್ಮ ದೇವರಾದ ಯೆಹೋವನು; ನೀವು ದೇವಜನರಿಗೆ ತಕ್ಕಂತೆ ಇರಬೇಕು. ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು. ನೆಲದ ಮೇಲೆ ಹರಿದಾಡುವ ಯಾವ ಜಂತುವಿನಿಂದಾದರೂ ನೀವು ನಿಮ್ಮನ್ನು ಅಶುದ್ಧಮಾಡಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

44 ಏಕೆಂದರೆ ನಾನು ನಿಮ್ಮ ದೇವರಾದ ಸರ್ವೇಶ್ವರ; ನೀವು ದೇವಜನರಿಗೆ ತಕ್ಕಂತಿರಬೇಕು. ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು. ನೆಲದ ಮೇಲೆ ಹರಿದಾಡುವ ಯಾವ ಜಂತುವಿನಿಂದಾದರೂ ನೀವು ನಿಮ್ಮನ್ನು ಅಶುದ್ಧಮಾಡಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ಯಾಕೆಂದರೆ, ನಾನೇ ನಿಮ್ಮ ದೇವರಾದ ಯೆಹೋವನು. ನಾನು ಪರಿಶುದ್ಧನಾಗಿದ್ದೇನೆ, ಆದ್ದರಿಂದ ನೀವೂ ಪರಿಶುದ್ಧರಾಗಿರಬೇಕು. ಹರಿದಾಡುವ ಆ ಜಂತುಗಳಿಂದ ನಿಮ್ಮನ್ನು ಅಶುದ್ಧರನ್ನಾಗಿ ಮಾಡಿಕೊಳ್ಳಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ನಾನೇ. ನೀವು ನಿಮ್ಮನ್ನು ಪ್ರತಿಷ್ಠಿಸಿಕೊಳ್ಳಿರಿ. ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು. ಇದಲ್ಲದೆ ಭೂಮಿಯ ಮೇಲೆ ಹರಿದಾಡುವ ಯಾವ ಬಗೆಯ ಜಂತುಗಳಿಂದಲೂ ನಿಮ್ಮನ್ನು ಅಶುದ್ಧಮಾಡಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 11:44
34 ತಿಳಿವುಗಳ ಹೋಲಿಕೆ  

ನೀನು ದಾಸತ್ವದಲ್ಲಿದ್ದ ಐಗುಪ್ತದೇಶದೊಳಗಿಂದ ನಿನ್ನನ್ನು ಬಿಡುಗಡೆ ಮಾಡಿದ ಯೆಹೋವನು ಎಂಬ ನಿನ್ನ ದೇವರು ನಾನೇ.


ನೀನು ಇಸ್ರಾಯೇಲ್ಯರ ಸಮೂಹದವರಿಗೆ ಹೀಗೆ ಆಜ್ಞಾಪಿಸಬೇಕು - ನಿಮ್ಮ ದೇವರಾದ ಯೆಹೋವನೆಂಬ ನಾನು ಪರಿಶುದ್ಧನಾಗಿರುವದರಿಂದ ನೀವೂ ಪರಿಶುದ್ಧರಾಗಿರಬೇಕು.


ನಾನು ನಿಮ್ಮ ದೇವರಾದ ಯೆಹೋವನಾಗಿರುವದರಿಂದ ನೀವು ನನ್ನವರಾಗಿ ಪರಿಶುದ್ಧರಾಗಿರಬೇಕು.


ದೇವರು ನಮ್ಮನ್ನು ಬಂಡತನಕ್ಕೆ ಕರೆಯದೆ ಶುದ್ಧರಾಗಿರುವದಕ್ಕೆ ಕರೆದನು.


ಯೆಹೋವನೆಂಬ ನಾನು ಪರಿಶುದ್ಧನಾಗಿದ್ದೇನೆ, ಮತ್ತು ನೀವು ನನ್ನ ಜನರಾಗುವಂತೆ ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ್ದೇನೆ; ಆದದರಿಂದ ನೀವು ನನಗೆ ಮೀಸಲಾಗಿರಬೇಕು.


ನೀವಾದರೋ ನಿಮ್ಮನ್ನು ಕತ್ತಲೆಯೊಳಗಿಂದ ಕರೆದು ತನ್ನ ಆಶ್ಚರ್ಯಕರವಾದ ಬೆಳಕಿನಲ್ಲಿ ಸೇರಿಸಿದಾತನ ಗುಣಾತಿಶಯಗಳನ್ನು ಪ್ರಚಾರಮಾಡುವವರಾಗುವಂತೆ ದೇವರಾದುಕೊಂಡ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಮೀಸಲಾದ ಜನವೂ ದೇವರ ಸ್ವಕೀಯ ಪ್ರಜೆಯೂ ಆಗಿದ್ದೀರಿ.


