ಯಾಜಕಕಾಂಡ 13:20 - ಕನ್ನಡ ಸತ್ಯವೇದವು J.V. (BSI)20 ಯಾಜಕನು ನೋಡುವಾಗ ಆ ಕಲೆ ವಿುಕ್ಕ ಚರ್ಮಕ್ಕಿಂತ ತಗ್ಗಾಗಿ ತೋರಿದರೆ ಮತ್ತು ಅದರಲ್ಲಿರುವ ರೋಮ ಬೆಳ್ಳಗಾಗಿ ಹೋಗಿದ್ದರೆ ಆ ಹುಣ್ಣಿನಲ್ಲಿ ಕುಷ್ಠಹುಟ್ಟಿದದರಿಂದ ಅವನು ಅಶುದ್ಧನೆಂದು ಯಾಜಕನು ನಿರ್ಣಯಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಯಾಜಕನು ಪರೀಕ್ಷಿಸುವಾಗ ಆ ಕಲೆ ಉಳಿದ ಚರ್ಮಕ್ಕಿಂತ ಆಳವಾಗಿ ಕಂಡರೆ ಮತ್ತು ಅದರಲ್ಲಿರುವ ರೋಮ ಬೆಳ್ಳಗಾಗಿ ಹೋಗಿದ್ದರೆ ಆ ಹುಣ್ಣಿನಲ್ಲಿ ಕುಷ್ಠ ಹುಟ್ಟಿದ್ದರಿಂದ ಅವನು ಅಶುದ್ಧನೆಂದು ಯಾಜಕನು ನಿರ್ಣಯಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಯಾಜಕನು ಪರೀಕ್ಷಿಸಿ ನೋಡುವಾಗ ಆ ಕಲೆ ಮಿಕ್ಕ ಚರ್ಮಕ್ಕಿಂತ ತಗ್ಗಾಗಿ ತೋರಿದರೆ ಮತ್ತು ಅದರಲ್ಲಿರುವ ರೋಮ ಬೆಳ್ಳಗಾಗಿ ಹೋಗಿದ್ದರೆ ಆ ಹುಣ್ಣಿನಲ್ಲಿ ಕುಷ್ಠಹುಟ್ಟಿರುವುದರಿಂದ ಅವನು ಅಶುದ್ಧನೆಂದು ಯಾಜಕನು ನಿರ್ಣಯಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಯಾಜಕನು ಅದನ್ನು ಪರೀಕ್ಷಿಸಬೇಕು. ಅದು ಚರ್ಮಕ್ಕಿಂತ ತಗ್ಗಾಗಿದ್ದರೆ ಮತ್ತು ಅದರ ಮೇಲಿರುವ ರೋಮವು ಬೆಳ್ಳಗಾಗಿದ್ದರೆ, ಯಾಜಕನು ಅವನನ್ನು ಅಶುದ್ಧನೆಂದು ಪ್ರಕಟಿಸಬೇಕು. ಆ ಕಲೆಯು ಕುಷ್ಠದ ಸೋಂಕಾಗಿದೆ. ಹುಣ್ಣಿನಿಂದ ಕುಷ್ಠ ಬಂದಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಯಾಜಕನು ಅದನ್ನು ಪರೀಕ್ಷಿಸಿದಾಗ, ಅದು ಚರ್ಮದಿಂದ ಕೆಳಗೆ ಕಂಡರೆ ಮತ್ತು ಅಲ್ಲಿಯ ಕೂದಲು ಬೆಳ್ಳಗಾಗಿದ್ದರೆ, ಯಾಜಕನು ಅವನನ್ನು ಅಶುದ್ಧನೆಂದು ನುಡಿಯಬೇಕು. ಅದು ಹುಣ್ಣಿನಿಂದ ಒಡೆದುಹೋದ ಚರ್ಮರೋಗವಾಗಿರುವುದು. ಅಧ್ಯಾಯವನ್ನು ನೋಡಿ |