ಯಾಜಕಕಾಂಡ 12:2 - ಕನ್ನಡ ಸತ್ಯವೇದವು J.V. (BSI)2 ನೀನು ಇಸ್ರಾಯೇಲ್ಯರಿಗೆ ಹೀಗೆ ಆಜ್ಞಾಪಿಸಬೇಕು - ಒಬ್ಬ ಸ್ತ್ರೀ ಗಂಡುಮಗುವನ್ನು ಹೆತ್ತರೆ ತಾನು ತಿಂಗಳ ಮುಟ್ಟಿನಿಂದ ಹೇಗೆ ಅಶುದ್ಧಳಾಗುವಳೋ ಹಾಗೆಯೇ ಏಳು ದಿನಗಳ ತನಕ ಅಶುದ್ಧಳಾಗಿರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ಒಬ್ಬ ಸ್ತ್ರೀ ಗಂಡುಮಗುವಿಗೆ ಜನ್ಮ ನೀಡಿದರೆ ತಾನು ತಿಂಗಳ ಮುಟ್ಟಿನಿಂದ ಹೇಗೆ ಅಶುದ್ಧಳಾಗುವಳೋ ಹಾಗೆಯೇ ಏಳು ದಿನಗಳ ತನಕ ಅಶುದ್ಧಳಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ನೀನು ಇಸ್ರಯೇಲರಿಗೆ ಇಂತೆಂದು ಆಜ್ಞಾಪಿಸು - ‘ಒಬ್ಬ ಮಹಿಳೆ ಗಂಡುಮಗುವನ್ನು ಹೆತ್ತರೆ ತಾನು ತಿಂಗಳ ಮುಟ್ಟಿನಿಂದ ಹೇಗೆ ಅಶುದ್ಧಳಾಗುತ್ತಾಳೋ ಹಾಗೆಯೇ ಏಳು ದಿನಗಳ ತನಕ ಅಶುದ್ಧಳಾಗಿರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 “ಇಸ್ರೇಲರಿಗೆ ಹೀಗೆ ಹೇಳು: “ಒಬ್ಬ ಸ್ತ್ರೀಯು ಬಸುರಾಗಿ ಗಂಡುಮಗುವನ್ನು ಹೆತ್ತರೆ, ಅವಳು ಏಳು ದಿನಗಳವರೆಗೆ ಅಶುದ್ಧಳಾಗಿರುವಳು. ಅವಳ ತಿಂಗಳ ಮುಟ್ಟಿನಿಂದ ಅಶುದ್ಧಳಾಗುವಂತೆಯೇ ಅಶುದ್ಧಳಾಗಿರುವಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ಇಸ್ರಾಯೇಲರೊಂದಿಗೆ ಮಾತನಾಡಿ ಹೀಗೆ ಹೇಳು: ‘ಒಬ್ಬ ಸ್ತ್ರೀಯು ಗರ್ಭಧರಿಸಿ, ಗಂಡು ಮಗುವನ್ನು ಹೆತ್ತರೆ, ಅವಳು ಏಳು ದಿನಗಳು ಅಶುದ್ಧಳಾಗಿರಬೇಕು. ತನ್ನ ಮುಟ್ಟಿಗಾಗಿ ಪ್ರತ್ಯೇಕಿಸಿದ ದಿನಗಳ ಪ್ರಕಾರ ಅವಳು ಅಶುದ್ಧಳಾಗಿರಬೇಕು. ಅಧ್ಯಾಯವನ್ನು ನೋಡಿ |