ಅವರು ನಿಮ್ಮ ದೇವರ ಆಹಾರವನ್ನು ಸಮರ್ಪಿಸುವವರಾದ ಕಾರಣ ಅವರನ್ನು ದೇವರ ಸೇವಕರೆಂದು ಭಾವಿಸಬೇಕು. ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡಿರುವ ಯೆಹೋವನೆಂಬ ನಾನು ಪರಿಶುದ್ಧನಾಗಿರುವದರಿಂದ ಅವರನ್ನೂ ಪರಿಶುದ್ಧರೆಂದು ನೀವು ಭಾವಿಸಬೇಕು.


ಯಾಕಂದರೆ ನೀವು ಕೇವಲ ನಿಮ್ಮ ದೇವರಾದ ಯೆಹೋವನ ಜನರೇ; ಆತನು ಭೂಲೋಕದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯಜನರಾಗುವದಕ್ಕೆ ಆದುಕೊಂಡಿದ್ದಾನಲ್ಲಾ.


ಅನ್ಯಾಯ ಮಾಡುವವನು ಇನ್ನೂ ಅನ್ಯಾಯಮಾಡಲಿ; ಮೈಲಿಗೆಯಾದವನು ತನ್ನನ್ನು ಇನ್ನೂ ಮೈಲಿಗೆಮಾಡಿಕೊಳ್ಳಲಿ; ನೀತಿವಂತನು ಇನ್ನೂ ನೀತಿಯನ್ನು ಅನುಸರಿಸಲಿ; ಪವಿತ್ರನು ತನ್ನನ್ನು ಇನ್ನೂ ಪವಿತ್ರಮಾಡಿಕೊಳ್ಳಲಿ.


ನಮ್ಮ ಯೆಹೋವದೇವರನ್ನು ಘನಪಡಿಸಿರಿ; ಆತನ ಪರಿಶುದ್ಧಪರ್ವತದ ಕಡೆಗೆ ಅಡ್ಡಬೀಳಿರಿ. ನಮ್ಮ ಯೆಹೋವದೇವರು ಪರಿಶುದ್ಧನು.


ನಮ್ಮ ಯೆಹೋವದೇವರನ್ನು ಘನಪಡಿಸಿರಿ; ಆತನ ಪಾದಪೀಠದ ಮುಂದೆ ಅಡ್ಡಬೀಳಿರಿ. ಆತನು ಪರಿಶುದ್ಧನು.


ಆದದರಿಂದ ಪರಲೋಕದಲ್ಲಿರುವ ನಿಮ್ಮ ತಂದೆಯು ಯಾವ ದೋಷವೂ ಇಲ್ಲದವನಾಗಿರುವಂತೆ ನೀವೂ ದೋಷವಿಲ್ಲದವರಾಗಿರ್ರಿ.


ಆಗ ಮೋಶೆ ಆರೋನನಿಗೆ - ಯೆಹೋವನು ಹೇಳಿದ ಮಾತಿಗೆ ಇದೇ ದೃಷ್ಟಾಂತ; ಆ ಮಾತು ಏನಂದರೆ - ನಾನು ಪರಿಶುದ್ಧನೆಂಬದನ್ನು ನನ್ನ ಬಳಿಯಲ್ಲಿರುವವರ ಮೂಲಕವಾಗಿಯೇ ತೋರ್ಪಡಿಸುವೆನು, ಜನರೆಲ್ಲರಿಗೆ ತಿಳಿಯುವಂತೆ ನನ್ನ ಘನತೆಯನ್ನು ಸ್ಥಾಪಿಸುವೆನು ಎಂಬದೇ ಎಂದು ಹೇಳಿದನು. ಅದಕ್ಕೆ ಆರೋನನು ಮೌನವಾಗಿದ್ದನು.


