ಯಾಜಕಕಾಂಡ 13:57 - ಕನ್ನಡ ಸತ್ಯವೇದವು J.V. (BSI)57 ಆಮೇಲೆಯೂ ಕುಷ್ಠದ ಮಚ್ಚೆ ಆ ಬಟ್ಟೆಯಲ್ಲಾಗಲಿ ಹಾಸಿನಲ್ಲಾಗಲಿ ಹೊಕ್ಕಿನಲ್ಲಾಗಲಿ ತೊಗಲಿನ ಸಾಮಾನಿನಲ್ಲಾಗಲಿ ಕಂಡುಬಂದರೆ ಕುಷ್ಠರೋಗವು ಇನ್ನೂ ಅದರಲ್ಲಿ ಉಂಟೆಂದು ತಿಳಿದುಕೊಳ್ಳಬೇಕು. ಆ ಮಚ್ಚೆ ಇರುವ ವಸ್ತುವನ್ನೇ ಬೆಂಕಿಯಿಂದ ಸುಟ್ಟುಬಿಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201957 ಆ ಮೇಲೆಯೂ ಕುಷ್ಠದ ಮಚ್ಚೆ ಆ ಬಟ್ಟೆಯಲ್ಲಾಗಲಿ, ಹಾಸಿನಲ್ಲಾಗಲಿ, ಹೆಣಿಗೆಯಲ್ಲಾಗಲಿ ಅಥವಾ ತೊಗಲಿನ ಸಾಮಾನಿನಲ್ಲಾಗಲಿ ಕಂಡು ಬಂದರೆ ಕುಷ್ಠರೋಗವು ಇನ್ನು ಅದರಲ್ಲಿ ಉಂಟೆಂದು ತಿಳಿದುಕೊಳ್ಳಬೇಕು. ಆ ಮಚ್ಚೆ ಇರುವ ವಸ್ತುವನ್ನೇ ಬೆಂಕಿಯಿಂದ ಸುಟ್ಟುಬಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)57 ಆಮೇಲೆಯೂ ಕುಷ್ಠದ ಮಚ್ಚೆ ಆ ಬಟ್ಟೆಯಲ್ಲಾಗಲಿ ನೆಯಿಗೆಯಲ್ಲಾಗಲಿ ಹೆಣಿಗೆಯಲ್ಲಾಗಲಿ ತೊಗಲಿನ ಸಾಮಾನಿನಲ್ಲಾಗಲಿ ಕಂಡು ಬಂದರೆ ಕುಷ್ಠರೋಗವು ಇನ್ನೂ ಅದರಲ್ಲಿ ಉಂಟೆಂದು ತಿಳಿದುಕೊಳ್ಳಬೇಕು. ಆ ಮಚ್ಚೆ ಇರುವ ವಸ್ತುವನ್ನೇ ಬೆಂಕಿಯಿಂದ ಸುಟ್ಟುಬಿಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್57 ಆದರೆ ಬೂಷ್ಟು ಆ ತೊಗಲಿನ ಮೇಲೆ ಅಥವಾ ಬಟ್ಟೆಯ ಮೇಲೆ ಮರಳಿ ಬಂದರೆ, ಆಗ ಆ ಬೂಷ್ಟು ಹರಡುತ್ತಿದೆ ಎಂದರ್ಥ. ಆ ತೊಗಲನ್ನು ಅಥವಾ ಆ ಬಟ್ಟೆಯನ್ನು ಸುಟ್ಟುಹಾಕಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ57 ಆದರೆ ಉಣ್ಣೆ ಬಟ್ಟೆಯಲ್ಲಾಗಲಿ, ನಾರಿನ ಬಟ್ಟೆಯಲ್ಲಾಗಲಿ, ನೇಯ್ಗೆಯಲ್ಲಾಗಲಿ ಹಣಿಗೆಯಲ್ಲಾಗಲಿ, ತೊಗಲಿನ ವಸ್ತುವಿನಲ್ಲಾಗಲಿ ಕಂಡು ಬಂದರೆ ಅದು ಹರಡುವ ಬೂಜು ಮತ್ತು ಬೂಜಿರುವ ವಸ್ತುವನ್ನು ನೀನು ಬೆಂಕಿಯಿಂದ ಸುಡಬೇಕು. ಅಧ್ಯಾಯವನ್ನು ನೋಡಿ |