Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 13:2 - ಕನ್ನಡ ಸತ್ಯವೇದವು J.V. (BSI)

2 ಒಬ್ಬ ಮನುಷ್ಯನ ಮೈಮೇಲೆ ಬಾವಾಗಲಿ ಗುಳ್ಳೆಯಾಗಲಿ ಹೊಳೆಯುವ ಮಚ್ಚೆಯಾಗಲಿ ಉಂಟಾಗಿ ಅದರಲ್ಲಿ ಕುಷ್ಠರೋಗದ ಲಕ್ಷಣಗಳು ತೋರಿದರೆ ಅವನನ್ನು ಮಹಾಯಾಜಕನಾದ ಆರೋನನ ಬಳಿಗೆ ಇಲ್ಲವೆ ಆರೋನನ ಮಕ್ಕಳಾದ ಯಾಜಕರಲ್ಲಿ ಒಬ್ಬನ ಬಳಿಗೆ ಕರಕೊಂಡು ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಒಬ್ಬ ಮನುಷ್ಯನ ಮೈಮೇಲೆ ಬಾವಾಗಲಿ, ಗುಳ್ಳೆಯಾಗಲಿ ಅಥವಾ ಹೊಳೆಯುವ ಮಚ್ಚೆಯಾಗಲಿ ಉಂಟಾಗಿ ಅದರಲ್ಲಿ ಕುಷ್ಠರೋಗದ ಲಕ್ಷಣಗಳು ತೋರಿದರೆ ಅವನನ್ನು ಮಹಾಯಾಜಕನಾದ ಆರೋನನ ಬಳಿಗೆ ಇಲ್ಲವೆ ಆರೋನನ ಮಕ್ಕಳಾದ ಯಾಜಕರಲ್ಲಿ ಒಬ್ಬನ ಬಳಿಗೆ ಕರೆದುಕೊಂಡು ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಒಬ್ಬ ವ್ಯಕ್ತಿಯ ಮೈಮೇಲೆ ಬಾವಾಗಲಿ ಗುಳ್ಳೆಯಾಗಲಿ, ಹೊಳೆಯುವ ಮಚ್ಚೆಯಾಗಲಿ ಕಾಣಿಸಿಕೊಂಡು ಅದರಲ್ಲಿ ಕುಷ್ಠರೋಗದ ಲಕ್ಷಣಗಳು ತೋರಿದರೆ ಅವನನ್ನು ಮಹಾಯಾಜಕ ಆರೋನನ ಬಳಿಗೆ, ಇಲ್ಲವೆ ಆರೋನನ ಮಕ್ಕಳಾದ ಯಾಜಕರಲ್ಲಿ ಒಬ್ಬನ ಬಳಿಗೆ ಕರೆದುಕೊಂಡು ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಒಬ್ಬ ಮನುಷ್ಯನ ಮೇಲೆ ಊತವಾಗಲಿ ಗುಳ್ಳೆಯಾಗಲಿ ಹೊಳೆಯುವ ಮಚ್ಚೆಯಾಗಲಿ ಉಂಟಾಗಿ ಮಚ್ಚೆಯು ಕುಷ್ಠರೋಗದಂತೆ ಕಂಡುಬಂದರೆ, ಅವನನ್ನು ಯಾಜಕನಾದ ಆರೋನನ ಬಳಿಗೆ ಅಥವಾ ಯಾಜಕರಾದ ಅವನ ಪುತ್ರರಲ್ಲಿ ಒಬ್ಬನ ಬಳಿಗೆ ಕರೆದುಕೊಂಡು ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಒಬ್ಬ ಮನುಷ್ಯನು ತನ್ನ ಚರ್ಮದ ಮೇಲೆ ಬಾವಾಗಲಿ, ಕಜ್ಜಿಯಾಗಲಿ, ಹೊಳಪಿನ ಮಚ್ಚೆಯಾಗಲಿ ಮತ್ತು ಅವನ ಚರ್ಮದಲ್ಲಿ ಕುಷ್ಠದ ವ್ಯಾಧಿಯಂತಿದ್ದರೆ, ಅವನು ಯಾಜಕನಾದ ಆರೋನನ ಬಳಿಗಾದರೂ ಇಲ್ಲವೆ ಯಾಜಕರಾದ ಅವನ ಪುತ್ರರಲ್ಲಿ ಒಬ್ಬನ ಬಳಿಗಾದರೂ ಕರೆದುಕೊಂಡು ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 13:2
23 ತಿಳಿವುಗಳ ಹೋಲಿಕೆ  

