ಯಾಜಕಕಾಂಡ 13:56 - ಕನ್ನಡ ಸತ್ಯವೇದವು J.V. (BSI)56 ಆದರೆ ತೊಳೆದ ಬಟ್ಟೆಯನ್ನು ಯಾಜಕನು ನೋಡುವಾಗ ಅದರಲ್ಲಿದ್ದ ಮಚ್ಚೆ ಮೊಬ್ಬಾಗಿಹೋಗಿದ್ದರೆ ಅವನು ಆ ಮಚ್ಚೆ ಇರುವ ಭಾಗವನ್ನು ಆ ಬಟ್ಟೆಯಿಂದಾಗಲಿ ತೊಗಲಿನಿಂದಾಗಲಿ ಹಾಸಿನಿಂದಾಗಲಿ ಹೊಕ್ಕಿನಿಂದಾಗಲಿ ಕತ್ತರಿಸಿಬಿಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201956 ಆದರೆ ತೊಳೆದ ಬಟ್ಟೆಯನ್ನು ಯಾಜಕನು ಪರೀಕ್ಷಿಸುವಾಗ ಅದರಲ್ಲಿದ್ದ ಮಚ್ಚೆ ಮೊಬ್ಬಾಗಿಹೋಗಿದ್ದರೆ ಅವನು ಆ ಮಚ್ಚೆ ಇರುವ ಭಾಗವನ್ನು ಆ ಬಟ್ಟೆಯಿಂದಾಗಲಿ, ತೊಗಲಿನಿಂದಾಗಲಿ, ಹಾಸಿನಿಂದಾಗಲಿ, ಹೆಣಿಗೆಯಿಂದಾಗಲಿ ಕತ್ತರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)56 ಆದರೆ ತೊಳೆದ ಬಟ್ಟೆಯನ್ನು ಯಾಜಕನು ನೋಡುವಾಗ ಅದರಲ್ಲಿದ್ದ ಮಚ್ಚೆ ಮೊಬ್ಬಾಗಿ ಹೋಗಿದ್ದರೆ ಅವನು ಆ ಮಚ್ಚೆ ಇರುವ ಭಾಗವನ್ನು ಬಟ್ಟೆಯಿಂದಾಗಲಿ ತೊಗಲಿನಿಂದಾಗಲಿ ನೆಯಿಗೆಯಿಂದಾಗಲಿ ಹೆಣಿಗೆಯಿಂದಾಗಲಿ ಕತ್ತರಿಸಿಬಿಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್56 “ಆದರೆ ಯಾಜಕನು ತೊಗಲನ್ನಾಗಲಿ ಬಟ್ಟೆಯನ್ನಾಗಲಿ ನೋಡಿದಾಗ, ತೊಳೆದನಂತರ ಬೂಷ್ಟು ಮೊಬ್ಬಾಗಿರುವುದನ್ನು ಕಂಡರೆ, ಆಗ ಯಾಜಕನು ಕಲೆ ಇರುವ ಆ ಬಟ್ಟೆಯ ಅಥವಾ ತೊಗಲಿನ ಭಾಗವನ್ನು ಕತ್ತರಿಸಿಹಾಕಬೇಕು. (ಅದು ನೇಯ್ದ ಬಟ್ಟೆಯಾಗಿದ್ದರೂ ಸರಿ, ಹೆಣೆದ ಬಟ್ಟೆಯಾಗಿದ್ದರೂ ಸರಿ.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ56 ಯಾಜಕನು ಅದನ್ನು ಪರೀಕ್ಷಿಸಿದರೆ, ಆ ಬೂಜು ಹಿಡಿದ ವಸ್ತುವನ್ನು ತೊಳೆದ ನಂತರ ಮಬ್ಬಾಗಿದ್ದರೆ ಅವನು ಅದನ್ನು ಬಟ್ಟೆಯಿಂದಾಗಲಿ, ಚರ್ಮದಿಂದಾಗಲಿ, ಹಾಸಿನಿಂದಾಗಲಿ, ಹೊಕ್ಕಿನಿಂದಾಗಲಿ ಹರಿದುಹಾಕಬೇಕು. ಅಧ್ಯಾಯವನ್ನು ನೋಡಿ |