ನಿಮ್ಮ ದೇವರಾದ ಯೆಹೋವನೊಬ್ಬನನ್ನೇ ಆರಾಧಿಸಬೇಕು; ಆಗ ಆತನು ನಿಮ್ಮ ಅನ್ನಪಾನಗಳನ್ನು ಆಶೀರ್ವದಿಸುವನು. ನಿಮ್ಮೊಳಗೆ ಯಾವ ವ್ಯಾಧಿಯೂ ಉಂಟಾಗದಂತೆ ಮಾಡುವೆನು;


ನೀವು ನನಗೆ ಯಾಜಕ ರಾಜ್ಯವೂ ಪರಿಶುದ್ಧ ಜನವೂ ಆಗಿರುವಿರಿ. ಇವೇ ನೀನು ಇಸ್ರಾಯೇಲ್ಯರಿಗೆ ಹೇಳಬೇಕಾದ ಮಾತುಗಳು ಎಂದನು.


ಯೆಹೋವನೆಂಬ ನಾನು ನಿನ್ನ ದೇವರಾಗಿದ್ದೇನಷ್ಟೆ, ಇಸ್ರಾಯೇಲ್ಯರ ಸದಮಲಸ್ವಾವಿುಯಾದ ನಾನು ನಿನ್ನ ರಕ್ಷಕನು. ಐಗುಪ್ತವನ್ನು ನಿನ್ನ ವಿಮೋಚನೆಗೆ ಈಡುಮಾಡಿದ್ದೇನೆ; ನಿನಗೆ ಬದಲಾಗಿ ಕೂಷ್ ಮತ್ತು ಸೆಬಾ ಸೀಮೆಗಳನ್ನು ಕೊಟ್ಟಿದ್ದೇನೆ.


ಅಗಮ್ಯದೇವರಾದ ಯೆಹೋವನ ಮುಂದೆ ಯಾರು ನಿಂತಾರು? ಇನ್ನು ಮೇಲೆ ಈತನು ಹೋಗತಕ್ಕ ಸ್ಥಳವಾವದು ಎಂದು ಮಾತಾಡಿಕೊಂಡು


ನೀವು ಅಂಥ ಯಾವ ಸಣ್ಣ ಜೀವಿಯನ್ನೂ ತಿಂದು ನಿಮ್ಮನ್ನು ನೀವೇ ಹೇಸಿಕೆ ಮಾಡಿಕೊಂಡು ಅಶುದ್ಧರಾಗಬಾರದು.


ನಾನು ನಿಮ್ಮನ್ನು ನನ್ನ ಪ್ರಜೆಯೆಂದು ಆರಿಸಿಕೊಂಡು ನಿಮಗೆ ದೇವರಾಗಿರುವೆನು. ಐಗುಪ್ತ್ಯರು ಮಾಡಿಸುವ ಬಿಟ್ಟೀ ಸೇವೆಯನ್ನು ನಾನು ನಿಮಗೆ ತಪ್ಪಿಸಿದಾಗ ಯೆಹೋವನು ಎಂಬ ನಾನೇ ನಿಮ್ಮ ದೇವರಾಗಿದ್ದೇನೆಂಬದು ನಿಮಗೆ ತಿಳಿದುಬರುವದು.


ಗೊತ್ತುಮಾಡಿಕೊಳ್ಳದೆ ಇಬ್ಬರು ಜೊತೆಯಾಗಿ ನಡೆಯುವರೋ?


ಅಲೆಗಳು ಭೋರ್ಗರೆಯುವಷ್ಟು ಸಮುದ್ರವನ್ನು ರೇಗಿಸುವ ನಿನ್ನ ದೇವರಾದ ಯೆಹೋವನು ನಾನೇ; ಸೇನಾಧೀಶ್ವರನಾದ ಯೆಹೋವನೆಂಬದೇ ನನ್ನ ನಾಮಧೇಯ.


ಇಸ್ರಾಯೇಲ್ಯರ ಗುಣುಗುಟ್ಟುವಿಕೆಯು ನನಗೆ ಕೇಳಿಸಿತು. ನೀನು ಅವರಿಗೆ - ಸಾಯಂಕಾಲದಲ್ಲಿ ಮಾಂಸವನ್ನೂ ಹೊತ್ತಾರೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ತಿನ್ನುವಿರಿ; ಇದರಿಂದ ನಾನು ನಿಮ್ಮ ದೇವರಾದ ಯೆಹೋವನೆಂಬದು ನಿಮಗೆ ಗೊತ್ತಾಗುವದೆಂದು ಹೇಳಬೇಕು ಎಂಬದೇ.