ಕುಷ್ಠರೋಗಿಗಳ ವಿಷಯದಲ್ಲಿ ಯಾಜಕರಾದ ಲೇವಿಯರು ಬೋಧಿಸುವಂತೆಯೇ ಮಾಡುವದಕ್ಕೆ ನೀವು ಜಾಗರೂಕರಾಗಿರಬೇಕು; ನಾನು ಅವರಿಗೆ ಆಜ್ಞಾಪಿಸಿದ ನಿಯಮಗಳನ್ನೇ ನೀವು ಅನುಸರಿಸಬೇಕು.


ಶರೀರದ ಚರ್ಮದ ಮೇಲೆ ಉಂಟಾಗುವ ಬಾವು, ಗುಳ್ಳೆ, ಹೊಳೆಯುವ ಕಲೆ


ಯಾಜಕನು ಪಾಳೆಯದ ಹೊರಕ್ಕೆ ಹೋಗಿ ಅವನನ್ನು ನೋಡಬೇಕು.


ಆತನು ಅವರನ್ನು ನೋಡಿ - ನೀವು ಹೋಗಿ ಯಾಜಕರಿಗೆ ಮೈ ತೋರಿಸಿಕೊಳ್ಳಿರಿ ಎಂದು ಹೇಳಿದನು. ಅವರು ಹೋಗುತ್ತಿರುವಾಗಲೇ ಶುದ್ಧರಾದರು.


ಆಗ ಆತನು ಅವನಿಗೆ - ನೀನು ಯಾರಿಗೂ ಹೇಳಬೇಡ; ಆದರೆ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ಮೋಶೆಯು ನೇಮಕ ಮಾಡಿರುವದನ್ನು ಅರ್ಪಿಸಿ ನಿನ್ನ ಶುದ್ಧಾಚಾರವನ್ನು ನೆರವೇರಿಸು, ಅದು ಜನರಿಗೆ ಸಾಕ್ಷಿಯಾಗಲಿ ಎಂದು ಅಪ್ಪಣೆಕೊಟ್ಟನು.


ಆಗ ಯೇಸು ಅವನಿಗೆ - ಯಾರಿಗೂ ಹೇಳಬೇಡ ನೋಡು; ಆದರೆ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ಮೋಶೆ ನೇವಿುಸಿದ ಕಾಣಿಕೆಯನ್ನು ಕೊಡು; ಅದು ಜನರಿಗೆ ಸಾಕ್ಷಿಯಾಗಲಿ ಎಂದು ಹೇಳಿದನು.


ಜ್ಞಾನಾನುಸಾರವಾಗಿ ಮಾತಾಡುವದು ಯಾಜಕನ ತುಟಿಗಳ ಧರ್ಮವಷ್ಟೆ; ಅವನು ಸೇನಾಧೀಶ್ವರ ಯೆಹೋವನ ದೂತನಾಗಿರುವ ಕಾರಣ ಜನರು ಅವನ ಬಾಯಿಂದ ಧರ್ಮೋಪದೇಶವನ್ನು ಕೇಳಿಕೊಳ್ಳತಕ್ಕದ್ದು .


ಕರ್ತನಾದ ಯೆಹೋವನು ಅವರ ನಡುನೆತ್ತಿಯನ್ನು ಹುಣ್ಣಿನಿಂದ ಬಾಧಿಸಿ ಅವರ ಮಾನವನ್ನು ಬೈಲುಮಾಡುವನು.


ಅಂಗಾಲಿನಿಂದ ನಡುನೆತ್ತಿಯ ತನಕ ಪೆಟ್ಟು ಬಾಸುಂಡೆ ಮಾಗದ ಗಾಯಗಳೇ ಹೊರತು ಏನೂ ಸೌಖ್ಯವಿಲ್ಲ; ಅವನ್ನು ಹಿಸಕಿ ಮುಚ್ಚಿಲ್ಲ, ಕಟ್ಟಿಲ್ಲ, ಎಣ್ಣೆಸವರಿ ಮೃದು ಮಾಡಿಲ್ಲ.


ನಾಮಾನನ ಕುಷ್ಠವು ನಿನ್ನನ್ನೂ ನಿನ್ನ ಸಂತಾನದವರನ್ನೂ ಸದಾಕಾಲ ಹಿಡಿದಿರುವದು ಅಂದನು. ಕೂಡಲೆ ಅವನಿಗೆ ಕುಷ್ಠ ಹತ್ತಿತು. ಅವನು ಹಿಮದಂತೆ ಬಿಳುಪಾಗಿ ಅವನ ಸನ್ನಿಧಿಯಿಂದ ಹೊರಟುಹೋದನು.


ಅರಾಮ್ಯರ ಅರಸನಿಗೆ ನಾಮಾನನೆಂಬೊಬ್ಬ ಸೇನಾಪತಿಯಿದ್ದನು. ಯೆಹೋವನು ಇವನ ಮುಖಾಂತರವಾಗಿ ಅರಾಮ್ಯರಿಗೆ ಜಯವನ್ನು ಅನುಗ್ರಹಿಸಿದದರಿಂದ ಅರಸನು ಇವನನ್ನು ಮಹಾಪುರುಷನೆಂದೂ ಸನ್ಮಾನಯೋಗ್ಯನೆಂದೂ ಎಣಿಸುತ್ತಿದ್ದನು. ಆದರೆ ಪರಾಕ್ರಮಶಾಲಿಯಾದ ಇವನು ಕುಷ್ಠರೋಗಿಯಾಗಿದ್ದನು.


ಈ ಅಪರಾಧವು ಯೋವಾಬನ ಮೇಲೆಯೂ ಅವನ ಸಂತಾನದವರೆಲ್ಲರ ಮೇಲೆಯೂ ಇರಲಿ. ಅವನ ಮನೆಯಲ್ಲಿ ಮೇಹಸ್ರಾವವುಳ್ಳವರೂ ಕುಷ್ಠರೋಗಿಗಳೂ ಕುಂಟರೂ ಕತ್ತಿಯಿಂದ ಹತರಾಗುವವರೂ ಭಿಕ್ಷೆ ಬೇಡುವವರೂ ಇದ್ದೇ ಇರಲಿ ಅಂದನು.


ಐಗುಪ್ತ್ಯರ ಹುಣ್ಣು, ಬಾವು, ತುರಿಕಜ್ಜಿ ಮುಂತಾದ ವಾಸಿಯಾಗದ ರೋಗಗಳಿಂದ ಯೆಹೋವನು ನಿಮ್ಮನ್ನು ಬಾಧಿಸುವನು.


ಆ ಮನೆಯ ಒಡೆಯನು ಯಾಜಕನ ಬಳಿಗೆ ಬಂದು - ನನ್ನ ಮನೆಯಲ್ಲಿ ಕುಷ್ಠರೋಗದ ಗುರುತು ಉಂಟಾದಂತೆ ತೋರುತ್ತದೆ ಎಂದು ಅವನಿಗೆ ತಿಳಿಸಬೇಕು.


ಅರ್ಧಮಾಂಸ ಕೊಳೆತು ಹೋಗಿ ಹುಟ್ಟಿದ ಶಿಶು ಶವದಂತೆ ಈಕೆ ಆಗಬಾರದು ಎಂದು ಬೇಡಿದನು.


ಯೆಹೋವನು ಮೋಶೆ ಆರೋನರಿಗೆ ಹೇಳಿದ್ದೇನಂದರೆ -


ಯಾಜಕನು ಅವನ ಚರ್ಮದಲ್ಲಿರುವ ಮಚ್ಚೆಯನ್ನು ನೋಡುವಾಗ ಆ ಮಚ್ಚೆಯಲ್ಲಿರುವ ರೋಮ ಬೆಳ್ಳಗಾಗಿಹೋಗಿದ್ದರೆ ಮತ್ತು ಆ ಮಚ್ಚೆ ವಿುಕ್ಕ ಚರ್ಮಕ್ಕಿಂತ ತಗ್ಗಾಗಿದ್ದರೆ ಅದು ಕುಷ್ಠರೋಗ. ಯಾಜಕನು ಅದನ್ನು ಪರೀಕ್ಷಿಸಿ ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು.


ಯಾಜಕನು ನೋಡುವಾಗ ಆ ಮಚ್ಚೆ ದೇಹದ ಚರ್ಮದಲ್ಲಿ ಹರಡಿಕೊಂಡಿದ್ದರೆ ಅದು ಕುಷ್ಠವೆಂದು ತಿಳಿದು ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು