ಯಾಜಕಕಾಂಡ 13:37 - ಕನ್ನಡ ಸತ್ಯವೇದವು J.V. (BSI)37 ಆ ದದ್ದು ಮೊದಲು ಇದ್ದಂತೆಯೇ ಇದ್ದು ಅದರಲ್ಲಿ ಕರೇ ಕೂದಲು ಹುಟ್ಟಿದ್ದರೆ ಅದು ವಾಸಿಯಾಯಿತು. ಅವನು ಶುದ್ಧನು; ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಆ ಗಾಯ ಮೊದಲು ಇದ್ದಂತೆಯೇ ಇದ್ದು ಅದರಲ್ಲಿ ಕಪ್ಪು ಕೂದಲು ಹುಟ್ಟಿದ್ದರೆ ಅದು ವಾಸಿಯಾಯಿತು. ಅವನು ಶುದ್ಧನು; ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಇಸುಬು ಮೊದಲು ಇದ್ದಂತೆಯೇ ಇದ್ದಾದರಲ್ಲಿ ಕರೇ ಕೂದಲು ಹುಟ್ಟಿದರೆ ಅದು ವಾಸಿಯಾಗಿದೆ. ಅವನು ಶುದ್ಧನು; ಯಾಜಕರು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ಆದರೆ ರೋಗವು ನಿಂತುಹೋಗಿ, ಕಪ್ಪಾದ ಕೂದಲು ಆ ಜಾಗದಲ್ಲಿ ಬೆಳೆಯುತ್ತಿದ್ದರೆ, ರೋಗವು ವಾಸಿಯಾಗಿದೆ ಎಂದರ್ಥ. ಆ ವ್ಯಕ್ತಿಯು ಶುದ್ಧನಾಗಿದ್ದಾನೆ. ಯಾಜಕನು ಅವನನ್ನು ಶುದ್ಧನೆಂದು ಪ್ರಕಟಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಆದರೆ ಆ ಇಸಬು ಅವನಿಗೆ ನಿಂತ ಹಾಗೆ ಕಂಡರೆ ಮತ್ತು ಅದರಲ್ಲಿ ಕಪ್ಪುಕೂದಲು ಬೆಳೆದರೆ, ಇಸಬು ವಾಸಿಯಾಗಿ ಅವನು ಶುದ್ಧನಾಗುವನು, ಯಾಜಕನು ಅವನನ್ನು ಶುದ್ಧನೆಂದು ನುಡಿಯಬೇಕು. ಅಧ್ಯಾಯವನ್ನು ನೋಡಿ |