ಮೋಶೆ ಜನರ ಮಾತುಗಳನ್ನು ಯೆಹೋವನಿಗೆ ಅರಿಕೆಮಾಡಲಾಗಿ ಯೆಹೋವನು ಅವನಿಗೆ ಹೇಳಿದ್ದೇನಂದರೆ - ನೀನು ಜನರ ಬಳಿಗೆ ಹೋಗಿ ಈ ಹೊತ್ತು ನಾಳೆ ಅವರನ್ನು ಪರಿಶುದ್ಧಗೊಳಿಸು;


ನೀವು ನನಗೆ ಪರಿಶುದ್ಧ ಜನರಾಗಿರಬೇಕು; ಆದದರಿಂದ ಕಾಡುಮೃಗಕೊಂದದ್ದನ್ನು ತಿನ್ನಬಾರದು; ಅದನ್ನು ನಾಯಿಗಳಿಗೆ ಬಿಡಬೇಕು.


ನೀನು ಇಸ್ರಾಯೇಲ್ಯರಿಗೆ ಹೀಗೆ ಆಜ್ಞಾಪಿಸಬೇಕು - ನಾನು ನಿಮ್ಮ ದೇವರಾಗಿರುವ ಯೆಹೋವನು;


ಪ್ರತಿಯೊಬ್ಬನು ತನ್ನ ತಾಯಿತಂದೆಗಳ ವಿಷಯದಲ್ಲಿ ಭಯಭಕ್ತಿಯಿಂದ ನಡೆದುಕೊಳ್ಳಬೇಕು. ನಾನು ನೇವಿುಸಿರುವ ಸಬ್ಬತ್‍ದಿನಗಳನ್ನು ಆಚರಿಸಬೇಕು. ನಾನು ನಿಮ್ಮ ದೇವರಾದ ಯೆಹೋವನು.


ನನ್ನ ಆಜ್ಞೆಗಳನ್ನೇ ಲಕ್ಷಿಸಿ ಅನುಸರಿಸಿ ನಿಮ್ಮ ದೇವರಿಗೇ ಪ್ರತಿಷ್ಠಿತರಾಗಿರಬೇಕೆಂಬುದೇ.


ಅದೇ ಮೇರೆಗೆ ನಿಮ್ಮ ಕುರಿದನಗಳ ಚೊಚ್ಚಲುಮರಿಗಳನ್ನು ನನಗೆ ಸಮರ್ಪಿಸಬೇಕು. ಏಳು ದಿವಸ ಆ ಮರಿ ತಾಯಿಯ ಹತ್ತಿರ ಇರಲಿ; ಎಂಟನೆಯ ದಿನದಲ್ಲಿ ಅದನ್ನು ನನಗೆ ಸಮರ್ಪಿಸಬೇಕು.


ಸುಳ್ಳುದೇವರುಗಳ ಕಡೆಗೆ ತಿರುಗಿಕೊಳ್ಳಬಾರದು; ದೇವರೆಂದು ಎರಕದ ವಿಗ್ರಹಗಳನ್ನು ಮಾಡಿಕೊಳ್ಳಬಾರದು. ನಾನು ನಿಮ್ಮ ದೇವರಾದ ಯೆಹೋವನು.


ದ್ರಾಕ್ಷೆಯ ತೋಟಗಳಲ್ಲಿಯೂ ಹಕ್ಕಲಾಯಕೂಡದು; ಉದುರಿದ ಹಣ್ಣುಗಳನ್ನು ಆರಿಸಿಕೊಳ್ಳದೆ ಬಡವರಿಗೂ ಪರದೇಶಿಗಳಿಗೂ ಬಿಟ್ಟುಬಿಡಬೇಕು. ನಾನು ನಿಮ್ಮ ದೇವರಾದ ಯೆಹೋವನು.


ಆಗ ಯೆಹೋಶುವನು ಅವರಿಗೆ - ನೀವು ಯೆಹೋವನನ್ನು ಸೇವಿಸಲಾರಿರಿ. ಆತನು ಪರಿಶುದ್ಧನೂ ತನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದವನೂ ಆಗಿರುವ ದೇವರು. ಆತನು ನಿಮ್ಮ ದ್ರೋಹಾಪರಾಧಗಳನ್ನು ಕ್ಷವಿುಸುವದಿಲ್ಲ.


ಯೆಹೋವನಂಥ ಪರಿಶುದ್ಧನು ಇಲ್ಲವೇ ಇಲ್ಲ; ನಿನ್ನ ಹೊರತು ದೇವರು ಯಾರು? ನಮ್ಮ ದೇವರೇ ಅಸಮಾನವಾದ ಆಶ್ರಯದುರ್ಗವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು