Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 13:47 - ಕನ್ನಡ ಸತ್ಯವೇದವು J.V. (BSI)

47 ಕುಷ್ಠರೋಗದ ಗುರುತು ಬಟ್ಟೆಯಲ್ಲಿ ಕಂಡುಬಂದಾಗ ಅದು ಉಣ್ಣೆಯ ಬಟ್ಟೆಯಾಗಲಿ ನಾರಿನ ಬಟ್ಟೆಯಾಗಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 “ಕುಷ್ಠರೋಗದ ಗುರುತು ಬಟ್ಟೆಯಲ್ಲಿ ಕಂಡು ಬಂದಾಗ ಅದು ಉಣ್ಣೆಯ ಬಟ್ಟೆಯಾಗಲಿ ಅಥವಾ ನಾರಿನ ಬಟ್ಟೆಯಾಗಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

47 ಕುಷ್ಠರೋಗದ ಗುರುತು ಬಟ್ಟೆಯಲ್ಲಿ ಕಂಡುಬಂದಾಗ ಅದು ಉಣ್ಣೆಯ ಬಟ್ಟೆಯಾಗಲಿ, ನಾರಿನ ಬಟ್ಟೆಯಾಗಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

47-48 “ಕೆಲವು ಬಟ್ಟೆಗಳಲ್ಲಿ ಬೂಷ್ಟು ಇರಬಹುದು. ಅದು ನಾರಿನ ಬಟ್ಟೆಯಾಗಲಿ ಉಣ್ಣೆ ಬಟ್ಟೆಯಾಗಲಿ ಆಗಿರಬಹುದು. ಅದು ಹೆಣೆದ ಅಥವಾ ಹೊಲಿದ ಬಟ್ಟೆಯಾಗಿರಬಹುದು. ಚರ್ಮದಿಂದ ಮಾಡಿದ ವಸ್ತುವಿನ ಮೇಲೂ ಬೂಷ್ಟು ಇರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

47 “ಬೂಜು ಚರ್ಮರೋಗದ ಗುರುತು ಅವನ ಉಡುಪಿನಲ್ಲೂ ಇದ್ದು, ಅದು ಉಣ್ಣೆಯ ಉಡುಪಾಗಲಿ ಇಲ್ಲವೆ ನಾರಿನ ಉಡುಪಾಗಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 13:47
13 ತಿಳಿವುಗಳ ಹೋಲಿಕೆ  

ಅವರನ್ನು ಬೆಂಕಿಯ ಬಾಯೊಳಗಿಂದ ಎಳಕೊಂಡು ರಕ್ಷಿಸಿರಿ. ಕೆಲವರನ್ನು ಭಯಯುಕ್ತರಾಗಿ ಕರುಣಿಸಿರಿ; ಹೊಲಸು ನಡತೆಯಿಂದ ಮೈಲಿಗೆಯಾದ ಅವರ ಅಂಗಿಯನ್ನೂ ಅಸಹ್ಯಿಸಿರಿ.


ಯಾಕಂದರೆ ನೀವು ಸತ್ತಿರಲ್ಲಾ, ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿಟ್ಟದೆ.


ಯೇಸುವಿನಲ್ಲಿರುವ ಸತ್ಯೋಪದೇಶವು ಯಾವದಂದರೆ - ನೀವು ನಿಮ್ಮ ಹಿಂದಿನ ನಡತೆಯನ್ನು ಅನುಸರಿಸದೆ ಪೂರ್ವಸ್ವಭಾವವನ್ನು ತೆಗೆದುಹಾಕಿಬಿಡಬೇಕು; ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟುಹೋಗುವಂಥದು.


ಇರುಳು ಬಹಳ ಮಟ್ಟಿಗೆ ಕಳೆಯಿತು; ಹಗಲು ಸಮೀಪವಾಯಿತು. ಕತ್ತಲೆಗೆ ಅನುಗುಣವಾದ ಕೃತ್ಯಗಳನ್ನು ಬಿಟ್ಟು ಬೆಳಕಿಗೆ ಅನುಗುಣವಾದ ಆಯುಧಗಳನ್ನು ಧರಿಸಿಕೊಳ್ಳೋಣ.


ನೀನು ಪೂಜಾಸ್ಥಾನಗಳನ್ನು ಕಟ್ಟಿಕೊಂಡು ನಿನ್ನ ಚಿತ್ರವಿಚಿತ್ರ ವಸ್ತ್ರಗಳಿಂದ ಅವುಗಳನ್ನು ಅಲಂಕರಿಸಿ ಅಲ್ಲಿ ವ್ಯಭಿಚಾರನಡಿಸಿದಿ. (ಇದು ನಡೆಯತಕ್ಕದ್ದಲ್ಲ. ಆಗಬಾರದಾಗಿತ್ತು.)


ನಾವೆಲ್ಲರು ಅಶುದ್ಧನ ಹಾಗಿದ್ದೇವೆ, ನಮ್ಮ ಧರ್ಮಕಾರ್ಯಗಳೆಲ್ಲಾ ಹೊಲೆಯ ಬಟ್ಟೆಯಂತಿವೆ; ನಾವೆಲ್ಲರೂ ತರಗೆಲೆಯೋಪಾದಿಯಲ್ಲಿ ಒಣಗಿ ಹೋಗಿದ್ದೇವೆ; ನಮ್ಮ ಅಪರಾಧಗಳು ಬಿರುಗಾಳಿಯ ಪ್ರಕಾರ ನಮ್ಮನ್ನು ಬಡಿದುಕೊಂಡು ಹೋಗಿವೆ.


ಇವರ ಬಲೆಯ ದಾರವು ಬಟ್ಟೆಯಾಗದು, ಇವರು ನೇಯ್ದದ್ದು ಹೊದಿಕೆಯಾಗದು; ಇವರ ಕಾರ್ಯಗಳು ಅಧರ್ಮಕಾರ್ಯಗಳು, ಇವರ ಕೈಯಲ್ಲಿ ಬಲಾತ್ಕಾರವೇ.


ಆ ರೋಗದ ಗುರುತುಗಳು ಅವನಲ್ಲಿ ಇರುವ ದಿನಗಳೆಲ್ಲಾ ಅವನು ಅಶುದ್ಧನಾಗಿರುವನು. ಅವನು ಅಶುದ್ಧನಾದದರಿಂದ ಪ್ರತ್ಯೇಕವಾಗಿಯೇ ವಾಸವಾಗಿರಬೇಕು; ಅವನ ನಿವಾಸವು ಪಾಳೆಯದ ಹೊರಗೆ ಇರಬೇಕು.


ನಾರಿನ ಅಥವಾ ಉಣ್ಣೆಯ ಹಾಸಿನಲ್ಲಾಗಲಿ ಹೊಕ್ಕಿನಲ್ಲಾಗಲಿ, ಇಲ್ಲವೆ ತೊಗಲಿನಲ್ಲಾಗಲಿ ತೊಗಲಿನಿಂದ ಮಾಡಲ್ಪಟ್ಟ ವಸ್ತುವಿನಲ್ಲಾಗಲಿ,


ಆ ವಸ್ತುವು ಬಟ್ಟೆಯಾದರೂ ಹಾಸಾದರೂ ಹೊಕ್ಕಾದರೂ ಉಣ್ಣೆಯದಾದರೂ ನಾರಿನದಾದರೂ ತೊಗಲಿನದಾದರೂ ಅದರಲ್ಲಿ ಪ್ರಾಣಕ್ಕೆ ಅಪಾಯಕರವಾದ ಕುಷ್ಠವಿರುವದರಿಂದ ಅದನ್ನು ಬೆಂಕಿಯಿಂದ ಸುಡಿಸಿಬಿಡಬೇಕು.


ಉಣ್ಣೇಬಟ್ಟೆಯಲ್ಲಾಗಲಿ ನಾರಿನ ಬಟ್ಟೆಯಲ್ಲಾಗಲಿ ಹಾಸಿನಲ್ಲಾಗಲಿ ಹೊಕ್ಕಿನಲ್ಲಾಗಲಿ ತೊಗಲಿನ ಸಾಮಾನಿನಲ್ಲಾಗಲಿ ಕಾಣಬಂದ ಕುಷ್ಠರೋಗದ ಗುರುತಿನ ವಿಷಯವಾದ ವಿಧಿ ಇದೇ. ಅದು ಶುದ್ಧವೆಂದು ನಿರ್ಣಯಿಸಬೇಕೋ ಅಶುದ್ಧವೆಂದು ನಿರ್ಣಯಿಸಬೇಕೋ ಎಂಬದು ಇದರಿಂದ ತಿಳಿಯುವದು.


ಬಟ್ಟೆಯಲ್ಲಿ ಅಥವಾ ಮನೆಯ ಗೋಡೆಯಲ್ಲಿ ಕಾಣಿಸುವ ಕುಷ್ಠರೋಗದ ಗುರುತು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು